ಹೊಸ ಹೋಂಡಾ ಸಿಟಿ ಕಾರಿನ ಟೀಸರ್ ಚಿತ್ರ ಬಿಡುಗಡೆ

ಹೋಂಡಾ ಇಂಡಿಯಾ ಕಂಪನಿಯು ಹೊಸ ಹೋಂಡಾ ಸಿಟಿ ಕಾರಿನ ಟೀಸರ್ ಚಿತ್ರವನ್ನು ಬಿಡುಗಡೆಗೊಳಿಸಿದೆ. ಹೋಂಡಾ ಕಂಪನಿಯು ತನ್ನ ಬಹುನಿರೀಕ್ಷಿತ ಹೊಸ ಸಿಟಿ ಕಾರನ್ನು ಭಾರತದಲ್ಲಿ ಮುಂದಿನ ತಿಂಗಳಲ್ಲಿ ಬಿಡುಗಡೆಗೊಳಿಸಲಿದೆ.

ಹೊಸ ಹೋಂಡಾ ಸಿಟಿ ಕಾರಿನ ಟೀಸರ್ ಚಿತ್ರ ಬಿಡುಗಡೆ

ಹೊಸ ಹೋಂಡಾ ಟೀಸರ್ ಚಿತ್ರದಲ್ಲಿ ಸಿಟಿ ಕಾರು ಎಲ್‍ಇಡಿ ಹೆಡ್‍‍ಲೈಟ್ ಅನ್ನು ಹೊಂದಿದೆ. ಇದು ಥಾಯ್ ಸ್ಪೆಕ್ ಮಾದರಿಯಲ್ಲಿರುವ ಎಲ್‍ಇಡಿ ಹೆಡ್‍‍‍ಲೈಟ್ ಮಾದರಿಯಂತಿದೆ. ಹೋಂಡಾ ಕಂಪನಿಯು ಭಾರತದಲ್ಲಿ ಇತ್ತೀಚಿಗೆ ತನ್ನ ಸಿಟಿ ಸೆಡಾನ್ ಅನ್ನು ಸ್ಪಾಟ್ ಟೆಸ್ಟ್ ಮಾಡಿದೆ. ಹೋಂಡಾ ಸಿಟಿ ಸ್ಪಾಟ್ ಟೆಸ್ಟ್ ನಲ್ಲಿ ಹಲವಾರು ಪ್ರಮುಖ ಮಾಹಿತಿಗಳು ಬಹಿರಂಗವಾಗಿದೆ. ಹೋಂಡಾ ಸಿಟಿ ಮಾದರಿಯು ಹೋಂಡಾ ಕಂಪನಿಯ ಸರಣಿಯ ಕಾರುಗಳಲ್ಲಿ ಹಲವು ವರ್ಷಗಳಿಂದ ಹೆಚ್ಚು ಮಾರಾಟವಾಗುವ ಕಾರು ಆಗಿದೆ.

ಹೊಸ ಹೋಂಡಾ ಸಿಟಿ ಕಾರಿನ ಟೀಸರ್ ಚಿತ್ರ ಬಿಡುಗಡೆ

ಹೋಂಡಾ ಕಂಪನಿಯು ಕಳೆದ ವರ್ಷದ ನವೆಂಬರ್ ತಿಂಗಳಲ್ಲಿ ಥಾಯ್‍‍ಲ್ಯಾಂಡ್‍ನ 2019ರ ಥಾಯ್ ಮೋಟಾರ್ ಎಕ್ಸ್ ಪೋದಲ್ಲಿ ತನ್ನ ಹೊಸ ಸಿಟಿ ಕಾರನ್ನು ಜಾಗತಿಕವಾಗಿ ಬಿಡುಗಡೆಗೊಳಿಸಿತ್ತು.

