Just In
- 9 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 10 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 12 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 13 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಜೀಪ್ ಕಾಂಪ್ಯಾಕ್ಟ್ ಎಸ್ಯುವಿ
ಐಷಾರಾಮಿ ಕಾರು ತಯಾರಕ ಕಂಪನಿಯಾದ ಜೀಪ್ ಅಂತರರಾಷ್ಟ್ರೀಯ ಮಾರುಕಟ್ಟೆಗೆ ಎಂಟ್ರಿ ಲೆವೆಲ್ ಜೀಪ್ ಕಾಂಪ್ಯಾಕ್ಟ್ ಎಸ್ಯುವಿಯನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ ರೆನೆಗೇಡ್ ಎಸ್ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಮುಂದಿನ ವರ್ಷ ಅನಾವರಣವಾಗಲಿದೆ.
ಈ ಕಾಂಪ್ಯಾಕ್ಟ್ ಎಸ್ಯುವಿಯು ಇತ್ತೀಚಿನ ಹೊಸ ಆಧುನಿಕ ತಂತ್ರಜ್ಞಾನಗಳನ್ನು ಹೂಂದಿರುತ್ತದೆ ಎಂದು ನಿರೀಕ್ಷಿಸುತ್ತೇವೆ. ಮುಂದಿನ ದಿನಗಳಲ್ಲಿ ಬಿಡುಗಡೆಯಾಗಲಿರುವ ಜೀಪ್ ಕಾಂಪ್ಯಾಕ್ಟ್ ಎಸ್ಯುವಿ ಆಫ್-ರೋಡ್ ಹೊಂದಾಣಿಕೆಗಾಗಿ ಕಂಪನಿಯ ‘ಟ್ರಯಲ್ ರೇಟೆಡ್' ಬ್ಯಾಡ್ಜ್ ಅನ್ನು ಒಳಗೊಂಡಿರುತ್ತದೆ. ಈ ಹೊಸ ಜೀಪ್ ಕಾಂಪ್ಯಾಕ್ಟ್ ಎಸ್ಯುವಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ.
ಇದರಲ್ಲಿ ಫೋರ್ ವ್ಹೀಲ್ ಡ್ರೈವ್ ಸಿಸ್ಟಂ ಮತ್ತು ಆಫ್ ರೋಡ್ ಭೂಪ್ರದೇಶದಲ್ಲಿ ಚಲಿಸಲು ಲಾಕಿಂಗ್ ಡಿಫರನ್ಷಿಯಲ್ ಫೀಚರ್ಸ್ಗಳನ್ನು ಒಳಗೊಂಡಿರುತ್ತದೆ. ಮುಂದಿನ ಕಾಂಪ್ಯಾಕ್ಟ್ ಎಸ್ಯುವಿಯು ಜೀಪ್ ಬ್ರ್ಯಾಂಡ್ನ ಆಫ್ ರೋಂಡಿಂಗ್ ವಾಹನಗಳ ಸರಣಿಗೆ ಸೇರುತ್ತದೆ
ಕೇವಲ ಆಫ್ ರೋಡ್ ಗೆ ಅಲ್ಲದೇ ದಿನನಿತ್ಯ ಓಡಾಡಕ್ಕೆ ಈ ಎಸ್ಯುವಿಯನ್ನು ಬಳಸಬಹುದು ಎಂದು ಜೀಪ್ ಯುರೋಪಿನ ಬ್ರ್ಯಾಂಡ್ ಮಾರ್ಕೆಟಿಂಗ್ ಮುಖ್ಯಸ್ಥ ಮಾರ್ಕೊ ಪಿಗೊಜ್ಜೆ ಈ ಹಿಂದೆ ಹೇಳಿದ್ದರು.
