ಭಾರತದಲ್ಲಿ ಬಿಡುಗಡೆಯಾಗಲಿದೆ ಜನಪ್ರಿಯ ಟೊಯೊಟಾ ಫಾರ್ಚೂನರ್ ಲೆಜೆಂಡರ್

ಟೊಯೊಟಾ ಕಂಪನಿಯು ತನ್ನ ಹೊಸ ಫಾರ್ಚೂನರ್ ಲೆಜೆಂಡರ್ ಎಸ್‌ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ಟೊಯೊಟಾ ಫಾರ್ಚೂನರ್ ಲೆಜೆಂಡರ್ ಎಸ್‌ಯುವಿಯು ದೇಶದಲ್ಲಿ ಮಾರಾಟವಾಗುವ ಸ್ಟ್ಯಾಂಡರ್ಡ್ ಎಸ್‌ಯುವಿಗಿಂತ ಹೆಚ್ಚು ಪವರ್ ಫುಲ್ ಮತ್ತು ಪ್ರೀಮಿಯಂ ಆವೃತ್ತಿಯಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಜನಪ್ರಿಯ ಟೊಯೊಟಾ ಫಾರ್ಚೂನರ್ ಲೆಜೆಂಡರ್

ವರದಿಗಳ ಪ್ರಕಾರ, ಹೊಸ ಟೊಯೊಟಾ ಫಾರ್ಚೂನರ್ ಲೆಜೆಂಡರ್ ಎಸ್‌ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆಯಾಗಲಿದೆ. ಹೆಚ್ಚು ಪವರ್ ಫುಲ್ ಮತ್ತು ಪ್ರೀಮಿಯಂ ಆವೃತ್ತಿಯಾದ ಫಾರ್ಚೂನರ್ ಲೆಜೆಂಡರ್ ಅನ್ನು ಸ್ಟ್ಯಾಂಡರ್ಡ್ ಮಾದರಿಯೊಂದಿಗೆ ಮಾರಾಟಗೊಳಿಸಲಾಗುತ್ತದೆ. ಟೊಯೊಟಾ ಫಾರ್ಚೂನರ್ ಲೆಜೆಂಡರ್ ಸಾಕಷ್ಟು ನಿರೀಕ್ಷೆ ಹುಟ್ಟಿಸಿದ ಎಸ್‍ಯುವಿಯಾಗಿದೆ. ಈ ಟೊಯೊಟಾ ಫಾರ್ಚೂನರ್ ಲೆಜೆಂಡರ್ ತನ್ನ ಉತ್ತಮ ಆಫ್-ರೋಡ್ ಸಾಮರ್ಥ್ಯದಿಂದ ಹೆಚ್ಚು ಜನಪ್ರಿಯತೆಯನ್ನು ಹೊಂದಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಜನಪ್ರಿಯ ಟೊಯೊಟಾ ಫಾರ್ಚೂನರ್ ಲೆಜೆಂಡರ್

ಇನ್ನು ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌ ಎಸ್‍ಯುವಿಯು ಅಗ್ರೇಸಿವ್ ಲುಕ್ ಅನ್ನು ಹೊಂದಿದೆ. ಈ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುವುದಾದರೆ, ಮುಂಭಾಗ ಹೊಸ ವಿನ್ಯಾಸವನ್ನು ಹೊಂದಿದೆ. ಡೇ ಟೈಮ್ ರನ್ನಿಂಗ್ ಲೈಟ್ ಹೊಂದಿರುವ ಮರುವಿನ್ಯಾಸಗೊಳಿಸಲಾದ ಎಲ್‌ಇಡಿ ಹೆಡ್‌ಲೈಟ್ ಮತ್ತು ಮೆಶ್ ಮಾದರಿಯ ದೊಡ್ಡದಾದ ಗ್ರಿಲ್ ಅನ್ನು ಹೊಂದಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಭಾರತದಲ್ಲಿ ಬಿಡುಗಡೆಯಾಗಲಿದೆ ಜನಪ್ರಿಯ ಟೊಯೊಟಾ ಫಾರ್ಚೂನರ್ ಲೆಜೆಂಡರ್

ಈ ಹೊಸ ಎಸ್‍ಯುವಿಯ ಹಿಂಭಾಗದಲ್ಲಿ ಸ್ಲಿಮ್ಮರ್-ಕಾಣುವ ಎಲ್ಇಡಿ ಟೈಲ್-ಲೈಟ್ ಗಳನ್ನು ಅಳವಡಿಸಲಾಗಿದೆ.ಇನ್ನು ಸ್ಪ್ಲಿಟ್ ಗ್ರಿಲ್‌ನಲ್ಲಿ ಪ್ಯಾಕ್, ಎಲ್ಇಡಿ ಟರ್ನ್ ಇಂಡೀಕೆಟರ್ ಒಳಗೊಂಡಿರುವ ವಿಭಿನ್ನವಾದ ಬಂಪರ್ ಅನ್ನು ಹೊಂದಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಜನಪ್ರಿಯ ಟೊಯೊಟಾ ಫಾರ್ಚೂನರ್ ಲೆಜೆಂಡರ್

