ಆಟೋ ಎಕ್ಸ್‌ಪೋ 2020: ಬಿಡುಗಡೆಯಾಗಲಿದೆ ಫೋಕ್ಸ್‌ವ್ಯಾಗನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ನೋಯ್ಡಾದಲ್ಲಿ ಇದೇ ತಿಂಗಳು 7ರಿಂದ ನಡೆಯಲಿರುವ ದೆಹಲಿ ಆಟೋ ಎಕ್ಸ್‌ಪೋದಲ್ಲಿ ವಿವಿಧ ಕಾರು ಉತ್ಪಾದನಾ ಸಂಸ್ಥೆಗಳ 50ಕ್ಕೂ ಹೆಚ್ಚು ಹೊಸ ಕಾರು ಮಾದರಿಗಳು ಅನಾವರಣಗೊಳ್ಳಲಿದ್ದು, ಫೋಕ್ಸ್‌ವ್ಯಾಗನ್ ಸಂಸ್ಥೆಯು ಕೂಡಾ ತನ್ನ ಬಹುನೀರಿಕ್ಷಿತ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯೊಂದನ್ನು ಅನಾವರಣಗೊಳಿಸಿ ಬಿಡುಗಡೆ ಮಾಡಲಿದೆ.

ಆಟೋ ಎಕ್ಸ್‌ಪೋ 2020: ಬಿಡುಗಡೆಯಾಗಲಿದೆ ಫೋಕ್ಸ್‌ವ್ಯಾಗನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಜಮರ್ನ್ ಬ್ರಾಂಡ್ ಫೋಕ್ಸ್‌ವ್ಯಾಗನ್ ಸಂಸ್ಥೆಯು ಈ ಬಾರಿಯ ಆಟೋ ಎಕ್ಸ್‌ಪೋದಲ್ಲಿ ಭಾರೀ ನೀರಿಕ್ಷೆಯೊಂದಿಗೆ ತನ್ನ ಭವಿಷ್ಯ ಕಾರು ಮಾದರಿಗಳನ್ನು ಪ್ರದರ್ಶನಗೊಳಿಸುತ್ತಿದ್ದು, ಟಿ-ಕ್ರಾಸ್, ಟಿ-ರಾಕ್, ಟಿಗ್ವಾನ್ ಆಲ್‌ಸ್ಪೆಸ್ ಮತ್ತು ಐಡಿ ಕ್ರಾಜ್ ಎಲೆಕ್ಟ್ರಿಕ್ ಎಸ್‌ಯುವಿ ಕಾರುಗಳನ್ನು ಪ್ರದರ್ಶನಗೊಳಿಸುವುದಾಗಿ ಅಧಿಕೃತ ಮಾಹಿತಿ ನೀಡಿದೆ. ಇದರಲ್ಲಿ ಟಿ-ಕ್ರಾಸ್ ಮತ್ತು ಟಿ-ರಾಕ್ ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿದ್ದರೆ ಇನ್ನುಳಿದ ಟಿಗ್ವಾನ್ ಆಲ್‌ಸ್ಪೆಸ್ ಮತ್ತು ಐಡಿ ಕ್ರಾಜ್ ಎಲೆಕ್ಟ್ರಿಕ್ ಕಾರು ತದನಂತರದಲ್ಲಿ ಬಿಡುಗಡೆಯಾಗಲಿದೆ.

ಆಟೋ ಎಕ್ಸ್‌ಪೋ 2020: ಬಿಡುಗಡೆಯಾಗಲಿದೆ ಫೋಕ್ಸ್‌ವ್ಯಾಗನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಫೋಕ್ಸ್‌ವ್ಯಾಗನ್ ಸಂಸ್ಥೆಯು ಸದ್ಯ ಭಾರತ ಸೇರಿದಂತೆ ವಿಶ್ವದ ಪ್ರಮುಖ ಮಾರುಕಟ್ಟೆಗಳಿಗಾಗಿ ವಿವಿಧ ಕಾರು ಮಾದರಿಗಳನ್ನು ಪರಿಚಯಿಸುವ ಇರಾದೆಯಲ್ಲಿದ್ದು, 'ಇಂಡಿಯಾ 2.0 ಪ್ರೋಜೆಕ್ಟ್' ಎನ್ನುವ ಬೃಹತ್ ಯೋಜನೆ ಒಂದನ್ನು ಸಿದ್ದಪಡಿಸಿದೆ.