ಹೊಸ ಹೋಂಡಾ ಸಿಟಿ ಕಾರಿನ ಟೀಸರ್ ಚಿತ್ರ ಬಿಡುಗಡೆ

ಹೊಸ ಸಿಟಿ ಕಾರು ಹಿಂದಿನ ತಲೆಮಾರಿನ ಕಾರ್ ಗಿಂತ ದೊಡ್ಡದಾಗಿದೆ. ಈ ಸೆಗ್‍‍ಮೆಂಟ್‍‍ನಲ್ಲಿ 2020ರ ಸಿಟಿ 4553 ಎಂಎಂ ಉದ್ದವನ್ನು ಹೊಂದಿರುವ ಅತಿ ಉದ್ದದ ಕಾರ್ ಆಗಿದೆ.

ಹೊಸ ಹೋಂಡಾ ಸಿಟಿ ಕಾರಿನ ಟೀಸರ್ ಚಿತ್ರ ಬಿಡುಗಡೆ

ಪ್ರಸುತ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿರುವ ಕಾರಗಳಾದ ಸಿಟಿ 4440 ಎಂಎಂ, ವರ್ನಾ 4440 ಎಂಎಂ ಮತ್ತು ಸಿಯಾಜ್ 4490 ಎಂಎಂ ಉದ್ದವನ್ನು ಹೊಂದಿವೆ. ಹೊಸ ಹೋಂಡಾ ಸಿಟಿ ಕಾರು ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಹೋಂಡಾ ಸಿವಿಕ್ ಮಾದರಿಯ ವಿನ್ಯಾಸವನ್ನು ಹೊಂದಿರಲಿದೆ.

ಹೊಸ ಹೋಂಡಾ ಸಿಟಿ ಕಾರಿನ ಟೀಸರ್ ಚಿತ್ರ ಬಿಡುಗಡೆ

ಹೊಸ ಹೋಂಡಾ ಸಿಟಿ ಶಾರ್ಪರ್ ಹೆಡ್‍‍ಲ್ಯಾಂಪ್‍‍ಗಳನ್ನು ಹೊಂದಿರಲಿದೆ. ಇನ್ನೂ ಈ ಕಾರಿನ ಮುಂಭಾಗ ಮತ್ತು ಹಿಂಭಾಗದಲ್ಲಿ ಎಲ್‍ಇಡಿ ಯು‍‍ನಿ‍ಟ್‍‍ಗಳು, ಹೋಂಡಾ ಸಿಗ್ನೇಚರ್ ಕ್ರೋಮ್ ಬಾರ್, ಕೂಪ್ ಸ್ಟೈಲ್ ಸ್ಲೋಪಿಂಗ್ ರೂಫ್‍‍ಲೈನ್ ಮತ್ತು ದೊಡ್ಡ ಒ‍ಆರ್‍‍ವಿಎಂ‍ಗಳಿವೆ.

ಹೊಸ ಹೋಂಡಾ ಸಿಟಿ ಕಾರಿನ ಟೀಸರ್ ಚಿತ್ರ ಬಿಡುಗಡೆ

ಇನ್ನೂ ಹೊಸ ಹೋಂಡಾ ಕಾರಿನಲ್ಲಿ ಶಾರ್ಕ್ ಫಿನ್ ಆಂಟೆನಾ, ಟೇಲ್ ಸೆಗ್‍ಮೆಂಟ್ ಮತ್ತು ಉತ್ತಮವಾದ ಬೂಟ್ ಲಿ‍ಡ್‍‍‍ಗಳಿವೆ. ಹೊಸ ಹೋಂಡಾ ಸಿಟಿ ಕಾರಿನ ಇಂಟಿರಿಯರ್‍‍ನಲ್ಲಿ ಡ್ಯುಯಲ್ ಟೋನ್ ಸಿಸ್ಟಂ, ಹೊಂದಾಣಿಕೆ ಮಾಡಬಹುದಾದ ಹಿಂಭಾಗದ ಹೆಡ್‍‍‍ರೆಸ್ಟ್, ಡಿಜಿ‍ಟಲ್ ಇನ್ಸ್ ಟ್ರೂ‍‍ಮೆಂಟ್ ಕನ್ಸೋಲ್, ಹೊಸ ಟಚ್‍‍ಸ್ಕ್ರೀನ್ ಇನ್ಪೋಟೇನ್‍‍ಮೆಂಟ್ ಸಿಸ್ಟಂ ಅನ್ನು ಅಳವಡಿಸಲಾಗಿದೆ.

