ಅನಾವರಣವಾಯ್ತು ಹೊಸ ಫೋಕ್ಸ್‌ವ್ಯಾಗನ್ ಟಿಗ್ವಾನ್ ಫೇಸ್‍ಲಿಫ್ಟ್ ಎಸ್‍ಯುವಿ
ಫೋಕ್ಸ್‌ವ್ಯಾಗನ್ ಕಂಪನಿಯು ತನ್ನ ಹೊಸ ಟಿಗ್ವಾನ್ ಫೇಸ್‍ಲಿಫ್ಟ್ ಎಸ್‍ಯುವಿಯನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಿದೆ. ಟಿಗ್ವಾನ್ ಮಾದರಿಯು ಫೋಕ್ಸ್‌ವ್ಯಾಗನ್ ಕಂಪನಿಯ ಸರಣಿಯಲ್ಲಿರುವ ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ.

ಟಿಗ್ವಾನ್ ಎಸ್‍ಯುವಿಯನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ 2007ರಲ್ಲಿ ಮೊದಲ ಬಾರಿಗೆ ಅನಾವರಣಗೊಳಿಸಿದರು. ಹಿಂದಿನ ಮಾದರಿ ಟಿಗ್ವಾನ್ ಎಸ್‍ಯುವಿಯು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದಾಗ 6 ದಶಲಕ್ಷಕ್ಕೂ ಹೆಚ್ಚಿನ ಯುನಿಟ್ ಗಳು ಮಾರಾಟವಾಗಿತ್ತು. ಇನ್ನು ಈ ಹೊಸ ಟಿಗ್ವಾನ್ ಫೇಸ್‍ಲಿಫ್ಟ್ ಎಸ್‍ಯುವಿಯ ಮುಂಭಾಗದಲ್ಲಿ ನವೀಕರಿಸಿದ ಗ್ರಿಲ್ ಅನ್ನು ಅಳವಡಿಸಿದ್ದಾರೆ. ಇನ್ನು ಏರ್ ಡ್ಯಾಮ್ ಜೊತೆ ಸ್ಪೋರ್ಟಿಯರ್ ಫ್ರಂಟ್ ಬಂಪರ್ ಅನ್ನು ಸಹ ಹೊಂದಿದೆ.

ಈ ಹೊಸ ಎಸ್‍ಯುವಿಯಲ್ಲಿ ಹೊಸ ಟೈಲ್ ಲೈಟ್, ಮರುವಿನ್ಯಾಸಗೊಳಿಸಿದ ವ್ಹೀಲ್ ಗಳು ಮತ್ತು ಹಿಂಭಾಗದಲ್ಲಿ ನವೀಕರಿಸಿದ ಬಂಪರ್ ಅನ್ನು ಅಳವಡಿಸಲಾಗಿದೆ. ಇನ್ನು ಟಿಗ್ವಾನ್ ಬ್ಯಾಡ್ಜಿಂಗ್ ಅನ್ನು ಟೈಲ್‌ಗೇಟ್‌ನ ಮಧ್ಯಭಾಗಕ್ಕೆ ಸ್ಥಳಾಂತರಿಸಲಾಗಿದೆ. ಈ ಎಸ್‍ಯುವಿಯ ಹಿಂಭಾಗದಲ್ಲಿ ಹೆಚ್ಚುವರಿ ಕ್ರೋಮ್ ಬಿಟ್‌ಗಳನ್ನು ಅಳವಡಿಸಲಾಗಿದೆ.
MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ

ಇನ್ನು ಟಿಗ್ವಾನ್ ಫೇಸ್‍ಲಿಫ್ಟ್ ಎಸ್‍ಯುವಿಯ ಇಂಟಿರಿಯರ್ ನಲ್ಲಿ ಕೂಡ ಹಲವಾರು ಬದಲಾವಣೆಗಳನ್ನು ಮಾಡಲಾಗಿದೆ. ಈ ಟಿಗ್ವಾನ್ ಎಸ್‍ಯುವಿಯಲ್ಲಿ ಇನ್ಫೋಟೈನ್‌ಮೆಂಟ್ ಸಿಸ್ಟಂನ ಇತ್ತೀಚಿನ ಆವೃತ್ತಿ ಮತ್ತು ದೊಡ್ಡ ಟಚ್‌ಸ್ಕ್ರೀನ್‌ಗಳನ್ನು ಒಳಗೊಂಡಿದೆ.

