Just In
- 11 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 12 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 14 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 15 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Movies Neha Murder Case: ನೇಹಾ ಹತ್ಯೆ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡಬೇಕು ಎಂದು ಸಿನಿಮಾ ತಾರೆಯರ ಆಗ್ರಹ
- Technology Earbuds: 2000 ರೂ. ಒಳಗೆ ಲಭ್ಯ ಇರುವ ಅತ್ಯುತ್ತಮ ಇಯರ್ಬಡ್ಸ್! ಸಖತ್ ಫೀಚರ್ಸ್...
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡೀಲರ್ ಬಳಿ ಕಾಣಿಸಿಕೊಂಡ ಹೊಸ ಹ್ಯುಂಡೈ ಐ20 ಕಾರು
ಹೊಸ ಹ್ಯುಂಡೈ ಐ20 ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಲ್ಲಿ ಒಂದಾಗಿದೆ. ಜನಪ್ರಿಯ ಕಾರು ತಯಾರಕ ಕಂಪನಿಯಾದ ಹ್ಯುಂಡೈ ತನ್ನ ಮೂರನೇ ತಲೆಮಾರಿನ ಐ20 ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಇದೇ ತಿಂಗಳ ಅಂತ್ಯದಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿದೆ.
ಹೊಸ ತಲೆಮಾರಿನ ಐ20 ಕಾರು ಭಾರತದಲ್ಲಿ ಹಲವು ಬಾರಿ ಸ್ಪಾಟ್ ಟೆಸ್ಟ್ ನಡೆಸಿದೆ. ಆಯ್ದ ಹ್ಯುಂಡೈ ಡೀಲರುಗಳೂ ಈಗಗಾಲೇ ಹೊಸ ಐ20 ಕಾರಿಗಾಗಿ ಬುಕ್ಕಿಂಗ್ ಸ್ವೀಕರಿಸಲು ಪ್ರಾರಂಭವಾಗಿದೆ. ವರದಿಗಳ ಪ್ರಕಾರ, ಹೊಸ ಹ್ಯುಂಡೈ ಐ20 ಕಾರು ಮ್ಯಾಗ್ನಾ, ಸ್ಪೋರ್ಟ್ಜ್, ಅಸ್ಟಾ ಮತ್ತು ಅಸ್ಟಾ (ಒ) ಎಂಬ ನಾಲ್ಕು ವೆರಿಯೆಂಟ್ ಗಳಲ್ಲಿ ಲಭ್ಯವಿರಲಿದೆ. ಹೊಸ ಹ್ಯುಂಡೈ ಐ20 ಕಾರು ಈಗಗಾಲೇ ಡೀಲರುಗಳ ಬಳಿ ತಲುಪಲು ಪ್ರಾರಂಭವಾಗಿದೆ. ಇದರ ಸ್ಪೈ ಚಿತ್ರಗಳು ಬಹಿರಂಗವಾಗಿವೆ.
ಹೊಸ ಹ್ಯುಂಡೈ ಐ20 ಕಾರಿನ ಮುಂಭಾಗದಲ್ಲಿರು ಕ್ಯಾಸ್ಕೇಡಿಂಗ್ ಗ್ರಿಲ್ ಅನ್ನು ಹೊಂದಿದೆ. ಹಿಂದಿನ ಐ20 ಮಾದರಿಗೆ ಹೋಲಿಸಿದರೆ ಹೆಡ್ ಲ್ಯಾಂಪ್ ಮತ್ತು ಸೈಡ್ ಫ್ರೋಪೈಲ್ ವಿನ್ಯಾಸವನ್ನು ನವೀಕರಿಸಲಾಗಿದೆ ದೊಡ್ಡ ಕ್ರೀಸ್ ಲೈನ್ ಗಳನ್ನು ಒಳಗೊಂಡಿದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು
ಹೊಸ ಹುಂಡೈ ಐ20 ಕಾರಿನ ಪಿಲ್ಲರ್ಗಳು ಬ್ಲ್ಯಾಕ್ ಬಣ್ಣವನ್ನು ಹೊಂದಿದೆ. ವಿಡಬ್ಲ್ಯೂ ಟೈಗನ್ನಲ್ಲಿ ಇರುವಂತಹ ಕೆಂಪು ಇಲ್ಇಡಿ ಡಿಆರ್ಎಲ್ ಸ್ಟಾಪ್ ಲೈಟ್ ಹಿಂಭಾಗದಲ್ಲಿ ಇಲ್ಇಡಿ ಟೇಲ್ಲೈಟ್ ಹೊಂದಿದೆ. ಇನ್ನು ಹೊಸ ಹ್ಯುಂಡೈ ಕಾರಿನ ಇಂಟಿರಿಯರ್ನಲ್ಲಿ 4 ಸ್ಫೋಕ್ ಸ್ಟೀಟಿಯರಿಂಗ್ ವ್ಹೀಲ್ ಅನ್ನು ಅಳವಡಿಸಲಾಗಿದೆ.
