ಬಿಡುಗಡೆಯಾಗಲಿರುವ ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಎಂಪಿವಿಯ ಪ್ರಮುಖ ಸಂಗತಿಗಳಿವು

ಟೊಯೊಟಾ ಕಂಪನಿಯು ಕಳೆದ ತಿಂಗಳು ಇಂಡೋನೇಷ್ಯಾ ಮಾರುಕಟ್ಟೆಯಲ್ಲಿ ತನ್ನ ಬಹುನಿರೀಕ್ಷಿತ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಎಂಪಿವಿಯನ್ನು ಬಿಡುಗಡೆಗೊಳಿಸಿತ್ತು. ಇದೀಗ ಟೊಯೊಟಾ ಕಂಪನಿಯು ಈ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಎಂಪಿವಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.

ಬಿಡುಗಡೆಯಾಗಲಿರುವ ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಎಂಪಿವಿಯ ಪ್ರಮುಖ ಸಂಗತಿಗಳಿವು

ಭಾರತೀಯ ಮಾರುಕಟ್ಟೆಯಲ್ಲಿ ಈ ತಿಂಗಳ ಕೊನೆಯಲ್ಲಿ ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಬಿಡುಗಡೆಯಾಗುವ ನಿರೀಕ್ಷೆಯಿದೆ. ಇನ್ನು ಈ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಎಂಪಿವಿಗಾಗಿ ಕೆಲವು ಡೀಲರುಗಳು ಅನಧಿಕೃತ ಪ್ರಿ-ಬುಕ್ಕಿಂಗ್ ಅನ್ನು ಆರಂಭಿಸಿದ್ದಾರೆ. ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಲ್ಲಿ ಒಂದಾಗಿದೆ. ಈ ಬಹುನಿರೀಕ್ಷತ ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಕೆಲವು ಪ್ರಮುಖ ಸಂಗತಿಗಳು ಇಲ್ಲಿವೆ.

ಬಿಡುಗಡೆಯಾಗಲಿರುವ ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಎಂಪಿವಿಯ ಪ್ರಮುಖ ಸಂಗತಿಗಳಿವು

ವಿನ್ಯಾಸ

ಇಂಡೋನೇಷ್ಯಾದಲ್ಲಿ ಬಿಡುಗಡೆಗೊಳಿಸಿದ ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಎಂಪಿವಿಯ ಅದೆ ಮಾದರಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿದೆ. ಇದರ ಅದರ ವಿನ್ಯಾಸದ ಕುರಿತು ಹೇಳುವುದಾದರೆ, ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ದಪ್ಪ ಕ್ರ್ರೋಮ್ ಔಟ್ ಲೈನ್‌ನೊಂದಿಗೆ ಬರುವ ದೊಡ್ಡ ಗ್ರಿಲ್‌ನೊಂದಿಗೆ ನವೀಕರಿಸಿದ ಫ್ರಂಟ್-ಎಂಡ್ ಅನ್ನು ಹೊಂದಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಬಿಡುಗಡೆಯಾಗಲಿರುವ ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಎಂಪಿವಿಯ ಪ್ರಮುಖ ಸಂಗತಿಗಳಿವು

ಇನ್ನು ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಹೊಸ ರೇಡಿಯೇಟರ್ ಗ್ರಿಲ್ ಎರಡು ಕ್ರೋಮ್-ಫಿನಿಶಿಂಗ್ ನೊಂದಿಗೆ ಭಿನ್ನವಾಗಿ ಐದು ಅಡ್ಡ ಸ್ಲ್ಯಾಟ್‌ಗಳೊಂದಿಗೆ ಬರಲಿದೆ. ಹೆಡ್‌ಲ್ಯಾಂಪ್‌ಗಳು ಮುಂಭಾಗದ ಗ್ರಿಲ್‌ನಲ್ಲಿ ವಿಲೀನಗೊಳ್ಳುವ ಕ್ರೋಮ್ ಅನ್ನು ಪಡೆಯುವ ನಿರೀಕ್ಷೆಯಿದೆ.

ಬಿಡುಗಡೆಯಾಗಲಿರುವ ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಎಂಪಿವಿಯ ಪ್ರಮುಖ ಸಂಗತಿಗಳಿವು

ಇಂಟಿರಿಯರ್

ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಒಳಭಾಗ ಹೆಚ್ಚು ಪ್ರೀಮಿಯಂ ಆಗಿದೆ. ಈ ಎಂಪಿವಿಯ ಇಂಟಿರಿಯರ್ ನಲ್ಲಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಜೊತೆಗೆ ಬ್ಲ್ಯಾಕ್ ಥೀಮ್ ಡ್ಯಾಶ್ ಬೋರ್ಡ್ ಅನ್ನು ಹೊಂದಿದೆ. ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ 7 ಸೀಟುಗಳ ಜೊತೆಗೆ 6 ಸೀಟುಗಳ ಆಯ್ಕೆಯಲ್ಲಿ ಲಭ್ಯವಿರಲಿದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಬಿಡುಗಡೆಯಾಗಲಿರುವ ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಎಂಪಿವಿಯ ಪ್ರಮುಖ ಸಂಗತಿಗಳಿವು

