Just In
Don't Miss!
- Movies
ಜನವರಿ 22ರಂದು ಐದು ಕನ್ನಡ ಸಿನಿಮಾ ಬಿಡುಗಡೆ
- News
ಲಿಂಗಾಂಬೂದಿಪಾಳ್ಯ ಕೆರೆಗೆ ಹರಿಯಲಿದೆ ಕೆಆರ್ಎಸ್ ನೀರು
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Sports
ತವರಿಗೆ ಮರಳಿದ ಟೀಮ್ ಇಂಡಿಯಾ: ಮುಂಬೈನಲ್ಲಿ ರಹಾನೆಗೆ ಅದ್ದೂರಿ ಸ್ವಾಗತ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬೆಂಗಳೂರಿನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಲೆಜೆಂಡರ್ ಎಸ್‌ಯುವಿ
ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು ತನ್ನ ಬಹುನಿರೀಕ್ಷಿತ ಫಾರ್ಚೂನರ್ ಲೆಜೆಂಡರ್ ಎಸ್‌ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ ಟೊಯೊಟಾ ಫಾರ್ಚೂನರ್ ಲೆಜೆಂಡರ್ ಸ್ಟ್ಯಾಂಡರ್ಡ್ ಮಾದರಿಗಿಂತ ಹೆಚ್ಚು ಪವರ್ ಫುಲ್ ಮತ್ತು ಪ್ರೀಮಿಯಂ ಆವೃತ್ತಿಯಾಗಿದೆ.

ಟೊಯೊಟಾ ಫಾರ್ಚೂನರ್ ಲೆಜೆಂಡರ್ ಎಸ್‌ಯುವಿಯ ಟಿವಿಸಿ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದೆ. ಈ ಸಂದರ್ಭದಲ್ಲಿ ಟೊಯೊಟಾ ಫಾರ್ಚೂನರ್ ಲೆಜೆಂಡರ್ ಎಸ್‍ಯುವಿಯ ಸ್ಪೈ ಚಿತ್ರಗಳನ್ನು ಗಾಡಿವಾಡಿ ಬಹಿರಂಗಪಡಿಸಿದೆ. ಈ ಹೊಸ ಫಾರ್ಚೂನರ್ ಲೆಜೆಂಡರ್ ಎಸ್‍ಯುವಿ ಸ್ಪೋರ್ಟಿ ಮತ್ತು ಅಗ್ರೇಸಿವ್ ಲುಕ್ ಅನ್ನು ಹೊಂದಿದೆ. ವರದಿಗಳ ಪ್ರಕಾರ, ಹೊಸ ಟೊಯೊಟಾ ಫಾರ್ಚೂನರ್ ಲೆಜೆಂಡರ್ ಎಸ್ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆಯಾಗಲಿದೆ. ಹೆಚ್ಚು ಪವರ್ ಫುಲ್ ಮತ್ತು ಪ್ರೀಮಿಯಂ ಆವೃತ್ತಿಯಾದ ಫಾರ್ಚೂನರ್ ಲೆಜೆಂಡರ್ ಅನ್ನು ಸ್ಟ್ಯಾಂಡರ್ಡ್ ಮಾದರಿಯೊಂದಿಗೆ ಮಾರಾಟಗೊಳಿಸಲಾಗುತ್ತದೆ.

