Just In
- 37 min ago ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- 40 min ago Maruti Suzuki: 2024ರ ಮಾರುತಿ ಸ್ವಿಫ್ಟ್ ವಿಶೇಷತೆಗಳು: ಸನ್ರೂಫ್, 35 ಕಿ.ಮೀ ಮೈಲೇಜ್!
- 1 hr ago Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
- 1 hr ago ಯುಎಸ್ಎ, ಕೆನಡಾಗೂ ಕಾಲಿಟ್ಟ ಭಾರತೀಯ ಬೈಕ್: ಮುಂದುವರೆದ ವಿಶ್ವಗುರು ಭಾರತದ ನಾಗಾಲೋಟ
Don't Miss!
- News ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೆ ಜನ ಒಪ್ಪಲ್ಲ: ಡಿ ಕೆ ಸುರೇಶ್ ಹೀಗೆ ಹೇಳಿದ್ದು ಯಾರಿಗೆ?
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Movies STD ಬೂತ್ನಲ್ಲಿ ಕೆಲಸ ಮಾಡುವಾಗ 500 ರೂ. ಸಂಬಳ; ಶೋ ಆರಂಭಿಸಿದ ಮೇಲೆ ಗಳಿಸಿದ್ದೆಷ್ಟು ಕೋಟಿ?
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟೊಯೊಟಾ ಫಾರ್ಚೂನರ್ ಲೆಜೆಂಡರ್ ವೆರಿಯೆಂಟ್ ವಾಕ್ರೌಂಡ್ ವೀಡಿಯೋ ಬಿಡುಗಡೆ
ಟೊಯೊಟಾ ಕಂಪನಿಯು ತನ್ನ ಬಹುನಿರೀಕ್ಷಿತ ಫಾರ್ಚೂನರ್ ಫೇಸ್ಲಿಫ್ಟ್ ಎಸ್ಯುವಿಯನ್ನು ಇತ್ತೀಚೆಗೆ ಥೈಲ್ಯಾಂಡ್ನಲ್ಲಿ ಪರಿಚಯಿಸಿತು. ಟೊಯೊಟಾ ಕಂಪನಿಯ ಎಸ್ಯುವಿಗಳ ಸರಣಿಯಲ್ಲಿ ಫಾರ್ಚೂನರ್ ಜನಪ್ರಿಯ ಮಾದರಿಯಾಗಿದೆ.
ಟೊಯೊಟಾ ಫಾರ್ಚೂನರ್ ಫೇಸ್ಲಿಫ್ಟ್ ಎಸ್ಯುವಿಯ ಟಾಪ್ ಸ್ಪೆಕ್ ಲೆಜೆಂಡರ್ನ ವಾಕ್ರೌಂಡ್ ವೀಡಿಯೋವನ್ನು ಕಾರ್ ಶೋ ಯೂಟ್ಯೂಬ್ ಚಾನೆಲ್ ಬಿಡುಗಡೆಗೊಳಿಸಿದೆ. ಇನ್ನು ಈ ಟೊಯೊಟಾ ಫಾರ್ಚೂನರ್ ಫೇಸ್ಲಿಫ್ಟ್ ಲೆಜೆಂಡರ್ ಎಸ್ಯುವಿಯು ಮುಂಭಾಗ ಹೊಸ ವಿನ್ಯಾಸವನ್ನು ಹೊಂದಿದೆ. ಡೇ ಟೈಮ್ ರನ್ನಿಂಗ್ ಲೈಟ್ ಹೊಂದಿರುವ ಮರುವಿನ್ಯಾಸಗೊಳಿಸಲಾದ ಎಲ್ಇಡಿ ಹೆಡ್ಲೈಟ್, ಮೆಶ್ ಮಾದರಿಯ ದೊಡ್ಡದಾದ ಗ್ರಿಲ್ 18 ಇಂಚಿನ ಅಲಾಯ್ ವ್ಹೀಲ್ ಗಳನ್ನು ಅಳವಡಿಸಲಾಗಿದೆ.
ಈ ಹೊಸ ಎಸ್ಯುವಿಯ ಹಿಂಭಾಗದಲ್ಲಿ ಸ್ಲಿಮ್ಮರ್-ಕಾಣುವ ಎಲ್ಇಡಿ ಟೈಲ್-ಲೈಟ್ ಗಳನ್ನು ಅಳವಡಿಸಲಾಗಿದೆ. ಇನ್ನು ಸ್ಪ್ಲಿಟ್ ಗ್ರಿಲ್ನಲ್ಲಿ ಪ್ಯಾಕ್, ಎಲ್ಇಡಿ ಟರ್ನ್ ಇಂಡೀಕೆಟರ್ ಒಳಗೊಂಡಿರುವ ವಿಭಿನ್ನವಾದ ಬಂಪರ್ ಅನ್ನು ಹೊಂದಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ
ಇದರೊಂದಿಗೆ ಎಲ್ಇಡಿ ಡಿಆರ್ಎಲ್ಗಳಿಗೆ ವಿಶಿಷ್ಟ ಮಾದರಿಯನ್ನು ಹೊಂದಿರುವ ಡ್ಯುಯಲ್ ಎಲ್ಇಡಿ ಪ್ರೊಜೆಕ್ಟರ್ ಹೆಡ್ಲೈಟ್ಗಳು, ಕ್ರೋಮ್ ಅಪ್ ಫ್ರಂಟ್ ಅನ್ನು ಬದಲಿಸುವ ಗ್ಲೋಸ್ ಬ್ಲ್ಯಾಕ್ ಫಿನಿಶ್, 20 ಇಂಚಿನ ಅಲಾಯ್ ವ್ಹೀಲ್ಸ್, ಡ್ಯುಯಲ್ ಟೋನ್ ಬಣ್ಣದ ಆಯ್ಕೆಗಳು ಮತ್ತು ಹಿಂದಿನ ಬಂಪರ್ ಬೂಟ್ ಲೀಡ್ ನಲ್ಲಿ ಸಂಯೋಜಿಸಲ್ಪಟ್ಟಿವೆ.