ಎಂಜಿನ್

ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಎಂಪಿವಿಯಲ್ಲಿ 2.7-ಲೀಟರ್ ನಾಲ್ಕು ಸಿಲಿಂಡರ್ ಎನ್‌ಎ ಪೆಟ್ರೋಲ್ ಮತ್ತು 2.4-ಲೀಟರ್ ಡೀಸೆಲ್ ಎಂಜಿನ್ ಗಳನ್ನು ಹೊಂದಿರಲಿದೆ. ಇನ್ನು ಈ ಎಂಪಿವಿಯಲ್ಲಿ ಪೆಟ್ರೋಲ್ ಎಂಜಿನ್‌ನೊಂದಿಗೆ ಹೊಸ ಸಿಎನ್‌ಜಿ ರೂಪಾಂತರವನ್ನು ನಾವು ನಿರೀಕ್ಷಿಸುತ್ತೇವೆ.

ಬಿಡುಗಡೆಯಾಗಲಿರುವ ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಎಂಪಿವಿಯ ಪ್ರಮುಖ ಸಂಗತಿಗಳಿವು

ಇದರ 2.4-ಲೀಟರ್ ಡೀಸೆಲ್ ಎಂಜಿನ್ 150 ಬಿಹೆಚ್‍ಪಿ ಪವರ್ ಮತ್ತು 360 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ, ಇನ್ನು 2.7-ಲೀಟರ್ ಪೆಟ್ರೋಲ್ ಎಂಜಿನ್ 166 ಬಿಹೆಚ್‍ಪಿ ಪವರ್ ಮತ್ತು 245 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಬಿಡುಗಡೆಯಾಗಲಿರುವ ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಎಂಪಿವಿಯ ಪ್ರಮುಖ ಸಂಗತಿಗಳಿವು

ಫೀಚರ್‌ಗಳು

ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಎಂಪಿವಿಯಲ್ಲಿ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ, ಕೀ ಲೆಸ್ ಎಂಟ್ರಿ, ಕ್ರೂಸ್ ಕಂಟ್ರೋಲ್, ಆಂಬಿಯೆಂಟ್ ಲೈಟಿಂಗ್, ಆಟೋಮ್ಯಾಟಿಕ್ ಕ್ಲೈಮೆಂಟ್ ಕಂಟ್ರೋಲ್, 8-ವೇ ಪವರ್‌ನೊಂದಿಗೆ 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿರಲಿದೆ.

ಬಿಡುಗಡೆಯಾಗಲಿರುವ ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಎಂಪಿವಿಯ ಪ್ರಮುಖ ಸಂಗತಿಗಳಿವು

ಬೆಲೆ

ಟೊಯೊಟಾ ಇನೋವಾ ಕ್ರಿಸ್ಟಾ ಎಂಪಿವಿಯನ್ನು ಆರಂಭಿಕ ಬೆಲೆ ಎಕ್ಸ್ ಶೋರೂಂ ಪ್ರಕಾರ ರೂ.15.66 ಲಕ್ಷಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಇನ್ನು ಹೊಸ ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಎಂಪಿವಿಯ ಬೆಲೆಯು ಪ್ರಸ್ತುತ ಮಾದರಿಗಿಂತ ಸುಮಾರು ರೂ.50,000 ಹೆಚ್ಚಿಸಬಹುದು ಎಂದು ನಿರೀಕ್ಷಿಸುತ್ತೇವೆ.

ಬಿಡುಗಡೆಯಾಗಲಿರುವ ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಎಂಪಿವಿಯ ಪ್ರಮುಖ ಸಂಗತಿಗಳಿವು

ಪ್ರತಿಸ್ಪರ್ಧಿಗಳು

ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಎಂಪಿವಿಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಕಿಯಾ ಕಾರ್ನಿವಲ್, ಎಂಜಿ ಹೆಕ್ಟರ್ ಪ್ಲಸ್, ಮಾರುತಿ ಸುಜುಕಿ ಎಕ್ಸ್‌ಎಲ್ 6 ಮತ್ತು ಮಹೀಂದ್ರಾ ಮರಾಜೋ ಎಂಪಿವಿಗಳಿಗೆ ಪೈಪೋಟಿ ನೀಡುತ್ತದೆ.

Article Published On: Friday, November 13, 2020, 9:57 [IST]
English summary
6 Things To Know About The Upcoming Toyota Innova Crysta Facelift. Read In Kannada.
Read more on ಟೊಯೊಟಾ toyota
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+