ಫೋಕ್ಸ್‌ವ್ಯಾಗನ್ ಟಿಗ್ವಾನ್ ಫೇಸ್‍ಲಿಫ್ಟ್ ಎಸ್‍ಯುವಿಯಲ್ಲಿ ಲೈವ್ ಟ್ರಾಫಿಕ್ ಡೇಟಾ ಮತ್ತು ಹಲವಾರು ಅಪ್ಲಿಕೇಶನ್ ಆಧಾರಿತ ಕನೆಕ್ಟಿವಿಟಿ ಫೀಚರ್ ಗಳನ್ನು ಹೊಂದಿದೆ. ಇನ್ನು ವೈರ್‌ಲೆಸ್ ಆಪಲ್ ಕಾರ್‌ಪ್ಲೇ ಅನ್ನು ಸಹ ನೀಡಲಾಗಿದೆ. ಇದರೊಂದಿಗೆ 10.0-ಇಂಚಿನ ಡಿಜಿಟಲ್ ಡಯಲ್ ಸ್ಕ್ರೀನ್ ಅನ್ನು ಹೊಂದಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಫೋಕ್ಸ್‌ವ್ಯಾಗನ್ ಟಿಗ್ವಾನ್ ಫೇಸ್‍ಲಿಫ್ಟ್ ಎಸ್‍ಯುವಿಯಲ್ಲಿ ಸೆಂಟರ್ ಕನ್ಸೋಲ್‌ನಲ್ಲಿ ಯುಎಸ್‌ಬಿ-ಸಿ ಪೋರ್ಟ್‌ಗಳು, ಹೊಸ ಬಹು-ಬಣ್ಣದ ಆಂಬಿಯೆಂಟ್ ಲೈಟಿಂಗ್ ಮತ್ತು ಕ್ಲೈಮೆಂಟ್ ಕಂಟ್ರೋಲ್ ಅನ್ನು ಹೂಂದಿದೆ.

ಹೊಸ ಟಿಗ್ವಾನ್ ಫೇಸ್‍ಲಿಫ್ಟ್ ಎಸ್‍ಯುವಿಯಲ್ಲಿ ಸ್ಪೋರ್ಟ್ಸ್ ಸ್ಟೀಯರಿಂಗ್ ವ್ಹೀಲ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಸ್ಟಿರಿಯೊ ಅಪ್‌ಗ್ರೇಡ್ ಮಾಡಿದ 480ಡಬ್ಲ್ಯು, 10-ಸ್ಪೀಕರ್ ಹರ್ಮನ್ ಕಾರ್ಡನ್ ಸಿಸ್ಟಂ ಅನ್ನು ಹೊಂದಿದೆ.
MOST READ: ಇತಿಹಾಸದ ಪುಟ ಸೇರಿದ ಫೋಕ್ಸ್‌ವ್ಯಾಗನ್ ಎಮಿಯೊ ಕಾರು

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗುವ ಟಿಗ್ವಾಸ್ ಎಸ್‍ಯುವಿಯಲ್ಲಿ 2.0-ಲೀಟರ್, 4-ಸಿಲಿಂಡರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 184 ಬಿಹೆಚ್‍ಪಿ ಪವರ್ ಮತ್ತು 300 ಎನ್‌ಎಂ ಉತ್ಪಾದಿಸುತ್ತದೆ. ಇನ್ನು ಪ್ಲಗ್-ಇನ್ ಹೈಬ್ರಿಡ್ ರೂಪಾಂತರವು 241 ಬಿಹೆಚ್‍ಪಿ ಪವರ್ ಉತ್ಪಾದಿಸುತ್ತದೆ.

ಈ ಹೊಸ ಟಿಗ್ವಾನ್ ಫೇಸ್‍ಲಿಫ್ಟ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಭಾರತೀಯ ಮಾರುಕಟ್ಟೆಯಲ್ಲಿ ಫ್ರಂಟ್-ವೀಲ್ ಡ್ರೈವ್ ಆಯ್ಕೆಯಲ್ಲಿ ಮಾತ್ರ ಈ ಎಸ್‍ಯುವಿ ಬಿಡುಗಡೆಯಾಗಲಿದೆ. ಭಾರತದಲ್ಲಿ ಟಿಗ್ವಾನ್ ಫೇಸ್‍ಲಿಫ್ಟ್ ಎಸ್‍ಯುವಿಯನ್ನು ಸ್ಮರ್ಧಾತ್ಮಕ ಬೆಲೆಯಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ.


Click it and Unblock the Notifications








