ಬಿಡುಗಡೆಯಾಯ್ತು ಬಹುನಿರೀಕ್ಷಿತ ಟೊಯೊಟಾ ಅರ್ಬನ್ ಕ್ರೂಸರ್: ಬೆಲೆ ರೂ.8.40 ಲಕ್ಷ

ಟೊಯೊಟಾ ಕಂಪನಿಯು ತನ್ನ ಅರ್ಬನ್ ಕ್ರೂಸರ್ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಅರ್ಬನ್ ಕ್ರೂಸರ್ ಕಾಂಪ್ಯಾಕ್ಟ್ ಎಸ್‍ಯುವಿಯ ಆರಂಭಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.8.40 ಲಕ್ಷಗಳಾಗಿದೆ.

ಬಿಡುಗಡೆಯಾಯ್ತು ಬಹುನಿರೀಕ್ಷಿತ ಟೊಯೊಟಾ ಅರ್ಬನ್ ಕ್ರೂಸರ್

ಹೊಸ ಟೊಯೊಟಾ ಅರ್ಬನ್ ಕ್ರೂಸರ್ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಮಾದರಿಯ ರಿಬ್ಯಾಡ್ಜ್ ಆವೃತ್ತಿಯಾಗಿದೆ. ಟೊಯೊಟಾ ಅರ್ಬನ್ ಕ್ರೂಸರ್ ಕಾಂಪ್ಯಾಕ್ಟ್ ಎಸ್‍ಯುವಿಯು ಮಾರುತಿ ಸುಜುಕಿ ಬ್ರೆಝಾಗಿಂತ ಭಿನ್ನವಾಗಿ ಕಾಣುತ್ತದೆ. ಹೊಸ ಟೊಯೊಟಾ ಅರ್ಬನ್ ಕ್ರೂಸರ್ ಕಾಂಪ್ಯಾಕ್ಟ್ ಎಸ್‍ಯುವಿಯ ಮುಂಭಾಗದಲ್ಲಿ ಟ್ವಿನ್ ಸ್ಲ್ಯಾಟ್ ಗ್ರಿಲ್ ಅನ್ನು ಹೊಂದಿದೆ. ಮುಂಭಾಗದಲ್ಲಿ ಬಂಪರ್ ಕಟ್ಸ್ ಮತ್ತು ಕ್ರೀಸ್‌ಗಳನ್ನು ಆಕರ್ಷಕ ಲುಕ್ ಅನ್ನು ನೀಡಿದೆ, ಇನ್ನು ಅರ್ಬನ್ ಕ್ರೂಸರ್ ಕಾಂಪ್ಯಾಕ್ಟ್ ಎಸ್‍ಯುವಿಯಲ್ಲಿ ಟ್ವೀಕ್‌ಗಳು ಬ್ರೆಝಾಗಿಂತ ಭಿನ್ನವಾಗಿ ಕಾಣಲು ಸಹಾಯ ಮಾಡುತ್ತದೆ

ಬಿಡುಗಡೆಯಾಯ್ತು ಬಹುನಿರೀಕ್ಷಿತ ಟೊಯೊಟಾ ಅರ್ಬನ್ ಕ್ರೂಸರ್

ಟೊಯೊಟಾ ಅರ್ಬನ್ ಕ್ರೂಸರ್ ಇಂಟಿಗ್ರೇಟೆಡ್ ಎಲ್ಇಡಿ ಡಿಆರ್‌ಎಲ್ ಗಳೊಂದಿಗೆ ಎಲ್ಇಡಿ ಪ್ರೊಜೆಕ್ಟರ್ ಹೆಡ್ ಲ್ಯಾಂಪ್ ಗಳನ್ನು ಹೊಂದಿದೆ. ಇನ್ನು ಈ ಕಾಂಪ್ಯಾಕ್ಟ್ ಎಸ್‍ಯುವಿಯಲ್ಲಿ ಎಲ್ಇಡಿ ಟೈಲ್ ಲ್ಯಾಂಪ್‌ಗಳು, ರೂಫ್ ರೈಲ್, ಎರಡೂ ತುದಿಗಳಲ್ಲಿ ಫಾಕ್ಸ್ ಸ್ಕಿಡ್ ಪ್ಲೇಟ್‌ಗಳು ಮತ್ತು 16 ಇಂಚಿನ ಡೈಮಂಡ್-ಕಟ್ ಅಲಾಯ್ ವ್ಹೀಲ್ ಅನ್ನು ಹೊಂದಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಬಿಡುಗಡೆಯಾಯ್ತು ಬಹುನಿರೀಕ್ಷಿತ ಟೊಯೊಟಾ ಅರ್ಬನ್ ಕ್ರೂಸರ್