ಟೊಯೊಟಾ ಫಾರ್ಚೂನರ್ ಲೆಜೆಂಡರ್ ಸಾಕಷ್ಟು ನಿರೀಕ್ಷೆ ಹುಟ್ಟಿಸಿದ ಎಸ್‍ಯುವಿಯಾಗಿದೆ. ಈ ಟೊಯೊಟಾ ಫಾರ್ಚೂನರ್ ಲೆಜೆಂಡರ್ ತನ್ನ ಉತ್ತಮ ಆಫ್-ರೋಡ್ ಸಾಮರ್ಥ್ಯದಿಂದ ಹೆಚ್ಚು ಜನಪ್ರಿಯತೆಯನ್ನು ಹೊಂದಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಇನ್ನು ಟೊಯೊಟಾ ಫಾರ್ಚೂನರ್ ಲೆಜೆಂಡರ್ ಎಸ್‌ಯುವಿಯು ಅಗ್ರೇಸಿವ್ ಲುಕ್ ನೊಂದಿಗೆ ಆಕರ್ಷಕವಾಗಿದೆ. ಈ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುವುದಾದರೆ, ಮುಂಭಾಗ ಹೊಸ ವಿನ್ಯಾಸವನ್ನು ಹೊಂದಿದೆ. ಡೇ ಟೈಮ್ ರನ್ನಿಂಗ್ ಲೈಟ್ ಹೊಂದಿರುವ ಮರುವಿನ್ಯಾಸಗೊಳಿಸಲಾದ ಎಲ್‌ಇಡಿ ಹೆಡ್‌ಲೈಟ್ ಮತ್ತು ಮೆಶ್ ಮಾದರಿಯ ದೊಡ್ಡದಾದ ಗ್ರಿಲ್ ಅನ್ನು ಹೊಂದಿದೆ.

ಈ ಹೊಸ ಎಸ್‍ಯುವಿಯ ಹಿಂಭಾಗದಲ್ಲಿ ಸ್ಲಿಮ್ಮರ್-ಕಾಣುವ ಎಲ್ಇಡಿ ಟೈಲ್-ಲೈಟ್ ಗಳನ್ನು ಅಳವಡಿಸಲಾಗಿದೆ.ಇನ್ನು ಸ್ಪ್ಲಿಟ್ ಗ್ರಿಲ್‌ನಲ್ಲಿ ಪ್ಯಾಕ್, ಎಲ್ಇಡಿ ಟರ್ನ್ ಇಂಡೀಕೆಟರ್ ಒಳಗೊಂಡಿರುವ ವಿಭಿನ್ನವಾದ ಬಂಪರ್ ಅನ್ನು ಹೊಂದಿದೆ.
MOST READ: ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಇದರೊಂದಿಗೆ ಎಲ್ಇಡಿ ಡಿಆರ್‌ಎಲ್‌ಗಳಿಗೆ ವಿಶಿಷ್ಟ ಮಾದರಿಯನ್ನು ಹೊಂದಿರುವ ಡ್ಯುಯಲ್ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, ಕ್ರೋಮ್ ಅಪ್ ಫ್ರಂಟ್ ಅನ್ನು ಬದಲಿಸುವ ಗ್ಲೋಸ್ ಬ್ಲ್ಯಾಕ್ ಫಿನಿಶ್, 20 ಇಂಚಿನ ಅಲಾಯ್ ವ್ಹೀಲ್ಸ್, ಡ್ಯುಯಲ್ ಟೋನ್ ಬಣ್ಣದ ಆಯ್ಕೆಗಳನ್ನು ಹೊಂದಿವೆ.

ಟೊಯೊಟಾ ಫಾರ್ಚೂನರ್ ಲೆಜೆಂಡರ್ ಎಸ್‌ಯುವಿಯ ಇಂಟಿರಿಯರ್ ಬಗ್ಗೆ ಹೇಳುದಾದರೆ, ಸ್ಟ್ಯಾಂಡರ್ಡ್ ಮಾದರಿಗೆ ಹೋಲಿಸಿದರೆ, ಒಂದು ಪ್ರಮುಖ ವ್ಯತ್ಯಾಸವೆಂದರೆ ಆಪಲ್ ಕಾರ್ ಪ್ಲೇ ಹೊಂದಾಣಿಕೆಯೊಂದಿಗೆ ಬರುವ ದೊಡ್ಡದಾದ, 8.0-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಸದಾಗಿ ಅಳವಡಿಸಲಿದೆ.
MOST READ: ಐಷಾರಾಮಿ ಬಿಎಂಡಬ್ಲ್ಯು ಎಕ್ಸ್7 ಕಾರು ಚಾಲನೆ ವೇಳೆ ಕಾಣಿಸಿಕೊಂಡ ಬಾಲಿವುಡ್ ಸ್ಟಾರ್

