ಬಿಎಸ್-6 ವರ್ಷನ್‌ನಲ್ಲಿ ಭಾರತಕ್ಕೆ ಲಗ್ಗೆ ಇಡಲಿದೆ ಟೊಯೊಟಾ ಲ್ಯಾಂಡ್ ಕ್ರೂಸರ್

ಜಪಾನ್ ಮೂಲದ ವಾಹನ ತಯಾರಕ ಕಂಪನಿಯಾದ ಟೊಯೊಟಾ ತನ್ನ ಐಕಾನಿಕ್ ಲ್ಯಾಂಡ್ ಕ್ರೂಸರ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಸ್ಥಗಿತಗೊಳಿಸಲಾಗಿತ್ತು. ಆದರೆ ಮತ್ತೊಮ್ಮೆ ಈ ಐಕಾನಿಕ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ.

ಬಿಎಸ್-6 ವರ್ಷನ್‌ನಲ್ಲಿ ಭಾರತಕ್ಕೆ ಲಗ್ಗೆ ಇಡಲಿದೆ ಟೊಯೊಟಾ ಲ್ಯಾಂಡ್ ಕ್ರೂಸರ್

ಬಹುದೀರ್ಘ ಕಾಲದಿಂದಲೂ ಟೊಯೊಟಾ ಲ್ಯಾಂಡ್ ಕ್ರೂಸರ್ ಜನಪ್ರಿಯ ಎಸ್‍ಯುವಿಯಾಗಿದೆ. ಲ್ಯಾಂಡ್ ಕ್ರೂಸರ್ ಎಸ್‍ಯುವಿಯನ್ನು 1951ರಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು. ಪ್ರಸ್ತುತ ಭಾರತದಲ್ಲಿರುವ ಲ್ಯಾಂಡ್ ಕ್ರೂಸರ್ ಸುಮಾರು 12ವರ್ಷಗಳಿಂದ ಲಭ್ಯವಿರುವ ಮಾದರಿಯಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯ ಜನಪ್ರಿಯತೆ ಮತ್ತು ಬೇಡಿಕೆಯು ಕಡಿಮೆಯಾಗಿರುವುದರಿಂದ ಸ್ಥಗಿತಗೊಳಿಸಲಾಗಿತ್ತು. ಟೊಯೊಟಾ ಲ್ಯಾಂಡ್ ಕ್ರೂಸರ್ ಒಂದು ಕಾಲದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಪಾರುಪತ್ಯ ಸಾಧಿಸಿದ ಎಸ್‍ಯುವಿಯಾಗಿದೆ.

ಬಿಎಸ್-6 ವರ್ಷನ್‌ನಲ್ಲಿ ಭಾರತಕ್ಕೆ ಲಗ್ಗೆ ಇಡಲಿದೆ ಟೊಯೊಟಾ ಲ್ಯಾಂಡ್ ಕ್ರೂಸರ್

ಇದೀಗ ಟೊಯೊಟಾ ಕಂಪನಿಯು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿ ಮತ್ತೊಮ್ಮೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ಈ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗವುದರ ಬಗ್ಗೆ ಹಲವಾರು ಉಹಾಪೋಹ ಸುದ್ದಿಗಳಿತ್ತು.

MOST READ: ಗ್ಲೋಬಲ್ ಎನ್‌ಸಿಎಪಿಯ ಸುರಕ್ಷತಾ ಟೆಸ್ಟ್​ನಲ್ಲಿ ಅಗ್ರಸ್ಥಾನಗಳಿಸಿದ ಮಹೀಂದ್ರಾ ಕಾರು

ಬಿಎಸ್-6 ವರ್ಷನ್‌ನಲ್ಲಿ ಭಾರತಕ್ಕೆ ಲಗ್ಗೆ ಇಡಲಿದೆ ಟೊಯೊಟಾ ಲ್ಯಾಂಡ್ ಕ್ರೂಸರ್

ಆದರೆ ಇದೀಗ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್‌ನ ಮಾರ್ಕೆಟಿಂಗ್ ಮತ್ತು ಸೆಲ್ಸ್ ವಿಭಾಗದ ಹಿರಿಯ ಉಪಾಧ್ಯಕ್ಷ ನವೀನ್ ಸೋನಿ ಅವರು ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಭಾರತದಲ್ಲಿ ಟೊಯೊಟಾ ಕ್ರೂಸರ್ ಬಿಡುಗಡೆಯಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಬಿಎಸ್-6 ವರ್ಷನ್‌ನಲ್ಲಿ ಭಾರತಕ್ಕೆ ಲಗ್ಗೆ ಇಡಲಿದೆ ಟೊಯೊಟಾ ಲ್ಯಾಂಡ್ ಕ್ರೂಸರ್