ಮುಂದಿನ ದಿನಗಳಲ್ಲಿ ಬಿಡುಗಡೆಯಾಗಲಿರುವ ಜೀಪ್ ಕಾಂಪ್ಯಾಕ್ಟ್ ಎಸ್ಯುವಿಯು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳನ್ನು ಹೊಂದಿರುತ್ತದೆ. ಈ ಎಸ್ಯುವಿಯನ್ನು ಮುಂದಿನ ದಿನಗಳಲ್ಲಿ ಸಂಪೂರ್ಣವಾಗಿ ಎಲೆಕ್ಟ್ರಿಕ್ ಅಥವಾ ಪ್ಲಗ್-ಇನ್ ಹೈಬ್ರಿಡ್ ಎಲೆಕ್ಟ್ರಿಕ್ ವೆಹಿಕಲ್ ಆವೃತ್ತಿಯಲ್ಲಿ ಬಿಡುಗಡೆಗೊಳಿಸಬಹುದು.
ಭಾರತೀಯ ಮಾರುಕಟ್ಟೆಯಲ್ಲಿ ಪ್ರಸ್ತುತ ಆಲ್ ವ್ಹೀಲ್ ಡ್ರೈವ್ ಅಥವಾ ಫೋರ್ ವ್ಹೀಲ್ ಡ್ರೈವ್ ಸಿಸ್ಟಂ ಹೊಂದಿರುವ ಯಾವುದೇ ಕಾಂಪ್ಯಾಕ್ಟ್ ಎಸ್ಯುವಿಗಳು ಇಲ್ಲ. ಜೀಪ್ ಕಾಂಪ್ಯಾಕ್ಟ್ ಎಸ್ಯುವಿಯು ಭಾರತದಲ್ಲಿ ಬಿಡುಗಡೆಯಾದ ಬಳಿಕ ಇದು ದೇಶದ ಆಫ್ ರೋಡ್ ವಾಹನ ಪ್ರಿಯರಿಗೆ ಉತ್ತಮ ಆಯ್ಕೆಯಾಗಬಹುದು.
ಭಾರತ ಮತ್ತು ವಿದೇಶಿ ಮಾರುಕಟ್ಟೆಗಳಲ್ಲಿ ಕಾಂಪ್ಯಾಕ್ಟ್ ಎಸ್ಯುವಿಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಹ್ಯಾಚ್ಬ್ಯಾಕ್ ಗಳಿಗಿಂತ ಗ್ರಾಹಕರು ಹೆಚ್ಚಾಗಿ ಕಾಂಪ್ಯಾಕ್ಟ್ ಎಸ್ಯುವಿಗಳನ್ನು ಇಷ್ಟ ಪಡುತ್ತಾರೆ, ಜೀಪ್ ಪ್ರಮುಖ ಎಸ್ಯುವಿ ತಯಾರಕ ಕಂಪನಿಗಳಲ್ಲಿ ಒಂದಾಗಿದೆ.ಇದೀಗ ಈ ಕಂಪನಿಯು ಎಂಟ್ರಿ ಲೆವೆಲೆ ಕಾಂಪ್ಯಾಕ್ಟ್ ಎಸ್ಯುವಿಯನ್ನು ಬಿಡುಗಡೆಗೊಳಿಸಲು ಮುಂದಾಗಿದೆ.
ಹೊಸ ಜೀಪ್ ರೆನೆಗೆಡ್ ಕಾಂಪ್ಯಾಕ್ಟ್ ಎಸ್ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹ್ಯುಂಡೈ ವೆನ್ಯೂ, ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಫೋರ್ಡ್ ಇಕೋಸ್ಪೋರ್ಟ್ ಮತ್ತು ಟಾಟಾ ನೆಕ್ಸಾನ್ ಕಾಂಪ್ಯಾಕ್ಟ್ ಎಸ್ಯುವಿಗಳಿಗೆ ಪೈಪೋಟಿಯನ್ನು ನೀಡುತ್ತದೆ.
ಇದರೊಂದಿಗೆ ಮಾರುತಿ ಸುಜುಕಿ ಕಂಪನಿಯು ಜಿಮ್ನಿ ಮಿನಿ ಎಸ್ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ಜಿಮ್ನಿ ಮಿನಿ ಎಸ್ಯುವಿಗೆ ಈ ಹೊಸ ಜೀಪ್ ಕಾಂಪ್ಯಾಕ್ಟ್ ಎಸ್ಯುವಿಯು ಪೈಪೋಟಿಯನ್ನು ನೀಡಬಹುದು.