ಭಾರತದಲ್ಲಿ ಬಿಡುಗಡೆಯಾಗಲಿದೆ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍‍ಯುವಿ

ಫೋಕ್ಸ್‌ವ್ಯಾಗನ್ ಕಂಪನಿಯು ತನ್ನ ಹೊಸ ಟಿ-ರಾಕ್ ಎಸ್‍‍ಯುವಿಯನ್ನು 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಿತ್ತು. ಇದೀಗ ಹೊಸ ಟಿ-ರಾಕ್ ಎಸ್‍‍ಯುವಿಯನ್ನು ಬಿಡುಗಡೆಗೊಳಿಸಲು ಫೋಕ್ಸ್‌ವ್ಯಾಗನ್ ಕಂಪನಿಯು ಸಜ್ಜಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍‍ಯುವಿ

ಫೋಕ್ಸ್‌ವ್ಯಾಗನ್ ಸಂಸ್ಥೆಯು ಸ್ಕೋಡಾ ಸಹಭಾಗಿತ್ವದಲ್ಲಿ ಇಂಡಿಯಾ 2.0 ಪ್ರೊಜೆಕ್ಟ್ ಯೋಜನೆ ಅಡಿ ಹಲವು ಹೊಸ ಕಾರುಗಳನ್ನು ಭಾರತದಲ್ಲಿ ಬಿಡುಗಡೆ ಮಾಡಲಿದೆ. ಇದರಲ್ಲಿ ಐಷಾರಾಮಿ ಫೀಚರ್ಸ್ ಹೊಂದಿರುವ ಟಿ-ರಾಕ್ ಕೂಡಾ ಒಂದಾಗಿದೆ. ಹೊಸ ಟಿ-ರಾಕ್ ಎಸ್‍‍ಯುವಿಯನ್ನು ಮುಂದಿನ ಏಪ್ರಿಲ್ ತಿಂಗಳಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಲಿದೆ. ಇದೀಗ ಹೊಸ ಟಿ-ರಾಕ್ ಎಸ್‍‍ಯುವಿಯ ಪ್ರಿ ಬುಕ್ಕಿಂಗ್ ಪ್ರಾರಂಭಿಸಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍‍ಯುವಿ

ಟಿ-ರಾಕ್ ಎಸ್‍‍ಯುವಿಯು ಐಷಾರಾಮಿ ಫೀಚರ್ಸ್‌ಗಳೊಂದಿಗೆ ಪೆಟ್ರೋಲ್ ಎಂಜಿನ್‌ನಲ್ಲಿ ಮಾತ್ರವೇ ಮಾರಾಟವಾಗಲಿದೆ. ಡೀಸೆಲ್ ಎಂಜಿನ್‍‍ನಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳು ಕಡಿಮೆಯಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍‍ಯುವಿ

ಜರ್ಮನಿ ಮೂಲದ ಫೋಕ್ಸ್‌ವ್ಯಾಗನ್ ಕಂಪನಿಯಿಂದ ಎಸ್‍‍ಯು‍ವಿಯನ್ನು ಆರಂಭದಲ್ಲಿ ಸಿಬಿಯು(ಕಂಪ್ಲೀಟ್ ಬಿಲ್ಟ್ ಯುನಿಟ್) ಮಾರ್ಗದ ಮೂಲಕ ಭಾರತಕ್ಕೆ ಆಮದು ಮಾಡಿಕೊಳ್ಳಲಾಗುವುದು.

ಭಾರತದಲ್ಲಿ ಬಿಡುಗಡೆಯಾಗಲಿದೆ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍‍ಯುವಿ

ಈ ಎಸ್‍‍ಯುವಿಯು ಮುಂಭಾಗದಲ್ಲಿ ಸ್ಲೀಕ್ ಗ್ರಿಲ್ ಅನ್ನು ಹೊಂದಿದೆ. ಮುಂಭಾಗದ ಎರಡೂ ಬದಿಯಲ್ಲಿ ಎಲ್‍ಇಡಿ ಪ್ರೊಜೆಕ್ಟರ್ ಹೆಡ್‍‍ಲ್ಯಾಂಪ್‍‍ಗಳನ್ನು ಅಳವಡಿಸಲಾಗಿದೆ. ಈ ಎಸ್‍‍ಯುವಿನ ಹೊಸ ಬಂಪರ್ ಅನ್ನು ಹೊಂದಿದ್ದು, ದೊಡ್ಡ ಮೆಡ್ ಗ್ರಿಲ್ ಏರ್ ಇನ್‍‍ಟೇಕ್ ಅನ್ನು ಹೊಂದಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍‍ಯುವಿ