ಟೊಯೊಟಾ ಕಂಪನಿಯು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೊಸ ಲ್ಯಾಂಡ್ ಕ್ರೂಸರ್ ಎಸ್‍ಯುವಿಯ ಫೇಸ್‍‍ಲಿಫ್ಟ್ ಅನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಹೊಸ ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ ಫೇಸ್‌ಲಿಫ್ಟ್ ಆವೃತ್ತಿಯು ಈ ವರ್ಷದ ಕೊನೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಬಿಎಸ್-6 ವರ್ಷನ್‌ನಲ್ಲಿ ಭಾರತಕ್ಕೆ ಲಗ್ಗೆ ಇಡಲಿದೆ ಟೊಯೊಟಾ ಲ್ಯಾಂಡ್ ಕ್ರೂಸರ್

ಈ ಹಿಂದೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ್ದ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು 4.5 ಲೀಟರ್ ದೊಡ್ಡ ಟರ್ಬೋಚಾರ್ಜ್ಡ್ ವಿ8 ಡೀಸೆಲ್ ಎಂಜಿನ್‌ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ ನೊಂದಿಗೆ 4ಡಬ್ಲ್ಯುಡಿ ಸಿಸ್ಟಂ ಅನ್ನು ಜೋಡಿಸಲಾಗಿದೆ.

ಬಿಎಸ್-6 ವರ್ಷನ್‌ನಲ್ಲಿ ಭಾರತಕ್ಕೆ ಲಗ್ಗೆ ಇಡಲಿದೆ ಟೊಯೊಟಾ ಲ್ಯಾಂಡ್ ಕ್ರೂಸರ್

ಇನ್ನು ಈ ಎಂಜಿನ್ 3400 ಆರ್‌ಪಿಎಂನಲ್ಲಿ 261 ಬಿಹೆಚ್‌ಪಿ ಪವರ್ ಮತ್ತು 1600 ಆರ್‌ಪಿಎಂನಲ್ಲಿ 650 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್ ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.

MOST READ: ಇತಿಹಾಸದ ಪುಟ ಸೇರಿದ ಫೋಕ್ಸ್‌ವ್ಯಾಗನ್ ಎಮಿಯೊ ಕಾರು

ಬಿಎಸ್-6 ವರ್ಷನ್‌ನಲ್ಲಿ ಭಾರತಕ್ಕೆ ಲಗ್ಗೆ ಇಡಲಿದೆ ಟೊಯೊಟಾ ಲ್ಯಾಂಡ್ ಕ್ರೂಸರ್

ಇನ್ನು ಹಿಂದಿನ ಲೋವರ್-ಸ್ಪೆಕ್ ಲ್ಯಾಂಡ್ ಕ್ರೂಸರ್ ಪ್ರಾಡೊ ರೂಪಾಂತರದಲ್ಲಿ 3.0-ಲೀಟರ್ ಟರ್ಬೋಚಾರ್ಜ್ಡ್ ನಾಲ್ಕು ಸಿಲಿಂಡರ್ ಎಂಜಿನ್‌ ಹೊಂದಿದೆ. ಈ ಎಂಜಿನ್ 171 ಬಿಹೆಚ್‍ಪಿ ಪವರ್ ಮತ್ತು 410 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಬಿಎಸ್-6 ವರ್ಷನ್‌ನಲ್ಲಿ ಭಾರತಕ್ಕೆ ಲಗ್ಗೆ ಇಡಲಿದೆ ಟೊಯೊಟಾ ಲ್ಯಾಂಡ್ ಕ್ರೂಸರ್

ಟೊಯೊಟಾ ಲ್ಯಾಂಡ್ ಕ್ರೂಸರ್ ಅಂತರರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ. ಈ ಐಕಾನಿಕ್ ಎಸ್‍ಯುವಿಯು ಮತ್ತೊಮ್ಮೆ ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಇದು ಒಂದು ಕಾಲದಲ್ಲಿ ಭಾರತದ ಆಫ್-ರೋಡ್ ಪ್ರಿಯರ ಮೆಚ್ಚಿನ ಎಸ್‍ಯುವಿಯಾಗಿತ್ತು.

Most Read Articles

Kannada
Read more on ಟೊಯೊಟಾ toyota
English summary
Toyota Land Cruiser SUV Confirmed To Return To The Indian Market: Here Are The Details. Read In Kannada.
Story first published: Friday, July 24, 2020, 15:32 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X