Just In
- 29 min ago Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- 1 hr ago Jonty Rhodes: ರಾಯಲ್ ಎನ್ಫೀಲ್ಡ್ ಬೈಕ್ಗಳಿಗೆ ಮನಸೋತ ದ.ಆಫ್ರಿಕಾ ಕ್ರಿಕೆಟರ್!
- 15 hrs ago ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- 16 hrs ago KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
Don't Miss!
- News Mukhtar Ansari's death: ಉತ್ತರಪ್ರದೇಶದಲ್ಲಿ ಕಿಚ್ಚು ಹಚ್ಚಿದ ಗ್ಯಾಂಗ್ಸ್ಟಾರ್, ರಾಜಕಾರಣಿ ಮುಖ್ತಾರ್ ಅನ್ಸಾರಿ ನಿಧನ
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Movies "ಇವರು ಆಡೋ ಮಾತುಗಳಿಂದ ನಮ್ಮ ತಾಯಿ ಊಟ ಮಾಡ್ತಿಲ್ಲ"; ಕಣ್ಣೀರಿಟ್ಟ ವರ್ತೂರು ಸಂತೋಷ್
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- Finance ಇನ್ಮುಂದೆ ದುಬಾರಿಯಾಗಲಿದೆ ಎಸ್ಬಿಐ ಡೆಬಿಟ್, ಕ್ರೆಡಿಟ್ ಕಾರ್ಡ್ ನಿರ್ವಹಣಾ ಶುಲ್ಕ
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸ ಫೋಕ್ಸ್ವ್ಯಾಗನ್ ಟಿ-ರಾಕ್ ಎಸ್ಯುವಿಯ ಬಿಡುಗಡೆ ದಿನಾಂಕ ಬಹಿರಂಗ
ಜರ್ಮನಿಯ ವಾಹನ ತಯಾರಕ ಕಂಪನಿಯಾದ ಫೋಕ್ಸ್ವ್ಯಾಗನ್ ಕಂಪನಿಯು ಮಾರ್ಚ್ 18ರಂದು ತನ್ನ ಬಹುನೀರಿಕ್ಷಿತ ಟಿ-ರಾಕ್ ಎಸ್ಯುವಿಯನ್ನು ಭಾರತದಲ್ಲಿ ಬಿಡುಗಡೆ ಮಾಡುವುದಾಗಿ ಅಧಿಕೃತವಾಗಿ ಘೋಷಿಸಿದೆ. ಫೋಕ್ಸ್ವ್ಯಾಗನ್ ಕಂಪನಿಯು ಈ ಎಸ್ಯುವಿಯನ್ನು 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಿತ್ತು.
ಫೋಕ್ಸ್ವ್ಯಾಗನ್ ಸಂಸ್ಥೆಯು ಸ್ಕೋಡಾ ಸಹಭಾಗಿತ್ವದಲ್ಲಿ ಇಂಡಿಯಾ 2.0 ಪ್ರೊಜೆಕ್ಟ್ ಯೋಜನೆ ಅಡಿ ಹೊಸ ಕಾರುಗಳನ್ನು ಭಾರತದಲ್ಲಿ ಬಿಡುಗಡೆ ಮಾಡಲಿದೆ. ಇದರಲ್ಲಿ ಐಷಾರಾಮಿ ಫೀಚರ್ಸ್ ಹೊಂದಿರುವ ಟಿ-ರಾಕ್ ಕೂಡಾ ಒಂದಾಗಿದೆ. ಹೊಸ ಟಿ-ರಾಕ್ ಎಸ್ಯುವಿಯನ್ನು ಮುಂದಿನ ಏಪ್ರಿಲ್ ತಿಂಗಳಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಲಿದೆ. ಇದೀಗ ಹೊಸ ಟಿ-ರಾಕ್ ಎಸ್ಯುವಿಯ ಪ್ರಿ ಬುಕ್ಕಿಂಗ್ ಪ್ರಾರಂಭಿಸಿದೆ.
ಟಿ-ರಾಕ್ ಎಸ್ಯುವಿಯು ಐಷಾರಾಮಿ ಫೀಚರ್ಸ್ಗಳೊಂದಿಗೆ ಪೆಟ್ರೋಲ್ ಎಂಜಿನ್ನಲ್ಲಿ ಮಾತ್ರವೇ ಮಾರಾಟವಾಗಲಿದೆ. ಡೀಸೆಲ್ ಎಂಜಿನ್ನಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳು ಕಡಿಮೆಯಾಗಿದೆ.