ಟೊಯೊಟಾ ಫಾರ್ಚೂನರ್ ಫೇಸ್ಲಿಫ್ಟ್ ಇಂಟಿರಿಯರ್ ಬಗ್ಗೆ ಹೇಳುದಾದರೆ, ಹಿಂದಿನ ಮಾದರಿಯ ವಿನ್ಯಾಸವನ್ನು ಬದಲಾಯಿಸಲಾಗಿದೆ. ಆದರೆ ಒಂದು ಪ್ರಮುಖ ವ್ಯತ್ಯಾಸವೆಂದರೆ ಆಪಲ್ ಕಾರ್ ಪ್ಲೇ ಹೊಂದಾಣಿಕೆಯೊಂದಿಗೆ ಬರುವ ದೊಡ್ಡದಾದ, 8.0-ಇಂಚಿನ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ ಅನ್ನು ಹೊಸದಾಗಿ ಅಳವಡಿಸಲಿದೆ.
MOST READ: ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಕೊಡಿಯಾಕ್ ಎಸ್ಯುವಿ
ಇದರೊಂದಿಗೆ ಸ್ವಲ್ಪ ನವೀಕರಿಸಿದ ಇನ್ಸ್ಟ್ರುಮೆಂಟ್ ಕ್ಲಸ್ಟರ್, 8-ವೇ ಪವರ್-ಹೊಂದಾಣಿಕೆ ಮಾಡುವ ಡ್ರೈವರ್ ಸೀಟ್, ಸಹ-ಚಾಲಕರ ಸೀಟುಗಳು ಮತ್ತು ವೈರ್ಲೆಸ್ ಸ್ಮಾರ್ಟ್ಫೋನ್ ಚಾರ್ಜಿಂಗ್ ಸಹ ಒಳಗೊಂಡಿದೆ.
ಇನ್ನು ಎಲ್ಇಡಿ ಆಂಬಿಯೆಂಟ್ ಲೈಟಿಂಗ್, 9-ಸ್ಪೀಕರ್ ಜೆಬಿಎಲ್ ಆಡಿಯೊ ಸಿಸ್ಟಂ ಮತ್ತು 360 ಡಿಗ್ರಿ ಕ್ಯಾಮೆರಾ. 7 ಏರ್ಬ್ಯಾಗ್ಗಳು ಮತ್ತು ಸಾಮಾನ್ಯ ಸುರಕ್ಷತಾ ಫೀಚರ್ಗಳ ಜೊತೆಗೆ 'ಟೊಯೋಟಾ ಸೇಫ್ಟಿ ಸೆನ್ಸ್' ಅನ್ನು ಸಹ ಹೊಂದಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ
ಈ ಎಸ್ಯುವಿಯಲ್ಲಿ 2.8-ಲೀಟರ್ ಡೀಸೆಲ್ ಎಂಜಿನ್ ಅಳವಡಿಸಬಹುದು. ಈ ಎಂಜಿನ್ 204 ಬಿಹೆಚ್ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಆಯ್ಕೆಯೊಂದಿಗೆ ನೀಡುತ್ತದೆ.
ಟೊಯೊಟಾ ಫಾರ್ಚೂನರ್ ಫೇಸ್ಲಿಫ್ಟ್ ಸಾಕಷ್ಟು ನಿರೀಕ್ಷೆ ಹುಟ್ಟಿಸಿದ ಎಸ್ಯುವಿಯಾಗಿದೆ. ಈ ಟೊಯೊಟಾ ಫಾರ್ಚೂನರ್ ಫೇಸ್ಲಿಫ್ಟ್ ತನ್ನ ಉತ್ತಮ ಸಾಮರ್ಥ್ಯದಿಂದ ಹೆಚ್ಚು ಜನಪ್ರಿಯತೆಯನ್ನು ಹೊಂದಿದೆ.
ಈ ಫಾರ್ಚೂನರ್ ಫೇಸ್ಲಿಫ್ಟ್ ಎಸ್ಯುವಿಯು ಭಾರತದಲ್ಲಿ ಇತ್ತೀಚೆಗೆ ಸ್ಪಾಟ್ ಟೆಸ್ಟ್ ನಡೆಸಿದೆ. ಹೊಸ ಫಾರ್ಚೂನರ್ ಫೇಸ್ಲಿಫ್ಟ್ ಎಸ್ಯುವಿಯು ಈ ವರ್ಷದ ಹಬ್ಬದ ಸೀಸನ್ ನಲ್ಲಿ ಭಾರತದಲ್ಲಿ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ.