Just In
- 28 min ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 50 min ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 2 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- 3 hrs ago ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
Don't Miss!
- News Namma Metro: 2023-24ರಲ್ಲಿ ಮೆಟ್ರೋ ವಾರ್ಷಿಕ ಆದಾಯದಲ್ಲಿ ಭಾರೀ ಏರಿಕೆ: ಖರ್ಚು-ಆದಾಯದ ಮಾಹಿತಿ?
- Sports IPL 2024: ಮುಂಬೈ ಇಂಡಿಯನ್ಸ್ ವಿರುದ್ಧ ಶತಕ; ರೋಹಿತ್, ಕೊಹ್ಲಿಗೆ ಕ್ರೆಡಿಟ್ ನೀಡಿದ ಯಶಸ್ವಿ ಜೈಸ್ವಾಲ್!
- Technology Itel: ಭಾರತದಲ್ಲಿ ಐಟೆಲ್ S24 ಲಾಂಚ್! 108MP ಕ್ಯಾಮೆರಾ.. ಬೆಲೆ ಇಷ್ಟೇ
- Lifestyle ಪ್ರವಾಹಕ್ಕೆ ಕಾರಣವಾಗೋದು ಮಳೆಯಲ್ಲ ಬೇಸಿಗೆಯ ಬಿಸಿಲು..! ನಂಬಲು ಸಾಧ್ಯವಿಲ್ಲ ಅಂದ್ರೆ ಈ ವಿಡಿಯೋ ನೋಡಿ..!
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Movies Sathya : ತಾಜ್ ಮಹಲ್ ಎದುರು ನಿಂತ ಸತ್ಯಾ, ಪತಿ ಜೊತೆ ಗೌತಮಿ ಪ್ರವಾಸ...!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಫೋಕ್ಸ್ವ್ಯಾಗನ್ ಪಸಾಟ್ ಕಾರು
ಫೋಕ್ಸ್ವ್ಯಾಗನ್ ಕಂಪನಿಯು ತನ್ನ ಬಿಎಸ್-6 ಪಸಾಟ್ ಕಾರನ್ನು ಭಾರತದಲ್ಲಿ ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಲಾಗಿದೆ. ಫೋಕ್ಸ್ವ್ಯಾಗನ್ ಕಂಪನಿಯು ಬಿಎಸ್-6 ಪಸಾಟ್ ಕಾರನ್ನು ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿದೆ.
ಇದೀಗ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿ ಪಸಾಟ್ ಕಾರನ್ನು ಬಿಡುಗಡೆಗೊಳಿಸಲು ಫೋಕ್ಸ್ವ್ಯಾಗನ್ ಕಂಪನಿಯು ಸಜ್ಜಾಗುತ್ತಿದೆ. ಇದರ ಭಾಗವಾಗಿ ಭಾರತದಲ್ಲಿ ಪಸಾಟ್ ಕಾರು ಪುಣೆಯಲ್ಲಿ ಬಳಿ ಸ್ಪಾಟ್ ಟೆಸ್ಟ್ ನಡೆಸಿದೆ. ಹೊಸ ಪಸಾಟ್ ಕಾರು ಸ್ಪಾಟ್ ಟೆಸ್ಟ್ ನಡೆಸುತ್ತಿರುವುದನ್ನು ರಶ್ಲೇನ್ ಬಹಿರಂಗಪಡಿಸಿದೆ. ಈ ಹೊಸ ಸೆಡಾನ್ನಲ್ಲಿ ಫ್ರಂಟ್ ಬಂಪರ್, ಸ್ಲ್ಯಾಟ್ಗಳನ್ನು ಹೊಂದಿರುವ ಗ್ರಿಲ್ ಮತ್ತು ಐಕ್ಯೂ ಲೈಟ್ ಎಲ್ಇಡಿ ಮ್ಯಾಟ್ರಿಕ್ಸ್ ಹೆಡ್ಲ್ಯಾಂಪ್ಗಳನ್ನು ಒಳಗೊಂಡಿದೆ.
ಈ ಹೊಸ ಪಸಾಟ್ ಕಾರು ಹೊಸ ಟೇಲ್ ಲ್ಯಾಂಪ್ ಕ್ಲಸ್ಟರ್ ವಿನ್ಯಾಸವನ್ನು ಕೂಡ ಹೊಂದಿದೆ. ಹೊಸ ಕಾರಿನಲ್ಲಿ ಮರುವಿನ್ಯಾಸಗೊಳಿಸಲಾದ ಪಸಾಟ್ ಲೋಗೊವನ್ನು ಅಳವಡಿಸಲಾಗಿದೆ. ಮುಂಬರುವ ಫೋಕ್ಸ್ವ್ಯಾಗನ್ ಸೆಡಾನ್ 17 ಇಂಚಿನ ಅಲಾಯ್ ವ್ಹೀಲ್ಗಳನ್ನು ಸಹ ಹೊಂದಿದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು
ಸ್ಪೈ ಚಿತ್ರದಲ್ಲಿ ಕಾರಿನ ಇಂಟಿರಿಯರ್ನಲ್ಲಿ ಮಾಡಿದ ಬದಲಾವಣೆಗಳ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ಆದರೆ 2020ರ ಪಸಾಟ್ ಬಿಎಸ್-6 ಮಾದರಿಯು ಅತ್ಯಾಧುನಿಕ ಫೀಚರ್ಸ್ಗನ್ನು ಹೊಂದಿರಲಿದೆ.