ಈ ಎಸ್ಯುವಿಯು ಮುಂಭಾಗದಲ್ಲಿ ಸ್ಲೀಕ್ ಗ್ರಿಲ್ ಅನ್ನು ಹೊಂದಿದೆ. ಮುಂಭಾಗದ ಎರಡೂ ಬದಿಯಲ್ಲಿ ಎಲ್ಇಡಿ ಪ್ರೊಜೆಕ್ಟರ್ ಹೆಡ್ಲ್ಯಾಂಪ್ಗಳನ್ನು ಅಳವಡಿಸಲಾಗಿದೆ. ಈ ಎಸ್ಯುವಿನ ಹೊಸ ಬಂಪರ್ ಅನ್ನು ಹೊಂದಿದ್ದು, ದೊಡ್ಡ ಮೆಡ್ ಗ್ರಿಲ್ ಏರ್ ಇನ್ಟೇಕ್ ಅನ್ನು ಹೊಂದಿದೆ.
ಈ ಎಸ್ಯುವಿಯ ಮುಂಭಾಗದಲ್ಲಿ ಎಲ್ಇಡಿ ಡಿಆರ್ಎಲ್ಗಳನ್ನು ಸಹ ಅಳವಡಿಸಲಾಗಿದೆ. ಹೊಸ ಟಿ-ರಾಕ್ ಎಸ್ಯುವಿನಲ್ಲಿ 5 ಸ್ಪೋಕ್ ಅಲಾಯ್ ವ್ಹೀಲ್, ಹಿಂಭಾಗದಲ್ಲಿ ರೂಫ್-ಮೌಂಟೆಡ್ ಸ್ಪಾಯ್ಲರ್ ಮತ್ತು ಸ್ಲೀಕ್ ಎಲ್ಇಡಿ ಟೈಲ್ ಲೈಟ್ಗಳನ್ನು ಹೊಂದಿದೆ. ಹಿಂಭಾಗದಲ್ಲಿ ಬಂಪರ್ ಮತ್ತು ಸ್ಕಫ್ ಪ್ಲೇಟ್ಗಳನ್ನು ಹೊಂದಿದೆ.
ಈ ಎಸ್ಯುವಿನಲ್ಲಿ ಫುಲ್ ಎಲ್ಇಡಿ ಹೆಡ್ಲ್ಯಾಂಪ್, ಎಲ್ಇಡಿ ಟೈಲ್ ಲ್ಯಾಂಪ್, 8-ಇಂಚಿನ ಟಚ್ಸ್ಕ್ರೀನ್ ಇನ್ಪೋಟೈನ್ಮೆಂಟ್ ಸಿಸ್ಟಂ, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, ಪನೊರಮಿಕ್ ಸನ್ರೂಫ್ ಸೌಲಭ್ಯಗಳಿವೆ.
ಟಿ-ರಾಕ್ ಎಸ್ಯುವಿಯ ಪ್ರೀಮಿಯಂ ಫೀಚರ್ಸ್ಗಳಾದ ಡ್ಯುಯಲ್ ಟೋನ್ ಅಲಾಯ್ ವೀಲ್ಹ್, ವೆನ್ನಾ ಲೆದರ್ ಸೀಟುಗಳು, ಫ್ರಂಟ್ ಆ್ಯಂಡ್ ರೇರ್ ಪಾರ್ಕಿಂಗ್ ಸೆನ್ಸಾರ್ ಸೌಲಭ್ಯಗಳಿದೆ. ಇನ್ನು ಪ್ರಯಾಣಿಕರ ಸುರಕ್ಷತೆಗಾಗಿ ಎಬಿಎಸ್ ಜೊತೆ ಇಬಿಡಿ, 6 ಏರ್ಬ್ಯಾಗ್ಗಳು, ಟಯರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ರೇರ್ ಪಾರ್ಕಿಂಗ್ ಕ್ಯಾಮೆರಾ ಸೇರಿದಂತೆ ಹಲವು ಪ್ರೀಮಿಯಂ ಸೌಲಭ್ಯಗಳನ್ನು ನೀಡಲಾಗಿದೆ.
ಹೊಸ ಟಿ-ರಾಕ್ ಎಸ್ಯುವಿನಲ್ಲಿ 1.5-ಲೀಟರ್ 4 ಸಿಲಿಂಡರ್ ಟರ್ಬೋ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಿದೆ. ಈ ಎಂಜಿನ್ 150 ಬಿಹೆಚ್ಪಿ ಪವರ್ ಮತ್ತು 340 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ನೊಂದಿಗೆ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್ಬಾಕ್ಸ್ಅನ್ನು ಅಳವಡಿಸಲಾಗಿದೆ.
ಫೋಕ್ಸ್ವ್ಯಾಗನ್ನ ಹೊಸ ಟಿ-ರಾಕ್ ಮಾದರಿಯು ಮಿಡ್ ಎಸ್ಯುವಿ ಸೆಗ್ಮೆಂಟ್ನಲ್ಲಿರಲಿದೆ. ಈ ಎಸ್ಯುವಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಜೀಪ್ ಕಂಪಾಸ್, ಕಿಯಾ ಸೆಲ್ಟೋಸ್ ಮತ್ತು ಮುಂಬರುವ ಸ್ಕೋಡಾ ಕರೋಕ್ ಎಸ್ಯುವಿಗಳಿಗೆ ಪೈಪೋಟಿ ನೀಡಲಿದೆ.