ಆಟೋ ಎಕ್ಸ್‌ಪೋ 2020: ಬಿಡುಗಡೆಯಾಗಲಿದೆ ಫೋಕ್ಸ್‌ವ್ಯಾಗನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಯೋಜನೆಯ ಜವಾಬ್ದಾರಿಯನ್ನು ಸ್ಕೋಡಾ ಸಂಸ್ಥೆಗೆ ವಹಿಸಿಕೊಟ್ಟಿದ್ದು, ಮುಂಬರುವ ಫೋಕ್ಸ್‌ವ್ಯಾಗನ್ ಸಂಸ್ಥೆಯ ಪ್ರತಿಯೊಂದು ಕಾರು ಮಾದರಿಯು ಸಹ ಸ್ಕೋಡಾ ತಂತ್ರಜ್ಞಾನ ಪ್ರೇರಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿವೆ.

ಆಟೋ ಎಕ್ಸ್‌ಪೋ 2020: ಬಿಡುಗಡೆಯಾಗಲಿದೆ ಫೋಕ್ಸ್‌ವ್ಯಾಗನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಮಾಹಿತಿಗಳ ಪ್ರಕಾರ, ಫೋಕ್ಸ್‌ವ್ಯಾಗನ್ ಸಂಸ್ಥೆಯು ಸ್ಕೋಡಾ ಜೊತೆಗೂಡಿ ಭಾರತದಲ್ಲಿ ವಿವಿಧ ಮಾದರಿಯ ಐದು ಹೊಸ ಕಾರುಗಳನ್ನು ಬಿಡುಗಡೆಗೊಳಿಸುವ ಯೋಜನೆಯಲ್ಲಿದ್ದು, ಇವುಗಳಲ್ಲಿ ಕೆಲವು ಕಾರುಗಳು ಭಾರತದಲ್ಲೇ ಉತ್ಪಾದನೆಯಾಗಲಿದ್ದಲ್ಲಿ ಇನ್ನು ಕೆಲವು ವಿದೇಶಿ ಮಾರುಕಟ್ಟೆಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಇವುಗಳಲ್ಲಿ ಟಿ-ರಾಕ್ ಮತ್ತು ಟಿ-ಕ್ರಾಸ್ ಎನ್ನುವ ಮಧ್ಯಮ ಕ್ರಮಾಂಕದ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಗಳನ್ನು ದೆಹಲಿ ಎಕ್ಸ್‌ಪೋದಲ್ಲಿ ಪ್ರದರ್ಶನಗೊಳಿಸಿದ ನಂತರ ಬಿಡುಗಡೆಗೊಳಿಸುವ ಸುಳಿವು ನೀಡಿದೆ.

ಆಟೋ ಎಕ್ಸ್‌ಪೋ 2020: ಬಿಡುಗಡೆಯಾಗಲಿದೆ ಫೋಕ್ಸ್‌ವ್ಯಾಗನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಕೇಂದ್ರ ಸರ್ಕಾರವು ಘೋಷಣೆ ಮಾಡಿರುವ ಹೊಸ ಆಮದು ನೀತಿ ಅಡಿಯಲ್ಲಿ ವಿದೇಶಿ ಮಾರುಕಟ್ಟೆಗಳಿಂದ ಆಮದು ಮಾಡಿಕೊಂಡು ಈ ಕಾರನ್ನು ಮಾರಾಟ ಮಾಡಲು ನಿರ್ಧರಿಸಲಾಗಿದೆ.

ಆಟೋ ಎಕ್ಸ್‌ಪೋ 2020: ಬಿಡುಗಡೆಯಾಗಲಿದೆ ಫೋಕ್ಸ್‌ವ್ಯಾಗನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಆಮದು ನಿಯಮದಡಿ ಆಟೋ ಉತ್ಪಾದನಾ ಸಂಸ್ಥೆಗಳಿಗೆ ಕೆಲವು ವಿನಾಯ್ತಿಗಳನ್ನು ನೀಡಲಾಗಿದ್ದು, ಭಾರತದಲ್ಲಿ ಕಾರು ಉತ್ಪಾದನಾ ಘಟಕವನ್ನು ಹೊಂದಿರುವ ವಿದೇಶಿ ಆಟೋ ಉತ್ಪಾದನಾ ಸಂಸ್ಥೆಗಳು ಪ್ರತಿ ವರ್ಷ 2,500 ವಾಹನಗಳನ್ನು ವಿದೇಶಿ ಮಾರುಕಟ್ಟೆಗಳಿಂದ ಯಾವುದೇ ಷರತ್ತುಗಳಿಲ್ಲದೆ ಆಮದು ಮಾಡಿಕೊಳ್ಳಬಹುದಾಗಿದೆ.

ಆಟೋ ಎಕ್ಸ್‌ಪೋ 2020: ಬಿಡುಗಡೆಯಾಗಲಿದೆ ಫೋಕ್ಸ್‌ವ್ಯಾಗನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಈ ಹಿನ್ನಲೆ ಫೋಕ್ಸ್‌ವ್ಯಾಗನ್ ಸಂಸ್ಥೆಯು ಸಹ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅತ್ಯತ್ತಮ ಬೇಡಿಕೆಯನ್ನು ಹೊಂದಿರುವ ಟಿ-ರಾಕ್ ಮತ್ತು ಟಿ-ಕ್ರಾಸ್ ಕಾರುಗಳನ್ನು ಭಾರತದಲ್ಲೂ ಬಿಡುಗಡೆ ಮಾಡಲಾಗುತ್ತಿದೆ.

ಆಟೋ ಎಕ್ಸ್‌ಪೋ 2020: ಬಿಡುಗಡೆಯಾಗಲಿದೆ ಫೋಕ್ಸ್‌ವ್ಯಾಗನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಟಾಟಾ ಹ್ಯಾರಿಯರ್, ಜೀಪ್ ಕಂಪಾಸ್ ಮತ್ತು ಕಿಯಾ ಸೆಲ್ಟೊಸ್ ಕಾರಿಗೆ ಸರಿಸಮನಾದ ವೀಲ್ಹ್‌ಬೆಸ್ ಮತ್ತು ಉದ್ದಳತೆಯನ್ನು ಹೊಂದಿರುವ ಟಿ-ರಾಕ್ ಕಾರು 2.0-ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ ರಸ್ತೆಗಿಳಿಯುವುದು ಬಹುತೇಕ ಖಚಿತವಾಗಿದೆ.

ಆಟೋ ಎಕ್ಸ್‌ಪೋ 2020: ಬಿಡುಗಡೆಯಾಗಲಿದೆ ಫೋಕ್ಸ್‌ವ್ಯಾಗನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಆದ್ರೆ ಟಿ-ರಾಕ್ ಕಾರಿನಲ್ಲಿ ಡೀಸೆಲ್ ಎಂಜಿನ್ ಆಯ್ಕೆಯನ್ನು ಒದಗಿಸುವ ಸಾಧ್ಯತೆ ಕಡಿಮೆ ಎನ್ನಲಾಗಿದ್ದು, 2015ರಲ್ಲಿ ನಡೆದ ಡೀಸೆಲ್ ಎಂಜಿನ್ ಹಗರಣವು ಫೋಕ್ಸ್‌ವ್ಯಾಗನ್ ಸಂಸ್ಥೆಗೆ ಭಾರೀ ಪ್ರಮಾಣದ ಹೊಡೆತ ನೀಡಿತ್ತು. ಹೀಗಾಗಿ ಡೀಸೆಲ್ ಎಂಜಿನ್ ಬಗ್ಗೆ ಹೆಚ್ಚು ಗಮನಹರಿಸದ ಫೋರ್ಕ್ಸ್‌ವ್ಯಾಗನ್ ಸಂಸ್ಥೆಯು ಪೆಟ್ರೋಲ್ ಎಂಜಿನ್ ಮೇಲೆ ಹೆಚ್ಚಿನ ಒತ್ತು ನೀಡುತ್ತಿದೆ.

ಆಟೋ ಎಕ್ಸ್‌ಪೋ 2020: ಬಿಡುಗಡೆಯಾಗಲಿದೆ ಫೋಕ್ಸ್‌ವ್ಯಾಗನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಇದಲ್ಲದೇ ಟಿ-ರಾಕ್ ಕಾರು ಪೆಟ್ರೋಲ್ ಎಂಜಿನ್‌ನೊಂದಿಗೆ ಅತ್ಯುತ್ತಮ ಡ್ರೈವ್ ಟೆಕ್ನಾಲಜಿ ಹೊಂದಿರಲಿದ್ದು, 7-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 4x4 ಡ್ರೈವ್ ಟ್ರೈನ್ ಸೇರಿದಂತೆ ಹಲವಾರು ಪ್ರೀಮಿಯಂ ಫಿಚರ್ಸ್‌ಗಳನ್ನು ಹೊಂದಿರಲಿದೆ.

ಆಟೋ ಎಕ್ಸ್‌ಪೋ 2020: ಬಿಡುಗಡೆಯಾಗಲಿದೆ ಫೋಕ್ಸ್‌ವ್ಯಾಗನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಇದರಿಂದ ಟಿ-ರಾಕ್ ಬೆಲೆಯು ತುಸು ದುಬಾರಿ ಎನ್ನಿಸಲಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.14 ಲಕ್ಷದಿಂದ ಟಾಪ್ ಎಂಡ್ ಮಾದರಿಗೆ ರೂ.17 ಲಕ್ಷ ಬೆಲೆ ಪಡೆದುಕೊಳ್ಳಬಹುದು ಅಂದಾಜಿಸಲಾಗಿದೆ.

ಆಟೋ ಎಕ್ಸ್‌ಪೋ 2020: ಬಿಡುಗಡೆಯಾಗಲಿದೆ ಫೋಕ್ಸ್‌ವ್ಯಾಗನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಆದರೆ ಟಿ-ರಾಕ್ ಆವೃತ್ತಿಗಿಂತ ಟಿ-ಕ್ರಾಸ್ ಮಾದರಿಯು ಮಧ್ಯಮ ಕ್ರಮಾಂಕದಲ್ಲಿ ಮಾರಾಟಗೊಳ್ಳಲಿದ್ದು, ಮಾರುತಿ ಬ್ರೆಝಾ, ಹ್ಯುಂಡೈ ವೆನ್ಯೂ ಮತ್ತು ಮಹೀಂದ್ರಾ ಎಕ್ಸ್‌ಯುವಿ300 ಕಾರುಗಳಿಗೆ ಪೈಪೋಟಿಯಾಗಲಿರುವ ಟಿ-ಕ್ರಾಸ್ ಕಾರು ಡೀಸೆಲ್ ಮತ್ತು ಪೆಟ್ರೋಲ್ ಆಯ್ಕೆಯೊಂದಿಗೆ ಎಕ್ಸ್‌ಶೋರೂಂ ಪ್ರಕಾರ ರೂ.9 ಲಕ್ಷದಿಂದ ರೂ.13 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದೆ.

More from DriveSpark

Article Published On: Saturday, February 1, 2020, 17:26 [IST]
English summary
New Volkswagen SUV teased ahead of Auto Expo 2020 debut to rival Kia Seltos. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+