ಮತ್ತಷ್ಟು ತಡವಾಗಲಿದೆ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ ವಿತರಣೆ

ಜರ್ಮನಿಯ ವಾಹನ ತಯಾರಕ ಕಂಪನಿಯಾದ ಫೋಕ್ಸ್‌ವ್ಯಾಗನ್ ಇತ್ತೀಚೆಗೆ ಟಿ-ರಾಕ್ ಎಸ್‍ಯುವಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಈ ಹೊಸ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.19.99 ಲಕ್ಷಗಳಾಗಿದೆ.

ಮತ್ತಷ್ಟು ತಡವಾಗಲಿದೆ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ ವಿತರಣೆ

ಫೋಕ್ಸ್‌ವ್ಯಾಗನ್ ಕಂಪನಿಯು ಸ್ಕೋಡಾ ಸಹಭಾಗಿತ್ವದಲ್ಲಿ ಇಂಡಿಯಾ 2.0 ಯೋಜನೆ ಅಡಿ ಈ ಟಿ-ರಾಕ್ ಎಸ್‍ಯುವಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಟಿ-ರಾಕ್ ಎಸ್‍ಯುವಿಯಲ್ಲಿ ಐಷಾರಾಮಿ ಫೀಚರ್ಸ್ ಹೊಂದಿದೆ. ಫೋಕ್ಸ್‌ವ್ಯಾಗನ್ ಕಂಪನಿಯು ಈ ಎಸ್‍‍ಯುವಿಯನ್ನು 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಿತ್ತು. ಟಿ-ರಾಕ್ ಎಸ್‍ಯುವಿಯ ಯುನಿಟ್ ಗಳು ಡೀಲರ್ ಗಳ ಬಳಿ ತಲುಪಿದೆ.

ಮತ್ತಷ್ಟು ತಡವಾಗಲಿದೆ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ ವಿತರಣೆ

ಭಾರತದಲ್ಲಿ ಟಿ-ರಾಕ್ ಎಸ್‍ಯುವಿಯ 1,000 ಯು‍‍ನಿ‍‍ಟ್‍ಗಳನ್ನು ಬಿಡುಗಡೆಗೊಳಿಸಿದ್ದರು. ಕೇವಲ 40 ದಿನಗಳಲ್ಲಿ ಎಲ್ಲಾ ಯು‍‍ನಿ‍‍ಟ್‍ಗಳು ಮಾರಾಟವಾಗಿದೆ ಎಂದು ವರದಿಗಳು ಪ್ರಕಟವಾಗಿವೆ. ಆದರೆ ಹಲವು ಕಾರಣಗಳಿಂದಾಗಿ ಟಿ-ರಾಕ್ ಎಸ್‍ಯುವಿಯ ವಿತರಣೆಯು ವಿಳಂಬವಾಗಿದೆ.

MOST READ: ಹೊಸ ಹೋಂಡಾ ಸಿಟಿ ಕಾರಿನ ಟೀಸರ್ ಬಿಡುಗಡೆ

ಮತ್ತಷ್ಟು ತಡವಾಗಲಿದೆ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ ವಿತರಣೆ

ಕೆಲವು ವರದಿಗಳ ಪ್ರಕಾರ ಈ ಹೊಸ ಟಿ-ರಾಕ್ ಎಸ್‍ಯುವಿಯು ಇನ್ನು ಕೂಡ ಎಆರ್‌ಎಐ ಪ್ರಮಾಣೀಕರಣವನ್ನು ಸ್ವೀಕರಿಸಿಲ್ಲ. ರಾಷ್ಟ್ರವ್ಯಾಪಿ ಲಾಕ್‌ಡೌನ್ ಆಗಿರುವುದರಿಂದ ಇದು ವಿಳಂಬವಾಗಿದೆ. ಇನ್ನು ಪ್ರಮಾಣೀಕರಣವನ್ನು ಪಡೆಯಲು ಕೆಲವು ಕಿ.ಮೀಗಳಷ್ಟು ಟೆಸ್ಟ್ ಗಳನ್ನು ನಡೆಸಬೇಕು. ಹೀಗೆ ಕೆಲವು ಪ್ರಕಿಯೆಗಳ ನಂತರ ಎಆರ್‌ಎಐ ಪ್ರಮಾಣೀಕರಣ ಪಡೆದು ವಿತರಣೆಯನ್ನು ಪ್ರಾರಂಭಿಸಬಹುದು.

ಮತ್ತಷ್ಟು ತಡವಾಗಲಿದೆ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ ವಿತರಣೆ

ಈ ಹೊಸ ಟಿ-ರಾಕ್ ಎಸ್‍ಯುವಿಯು ಆಕರ್ಷಕ ಲುಕ್ ಅನ್ನು ಹೊಂದಿದೆ. ಈ ಎಸ್‍‍ಯುವಿಯು ಮುಂಭಾಗದಲ್ಲಿ ಸ್ಲೀಕ್ ಗ್ರಿಲ್ ಅನ್ನು ಹೊಂದಿದೆ. ಮುಂಭಾಗದ ಎರಡೂ ಬದಿಯಲ್ಲಿ ಎಲ್‍ಇಡಿ ಪ್ರೊಜೆಕ್ಟರ್ ಹೆಡ್‍‍ಲ್ಯಾಂಪ್‍‍ಗಳನ್ನು ಅಳವಡಿಸಲಾಗಿದೆ. ಈ ಎಸ್‍‍ಯುವಿನ ಹೊಸ ಬಂಪರ್ ಅನ್ನು ಹೊಂದಿದ್ದು, ದೊಡ್ಡ ಮೆಡ್ ಗ್ರಿಲ್ ಏರ್ ಇನ್‍‍ಟೇಕ್ ಅನ್ನು ಹೊಂದಿದೆ.

