ಹೊಸ ಹ್ಯುಂಡೈ ಐ20 ಕಾರಿನ ವೆರಿಯೆಂಟ್ ಮಾಹಿತಿ ಬಹಿರಂಗ

ಜನಪ್ರಿಯ ಕಾರು ತಯಾರಕ ಕಂಪನಿಯಾದ ಹ್ಯುಂಡೈ ತನ್ನ ಮೂರನೇ ತಲೆಮಾರಿನ ಐ20 ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ. ಈ ಹೊಸ ಹ್ಯುಂಡೈ ಐ20 ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಲ್ಲಿ ಒಂದಾಗಿದೆ.

ಹೊಸ ಹ್ಯುಂಡೈ ಐ20 ಕಾರಿನ ವೆರಿಯೆಂಟ್ ಮಾಹಿತಿ ಬಹಿರಂಗ

ಹೊಸ ತಲೆಮಾರಿನ ಐ20 ಕಾರು ಭಾರತದಲ್ಲಿ ಹಲವು ಬಾರಿ ಸ್ಪಾಟ್ ಟೆಸ್ಟ್ ನಡೆಸಿದೆ. ಈ ಹೊಸ ಹ್ಯುಂಡೈ ಐ20 ಕಾರು ಇದೇ ತಿಂಗಳು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಆಯ್ದ ಹ್ಯುಂಡೈ ಡೀಲರುಗಳೂ ಈಗಗಾಲೇ ಹೊಸ ಐ20 ಕಾರಿಗಾಗಿ ಬುಕ್ಕಿಂಗ್ ಸ್ವೀಕರಿಸಲು ಪ್ರಾರಂಭವಾಗಿದೆ. ವರದಿಗಳ ಪ್ರಕಾರ, ಹೊಸ ಹ್ಯುಂಡೈ ಐ20 ಕಾರು ಮ್ಯಾಗ್ನಾ, ಸ್ಪೋರ್ಟ್ಜ್, ಅಸ್ಟಾ ಮತ್ತು ಅಸ್ಟಾ (ಒ) ಎಂಬ ನಾಲ್ಕು ವೆರಿಯೆಂಟ್ ಗಳಲ್ಲಿ ಲಭ್ಯವಿರಲಿದೆ.

ಹೊಸ ಹ್ಯುಂಡೈ ಐ20 ಕಾರಿನ ವೆರಿಯೆಂಟ್ ಮಾಹಿತಿ ಬಹಿರಂಗ

ಹೊಸ ಹ್ಯುಂಡೈ ಐ20 ಕಾರು ಮೂರು ಎಂಜಿನ್ ಆಯ್ಕೆಗಳನ್ನು ಹೊಂದಿರಲಿದೆ. ಇದರಲ್ಲಿ 1.2ಎಲ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 82 ಬಿಹೆಚ್‌ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಅನ್ನು ಹೊಂದಿರುತ್ತದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಹೊಸ ಹ್ಯುಂಡೈ ಐ20 ಕಾರಿನ ವೆರಿಯೆಂಟ್ ಮಾಹಿತಿ ಬಹಿರಂಗ

ಇದರೊಂದಿಗೆ 1.0ಎಲ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ 99 ಬಿಹೆಚ್‌ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಸ್ಪೀಡ್ ಡ್ಯುಯಲ್-ಕ್ಲಚ್ ಆಟೋಮ್ಯಾಟಿಕ್ ಮತ್ತು ಐಎಂಟಿ (ಇಂಟೆಲಿಜೆಂಟ್ ಮ್ಯಾನುಯಲ್ ಗೇರ್ ಬಾಕ್ಸ್ ಅನ್ನು ಹೊಂದಿರಲಿದೆ.

