ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಮತ್ತು ಲೆಜೆಂಡರ್ ಎಸ್‍ಯುವಿಗಳ ಬಿಡುಗಡೆ ದಿನಾಂಕ ಬಹಿರಂಗ

ಜಪಾನ್ ಮೂಲದ ಜನಪ್ರಿಯ ಕಾರು ತಯಾರಕ ಕಂಪನಿಯಾದ ಟೊಯೊಟಾ ತನ್ನ ಬಹುನಿರೀಕ್ಷಿತ ಫಾರ್ಚೂನರ್ ಫೇಸ್‌ಲಿಫ್ಟ್ ಮತ್ತು ಲೆಜೆಂಡರ್ ಎಸ್‌ಯುವಿಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಟೊಯೊಟಾ ಕಂಪನಿಯು ಹೊಸ ಫಾರ್ಚೂನರ್ ಫೇಸ್‌ಲಿಫ್ಟ್ ಮತ್ತು ಲೆಜೆಂಡರ್ ಎಸ್‍ಯುವಿಗಳ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸಿದೆ.

ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಮತ್ತು ಲೆಜೆಂಡರ್ ಎಸ್‍ಯುವಿಗಳ ಬಿಡುಗಡೆ ದಿನಾಂಕ ಬಹಿರಂಗ

ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಮತ್ತು ಲೆಜೆಂಡರ್ ಎಸ್‍ಯುವಿಗಳು 2021ರ ಜನವರಿ 6 ರಂದು ಭಾರತದಲ್ಲಿ ಬಿಡುಗಡೆಯಾಗಲಿವೆ. ಇದರಲ್ಲಿ ಹೊಸ ಟೊಯೊಟಾ ಫಾರ್ಚೂನರ್ ಲೆಜೆಂಡರ್ ಸ್ಟ್ಯಾಂಡರ್ಡ್ ಮಾದರಿಗಿಂತ ಹೆಚ್ಚು ಪವರ್ ಫುಲ್ ಮತ್ತು ಪ್ರೀಮಿಯಂ ಆವೃತ್ತಿಯಾಗಿದೆ. ಹೊಸ ವರ್ಷಕ್ಕೆ ಟೊಯೊಟಾ ತನ್ನ ಫಾರ್ಚೂನರ್ ಫೇಸ್‌ಲಿಫ್ಟ್ ಮತ್ತು ಲೆಜೆಂಡರ್ ಎಸ್‍ಯುವಿಗಳನ್ನು ಬಿಡುಗಡೆಗೊಳಿಸುವ ಮೂಲಕ ಗ್ರಾಹಕರಿಗೆ ಡಬಲ್ ಧಮಾಕ ನೀಡಲಿದೆ.

ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಮತ್ತು ಲೆಜೆಂಡರ್ ಎಸ್‍ಯುವಿಗಳ ಬಿಡುಗಡೆ ದಿನಾಂಕ ಬಹಿರಂಗ

ಟೊಯೊಟಾ ಫಾರ್ಚೂನರ್ ಲೆಜೆಂಡರ್ ಸಾಕಷ್ಟು ನಿರೀಕ್ಷೆ ಹುಟ್ಟಿಸಿದ ಎಸ್‍ಯುವಿಯಾಗಿದೆ. ಈ ಟೊಯೊಟಾ ಫಾರ್ಚೂನರ್ ಲೆಜೆಂಡರ್ ತನ್ನ ಉತ್ತಮ ಆಫ್-ರೋಡ್ ಸಾಮರ್ಥ್ಯದಿಂದ ಹೆಚ್ಚು ಜನಪ್ರಿಯತೆಯನ್ನು ಹೊಂದಿದೆ. ಇನ್ನು ಫಾರ್ಚೂನರ್ ಫೇಸ್‌ಲಿಫ್ಟ್ ಭಾರತದಲ್ಲಿರುವ ಹಿಂದಿನ ಮಾದರಿಯನ್ನು ನವೀಕರಿಸಲಾದ ಆವೃತ್ತಿಯಾಗಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಮತ್ತು ಲೆಜೆಂಡರ್ ಎಸ್‍ಯುವಿಗಳ ಬಿಡುಗಡೆ ದಿನಾಂಕ ಬಹಿರಂಗ

