ಬಿಡುಗಡೆಗೆ ಸಜ್ಜಾದ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯ ವಿಶೇಷತೆಗಳು

ಹೊಸ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಭಾರತೀಯ ಮಾರುಕಟ್ಟೆಯಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟಿಸಿದ ಎಸ್‍ಯುವಿಯಾಗಿದೆ. ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಮಾದರಿಗಳಲ್ಲಿ ಒಂದಾಗಿದೆ.

ಬಿಡುಗಡೆಗೆ ಸಜ್ಜಾದ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯ ವಿಶೇಷತೆಗಳು

ಟೊಯೊಟಾ ಕಂಪನಿಯು ತನ್ನ ಬಹುನಿರೀಕ್ಷಿತ 2021ರ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯು 2021ರ ಜನವರಿ 6 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ. ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯ ವಿಶೇಷತೆಗಳು ಇಲ್ಲಿವೆ.

ಬಿಡುಗಡೆಗೆ ಸಜ್ಜಾದ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯ ವಿಶೇಷತೆಗಳು

ವಿನ್ಯಾಸ

ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿ ಹೊರಭಾಗದಲ್ಲಿಯು ಗಮನಾರ್ಹ ಬದಲಾವಣೆಗಳನ್ನು ಮಾಡಲಾಗುತ್ತದೆ. ಈ ಎಸ್‍ಯುವಿಯಲ್ಲಿ ಬೀಫಿಯರ್ ಗ್ರಿಲ್, ಎಲ್‌ಇಡಿ ಡಿಆರ್‌ಎಲ್‌ಗಳೊಂದಿಗೆ ಹೊಸ ಎಲ್‌ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ದೊಡ್ಡ ಫಾಗ್ ಲ್ಯಾಂಪ್ ಹೌಸಿಂಗ್‌ನೊಂದಿಗೆ ಪರಿಷ್ಕೃತ ಫ್ರಂಟ್ ಬಂಪರ್ ಮತ್ತು ಹೊಸ ಸಿಲ್ವರ್ ಸ್ಕಿಡ್ ಪ್ಲೇಟ್ ಅನ್ನು ಹೊಂದಿರುತ್ತದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಬಿಡುಗಡೆಗೆ ಸಜ್ಜಾದ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯ ವಿಶೇಷತೆಗಳು

ಇನ್ನು ಈ ಎಸ್‍ಯುವಿಯ ಪ್ರಮುಖ ಬದಲಾವಣೆಗಳಲ್ಲಿ ಹೊಸದಾಗಿ ವಿನ್ಯಾಸಗೊಳಿಸಲಾದ ಮಲ್ಟಿ-ಸ್ಪೋಕ್ ಅಲಾಯ್ ವ್ಹೀಲ್ ಗಳು, ಅಪ್ಡೇಟ್ಡ್ ವ್ಹೀಂಗ್ ಮೀರರ್ ಮತ್ತು ಹೊಸ ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಸೇರಿವೆ. ಇನ್ನು ಡೈಮ್ನೆಷನ್ ಅಥವಾ ಆಯಾಮದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗುವುದಿಲ್ಲ.

ಬಿಡುಗಡೆಗೆ ಸಜ್ಜಾದ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯ ವಿಶೇಷತೆಗಳು

ಫೀಚರ್‌ಗಳು

ಹೊಸ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯ ಇಂಟಿರಿಯರ್ ನಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ಹೊಂದಿರುವ ಹೊಸ 8.0-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಪಡೆಯಬಹುದು.

MOST READ: ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಬಿಡುಗಡೆಗೆ ಸಜ್ಜಾದ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯ ವಿಶೇಷತೆಗಳು

ಇನ್ನು ಈ ಹೊಸ ಎಸ್‍ಯುವಿಯಲ್ಲಿ 360 ಡಿಗ್ರಿ ವ್ಯೂ ಕ್ಯಾಮೆರಾ ವ್ಯೂ, ವೈರ್‌ಲೆಸ್ ಫೋನ್ ಚಾರ್ಜರ್, 9-ಸ್ಪೀಕರ್ ಜೆಬಿಎಲ್ ಆಡಿಯೊ ಸಿಸ್ಟಂ, ಎಲೆಕ್ಟ್ರಿಕ್ ಆಗಿ ಹೊಂದಾಣಿಕೆ ಮಾಡಬಹುದಾದ ಮುಂಭಾಗದ ಪ್ರಯಾಣಿಕರ ಸೀಟ್, 7 ಏರ್‌ಬ್ಯಾಗ್‌ಗಳು, ಲೇನ್ ದಿಪೆರ್ಚರ್ ವರ್ನಿಂಗ್, ರೇಡಾರ್-ಗೈಡೆಡ್ ಡೈನಾಮಿಕ್ ಕ್ರೂಸ್ ಕಂಟ್ರೋಲ್ ಮತ್ತು ಇತರ ಫೀಚರ್ ಗಳನ್ನು ಹೊಂದಿರಲಿದೆ.

