2021ಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿ

ಜಪಾನ್ ಮೂಲದ ವಾಹನ ತಯಾರಕ ಕಂಪನಿಯಾದ ಟೊಯೊಟಾ ತನ್ನ ಹೊಸ ತಲೆಮಾರಿನ ಲ್ಯಾಂಡ್ ಕ್ರೂಸರ್ ಅನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ಟೊಯೊಟಾ ಲ್ಯಾಂಡ್ ಕ್ರೂಸರ್ ಹಲವಾರು ದಶಕಗಳಿಂದ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಎಸ್‍ಯುವಿಯಾಗಿದೆ.

2021ಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿ

ಹೊಸ ತಲೆಮಾರಿನ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ಹಲವು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈ ವರ್ಷದಲ್ಲಿ ಬಿಡುಗಡೆಯಾಗಬೇಕಿತ್ತು. ಆದರೆ ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ 300 ಎಸ್‍ಯುವಿಯು ಬಿಡುಗಡೆಯು ವಿಳಂಬವಾಗಲಿದೆ. ಹೊಸ ಟೊಯೊಟಾ ಕಂಪನಿಯು ತನ್ನ ಹೊಸ ತಲೆಮಾರಿನ ಲ್ಯಾಂಡ್ ಕ್ರೂಸರ್ ಎಸ್‍ಯುವಿಯ ಮುಂದಿನ ವರ್ಷದ ಏಪ್ರಿಲ್‌ ತಿಂಗಳಲ್ಲಿ ಬಿಡುಗಡೆಯಾಗಲಿದೆ.

2021ಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿ

ಬಹುದೀರ್ಘ ಕಾಲದಿಂದಲೂ ಟೊಯೊಟಾ ಲ್ಯಾಂಡ್ ಕ್ರೂಸರ್ ಜನಪ್ರಿಯ ಎಸ್‍ಯುವಿಯಾಗಿದೆ. ಲ್ಯಾಂಡ್ ಕ್ರೂಸರ್ ಎಸ್‍ಯುವಿಯನ್ನು 1951ರಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಹಿಂದಿನ ತಲೆಮಾರಿನ ಲ್ಯಾಂಡ್ ಕ್ರೂಸರ್ ಸುಮಾರು 12ವರ್ಷಗಳಿಂದ ಲಭ್ಯವಿರುವ ಮಾದರಿಯಾಗಿದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

2021ಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿ

ಭಾರತೀಯ ಮಾರುಕಟ್ಟೆಯಲ್ಲಿ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯ ಜನಪ್ರಿಯತೆ ಮತ್ತು ಬೇಡಿಕೆಯು ಕಡಿಮೆಯಾಗಿದೆ. ಟೊಯೊಟಾ ಲ್ಯಾಂಡ್ ಕ್ರೂಸರ್ ಒಂದು ಕಾಲದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಪಾರುಪತ್ಯ ಸಾಧಿಸಿದ ಎಸ್‍ಯುವಿಯಾಗಿದೆ.

2021ಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿ

ಹೊಸ ತಲೆಮಾರಿನ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು 3.3-ಲೀಟರ್ ವಿ6 ಟರ್ಬೊ-ಡೀಸೆಲ್ ಎಂಜಿನ್ ಮತ್ತು 3.5-ಲೀಟರ್ ಟ್ವಿನ್-ಟರ್ಬೊ ವಿ6 ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ ಎಂದು ಕೆಲವು ವರದಿಗಳಾಗಿದೆ. ಇದರೊಂದಿಗೆ 4.5 ಲೀಟರ್ ವಿ6 ಡೀಸೆಲ್ ಟರ್ಬೂ ಎಂಜಿನ್ ಅನ್ನು ಒಳಗೊಂಡಿರುವ 6 ಸಿಲಿಂಡರ್ ಎಂಜಿನ್ ಅನ್ನು ಹೊಂದಿರುತ್ತದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

2021ಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿ

ಪ್ರಸ್ತುತ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿನಲ್ಲಿ ಇರುವ 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಬದಲಾಯಿಸುತ್ತದೆ. ಹೊಸ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿನಲ್ಲಿ 10 ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಬಹುದು.

2021ಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿ

ಹೊಸ ತಲೆಮಾರಿನ ಟೊಯೊಟಾ ಲ್ಯಾಂಡ್ ಕ್ರೂಸರ್ ಅನ್ನು ಕಂಪನಿಯ ಟಿಎನ್‌ಜಿಎ ಮಾಡ್ಯುಲರ್ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ. ಹೊಸ ಲ್ಯಾಂಡ್ ರೋವರ್ ಲ್ಯಾಡರ್-ಆನ್-ಫ್ರೇಮ್ ಚಾಸಿಸ್ ಅನ್ನು ಹೊಂದಿದೆ. ಹೊಸ ಪ್ಲಾಟ್‌ಫಾರ್ಮ್‌ನಲ್ಲಿ ಅಭಿವೃದ್ದಿಪಡಿಸುತ್ತಿರುವ ಲ್ಯಾಂಡ್ ಕ್ರೂಸರ್ ಎಸ್‍ಯುವಿಯ ತೂಕದಲ್ಲಿ ಗಮನಾರ್ಹವಾಗಿ ಇಳಿಕೆಯಾಗಬಹುದು. ಇನ್ನು ಪವರ್ ಮತ್ತು ಟಾರ್ಕ್ ಅಂಕಿ ಅಂಶದಲ್ಲಿ ಕೂಡ ಇಳಿಕೆಯಾಗುವ ಸಾಧ್ಯತೆಗಳಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

2021ಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿ

2020ರ ಟೊಯೊಟಾ ಲ್ಯಾಂಡ್ ಕ್ರೂಸರ್ ಹೊಸ ವಿನ್ಯಾಸವನ್ನು ಹೊಂದಿರುತ್ತದೆ. ಈ ಎಸ್‍ಯುವಿಯಲ್ಲಿ ಹೊಸ ಟ್ರೆಪೆಜಾಯಿಡಲ್ ಗ್ರಿಲ್ ಅನ್ನು ಅಳವಡಿಸಬಹುದು. ಇನ್ನು ಇಂಟಿರಿಯರ್ ನಲ್ಲಿ ಹೊಸ ಫೀಚರ್ಸ್‍ಗಳನ್ನು ಅಳವಡಿಸಬಹುದು ಎಂದು ನಿರೀಕ್ಷಿಸುತ್ತೇವೆ.

2021ಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿ

ಹೊಸ ತಲೆಮಾರಿನ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ ಎಂದು ನಿರೀಕ್ಷಿಸುತ್ತೇವೆ. ಮುಂದಿನ ವರ್ಷದ ಕೊನೆಯಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ಬಿಡುಗಡೆಯಾಗಬಹುದು.

Most Read Articles

Kannada
Read more on ಟೊಯೊಟಾ toyota
English summary
Next-Gen Toyota Land Cruiser To Debut in April 2021. Read IN kananda.
Story first published: Tuesday, December 1, 2020, 20:53 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X