ಟೊಯೊಟಾ ಅರ್ಬನ್ ಕ್ರೂಸರ್ ಕಾಂಪ್ಯಾಕ್ಟ್ ಎಸ್‍ಯುವಿಯ ಇಂಟಿರಿಯರ್ ಆಕರ್ಷಕವಾಗಿದೆ. ಇದರ ಇಂಟಿರಿಯರ್ 7-ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಸ್ಟೀಯರಿಂಗ್ ಮೌಂಟೆಡ್ ಕಂಟ್ರೋಲ್ಸ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಡ್ಯುಯಲ್ ಟೋನ್ ಇಂಟಿರಿಯರ್ ಮತ್ತು ಪುಶ್ ಬಟನ್ ಸ್ಟಾರ್ಟ್/ಸ್ಟಾಪ್ ಫೀಚರ್ ಗಳನ್ನು ಒಳಗೊಂಡಿದೆ. ಇದರೊಂದಿಗೆ ರೈನ್ ಸೆನ್ಸಿಂಗ್ ವೈಪರ್, ಕೀ ಲೆಸ್ ಎಂಟ್ರಿ ನೀಡಲಾಗಿದೆ

ಬಿಡುಗಡೆಯಾಯ್ತು ಬಹುನಿರೀಕ್ಷಿತ ಟೊಯೊಟಾ ಅರ್ಬನ್ ಕ್ರೂಸರ್

ಈ ಕಾಂಪ್ಯಾಕ್ಟ್ ಎಸ್‍ಯುವಿಯಲ್ಲಿ ಪ್ರಯಾಣಿಕ ಸುರಕ್ಷತೆಗಾಗಿ ಹೆಚ್ಚಿನ ಒತ್ತು ನೀಡಿ, ಫ್ರಂಟ್ ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ರಿವರ್ಸ್ ಪಾರ್ಕಿಂಗ್ ಸೆನ್ಸಾರ್, ಸೀಟ್ ಬೆಲ್ಟ್ ರಿಮೆಂಡರ್, ಲೋಡ್ ಲಿಮಿಟ್ ಅಲರ್ಟ್, ಓವರ್ ಸ್ಪೀಡ್ ವಾರ್ನಿಂಗ್ ಸಿಸ್ಟಂ ನೀಡಿದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಬಿಡುಗಡೆಯಾಯ್ತು ಬಹುನಿರೀಕ್ಷಿತ ಟೊಯೊಟಾ ಅರ್ಬನ್ ಕ್ರೂಸರ್

ಈ ಹೊಸ ಟೊಯೊಟಾ ಅರ್ಬನ್ ಕ್ರೂಸರ್ ಕಾಂಪ್ಯಾಕ್ಟ್ ಎಸ್‍ಯುವಿಯು ಒಟ್ಟು ಒಂಬತ್ತು ಬಣ್ಣಗಳ ಆಯ್ಕೆ(6 ಸಿಂಗಲ್ ಟೋನ್ ಮತ್ತು 3 ಡ್ಯುಯಲ್ ಟೋನ್) ಲಭ್ಯವಿರಲಿದೆ.

Variant Price
MID-GRADE MT ₹8,40,000
MID-GRADE AT ₹9,80,000
HIGH-GRADE MT ₹9,15,000
HIGH-GRADE AT ₹10,65,000
PREMIUM-GRADE MT ₹9,80,000
PREMIUM-GRADE AT ₹11,30,000
ಬಿಡುಗಡೆಯಾಯ್ತು ಬಹುನಿರೀಕ್ಷಿತ ಟೊಯೊಟಾ ಅರ್ಬನ್ ಕ್ರೂಸರ್