ಬಿಡುಗಡೆಗೆ ಸಜ್ಜಾದ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯ ವಿಶೇಷತೆಗಳು

ಎಂಜಿನ್

ಹೊಸ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ 2.8 ಎಲ್ ಟರ್ಬೊ ಡೀಸೆಲ್ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ 204 ಬಿಹೆಚ್‍ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದರೊಂದಿಗೆ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ 2.7 ಎಲ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 164 ಬಿಹೆಚ್‌ಪಿ ಮತ್ತು 245 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಬಿಡುಗಡೆಗೆ ಸಜ್ಜಾದ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯ ವಿಶೇಷತೆಗಳು

ಇನ್ನು ಈ ಎರಡು ಎಂಜಿನ್ ಗಳ ಜೊತೆಯಲ್ಲಿ 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿರುತ್ತದೆ. ಇನ್ನು ಇದರಲ್ಲಿ 2 ಡಬ್ಲ್ಯುಡಿ ಮತ್ತು 4ಡಬ್ಲ್ಯುಡಿ(ಫ್ಗೋರ್ ವ್ಹೀಲ್ ಡ್ರೈವ್) ಒಳಗೊಂಡಿರುತ್ತದೆ.

ಬಿಡುಗಡೆಗೆ ಸಜ್ಜಾದ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯ ವಿಶೇಷತೆಗಳು

ಬಣ್ಣಗಳು

ಹೊಸ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯು ಪರ್ಲ್ ವೈಟ್, ಸೂಪರ್ ವೈಟ್, ಸ್ಪಾರ್ಕ್ಲಿಂಗ್ ಬ್ಲ್ಯಾಕ್, ಗ್ರೇ ಮೆಟಾಲಿಕ್, ಆಟಿಟ್ಯೂಡ್ ಬ್ಲ್ಯಾಕ್, ಸಿಲ್ವರ್ ಮೆಟಾಲಿಕ್, ಫ್ಯಾಂಟಮ್ ಬ್ರೌನ್ ಮತ್ತು ಬ್ರೌನ್ಜ್ ಎಂಬ ಬಣ್ಣಗಳ ಆಯ್ಕೆಯಲ್ಲಿರುತ್ತದೆ. ಇದರೊಂದಿಗೆ ಮ್ಯಾಟ್ ಬ್ಲ್ಯಾಕ್‌ನೊಂದಿಗೆ ಪರ್ಲ್ ವೈಟ್ ಎಂಬ ಡ್ಯೂಯಲ್ ಟ್ಯೂನ್ ಬಣ್ಣದ ಆಯ್ಕೆಯನ್ನು ಹೊಂದಿರಲಿದೆ.

ಬಿಡುಗಡೆಗೆ ಸಜ್ಜಾದ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯ ವಿಶೇಷತೆಗಳು

ಹೀಗೆ ಹೊಸ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯು ಒಟ್ಟು 9 ಬಣ್ಣಗಳ ಆಯ್ಕೆಯನ್ನು ಹೊಂದಿರಲಿದೆ. ಇನ್ನು ಈ ಎಸ್‍ಯುವಿಯಲ್ಲಿ ಹೊಸ ಆಲ್-ಬ್ಲ್ಯಾಕ್ ಥೀಮ್, ಚಮೋಯಿಸ್ ಮತ್ತು ಬ್ಲ್ಯಾಕ್ & ಮರೂನ್ ಬಣ್ಣಗಳ ಥೀಮ್ ನಿಂದ ಇಂಟಿರಿಯರ್ ಕೂಡಿರಲಿದೆ.

ಬಿಡುಗಡೆಗೆ ಸಜ್ಜಾದ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯ ವಿಶೇಷತೆಗಳು

ಪ್ರತಿಸ್ಪರ್ಧಿಗಳು

ಹೊಸ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಫೋರ್ಡ್ ಎಂಡೀವರ್, ಮಹೀಂದ್ರಾ ಅಲ್ಟೋರಸ್ ಮತ್ತು ಎಂಜಿ ಗ್ಲೊಸ್ಟರ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
Read more on ಟೊಯೊಟಾ toyota
English summary
Toyota Fortuner Facelift Launch Top Things. Read In Kannada.
Story first published: Saturday, December 26, 2020, 20:02 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X