ಹೊಸ ಹ್ಯುಂಡೈ ಕ್ರೆಟಾ ಕಾರಿನಲ್ಲಿರುವ ಸ್ಟಿಟಿಯರಿಂಗ್ ಮಾದರಿಯಲ್ಲಿದೆ. ಹೊಸ ಹ್ಯುಂಡೈ ಐ20 ಕಾರಿನಲ್ಲಿ ಬೋಸ್ ಸೌಂಡ್ ಸಿಸ್ಟಂ, ಕ್ರೂಸ್ ಕಂಟ್ರೋಲ್ ಮತ್ತು ದೊಡ್ಡ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ ಅನ್ನು ಒಳಗೊಂಡಿದೆ. ಇದರೊಂದಿಗೆ ಬ್ಲೂ ಲಿಂಕ್ ಟೆಕ್ನಾಲಜಿಯನ್ನು ಕೂಡ ಹೊಂದಿರಲಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ
ಈ ಹೊಸ ಕಾರಿನಲ್ಲಿ ಸನ್ರೂಫ್ ಮತ್ತು ಡಿಜಿಟಲ್ ಕ್ಲಸ್ಟರ್ ಅನ್ನು ಅಳವಡಿಸಲಾಗಿದೆ. ಈ ಕಾರಿನ ಇಂಟಿರಿಯರ್ನಲ್ಲಿ ಆ್ಯಪಲ್ ಕಾರ್ಪ್ಲೇ ಮತ್ತು ಆಂಡ್ರಾಯ್ಡ್ ಆಟೋ, ಹ್ಯುಂಡೈನ ಕನೆಕ್ಟಿವಿಟಿ ಸೂಟ್ ಮತ್ತು ಇತರ ಹಲವಾರು ಫೀಚರ್ಗಳನ್ನು ಹೊಂದಿದೆ. ಯುಎಸ್ಬಿ ಪೋರ್ಟ್ ಮತ್ತು ವೈರ್ಲೆಸ್ ಚಾರ್ಜಿಂಗ್ ಪ್ಯಾಡ್ ಅನ್ನು ಸಹ ಹೊಂದಿರಲಿದೆ.
ಹೊಸ ಹ್ಯುಂಡೈ ಐ20 ಕಾರು ಮೂರು ಎಂಜಿನ್ ಆಯ್ಕೆಗಳನ್ನು ಹೊಂದಿರಲಿದೆ. ಇದರಲ್ಲಿ 1.2ಎಲ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 82 ಬಿಹೆಚ್ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಅನ್ನು ಹೊಂದಿರುತ್ತದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್
ಇದರೊಂದಿಗೆ 1.0ಎಲ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ 99 ಬಿಹೆಚ್ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಸ್ಪೀಡ್ ಡ್ಯುಯಲ್-ಕ್ಲಚ್ ಆಟೋಮ್ಯಾಟಿಕ್ ಮತ್ತು ಐಎಂಟಿ (ಇಂಟೆಲಿಜೆಂಟ್ ಮ್ಯಾನುಯಲ್ ಗೇರ್ ಬಾಕ್ಸ್ ಅನ್ನು ಹೊಂದಿರಲಿದೆ.
ಇನ್ನು 1.5ಎಲ್ ಡೀಸೆಲ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 99 ಬಿಹೆಚ್ಪಿ ಪವರ್ ಅನ್ನು ಉತ್ಪಾದಿಸಬಹುದು. ಈ ಎಂಜಿನ್ ನೊಂದಿಗೆ ಮ್ಯಾನುವಲ್ ಗೇರ್ ಬಾಕ್ಸ್ ಅನ್ನು ಅಳವಡಿಸಬಹುದು ಎಂದು ನಿರೀಕ್ಷಿಸುತ್ತೇವೆ.
ಹೊಸ ಹ್ಯುಂಡೈ ಐ20 ಕಾರಿನಲ್ಲಿ ಹೊಸ 16 ಡ್ಯುಯಲ್ ಟೋನ್ ಅಲಾಯ್ ವ್ಹೀಲ್ಗಳು, ಇಂಟಿಗ್ರೇಟೆಡ್ ಟರ್ನ್ ಇಂಡಿಕೇಟರ್ಗಳೊಂದಿಗೆ ಸ್ಲಿಕ್ ಒಆರ್ವಿಎಂಗಳು ಮತ್ತು ಶಾರ್ಕ್ ಫಿನ್ ಆಂಟೆನಾವನ್ನು ಕೂಡ ಆಳವಡಿಸಲಾಗಿದೆ. ಹೊಸ ಹ್ಯುಂಡೈ ಐ20 ಹಲವಾರು ಹೊಸ ಫೀಚರ್ ಗಳೊಂದಿಗೆ ನಯ ಲುಕ್ ಬಿಡುಗಡೆಯಾಗುವುದರಿದರಿಂದ ಭಾರತೀಯ ಮಾರುಕಟ್ಟೆಯಲ್ಲಿ ಮತ್ತಷ್ಟು ಗ್ರಾಹಕರನ್ನು ಸೆಳೆಯಬಹುದು ಎಂದು ನಿರೀಕ್ಷಿಸುತ್ತೇವೆ