ಹೊಸ ಹ್ಯುಂಡೈ ಐ20 ಕಾರಿನ ವೆರಿಯೆಂಟ್ ಮಾಹಿತಿ ಬಹಿರಂಗ

ಇನ್ನು 1.5ಎಲ್ ಡೀಸೆಲ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 99 ಬಿಹೆಚ್‌ಪಿ ಪವರ್ ಅನ್ನು ಉತ್ಪಾದಿಸಬಹುದು. ಈ ಎಂಜಿನ್ ನೊಂದಿಗೆ ಮ್ಯಾನುವಲ್ ಗೇರ್ ಬಾಕ್ಸ್ ಅನ್ನು ಅಳವಡಿಸಬಹುದು ಎಂದು ನಿರೀಕ್ಷಿಸುತ್ತೇವೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಹೊಸ ಹ್ಯುಂಡೈ ಐ20 ಕಾರಿನ ವೆರಿಯೆಂಟ್ ಮಾಹಿತಿ ಬಹಿರಂಗ

ಹೊಸ ಹ್ಯುಂಡೈ ಐ20 ಕಾರಿನ ಸ್ಪೈ ಚಿತ್ರದಲ್ಲಿ ಇ‍ಲ್‍ಇಡಿ ಟೈಲ್ ಲ್ಯಾಂಪ್ ಅನ್ನು ಕಾಣಿಸಿಕೊಂಡಿದೆ. ಇನ್ನು ಈ ಹ್ಯುಂಡೈ ಕಾರಿನ ಮುಂಭಾಗದಲ್ಲಿರು ಕ್ಯಾಸ್ಕೇಡಿಂಗ್ ಗ್ರಿಲ್ ಅನ್ನು ಹೊಂದಿದೆ. ಹಿಂದಿನ ಐ20 ಮಾದರಿಗೆ ಹೋಲಿಸಿದರೆ ಹೆಡ್ ಲ್ಯಾಂಪ್ ಮತ್ತು ಸೈಡ್ ಫ್ರೋಪೈಲ್ ವಿನ್ಯಾಸವನ್ನು ನವೀಕರಿಸಲಾಗಿದೆ ದೊಡ್ಡ ಕ್ರೀಸ್ ಲೈನ್ ಗಳನ್ನು ಒಳಗೊಂಡಿದೆ.

ಹೊಸ ಹ್ಯುಂಡೈ ಐ20 ಕಾರಿನ ವೆರಿಯೆಂಟ್ ಮಾಹಿತಿ ಬಹಿರಂಗ

ಹೊಸ ಹುಂಡೈ ಐ20 ಕಾರಿನ ಪಿಲ್ಲರ್‍‍ಗಳು ಬ್ಲ್ಯಾಕ್ ಬಣ್ಣವನ್ನು ಹೊಂದಿದೆ. ವಿಡಬ್ಲ್ಯೂ ಟೈಗನ್‍‍‍ನಲ್ಲಿ ಇರುವಂತಹ ಕೆಂಪು ಇ‍ಲ್‍ಇಡಿ ಡಿಆರ್‍ಎಲ್ ಸ್ಟಾಪ್ ಲೈಟ್ ಹಿಂಭಾಗದಲ್ಲಿ ಇ‍ಲ್‍ಇಡಿ ಟೇಲ್‍‍ಲೈಟ್ ಹೊಂದಿದೆ. ಇನ್ನು ಹೊಸ ಹ್ಯುಂಡೈ ಕಾರಿನ ಇಂಟಿರಿಯರ್‍‍ನಲ್ಲಿ 4 ಸ್ಫೋಕ್ ಸ್ಟೀಟಿಯರಿಂಗ್ ವ್ಹೀಲ್ ಅನ್ನು ಅಳವಡಿಸಲಾಗಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಹೊಸ ಹ್ಯುಂಡೈ ಐ20 ಕಾರಿನ ವೆರಿಯೆಂಟ್ ಮಾಹಿತಿ ಬಹಿರಂಗ