ಹೊಸ ಹೋಂಡಾ ಸಿಟಿ ಕಾರಿನ ಟೀಸರ್ ಚಿತ್ರ ಬಿಡುಗಡೆ

ಎಂಜಿ ಹೆಕ್ಟರ್ ಮತ್ತು ಕಿಯಾ ಸೆಲ್ಟೋಸ್‍‍ನಲ್ಲಿ ಕಂಡುಬರುವ ಕನೆಕ್ಟಿವಿಟಿ ತಂತ್ರಜ್ಞಾನಗಳನ್ನು ಅಳವಡಿಸುವ ಸಾಧ್ಯತೆಗಳಿವೆ. ಹೋಂಡಾ ಸಂಸ್ಥೆಯು ಭಾರತ ಸೇರಿದಂತೆ ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ತನ್ನ ಜನಪ್ರಿಯ ಸಿಟಿ ಸೆಡಾನ್ ಕಾರ್ ಅನ್ನು ಬಿಡುಗಡೆಗೊಳಿಸಲಿದೆ.

ಹೊಸ ಹೋಂಡಾ ಸಿಟಿ ಕಾರಿನ ಟೀಸರ್ ಚಿತ್ರ ಬಿಡುಗಡೆ

2020ರ ಹೋಂಡಾ ಸಿಟಿ ಕಾರು 1 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ 122 ಬಿ‍‍ಹೆಚ್‍ಪಿ ಪವರ್ ಮತ್ತು 173 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಹೊಸ ಹೋಂಡಾ ಸಿಟಿ ಕಾರಿನ ಟೀಸರ್ ಚಿತ್ರ ಬಿಡುಗಡೆ

ಹೊಸ ಸಿಟಿ ಕಾರು 1.5 ಲೀಟರ್ ಐ-ವಿಟಿಇಸಿ ಬಿಎಸ್ 6 ಪೆಟ್ರೋಲ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 100 ಬಿ‍‍ಹೆಚ್‍‍ಪಿ ಪವರ್ ಮತ್ತು 200 ಎನ್‍‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಜೊತೆಗೆ 1.5 ಲೀಟರ್ ಡೀಸೆಲ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 117 ಬಿ‍‍ಹೆಚ್‍‍ಪಿ ಪವರ್ ಮತ್ತು 145 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍‍ಗಳೊಂದಿಗೆ 6 ಸ್ಪೀಡ್ ಮ್ಯಾನುವಲ್ ಮತ್ತು ಸಿವಿ‍ಟಿ ಆಟೋಮ್ಯಾಟಿಕ್ ಗೇರ್‍‍‍ಬಾಕ್ಸ್ ಹೊಂದಿರುತ್ತದೆ.

ಹೊಸ ಹೋಂಡಾ ಸಿಟಿ ಕಾರಿನ ಟೀಸರ್ ಚಿತ್ರ ಬಿಡುಗಡೆ

ಹೊಸ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ಈ ಕಾರಿನ ಎಂಜಿನ್ ಅನ್ನು ಅಭಿವೃದ್ಧಿಪಡಿಸಲಾಗಿದೆ. ಹೋಂಡಾ ಸಿಟಿ ಕಾರು ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಮಾರುತಿ ಸಿಯಾಜ್, ಟೊಯೊಟಾ ಯಾರಿಸ್ ಮತ್ತು ಹ್ಯುಂಡೈ ವರ್ನಾ ಕಾರುಗಳಿಗೆ ಪೈಪೋಟಿ ನೀಡುತ್ತದೆ.

Article Published On: Wednesday, February 12, 2020, 16:10 [IST]
English summary
2020 Honda City LED headlights teased. Read in Kannada.
Read more on ಹೋಂಡಾ honda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+