ಇದರೊಂದಿಗೆ ಎಲ್ಇಡಿ ಡಿಆರ್‌ಎಲ್‌ಗಳಿಗೆ ವಿಶಿಷ್ಟ ಮಾದರಿಯನ್ನು ಹೊಂದಿರುವ ಡ್ಯುಯಲ್ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, ಕ್ರೋಮ್ ಅಪ್ ಫ್ರಂಟ್ ಅನ್ನು ಬದಲಿಸುವ ಗ್ಲೋಸ್ ಬ್ಲ್ಯಾಕ್ ಫಿನಿಶ್, 20 ಇಂಚಿನ ಅಲಾಯ್ ವ್ಹೀಲ್ಸ್, ಡ್ಯುಯಲ್ ಟೋನ್ ಬಣ್ಣದ ಆಯ್ಕೆಗಳನ್ನು ಹೊಂದಿವೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಭಾರತದಲ್ಲಿ ಬಿಡುಗಡೆಯಾಗಲಿದೆ ಜನಪ್ರಿಯ ಟೊಯೊಟಾ ಫಾರ್ಚೂನರ್ ಲೆಜೆಂಡರ್

ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌ ಇಂಟಿರಿಯರ್ ಬಗ್ಗೆ ಹೇಳುದಾದರೆ, ಸ್ಟ್ಯಾಂಡರ್ಡ್ ಮಾದರಿಗೆ ಹೋಲಿಸಿದರೆ, ಒಂದು ಪ್ರಮುಖ ವ್ಯತ್ಯಾಸವೆಂದರೆ ಆಪಲ್ ಕಾರ್ ಪ್ಲೇ ಹೊಂದಾಣಿಕೆಯೊಂದಿಗೆ ಬರುವ ದೊಡ್ಡದಾದ, 8.0-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಸದಾಗಿ ಅಳವಡಿಸಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಜನಪ್ರಿಯ ಟೊಯೊಟಾ ಫಾರ್ಚೂನರ್ ಲೆಜೆಂಡರ್

ಇನ್ನು ಎಲ್ಇಡಿ ಆಂಬಿಯೆಂಟ್ ಲೈಟಿಂಗ್, 9-ಸ್ಪೀಕರ್ ಜೆಬಿಎಲ್ ಆಡಿಯೊ ಸಿಸ್ಟಂ ಮತ್ತು 360 ಡಿಗ್ರಿ ಕ್ಯಾಮೆರಾ. 7 ಏರ್‌ಬ್ಯಾಗ್‌ಗಳು ಮತ್ತು ಸಾಮಾನ್ಯ ಸುರಕ್ಷತಾ ಫೀಚರ್‌ಗಳ ಜೊತೆಗೆ 'ಟೊಯೋಟಾ ಸೇಫ್ಟಿ ಸೆನ್ಸ್' ಅನ್ನು ಸಹ ಹೊಂದಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಭಾರತದಲ್ಲಿ ಬಿಡುಗಡೆಯಾಗಲಿದೆ ಜನಪ್ರಿಯ ಟೊಯೊಟಾ ಫಾರ್ಚೂನರ್ ಲೆಜೆಂಡರ್

ವರದಿ ಪ್ರಕಾರ, ಈ ಎಸ್‍ಯುವಿಯಲ್ಲಿ 2.8-ಲೀಟರ್ ಡೀಸೆಲ್ ಎಂಜಿನ್ ಅಳವಡಿಸಬಹುದು. ಈ ಎಂಜಿನ್ 201 ಬಿಹೆಚ್‍ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಜನಪ್ರಿಯ ಟೊಯೊಟಾ ಫಾರ್ಚೂನರ್ ಲೆಜೆಂಡರ್

ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಆಯ್ಕೆಯೊಂದಿಗೆ ನೀಡುತ್ತದೆ. ಹೊಸ ಫಾರ್ಚೂನರ್ ಫೇಸ್‌ಲಿಫ್ಟ್‌ ಎಸ್‍ಯುವಿಯು ಮುಂದಿನ ವರ್ಷದ ಫೆಬ್ರವರಿ ತಿಂಗಳಲ್ಲಿ ಬಿಡುಗಡೆಯಾಗಬಹುದೆಂದು ನಿರೀಕ್ಷಿಸುತ್ತೇವೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಜನಪ್ರಿಯ ಟೊಯೊಟಾ ಫಾರ್ಚೂನರ್ ಲೆಜೆಂಡರ್

ಟೊಯೊಟಾ ಫಾರ್ಚೂನರ್ ಲೆಜೆಂಡರ್ ಎಸ್‍ಯುವಿಯು ಹೆಚ್ಚು ಪ್ರೀಮಿಯಂ ಆವೃತ್ತಿಯಾಗಿದೆ. ಅಲ್ಲದೇ ಉತ್ತಮ ಆಫ್-ರೋಡಿಂಗ್ ಸಾಮರ್ಥ್ಯವನ್ನು ಹೊಂದಿದೆ. ಲೆಜೆಂಡರ್ ಸ್ಟ್ಯಾಂಡರ್ಡ್ ಎಸ್‌ಯುವಿಗಿಂತ ಹೆಚ್ಚಿನ ಬೆಲೆಯೊಂದಿಗೆ ಬರಲಿದ್ದು, ಎಕ್ಸ್‌ಶೋರೂಂ ಪ್ರಕಾರ ರೂ.40 ಲಕ್ಷಗಳಾಗಿರಬಹುದು ಎಂದು ನಿರೀಕ್ಷಿಸುತ್ತೇವೆ. ಟೊಯೊಟಾ ಫಾರ್ಚೂನರ್ ಲೆಜೆಂಡರ್ ಭಾರತದಲ್ಲಿ ಬಿಡುಗಡೆಯಾದ ಬಳಿಕ ಎಂಜಿ ಗ್ಲೊಸ್ಟರ್ ಎಸ್‍ಯುವಿಗೆ ಪೈಪೋಟಿ ನೀಡುತ್ತದೆ.

Article Published On: Friday, December 11, 2020, 20:49 [IST]
English summary
Toyota Fortuner Legender SUV India Launch Confirmed. Read In Kannada.
Read more on ಟೊಯೊಟಾ toyota
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+