Just In
- 45 min ago ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- 57 min ago TVS iQube: ಲಕ್ಷಾಂತರ ಭಾರತೀಯರ ನೆಚ್ಚಿನ ಸ್ಕೂಟರ್ನ ಡೌನ್ಪೇಮೆಂಟ್, ಇಎಂಐ, ಲೋನ್ ವಿವರ!
- 1 hr ago viral video: ಬೆಂಗಳೂರಿನಲ್ಲಿ ಮಾತ್ರ ಸಾಧ್ಯ: ಹೆಣ್ಮಗು.. ಹೆಣ್ಮಗು ಓಹ್.. ಎಂದ ನೆಟ್ಟಿಗರು!
- 1 hr ago ಯುಗಾದಿ ಜಾತ್ರೆ: ಶ್ರೀಶೈಲ ಮಲ್ಲಿಕಾರ್ಜುನನ ಭಕ್ತರಿಗೆ ಸಿಹಿಸುದ್ದಿ.. NWKRTCಯಿಂದ ವಿಶೇಷ ಬಸ್ ಸೇವೆ
Don't Miss!
- News ಬಿಜೆಪಿ ಅಭ್ಯರ್ಥಿ ಬದಲಾವಣೆ ಬಗ್ಗೆ ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದ್ದೇನು?
- Technology ಮತ್ತೊಂದು ಅಗ್ಗದ 5G ಫೋನ್ ಲಾಂಚ್ ಮಾಡಲು ಸಜ್ಜಾದ ರಿಯಲ್ಮಿ!..ಫೀಚರ್ಸ್ ಏನು?
- Movies 'ರಾಮಾಯಣ'ದಲ್ಲಿ 'ಯಶ್' ಗೆ 'ಸಾಕ್ಷಿ ತನ್ವರ್' ನಾಯಕಿ ; 'ಬೇಡವೇ ಬೇಡ' ಎಂದ ಅಭಿಮಾನಿಗಳು..!
- Finance ಜಗತ್ತಿನಾದ್ಯಂತ 6,000 ಉದ್ಯೋಗಿಗಳನ್ನು ವಜಾ ಮಾಡಿದ ಡೆಲ್
- Sports IPL 2024 RR vs DC: ರಾಯಲ್ಸ್ ವಿರುದ್ಧ ಗೆಲುವಿನೊಂದಿಗೆ ಪುಟಿದೇಳುವುದೇ ಕ್ಯಾಪಿಟಲ್ಸ್?; ಸಂಭಾವ್ಯ ಆಡುವ 11ರ ಬಳಗ
- Lifestyle ವಿಶ್ವದ ದುಬಾರಿ ಹಣ್ಣುಗಳಿವು..! ನೀವು ಊಹಿಸದ ಬೆಲೆ ಈ ಹಣ್ಣುಗಳಿಗಿದೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಾರತದಲ್ಲಿ ಬಿಡುಗಡೆಯಾಗಲಿದೆ ಫೋಕ್ಸ್ವ್ಯಾಗನ್ ಟಿ-ರಾಕ್ ಎಸ್ಯುವಿ
ಫೋಕ್ಸ್ವ್ಯಾಗನ್ ಕಂಪನಿಯು ತನ್ನ ಹೊಸ ಟಿ-ರಾಕ್ ಎಸ್ಯುವಿಯನ್ನು 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಿತ್ತು. ಇದೀಗ ಹೊಸ ಟಿ-ರಾಕ್ ಎಸ್ಯುವಿಯನ್ನು ಬಿಡುಗಡೆಗೊಳಿಸಲು ಫೋಕ್ಸ್ವ್ಯಾಗನ್ ಕಂಪನಿಯು ಸಜ್ಜಾಗಿದೆ.
ಫೋಕ್ಸ್ವ್ಯಾಗನ್ ಸಂಸ್ಥೆಯು ಸ್ಕೋಡಾ ಸಹಭಾಗಿತ್ವದಲ್ಲಿ ಇಂಡಿಯಾ 2.0 ಪ್ರೊಜೆಕ್ಟ್ ಯೋಜನೆ ಅಡಿ ಹಲವು ಹೊಸ ಕಾರುಗಳನ್ನು ಭಾರತದಲ್ಲಿ ಬಿಡುಗಡೆ ಮಾಡಲಿದೆ. ಇದರಲ್ಲಿ ಐಷಾರಾಮಿ ಫೀಚರ್ಸ್ ಹೊಂದಿರುವ ಟಿ-ರಾಕ್ ಕೂಡಾ ಒಂದಾಗಿದೆ. ಹೊಸ ಟಿ-ರಾಕ್ ಎಸ್ಯುವಿಯನ್ನು ಮುಂದಿನ ಏಪ್ರಿಲ್ ತಿಂಗಳಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಲಿದೆ. ಇದೀಗ ಹೊಸ ಟಿ-ರಾಕ್ ಎಸ್ಯುವಿಯ ಪ್ರಿ ಬುಕ್ಕಿಂಗ್ ಪ್ರಾರಂಭಿಸಿದೆ.
ಟಿ-ರಾಕ್ ಎಸ್ಯುವಿಯು ಐಷಾರಾಮಿ ಫೀಚರ್ಸ್ಗಳೊಂದಿಗೆ ಪೆಟ್ರೋಲ್ ಎಂಜಿನ್ನಲ್ಲಿ ಮಾತ್ರವೇ ಮಾರಾಟವಾಗಲಿದೆ. ಡೀಸೆಲ್ ಎಂಜಿನ್ನಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳು ಕಡಿಮೆಯಾಗಿದೆ.