ಇನ್ನು ಎಲ್ಇಡಿ ಆಂಬಿಯೆಂಟ್ ಲೈಟಿಂಗ್, 9-ಸ್ಪೀಕರ್ ಜೆಬಿಎಲ್ ಆಡಿಯೊ ಸಿಸ್ಟಂ ಮತ್ತು 360 ಡಿಗ್ರಿ ಕ್ಯಾಮೆರಾ. 7 ಏರ್‌ಬ್ಯಾಗ್‌ಗಳು ಮತ್ತು ಸಾಮಾನ್ಯ ಸುರಕ್ಷತಾ ಫೀಚರ್‌ಗಳ ಜೊತೆಗೆ 'ಟೊಯೋಟಾ ಸೇಫ್ಟಿ ಸೆನ್ಸ್' ಅನ್ನು ಸಹ ಹೊಂದಿದೆ.

ವರದಿ ಪ್ರಕಾರ, ಈ ಎಸ್‍ಯುವಿಯಲ್ಲಿ 2.8-ಲೀಟರ್ ಡೀಸೆಲ್ ಎಂಜಿನ್ ಅಳವಡಿಸಬಹುದು. ಇದು ಪವರ್ ಫುಲ್ ಡೀಸೆಲ್ ಎಂಜಿನ್ ಆಗಿದೆ. ಈ ಎಂಜಿನ್ 201 ಬಿಹೆಚ್‍ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಆಯ್ಕೆಯೊಂದಿಗೆ ನೀಡುತ್ತದೆ. ಹೊಸ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯು ಮುಂದಿನ ವರ್ಷದ ಫೆಬ್ರವರಿ ತಿಂಗಳಲ್ಲಿ ಬಿಡುಗಡೆಯಾಗಬಹುದೆಂದು ನಿರೀಕ್ಷಿಸುತ್ತೇವೆ.

ಟೊಯೊಟಾ ಫಾರ್ಚೂನರ್ ಲೆಜೆಂಡರ್ ಎಸ್‍ಯುವಿಯು ಹೆಚ್ಚು ಪ್ರೀಮಿಯಂ ಆವೃತ್ತಿಯಾಗಿದೆ. ಅಲ್ಲದೇ ಫಾರ್ಚೂನರ್ ಲೆಜೆಂಡರ್ ವಿದೇಶಗಳಲ್ಲಿ ತನ್ನ ಆಫ್-ರೋಡ್ ಸಾಮರ್ಥ್ಯವನ್ನು ಸಾಬೀತುಪಡಿಸಿದೆ.. ಲೆಜೆಂಡರ್ ಸ್ಟ್ಯಾಂಡರ್ಡ್ ಎಸ್‌ಯುವಿಗಿಂತ ಹೆಚ್ಚಿನ ಬೆಲೆಯೊಂದಿಗೆ ಬರಲಿದ್ದು, ಎಕ್ಸ್‌ಶೋರೂಂ ಪ್ರಕಾರ ರೂ.40 ಲಕ್ಷಗಳಾಗಿರಬಹುದು ಎಂದು ನಿರೀಕ್ಷಿಸುತ್ತೇವೆ.

ಟೊಯೊಟಾ ಫಾರ್ಚೂನರ್ ಲೆಜೆಂಡರ್ ಎಸ್ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಎಂಜಿ ಗ್ಲೊಸ್ಟರ್ ಮತ್ತು ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್‍ಯುವಿಗಳಿಗೆ ಪೈಪೋಟಿಯನ್ನು ನೀಡುತ್ತದೆ. ಟೊಯೊಟಾ ಫಾರ್ಚೂನರ್ ಲೆಜೆಂಡರ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಎಸ್‍ಯುವಿಗಳಲ್ಲಿ ಒಂದಾಗಿದೆ.