ಮುಂಭಾಗದಲ್ಲಿ ಎಲ್‍ಇ‍ಡಿ ಡಿಆರ್‍ಎಲ್‍ಗಳನ್ನು ಸಹ ಅಳವಡಿಸಲಾಗಿದೆ. ಹೊಸ ಟಿ-ರಾಕ್ ಎಸ್‍‍ಯುವಿನಲ್ಲಿ 5 ಸ್ಪೋಕ್ ಅಲಾಯ್ ವ್ಹೀಲ್, ಹಿಂಭಾಗದಲ್ಲಿ ರೂಫ್-ಮೌಂಟೆಡ್ ಸ್ಪಾಯ್ಲರ್ ಮತ್ತು ಸ್ಲೀಕ್ ಎಲ್‍ಇಡಿ ಟೈಲ್‍ ಲೈಟ್‍‍‍ಗಳನ್ನು ಹೊಂದಿದೆ. ಹಿಂಭಾಗದಲ್ಲಿ ಬಂಪರ್ ಮತ್ತು ಸ್ಕಫ್ ಪ್ಲೇಟ್‍‍ಗಳನ್ನು ಹೊಂದಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍‍ಯುವಿ

ಹೊಸ ಎಸ್‍‍ಯುವಿನಲ್ಲಿ ಫುಲ್ ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಟೈಲ್ ಲ್ಯಾಂಪ್, 8-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, ಪನೊರಮಿಕ್ ಸನ್‌ರೂಫ್ ಸೌಲಭ್ಯಗಳಿವೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍‍ಯುವಿ

ಟಿ-ರಾಕ್ ಎಸ್‍‍ಯುವಿಯ ಪ್ರೀಮಿಯಂ ಫೀಚರ್ಸ್‌ಗಳಾದ ಡ್ಯುಯಲ್ ಟೋನ್ ಅಲಾಯ್ ವೀಲ್ಹ್, ವೆನ್ನಾ ಲೆದರ್ ಸೀಟುಗಳು, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್ ಸೌಲಭ್ಯಗಳಿದೆ. ಇನ್ನು ಪ್ರಯಾಣಿಕರ ಸುರಕ್ಷತೆಗಾಗಿ ಎಬಿಎಸ್ ಜೊತೆ ಇಬಿಡಿ, 6 ಏರ್‌ಬ್ಯಾಗ್‌ಗಳು, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ರಿಯರ್ ಪಾರ್ಕಿಂಗ್ ಕ್ಯಾಮೆರಾ ಸೇರಿದಂತೆ ಹಲವು ಪ್ರೀಮಿಯಂ ಸೌಲಭ್ಯಗಳನ್ನು ನೀಡಲಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍‍ಯುವಿ

ಹೊಸ ಟಿ-ರಾಕ್ ಎಸ್‍‍ಯುವಿನಲ್ಲಿ 1.5-ಲೀಟರ್ ಫೋರ್ ಸಿಲಿಂಡರ್ ಟರ್ಬೋ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಿದೆ. ಈ ಎಂಜಿನ್ 150 ಬಿ‍ಹೆಚ್‍ಪಿ ಪವರ್ ಮತ್ತು 340 ಎನ್‍‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍‍ನೊಂದಿಗೆ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಅನ್ನು ಅಳವಡಿಸಲಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍‍ಯುವಿ

ಫೋಕ್ಸ್‌ವ್ಯಾಗನ್‍ನ ಹೊಸ ಟಿ-ರಾಕ್ ಮಾದರಿಯು ಮಧ್ಯಮ ಗಾತ್ರದ ಎಸ್‍‍ಯುವಿ ಸೆಗ್‍‍ಮೆಂಟ್‍‍ನಲ್ಲಿರಲಿದೆ. ಈ ಎಸ್‍ಯುವಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಜೀಪ್ ಕಂಪಾಸ್, ಕಿಯಾ ಸೆಲ್ಟೋಸ್ ಮತ್ತು ಮುಂಬರುವ ಸ್ಕೋಡಾ ಕರೋಕ್ ಎಸ್‍‍ಯುವಿಗಳಿಗೆ ಪೈಪೋಟಿ ನೀಡಲಿದೆ.

Most Read Articles

Kannada
English summary
Volkswagen T-Roc Pre-Bookings Open In India. Read in Kananda.
Story first published: Monday, February 17, 2020, 19:14 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more