ಜರ್ಮನಿ ಮೂಲದ ಫೋಕ್ಸ್ವ್ಯಾಗನ್ ಕಂಪನಿಯಿಂದ ಎಸ್ಯುವಿಯನ್ನು ಆರಂಭದಲ್ಲಿ ಸಿಬಿಯು(ಕಂಪ್ಲೀಟ್ ಬಿಲ್ಟ್ ಯುನಿಟ್) ಮಾರ್ಗದ ಮೂಲಕ ಭಾರತಕ್ಕೆ ಆಮದು ಮಾಡಿಕೊಳ್ಳಲಾಗುವುದು.
ಈ ಎಸ್ಯುವಿಯು ಮುಂಭಾಗದಲ್ಲಿ ಸ್ಲೀಕ್ ಗ್ರಿಲ್ ಅನ್ನು ಹೊಂದಿದೆ. ಮುಂಭಾಗದ ಎರಡೂ ಬದಿಯಲ್ಲಿ ಎಲ್ಇಡಿ ಪ್ರೊಜೆಕ್ಟರ್ ಹೆಡ್ಲ್ಯಾಂಪ್ಗಳನ್ನು ಅಳವಡಿಸಲಾಗಿದೆ. ಈ ಎಸ್ಯುವಿನ ಹೊಸ ಬಂಪರ್ ಅನ್ನು ಹೊಂದಿದ್ದು, ದೊಡ್ಡ ಮೆಡ್ ಗ್ರಿಲ್ ಏರ್ ಇನ್ಟೇಕ್ ಅನ್ನು ಹೊಂದಿದೆ.
ಮುಂಭಾಗದಲ್ಲಿ ಎಲ್ಇಡಿ ಡಿಆರ್ಎಲ್ಗಳನ್ನು ಸಹ ಅಳವಡಿಸಲಾಗಿದೆ. ಹೊಸ ಟಿ-ರಾಕ್ ಎಸ್ಯುವಿನಲ್ಲಿ 5 ಸ್ಪೋಕ್ ಅಲಾಯ್ ವ್ಹೀಲ್, ಹಿಂಭಾಗದಲ್ಲಿ ರೂಫ್-ಮೌಂಟೆಡ್ ಸ್ಪಾಯ್ಲರ್ ಮತ್ತು ಸ್ಲೀಕ್ ಎಲ್ಇಡಿ ಟೈಲ್ ಲೈಟ್ಗಳನ್ನು ಹೊಂದಿದೆ. ಹಿಂಭಾಗದಲ್ಲಿ ಬಂಪರ್ ಮತ್ತು ಸ್ಕಫ್ ಪ್ಲೇಟ್ಗಳನ್ನು ಹೊಂದಿದೆ.
ಹೊಸ ಎಸ್ಯುವಿನಲ್ಲಿ ಫುಲ್ ಎಲ್ಇಡಿ ಹೆಡ್ಲ್ಯಾಂಪ್, ಎಲ್ಇಡಿ ಟೈಲ್ ಲ್ಯಾಂಪ್, 8-ಇಂಚಿನ ಟಚ್ಸ್ಕ್ರೀನ್ ಇನ್ಪೋಟೈನ್ಮೆಂಟ್ ಸಿಸ್ಟಂ, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, ಪನೊರಮಿಕ್ ಸನ್ರೂಫ್ ಸೌಲಭ್ಯಗಳಿವೆ.
ಟಿ-ರಾಕ್ ಎಸ್ಯುವಿಯ ಪ್ರೀಮಿಯಂ ಫೀಚರ್ಸ್ಗಳಾದ ಡ್ಯುಯಲ್ ಟೋನ್ ಅಲಾಯ್ ವೀಲ್ಹ್, ವೆನ್ನಾ ಲೆದರ್ ಸೀಟುಗಳು, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್ ಸೌಲಭ್ಯಗಳಿದೆ. ಇನ್ನು ಪ್ರಯಾಣಿಕರ ಸುರಕ್ಷತೆಗಾಗಿ ಎಬಿಎಸ್ ಜೊತೆ ಇಬಿಡಿ, 6 ಏರ್ಬ್ಯಾಗ್ಗಳು, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ರಿಯರ್ ಪಾರ್ಕಿಂಗ್ ಕ್ಯಾಮೆರಾ ಸೇರಿದಂತೆ ಹಲವು ಪ್ರೀಮಿಯಂ ಸೌಲಭ್ಯಗಳನ್ನು ನೀಡಲಾಗಿದೆ.
ಹೊಸ ಟಿ-ರಾಕ್ ಎಸ್ಯುವಿನಲ್ಲಿ 1.5-ಲೀಟರ್ ಫೋರ್ ಸಿಲಿಂಡರ್ ಟರ್ಬೋ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಿದೆ. ಈ ಎಂಜಿನ್ 150 ಬಿಹೆಚ್ಪಿ ಪವರ್ ಮತ್ತು 340 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ನೊಂದಿಗೆ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್ಬಾಕ್ಸ್ಅನ್ನು ಅಳವಡಿಸಲಾಗಿದೆ.
ಫೋಕ್ಸ್ವ್ಯಾಗನ್ನ ಹೊಸ ಟಿ-ರಾಕ್ ಮಾದರಿಯು ಮಧ್ಯಮ ಗಾತ್ರದ ಎಸ್ಯುವಿ ಸೆಗ್ಮೆಂಟ್ನಲ್ಲಿರಲಿದೆ. ಈ ಎಸ್ಯುವಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಜೀಪ್ ಕಂಪಾಸ್, ಕಿಯಾ ಸೆಲ್ಟೋಸ್ ಮತ್ತು ಮುಂಬರುವ ಸ್ಕೋಡಾ ಕರೋಕ್ ಎಸ್ಯುವಿಗಳಿಗೆ ಪೈಪೋಟಿ ನೀಡಲಿದೆ.