2020ರ ಅಗಸ್ಟ್ ಅವಧಿಯಲ್ಲಿನ ಹೊಸ ವಾಹನಗಳ ನೋಂದಣಿಯಲ್ಲಿ ಶೇ. 27ರಷ್ಟು ಕುಸಿತ

ಕರೋನಾ ವೈರಸ್ ಪರಿಣಾಮ ನೆಲಕಚ್ಚಿದ್ದ ಆಟೋ ಉದ್ಯಮವು ಇದೀಗ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದು, ಮೇ, ಜೂನ್ ಮತ್ತು ಜುಲೈ ಅವಧಿಗಿಂತಲೂ ಅಗಸ್ಟ್ ಅವಧಿಯಲ್ಲಿನ ಹೊಸ ವಾಹನ ಮಾರಾಟವು ಸಾಕಷ್ಟು ಸುಧಾರಣೆ ಕಂಡಿದೆ.

ಹೊಸ ವಾಹನಗಳ ನೋಂದಣಿಯಲ್ಲಿ ಶೇ. 27ರಷ್ಟು ಕುಸಿತ

ಫಾಡಾ ಸಂಸ್ಥೆಯು ಬಿಡುಗಡೆ ಮಾಡಿರುವ ವರದಿಯಲ್ಲಿ ಹೊಸ ವಾಹನಗಳ ನೋಂದಣಿಯು 2020ರ ಅಗಸ್ಟ್ ಅವಧಿಯಲ್ಲಿ ಶೇ. 26.81ರಷ್ಟು ಕುಸಿತ ಕಂಡುಬಂದಿದ್ದು, ಪ್ಯಾಸೆಂಜರ್ ಕಾರುಗಳು, ದ್ವಿಚಕ್ರ ವಾಹನಗಳು, ತ್ರಿ ಚಕ್ರ ವಾಹನಗಳು, ವಾಣಿಜ್ಯ ವಾಹನಗಳು ಮತ್ತು ಟ್ರ್ಯಾಕ್ಟ್ ಮಾರಾಟವು ಒಟ್ಟಾರೆಯಾಗಿ 11,88,087 ಯುನಿಟ್ ಮಾರಾಟ ದಾಖಲಿಸಿವೆ. ಇದರಲ್ಲಿ ಟ್ರ್ಯಾಕ್ಟರ್ ಮಾರಾಟವನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ಮಾದರಿಯ ವಾಹನಗಳ ಮಾರಾಟದಲ್ಲೂ ಕುಸಿತ ಕಂಡುಬಂದಿದೆ.

ಹೊಸ ವಾಹನಗಳ ನೋಂದಣಿಯಲ್ಲಿ ಶೇ. 27ರಷ್ಟು ಕುಸಿತ

2019ರ ಅಗಸ್ಟ್ ಅವಧಿಯಲ್ಲಿ 16,23,218 ಯುನಿಟ್ ವಾಹನಗಳನ್ನು ಮಾರಾಟ ಮಾಡಿದ್ದ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಈ ಬಾರಿ ಶೇ. 26.81ರಷ್ಟು ಕುಸಿತ ಅನುಭವಿಸಿದ್ದು, ಮೇ, ಜೂನ್ ಮತ್ತು ಜುಲೈ ಅವಧಿಗಿಂತಲೂ ಅಗಸ್ಟ್ ಅವಧಿಯಲ್ಲಿನ ವಾಹನ ಮಾರಾಟವು ತುಸು ಹೆಚ್ಚಳವಾಗಿದೆ ಎನ್ನಬಹುದು.

ಹೊಸ ವಾಹನಗಳ ನೋಂದಣಿಯಲ್ಲಿ ಶೇ. 27ರಷ್ಟು ಕುಸಿತ

ಮೇ, ಜೂನ್ ಮತ್ತು ಜುಲೈ ಅವಧಿಯಲ್ಲಿ ಶೇ. 40ರಿಂದ ಶೇ.65ರಷ್ಟು ಅನುಭವಿಸಿದ್ದ ಆಟೋ ಕಂಪನಿಗಳು ಇದೀಗ ಹೊಸ ವಾಹನ ಮಾರಾಟದಲ್ಲಿ ಬೆಳವಣಿಗೆ ಕಾರಣುತ್ತಿದ್ದು, ಹೊಸ ವಾಹನ ಮಾರಾಟವು ಮೊದಲಿನ ಸ್ಥಿತಿ ಮರಳಲು ಇನ್ನು ಎರಡು ವರ್ಷಗಳ ಕಾಲಾವಕಾಶ ಬೇಕಾಗಬಹುದು ಎನ್ನಲಾಗಿದೆ.

ಹೊಸ ವಾಹನಗಳ ನೋಂದಣಿಯಲ್ಲಿ ಶೇ. 27ರಷ್ಟು ಕುಸಿತ

ಆದರೆ ಅಚ್ಚರಿ ಎನ್ನುವಂತೆ ಕಾರುಗಳು, ದ್ವಿಚಕ್ರ ವಾಹನಗಳು, ವಾಣಿಜ್ಯ ವಾಹನಗಳ ಮಾರಾಟದಲ್ಲಿ ನಷ್ಟ ಕಂಡುಬಂದಿದ್ದರೂ ಟ್ರ್ಯಾಕ್ಟರ್‌ಗಳ ಮಾರಾಟ ಮಾತ್ರ ಬೆಳವಣಿಗೆ ಹಾದಿಯಲ್ಲಿದ್ದು, ಕಳೆದ ವರ್ಷಕ್ಕಿಂತಲೂ ಟ್ರ್ಯಾಕ್ಟರ್ ಮಾರಾಟದಲ್ಲಿ ಶೇ. 27.81ರಷ್ಟು ಹೆಚ್ಚಳ ಕಂಡುಬಂದಿದೆ.