ಹೊಸ ಫಾರ್ಚೂನರ್ ಫೇಸ್‌ಲಿಫ್ಟ್ ನಲ್ಲಿಯು ಸಾಕಷ್ಟು ನವೀಕರಣಗಳನ್ನು ಮಾಡಲಾಗಿದೆ. ಫಾರ್ಚೂನರ್ ಫೇಸ್‌ಲಿಫ್ಟ್ ಮಾದರಿ ಹೆಚ್ಚಿನ ಸ್ಪೋರ್ಟಿ ಲುಕ್ ಅನ್ನು ಪಡೆದುಕೊಂಡಿದೆ. ಇನ್ನು ಟೊಯೊಟಾ ಫಾರ್ಚೂನರ್ ಲೆಜೆಂಡರ್ ಎಸ್‌ಯುವಿಯು ಅಗ್ರೇಸಿವ್ ಲುಕ್ ನೊಂದಿಗೆ ಆಕರ್ಷಕವಾಗಿದೆ.

ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಮತ್ತು ಲೆಜೆಂಡರ್ ಎಸ್‍ಯುವಿಗಳ ಬಿಡುಗಡೆ ದಿನಾಂಕ ಬಹಿರಂಗ

ಫಾರ್ಚೂನರ್ ಲೆಜೆಂಡರ್ ಎಸ್‌ಯುವಿ ವಿನ್ಯಾಸದ ಬಗ್ಗೆ ಹೇಳುವುದಾದರೆ, ಮುಂಭಾಗ ಹೊಸ ವಿನ್ಯಾಸವನ್ನು ಹೊಂದಿದೆ. ಡೇ ಟೈಮ್ ರನ್ನಿಂಗ್ ಲೈಟ್ ಹೊಂದಿರುವ ಮರುವಿನ್ಯಾಸಗೊಳಿಸಲಾದ ಎಲ್‌ಇಡಿ ಹೆಡ್‌ಲೈಟ್ ಮತ್ತು ಮೆಶ್ ಮಾದರಿಯ ದೊಡ್ಡದಾದ ಗ್ರಿಲ್ ಅನ್ನು ಹೊಂದಿದೆ.

MOST READ: ಕರೋನಾ ವೈರಸ್ ಬಗ್ಗೆ ಜನ ಜಾಗೃತಿ ಮೂಡಿಸಲು ಉಬರ್ ಜೊತೆಗೆ ಕೈಜೋಡಿಸಿದ ಪೊಲೀಸ್ ಇಲಾಖೆ

ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಮತ್ತು ಲೆಜೆಂಡರ್ ಎಸ್‍ಯುವಿಗಳ ಬಿಡುಗಡೆ ದಿನಾಂಕ ಬಹಿರಂಗ

ಇದರೊಂದಿಗೆ ಎಲ್ಇಡಿ ಡಿಆರ್‌ಎಲ್‌ಗಳಿಗೆ ವಿಶಿಷ್ಟ ಮಾದರಿಯನ್ನು ಹೊಂದಿರುವ ಡ್ಯುಯಲ್ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, ಕ್ರೋಮ್ ಅಪ್ ಫ್ರಂಟ್ ಅನ್ನು ಬದಲಿಸುವ ಗ್ಲೋಸ್ ಬ್ಲ್ಯಾಕ್ ಫಿನಿಶ್, 20 ಇಂಚಿನ ಅಲಾಯ್ ವ್ಹೀಲ್ಸ್, ಡ್ಯುಯಲ್ ಟೋನ್ ಬಣ್ಣದ ಆಯ್ಕೆಗಳನ್ನು ಹೊಂದಿವೆ.

ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಮತ್ತು ಲೆಜೆಂಡರ್ ಎಸ್‍ಯುವಿಗಳ ಬಿಡುಗಡೆ ದಿನಾಂಕ ಬಹಿರಂಗ

ಟೊಯೊಟಾ ಫಾರ್ಚೂನರ್ ಲೆಜೆಂಡರ್ ಎಸ್‌ಯುವಿಯ ಇಂಟಿರಿಯರ್ ಬಗ್ಗೆ ಹೇಳುದಾದರೆ, ಸ್ಟ್ಯಾಂಡರ್ಡ್ ಮಾದರಿಗೆ ಹೋಲಿಸಿದರೆ, ಒಂದು ಪ್ರಮುಖ ವ್ಯತ್ಯಾಸವೆಂದರೆ ಆಪಲ್ ಕಾರ್ ಪ್ಲೇ ಹೊಂದಾಣಿಕೆಯೊಂದಿಗೆ ಬರುವ ದೊಡ್ಡದಾದ, 8.0-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಸದಾಗಿ ಅಳವಡಿಸಲಿದೆ.

MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಮತ್ತು ಲೆಜೆಂಡರ್ ಎಸ್‍ಯುವಿಗಳ ಬಿಡುಗಡೆ ದಿನಾಂಕ ಬಹಿರಂಗ

ಇನ್ನು ಎಲ್ಇಡಿ ಆಂಬಿಯೆಂಟ್ ಲೈಟಿಂಗ್, 9-ಸ್ಪೀಕರ್ ಜೆಬಿಎಲ್ ಆಡಿಯೊ ಸಿಸ್ಟಂ ಮತ್ತು 360 ಡಿಗ್ರಿ ಕ್ಯಾಮೆರಾ. 7 ಏರ್‌ಬ್ಯಾಗ್‌ಗಳು ಮತ್ತು ಸಾಮಾನ್ಯ ಸುರಕ್ಷತಾ ಫೀಚರ್‌ಗಳ ಜೊತೆಗೆ 'ಟೊಯೋಟಾ ಸೇಫ್ಟಿ ಸೆನ್ಸ್' ಅನ್ನು ಸಹ ಹೊಂದಿದೆ.

ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಮತ್ತು ಲೆಜೆಂಡರ್ ಎಸ್‍ಯುವಿಗಳ ಬಿಡುಗಡೆ ದಿನಾಂಕ ಬಹಿರಂಗ

ಇನ್ನು ಎರಡು ಎಸ್‍ಯುವಿಗಳಲ್ಲಿ 2.8-ಲೀಟರ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಬಹುದು. ಈ ಎಂಜಿನ್ 201 ಬಿಹೆಚ್‍ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಆಯ್ಕೆಯೊಂದಿಗೆ ನೀಡುತ್ತದೆ.

ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಮತ್ತು ಲೆಜೆಂಡರ್ ಎಸ್‍ಯುವಿಗಳ ಬಿಡುಗಡೆ ದಿನಾಂಕ ಬಹಿರಂಗ

ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಮಾದರಿಗೆ ಹೋಲಿಸಿದರೆ ಫಾರ್ಚೂನರ್ ಲೆಜೆಂಡರ್ ಎಸ್‍ಯುವಿಯು ಹೆಚ್ಚು ಪ್ರೀಮಿಯಂ ಆವೃತ್ತಿಯಾಗಿದೆ. ಅಲ್ಲದೇ ಫಾರ್ಚೂನರ್ ಲೆಜೆಂಡರ್ ವಿದೇಶಗಳಲ್ಲಿ ತನ್ನ ಆಫ್-ರೋಡ್ ಸಾಮರ್ಥ್ಯವನ್ನು ಸಾಬೀತುಪಡಿಸಿದೆ. ಲೆಜೆಂಡರ್ ಸ್ಟ್ಯಾಂಡರ್ಡ್ ಎಸ್‌ಯುವಿಗಿಂತ ತುಸು ದುಬಾರಿಯಾಗಿರಲಿದೆ.

ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಮತ್ತು ಲೆಜೆಂಡರ್ ಎಸ್‍ಯುವಿಗಳ ಬಿಡುಗಡೆ ದಿನಾಂಕ ಬಹಿರಂಗ

ಇನ್ನು ಹಿಂದಿನ ಫಾರ್ಚೂನರ್ ಮಾದರಿಗೆ ಹೋಲಿಸಿದರೆ ಫಾರ್ಚೂನರ್ ಫೇಸ್‌ಲಿಫ್ಟ್ ಹಲವಾರು ಅಪ್ಡೇಟ್ ಗಳನ್ನು ಪಡೆದುಕೊಂಡಿದೆ. ಈ ಎರಡು ಎಸ್‍ಯುವಿಗಳು ಭಾರತೀಯ ಮಾರುಕಟ್ಟೆಯಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟಿಸಿದೆ. ಭಾರತದ ಎಸ್‍ಯುವಿ ವಿಭಾಗದಲ್ಲಿ ಈ ಎರಡು ಹೊಸ ಮಾದರಿಗಳು ಸಂಚಲವನ್ನು ಮೂಡಿಸುವುದರಲ್ಲಿ ಯಾವುದೇ ಅನುಮಾನವಿಲ್ಲ.

Most Read Articles

Kannada
Read more on ಟೊಯೊಟಾ toyota
English summary
2021 Toyota Fortuner Facelift & Legender India Launch On January 6. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X