ಹೊಸ ಅರ್ಬನ್ ಕ್ರೂಸರ್ ಕಾಂಪ್ಯಾಕ್ಟ್-ಎಸ್‌ಯುವಿಯಲ್ಲಿ ವಿಟಾರಾ ಬ್ರೆಝಾದಲ್ಲಿ ನೀಡಿರುವ ಅದೇ 1.5-ಲೀಟರ್ ಕೆ-ಸೀರೀಸ್ ಪೆಟ್ರೋಲ್ ಎಂಜಿನ್‌ನೊಂದಿಗೆ ಮೈಲ್ಡ್-ಹೈಬ್ರಿಡ್ ತಂತ್ರಜ್ಞಾನವನ್ನು ಹೊಂದಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಬಿಡುಗಡೆಯಾಯ್ತು ಬಹುನಿರೀಕ್ಷಿತ ಟೊಯೊಟಾ ಅರ್ಬನ್ ಕ್ರೂಸರ್

ಇದು 104 ಬಿಹೆಚ್‍ಪಿ ಪವರ್ ಮತ್ತು 138 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ 5-ಮ್ಯಾನುವಲ್ ಜೊತೆಗೆ ನಾಲ್ಕು-ಸ್ಪೀಡ್ ಟಾರ್ಕ್-ಕರ್ನವಾಟರ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯೆನ್ನು ನೀಡಲಾಗಿದೆ.

ಬಿಡುಗಡೆಯಾಯ್ತು ಬಹುನಿರೀಕ್ಷಿತ ಟೊಯೊಟಾ ಅರ್ಬನ್ ಕ್ರೂಸರ್

ಟೊಯೊಟಾ ಕಂಪನಿಯು ಕಳೆದ ತಿಂಗಳು ಈ ಅರ್ಬನ್ ಕ್ರೂಸರ್ ಕಾಂಪ್ಯಾಕ್ಟ್ ಎಸ್‍ಯುವಿಗಾಗಿ ಬುಕ್ಕಿಂಗ್ ಅನ್ನು ಸ್ವೀಕರಿಸಲು ಅಧಿಕೃತವಾಗಿ ಪ್ರಾರಂಭಿಸಿತು. ಅರ್ಬನ್ ಕ್ರೂಸರ್ ಅನ್ನು ಆನ್‌ಲೈನ್ ಮೂಲಕ ಅಥವಾ ಭಾರತದಾದ್ಯಂತ ಟೊಯೋಟಾದ ಯಾವುದೇ ಡೀಲರುಗಳ ಮೂಲಕ ರೂ.11,000 ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ.

ಬಿಡುಗಡೆಯಾಯ್ತು ಬಹುನಿರೀಕ್ಷಿತ ಟೊಯೊಟಾ ಅರ್ಬನ್ ಕ್ರೂಸರ್

ಟೊಯೊಟಾ ಅರ್ಬನ್ ಕ್ರೂಸರ್ ಬ್ರ್ಯಾಂಡ್‌ನ ಹೊಸ ಸಣ್ಣ ಗಾತ್ರದ ಎಸ್‍ಯುವಿಯಾಗಿದೆ. ಈ ಹೊಸ ಟೊಯೋಟಾ ಅರ್ಬನ್ ಕ್ರೂಸರ್ ಆಕರ್ಷಕ ಲುಕ್ ಮತ್ತು ಅತ್ಯಾಧುನಿಕ ಫೀಚರ್ ಗಳನ್ನು ಹೊಂದಿರುವುದರಿಂದ ಭಾರತೀಯ ಗ್ರಾಹಕರನ್ನು ಸೆಳೆಯುವಲ್ಲಿ ಯಶ್ವಸಿಯಾಗಬಹುದು ಎಂದು ನಿರೀಕ್ಷಿಸುತ್ತೇವೆ.

ಬಿಡುಗಡೆಯಾಯ್ತು ಬಹುನಿರೀಕ್ಷಿತ ಟೊಯೊಟಾ ಅರ್ಬನ್ ಕ್ರೂಸರ್

ಹೊಸ ಟೊಯೊಟಾ ಅರ್ಬನ್ ಕ್ರೂಸರ್ ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ವೆನ್ಯೂ, ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ 300 ಮತ್ತು ಹೊಸ ಕಿಯಾ ಸೊನೆಟ್ ಕಾಂಪ್ಯಾಕ್ಟ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

More from DriveSpark

Article Published On: Wednesday, September 23, 2020, 12:22 [IST]
English summary
Toyota Urban Cruiser Launched In India. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+