ಹೊಸ ವಾಹನಗಳ ನೋಂದಣಿಯಲ್ಲಿ ಶೇ. 27ರಷ್ಟು ಕುಸಿತ

ಅಗಸ್ಟ್ ಅವಧಿಯಲ್ಲಿ 1,78,513 ಯುನಿಟ್ ಪ್ಯಾಸೆಂಜರ್ ಕಾರುಗಳು, 8,98,775 ಯುನಿಟ್ ದ್ವಿಚಕ್ರ ವಾಹನಗಳು, 26,536 ಯುನಿಟ್ ವಾಣಿಜ್ಯ ವಾಹನಗಳು, 16,857 ಯುನಿಟ್ ತ್ರಿ ಚಕ್ರ ವಾಹನಗಳು ಮತ್ತು 67,406 ಯನಿಟ್ ಟ್ರ್ಯಾಕ್ಟರ್‌ಗಳು ಮಾರಾಟಗೊಂಡಿವೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಹೊಸ ವಾಹನಗಳ ನೋಂದಣಿಯಲ್ಲಿ ಶೇ. 27ರಷ್ಟು ಕುಸಿತ

ಇನ್ನು ಮಾಹಾಮಾರಿ ಕರೋನಾ ವೈರಸ್‌ ಪರಿಣಾಮ ಬಹುತೇಕ ಆಟೋ ಕಂಪನಿಗಳು ಭಾರೀ ನಷ್ಟ ಅನುಭವಿಸಿದ್ದು, ಲಾಕ್‌ಡೌನ್ ವಿನಾಯ್ತಿ ನಂತರವೂ ಹೊಸ ವಾಹನಗಳ ಮಾರಾಟ ಪ್ರಮಾಣದಲ್ಲಿ ತುಸು ಹೆಚ್ಚಳ ಕಂಡುಬಂದಿದ್ದರೂ ಆರ್ಥಿಕ ಮುಗ್ಗಟ್ಟು ಆಟೋ ಕಂಪನಿಗಳನ್ನು ಸಂಕಷ್ಟಕ್ಕೆ ಸಿಲುಕಿಸುವಂತೆ ಮಾಡಿದೆ.

ಹೊಸ ವಾಹನಗಳ ನೋಂದಣಿಯಲ್ಲಿ ಶೇ. 27ರಷ್ಟು ಕುಸಿತ

ಸದ್ಯ ವೈರಸ್ ಭೀತಿ ಹೆಚ್ಚಳದ ನಡುವೆಯೂ ಹೊಸ ಸುರಕ್ಷಾ ಮಾರ್ಗಸೂಚಿಗಳೊಂದಿಗೆ ವ್ಯಾಪಾರ ವಹಿವಾಟು ಕೈಗೊಂಡಿರುವ ಆಟೋ ಕಂಪನಿಗಳು ಕನಿಷ್ಠ ಪ್ರಮಾಣದ ವಾಹನ ಮಾರಾಟ ಪ್ರಮಾಣವನ್ನು ದಾಖಲಿಸಿದ್ದು, ಆಟೋ ಉದ್ಯಮ ಸುಧಾರಣೆಗಾಗಿ ತಾತ್ಕಾಲಿಕ ಪರಿಹಾರ ನೀಡುವಂತೆ ಆಟೋ ಕಂಪನಿಗಳು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತಿವೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಹೊಸ ವಾಹನಗಳ ನೋಂದಣಿಯಲ್ಲಿ ಶೇ. 27ರಷ್ಟು ಕುಸಿತ

ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ಮ್ಯಾನುಫ್ಯಾಕ್ಟರರ್ಸ್ ಸಂಘದ 60ನೇ ವಾರ್ಷಿಕೋತ್ಸವದಲ್ಲಿ ಭಾಗಿಯಾಗಿದ್ದ ಕೇಂದ್ರದ ಭಾರೀ ಕೈಗಾರಿಕಾ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರು ವಾಹನ ಉದ್ಯಮಕ್ಕೆ ತಾತ್ಕಲಿಕವಾಗಿ ಪರಿಹಾರ ನೀಡಲು ಸರ್ಕಾರ ಚಿಂತನೆ ನಡೆಸಿದ್ದು, ಎಲ್ಲಾ ಬಗೆಯ ವಾಹನಗಳ ಮೇಲೂ ಶೇ.10 ರಷ್ಟು ಜಿಎಸ್‌ಟಿ ವಿನಾಯ್ತಿ ನೀಡುವ ಬಗ್ಗೆ ಚರ್ಚಿಸಲಾಗುತ್ತಿದೆ ಎಂದಿದ್ದಾರೆ.

Most Read Articles

Kannada
English summary
New Vehicle Registration Drops By 27 Percent In August 2020. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X