ಈ ಹೊಸ ಕಾರಿನ ಇಂಟಿರಿಯರ್ನಲ್ಲಿ ಇತ್ತೀಚಿನ ಎಂಐಬಿ3 ಆಧಾರಿತ ಇನ್ಫೋಟೇನ್ಮೆಂಟ್ ಸಿಸ್ಟಂ, ಇಂಟಿಗ್ರೇಟೆಡ್ ಇಂಟರ್ನೆಟ್ ಕನೆಕ್ಟಿವಿಟಿ ಎಲ್ಲಾ ಹೊಸ ಡಿಜಿಟಲ್ ಕಾಕ್ಪಿಟ್ ಮತ್ತು ಕೆಪ್ಯಾಸಿಟಿವ್ ಸ್ಟೀಟಿಯರಿಂಗ್ ಹೊಂದಿರಲಿದೆ.
MOST READ: ಅನಾವರಣವಾಯ್ತು ಬಿಎಂಡಬ್ಲ್ಯು ಎಕ್ಸ್7 ಡಾರ್ಕ್ ಶ್ಯಾಡೋ ಎಸ್ಯುವಿ
2020ರ ಪಸಾಟ್ ಕಾರ್ ಅನ್ನು ಆಯ್ದ ಸ್ಯಾಮ್ಸಂಗ್ ಸ್ಮಾರ್ಟ್ ಫೋನ್ ಗಳನ್ನು ಬಳಿಸಿ ಲಾಕ್ ಮಾಡಲು ಮತ್ತು ಅನ್ ಲಾಕ್ ಮಾಡಲು ಸಾಧ್ಯವಾಗುತ್ತದೆ. ಇದು ಸ್ಯಾಮ್ಸಾಂಗ್ನ ಕೆಲವು ಆಯ್ದ ಮೊಬೈಲ್ ಮಾದರಿಗಳಲ್ಲಿ ಮಾತ್ರ ಸಾಧ್ಯವಾಗುತ್ತದೆ.
ಈ ಹೊಸ ಫೋಕ್ಸ್ವ್ಯಾಗನ್ ಕಾರಿನಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಹೊಸ ಫೀಚರ್ಸ್ಗಳನ್ನು ಅಳವಡಿಸಲಾಗಿದೆ. ಇದರಲ್ಲಿ ಫಾರ್ವರ್ಡ್ ಡಿಕ್ಕಿ ವಾರ್ನಿಂಗ್ ಸಿಸ್ಟಂ, ಎಮರ್ಜೆನ್ಸಿ ಬ್ರೇಕಿಂಗ್ ಸಿಸ್ಟಂ, ಮಾನಿಟರಿಂಗ್ ಸಿಸ್ಟಂ, ರೇರ್ ಟ್ರಾಫಿಕ್ ಅಲರ್ಟ್ ಸಿಸ್ಟಂ, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್ ಮತ್ತು ಲೇನ್ ಕೀಪಿಂಗ್ ಅಸಿಸ್ಟ್ ಅನ್ನು ಒಳಗೊಂಡಿರುತ್ತದೆ.
MOST READ: ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್ಲಿಫ್ಟ್
ಹಿಂದಿನ ಬಿಎಸ್-4 ಫೋಕ್ಸ್ವ್ಯಾಗನ್ ಪಸಾಟ್ ಕಾರಿನಲ್ಲಿ 2.0 ಲೀಟರ್ ನಾಲ್ಕು ಸಿಲಿಂಡರ್ ಡೀಸೆಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 174 ಬಿಹೆಚ್ಪಿ ಪವರ್ ಮತ್ತು 350 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ನೊಂದಿಗೆ 6 ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಜೋಡಿಸಲಾಗಿದೆ.
ಹಿಂದಿನ ಬಿಎಸ್-4 ಫೋಕ್ಸ್ ವ್ಯಾಗನ್ ಪಸಾಟ್ ಕಾರಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.29.99 ಲಕ್ಷಗಳಾಗಿದೆ. ಹೊಸ ಬಿಎಸ್-6 ಮಾದರಿಯ ಬೆಲೆಯು ಹಿಂದಿನ ಬಿಎಸ್-4 ಪಸಾಟ್ ಮಾದರಿಗಿಂತ ತುಸು ದುಬಾರಿಯಾಗಿರಲಿದೆ. ಫೋಕ್ಸ್ವ್ಯಾಗನ್ ಕಂಪನಿಯು ಬಿಎಸ್-6 ಪಸಾಟ್ ಫೇಸ್ಲಿಫ್ಟ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಈ ವರ್ಷದ ಅಂತ್ಯದಲ್ಲಿ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ.