Just In
- 11 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 12 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 13 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 14 hrs ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
Don't Miss!
- News Gold & Silver Price: ಮತ್ತೆ ಏರಿದ ಚಿನ್ನದ ದರ, ಇಂದಿನ ಬೆಳ್ಳಿ-ಬಂಗಾರದ ಬೆಲೆ ವಿವರ ತಿಳಿಯಿರಿ
- Movies ನೀಲಿ ಪ್ರಪಂಚದ ಕರಾಳ ಸತ್ಯವನ್ನ ಹೇಳಿದ ಲಾನಾ ರೋಡ್ಸ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸ ಫೀಚರ್ಗಳೊಂದಿಗೆ ಬಿಡುಗಡೆಯಾಗಲಿದೆ ಟೊಯೊಟಾ ಫಾರ್ಚೂನರ್ ಫೇಸ್ಲಿಫ್ಟ್ ಎಸ್ಯುವಿ
ಟೊಯೊಟಾ ಕಂಪನಿಯು ತನ್ನ ಬಹುನಿರೀಕ್ಷಿತ ಫಾರ್ಚೂನರ್ ಫೇಸ್ಲಿಫ್ಟ್ ಎಸ್ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಟೊಯೊಟಾ ಕಂಪನಿಯ ಎಸ್ಯುವಿಗಳ ಸರಣಿಯಲ್ಲಿ ಫಾರ್ಚೂನರ್ ಜನಪ್ರಿಯ ಮಾದರಿಯಾಗಿದೆ.
ಟೊಯೊಟಾ ಫಾರ್ಚೂನರ್ ಫೇಸ್ಲಿಫ್ಟ್ ಸಾಕಷ್ಟು ನಿರೀಕ್ಷೆ ಹುಟ್ಟಿಸಿದ ಎಸ್ಯುವಿಯಾಗಿದೆ. ಈ ಟೊಯೊಟಾ ಫಾರ್ಚೂನರ್ ಫೇಸ್ಲಿಫ್ಟ್ ತನ್ನ ಉತ್ತಮ ಸಾಮರ್ಥ್ಯದಿಂದ ಹೆಚ್ಚು ಜನಪ್ರಿಯತೆಯನ್ನು ಹೊಂದಿದೆ. ಈ ಹೊಸ ಫಾರ್ಚೂನರ್ ಫೇಸ್ಲಿಫ್ಟ್ ಎಸ್ಯುವಿಯು ಭಾರತದಲ್ಲಿ ಇತ್ತೀಚೆಗೆ ಸ್ಪಾಟ್ ಟೆಸ್ಟ್ ನಡೆಸಿದೆ. ಇನ್ನು ಟೊಯೊಟಾ ಫಾರ್ಚೂನರ್ ಫೇಸ್ಲಿಫ್ಟ್ ಎಸ್ಯುವಿಯು ಮುಂಭಾಗ ಹೊಸ ವಿನ್ಯಾಸವನ್ನು ಹೊಂದಿದೆ. ಡೇ ಟೈಮ್ ರನ್ನಿಂಗ್ ಲೈಟ್ ಹೊಂದಿರುವ ಮರುವಿನ್ಯಾಸಗೊಳಿಸಲಾದ ಎಲ್ಇಡಿ ಹೆಡ್ಲೈಟ್, ಮೆಶ್ ಮಾದರಿಯ ದೊಡ್ಡದಾದ ಗ್ರಿಲ್ 18 ಇಂಚಿನ ಅಲಾಯ್ ವ್ಹೀಲ್ ಅಳವಡಿಸಲಾಗಿದೆ.
ಈ ಹೊಸ ಎಸ್ಯುವಿಯ ಹಿಂಭಾಗದಲ್ಲಿ ಸ್ಲಿಮ್ಮರ್-ಕಾಣುವ ಎಲ್ಇಡಿ ಟೈಲ್-ಲೈಟ್ ಗಳನ್ನು ಅಳವಡಿಸಲಾಗಿದೆ.ಇನ್ನು ಸ್ಪ್ಲಿಟ್ ಗ್ರಿಲ್ನಲ್ಲಿ ಪ್ಯಾಕ್, ಎಲ್ಇಡಿ ಟರ್ನ್ ಇಂಡೀಕೆಟರ್ ಒಳಗೊಂಡಿರುವ ವಿಭಿನ್ನವಾದ ಬಂಪರ್ ಅನ್ನು ಹೊಂದಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ
ಇದರೊಂದಿಗೆ ಎಲ್ಇಡಿ ಡಿಆರ್ಎಲ್ಗಳಿಗೆ ವಿಶಿಷ್ಟ ಮಾದರಿಯನ್ನು ಹೊಂದಿರುವ ಡ್ಯುಯಲ್ ಎಲ್ಇಡಿ ಪ್ರೊಜೆಕ್ಟರ್ ಹೆಡ್ಲೈಟ್ಗಳು, ಕ್ರೋಮ್ ಅಪ್ ಫ್ರಂಟ್ ಅನ್ನು ಬದಲಿಸುವ ಗ್ಲೋಸ್ ಬ್ಲ್ಯಾಕ್ ಫಿನಿಶ್, 20 ಇಂಚಿನ ಅಲಾಯ್ ವ್ಹೀಲ್ಸ್, ಡ್ಯುಯಲ್ ಟೋನ್ ಬಣ್ಣದ ಆಯ್ಕೆಗಳು ಮತ್ತು ಹಿಂದಿನ ಬಂಪರ್ ಬೂಟ್ ಲೀಡ್ ನಲ್ಲಿ ಸಂಯೋಜಿಸಲ್ಪಟ್ಟಿವೆ.
ಟೊಯೊಟಾ ಫಾರ್ಚೂನರ್ ಫೇಸ್ಲಿಫ್ಟ್ ಇಂಟಿರಿಯರ್ ಬಗ್ಗೆ ಹೇಳುದಾದರೆ, ಹಿಂದಿನ ಮಾದರಿಯ ವಿನ್ಯಾಸವನ್ನು ಬದಲಾಯಿಸಲಾಗಿದೆ. ಆದರೆ ಒಂದು ಪ್ರಮುಖ ವ್ಯತ್ಯಾಸವೆಂದರೆ ಆಪಲ್ ಕಾರ್ ಪ್ಲೇ ಹೊಂದಾಣಿಕೆಯೊಂದಿಗೆ ಬರುವ ದೊಡ್ಡದಾದ, 8.0-ಇಂಚಿನ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ ಅನ್ನು ಹೊಸದಾಗಿ ಅಳವಡಿಸಲಿದೆ.
MOST READ: ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್ಲಿಫ್ಟ್
ಇದರೊಂದಿಗೆ ಸ್ವಲ್ಪ ನವೀಕರಿಸಿದ ಇನ್ಸ್ಟ್ರುಮೆಂಟ್ ಕ್ಲಸ್ಟರ್, 8-ವೇ ಪವರ್-ಹೊಂದಾಣಿಕೆ ಮಾಡುವ ಡ್ರೈವರ್ ಸೀಟ್, ಸಹ-ಚಾಲಕರ ಸೀಟುಗಳು ಮತ್ತು ವೈರ್ಲೆಸ್ ಸ್ಮಾರ್ಟ್ಫೋನ್ ಚಾರ್ಜಿಂಗ್ ಸಹ ಒಳಗೊಂಡಿದೆ.
ಇನ್ನು ಎಲ್ಇಡಿ ಆಂಬಿಯೆಂಟ್ ಲೈಟಿಂಗ್, 9-ಸ್ಪೀಕರ್ ಜೆಬಿಎಲ್ ಆಡಿಯೊ ಸಿಸ್ಟಂ ಮತ್ತು 360 ಡಿಗ್ರಿ ಕ್ಯಾಮೆರಾ. 7 ಏರ್ಬ್ಯಾಗ್ಗಳು ಮತ್ತು ಸಾಮಾನ್ಯ ಸುರಕ್ಷತಾ ಫೀಚರ್ಗಳ ಜೊತೆಗೆ 'ಟೊಯೋಟಾ ಸೇಫ್ಟಿ ಸೆನ್ಸ್' ಅನ್ನು ಸಹ ಹೊಂದಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ
ವರದಿ ಪ್ರಕಾರ, ಈ ಎಸ್ಯುವಿಯಲ್ಲಿ 2.8-ಲೀಟರ್ ಡೀಸೆಲ್ ಎಂಜಿನ್ ಅಳವಡಿಸಬಹುದು. ಈ ಎಂಜಿನ್ 201 ಬಿಹೆಚ್ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಆಯ್ಕೆಯೊಂದಿಗೆ ನೀಡುತ್ತದೆ. ಹೊಸ ಫಾರ್ಚೂನರ್ ಫೇಸ್ಲಿಫ್ಟ್ ಎಸ್ಯುವಿಯು ಮುಂದಿನ ವರ್ಷದ ಫೆಬ್ರವರಿ ತಿಂಗಳಲ್ಲಿ ಬಿಡುಗಡೆಯಾಗಬಹುದೆಂದು ನಿರೀಕ್ಷಿಸುತ್ತೇವೆ.
ಭಾರತೀಯ ಮಾರುಕಟ್ಟೆಯಲ್ಲಿ ಟೊಯೊಟಾ ಫಾರ್ಚೂನರ್ ಫೇಸ್ಲಿಫ್ಟ್ ಸಾಕಷ್ಟು ನಿರೀಕ್ಷೆ ಹುಟ್ಟಿಸಿದ ಎಸ್ಯುವಿಯಾಗಿದೆ. ಈ ಟೊಯೊಟಾ ಫಾರ್ಚೂನರ್ ಫೇಸ್ಲಿಫ್ಟ್ ತನ್ನ ಉತ್ತಮ ಸಾಮರ್ಥ್ಯದಿಂದ ಹೆಚ್ಚು ಜನಪ್ರಿಯತೆಯನ್ನು ಹೊಂದಿದೆ.