MOST READ: ಇತಿಹಾಸದ ಪುಟ ಸೇರಿದ ಫೋಕ್ಸ್‌ವ್ಯಾಗನ್ ಎಮಿಯೊ ಕಾರು

ಮತ್ತಷ್ಟು ತಡವಾಗಲಿದೆ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ ವಿತರಣೆ

ಈ ಎಸ್‍‍ಯುವಿಯ ಮುಂಭಾಗದಲ್ಲಿ ಎಲ್‍ಇ‍ಡಿ ಡಿಆರ್‍ಎಲ್‍ಗಳನ್ನು ಸಹ ಅಳವಡಿಸಲಾಗಿದೆ. ಹೊಸ ಟಿ-ರಾಕ್ ಎಸ್‍‍ಯುವಿನಲ್ಲಿ 5 ಸ್ಪೋಕ್ ಅಲಾಯ್ ವ್ಹೀಲ್, ಹಿಂಭಾಗದಲ್ಲಿ ರೂಫ್-ಮೌಂಟೆಡ್ ಸ್ಪಾಯ್ಲರ್ ಮತ್ತು ಸ್ಲೀಕ್ ಎಲ್‍ಇಡಿ ಟೈಲ್‍ ಲೈಟ್‍‍‍ಗಳನ್ನು ಹೊಂದಿದೆ. ಹಿಂಭಾಗದಲ್ಲಿ ಬಂಪರ್ ಮತ್ತು ಸ್ಕಫ್ ಪ್ಲೇಟ್‍‍ಗಳನ್ನು ಹೊಂದಿದೆ.

ಮತ್ತಷ್ಟು ತಡವಾಗಲಿದೆ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ ವಿತರಣೆ

ಟಿ-ರಾಕ್ ಎಸ್‍‍ಯುವಿಯ ಪ್ರೀಮಿಯಂ ಫೀಚರ್ಸ್‌ಗಳಾದ ಡ್ಯುಯಲ್ ಟೋನ್ ಅಲಾಯ್ ವೀಲ್ಹ್, ವೆನ್ನಾ ಲೆದರ್ ಸೀಟುಗಳು, ಫ್ರಂಟ್ ಆ್ಯಂಡ್ ರೇರ್ ಪಾರ್ಕಿಂಗ್ ಸೆನ್ಸಾರ್ ಸೌಲಭ್ಯಗಳಿದೆ. ಇನ್ನು ಪ್ರಯಾಣಿಕರ ಸುರಕ್ಷತೆಗಾಗಿ ಎಬಿಎಸ್ ಜೊತೆ ಇಬಿಡಿ, 6 ಏರ್‌ಬ್ಯಾಗ್‌ಗಳು, ಟಯರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ರೇರ್ ಪಾರ್ಕಿಂಗ್ ಕ್ಯಾಮೆರಾ ಸೇರಿದಂತೆ ಹಲವು ಪ್ರೀಮಿಯಂ ಸೌಲಭ್ಯಗಳನ್ನು ನೀಡಲಾಗಿದೆ.

ಮತ್ತಷ್ಟು ತಡವಾಗಲಿದೆ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ ವಿತರಣೆ

ಹೊಸ ಟಿ-ರಾಕ್ ಎಸ್‍‍ಯುವಿನಲ್ಲಿ 1.5-ಲೀಟರ್ 4 ಸಿಲಿಂಡರ್ ಟರ್ಬೋ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಿದೆ. ಈ ಎಂಜಿನ್ 148 ಬಿ‍ಹೆಚ್‍ಪಿ ಪವರ್ ಮತ್ತು 250 ಎನ್‍‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍‍ನೊಂದಿಗೆ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಅನ್ನು ಅಳವಡಿಸಲಾಗಿದೆ.

ಮತ್ತಷ್ಟು ತಡವಾಗಲಿದೆ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ ವಿತರಣೆ

ಈ ಎಸ್‍ಯುವಿ ದೇಶಿಯ ಮಾರುಕಟ್ಟೆಯಲ್ಲಿ ಜೀಪ್ ಕಂಪಾಸ್, ಕಿಯಾ ಸೆಲ್ಟೋಸ್ ಮತ್ತು ಸ್ಕೋಡಾ ಕರೋಕ್ ಎಸ್‍‍ಯುವಿಗಳಿಗೆ ಪೈಪೋಟಿ ನೀಡಲಿದೆ. ಫೋಕ್ಸ್‌ವ್ಯಾಗನ್‍ನ ಹೊಸ ಟಿ-ರಾಕ್ ಮಾದರಿಯು ಮಿಡ್ ಎಸ್‍‍ಯುವಿ ಸೆಗ್‍‍ಮೆಂಟ್‍‍ ಆಗಿದೆ.

Most Read Articles

Kannada
English summary
Volkswagen T-Roc Deliveries Delayed In India. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X