ಹೊಸ ಹ್ಯುಂಡೈ ಕ್ರೆಟಾ ಕಾರಿನಲ್ಲಿರುವ ಸ್ಟಿಟಿಯರಿಂಗ್ ಮಾದರಿಯಲ್ಲಿದೆ. ಹೊಸ ಹ್ಯುಂಡೈ ಐ20 ಕಾರಿನಲ್ಲಿ ಬೋಸ್ ಸೌಂಡ್ ಸಿಸ್ಟಂ, ಕ್ರೂಸ್ ಕಂಟ್ರೋಲ್ ಮತ್ತು ಫುಲ್-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್‌ ಅನ್ನು ಒಳಗೊಂಡಿದೆ. ಇದರೊಂದಿಗೆ ಬ್ಲೂ ಲಿಂಕ್ ಟೆಕ್ನಾಲಜಿಯನ್ನು ಕೂಡ ಹೊಂದಿರಲಿದೆ.

ಹೊಸ ಹ್ಯುಂಡೈ ಐ20 ಕಾರಿನ ವೆರಿಯೆಂಟ್ ಮಾಹಿತಿ ಬಹಿರಂಗ

ಈ ಹೊಸ ಕಾರಿನಲ್ಲಿ 8.0 ಇಂಚಿನ ಡಿಜಿಟಲ್ ಕ್ಲಸ್ಟರ್ ಅನ್ನು ಅಳವಡಿಸಲಾಗಿದೆ. ಈ ಕಾರಿನ ಇಂಟಿರಿಯರ್‍‍ನಲ್ಲಿ ಆ್ಯಪಲ್ ಕಾರ್‍‍ಪ್ಲೇ ಮತ್ತು ಆಂಡ್ರಾಯ್ಡ್ ಆಟೋ, ಹ್ಯುಂಡೈನ ಕನೆಕ್ಟಿವಿಟಿ ಸೂಟ್ ಮತ್ತು ಇತರ ಹಲವಾರು ಫೀಚರ್‍‍ಗಳನ್ನು ಹೊಂದಿದೆ. ಯುಎಸ್‌ಬಿ ಪೋರ್ಟ್‌ ಮತ್ತು ವೈರ್‌ಲೆಸ್ ಚಾರ್ಜಿಂಗ್ ಪ್ಯಾಡ್ ಅನ್ನು ಸಹ ಹೊಂದಿರಲಿದೆ.

ಹೊಸ ಹ್ಯುಂಡೈ ಐ20 ಕಾರಿನ ವೆರಿಯೆಂಟ್ ಮಾಹಿತಿ ಬಹಿರಂಗ

ಹೊಸ ಹ್ಯುಂಡೈ ಐ20 ಕಾರಿನಲ್ಲಿ ಹೊಸ 16 ಡ್ಯುಯಲ್ ಟೋನ್ ಅಲಾಯ್ ವ್ಹೀಲ್‍‍ಗಳು, ಇಂಟಿಗ್ರೇಟೆಡ್ ಟರ್ನ್ ಇಂಡಿಕೇಟರ್‍‍ಗಳೊಂದಿಗೆ ಸ್ಲಿಕ್ ಒಆರ್‍‍ವಿಎಂಗಳು ಮತ್ತು ಶಾರ್ಕ್ ಫಿನ್ ಆಂಟೆನಾವನ್ನು ಕೂಡ ಆಳವಡಿಸಲಾಗಿದೆ. ಮೂರನೇ ತಲೆಮಾರಿನ ಹ್ಯುಂಡೈ ಐ20 ಹಲವಾರು ಹೊಸ ಫೀಚರ್ ಗಳೊಂದಿಗೆ ನಯ ಲುಕ್ ಬಿಡುಗಡೆಯಾಗುವುದರಿದರಿಂದ ಭಾರತೀಯ ಮಾರುಕಟ್ಟೆಯಲ್ಲಿ ಮತ್ತಷ್ಟು ಗ್ರಾಹಕರನ್ನು ಸೆಳೆಯಬಹುದು ಎಂದು ನಿರೀಕ್ಷಿಸುತ್ತೇವೆ.

Most Read Articles

Kannada
English summary
2020 Hyundai i20 Variant Wise Engine Options Leaked Before. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X