ಹೊಸ ಫೀಚರ್ಸ್‍‍ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಡಲಿದೆ 2021ರ ಮಹೀಂದ್ರಾ ಸ್ಕಾರ್ಪಿಯೋ

ಮಹೀಂದ್ರಾ ಅಂಡ್ ಮಹೀಂದ್ರಾ ಕಂಪನಿಯು ತನ್ನ ಬಿಎಸ್-6 ಸ್ಕಾರ್ಪಿಯೋ ಎಸ್‍ಯುವಿಯನ್ನು ಇತ್ತೀಚೆಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಇದೀಗ ಮಹೀಂದ್ರಾ ಕಂಪನಿಯು ಮುಂದಿನ ತಲೆಮಾರಿನ ಸ್ಕಾರ್ಪಿಯೋ ಎಸ್‍ಯುವಿಯನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.

ಹೊಸ ಫೀಚರ್ಸ್‍‍ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಡಲಿದೆ 2021ರ ಮಹೀಂದ್ರಾ ಸ್ಕಾರ್ಪಿಯೋ

ಮಹೀಂದ್ರಾ ಸ್ಕಾರ್ಪಿಯೋ ಬಹಳ ದೀರ್ಘಕಾಲದಿಂದ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದೆ. ಭಾರತೀಯ ಮಾರುಕಟ್ಟೆಯ ಜನಪ್ರಿಯ ಎಸ್‍ಯುವಿಗಳಲ್ಲಿ ಮಹೀಂದ್ರಾ ಸ್ಕಾರ್ಪಿಯೋ ಕೂಡ ಒಂದಾಗಿದೆ. ಮಹೀಂದ್ರಾ ಕಂಪನಿಯ ಸರಣಿಯ ಕಾರು ಮಾರಾಟದಲ್ಲಿ ಸ್ಕಾರ್ಪಿಯೋ ಎಸ್‍‍ಯುವಿಯ ಕೊಡುಗೆಯು ದೊಡ್ಡದು. 2002ರಲ್ಲಿ ಮಹೀಂದ್ರಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ ಸ್ಕಾರ್ಪಿಯೋ ಬಿಡುಗಡೆಗೊಳಿಸಿದ ನಂತರ ಎರಡು ಬಾರಿ ನವೀಕರಣಗೊಳಿಸಲಾಗಿದೆ.

ಹೊಸ ಫೀಚರ್ಸ್‍‍ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಡಲಿದೆ 2021ರ ಮಹೀಂದ್ರಾ ಸ್ಕಾರ್ಪಿಯೋ

ಹೊಸ ಸ್ಕಾರ್ಪಿಯೋ ಎಸ್‍ಯುವಿಗೆ ಇನ್ನಷ್ಟು ಶಕ್ತಿ ತುಂಬಲು ಮಹೀಂದ್ರಾ ಹೊಚ್ಚ ಹೊಸ 2.0-ಲೀಟರ್ ಟರ್ಬೊ-ಡೀಸೆಲ್ ಎಂಜಿನ್‌ನಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ವರದಿಗಳು ಪ್ರಕಟವಾಗಿದೆ. ಹೊಸ ಸ್ಕಾರ್ಪಿಯೋದಲ್ಲಿ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗುತ್ತದೆ. ಇದರೊಂದಿಗೆ 4ಡಬ್ಲ್ಯೂಡಿ ಸಿಸ್ಟಂ ಅನ್ನು ಹೊಂದಿರಲಿದೆ.

MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ

ಹೊಸ ಫೀಚರ್ಸ್‍‍ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಡಲಿದೆ 2021ರ ಮಹೀಂದ್ರಾ ಸ್ಕಾರ್ಪಿಯೋ

ಇದೀಗ ಮಹೀಂದ್ರಾ ಕಂಪನಿಯು 2021ರ ಸ್ಕಾರ್ಪಿಯೋ ಎಸ್‍ಯುವಿಯನ್ನು ಇತ್ತೀಚೆಗೆ ಸ್ಪಾಟ್ ಟೆಸ್ಟ್ ನಡೆಸಿದೆ. ತಮಿಳುನಾಡಿನ ಊಟಿ ಬಳಿಯ ಗಿರಿ ಧಾಮ ಪ್ರದೇಶದಲ್ಲಿ ಮುಂದಿನ ತಲೆಮಾರಿನ ಸ್ಕಾರ್ಪಿಯೋವನ್ನು ಸಂಪೂರ್ಣವಾಗಿ ಮರೆಮಾಚಿ ಸ್ಪಾಟ್ ಟೆಸ್ಟ್ ನಡೆಸಲಾಗಿದೆ. ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಚಿತ್ರಗಳು ಆನ್‌ಲೈನ್ ನಲ್ಲಿ ಬಹಿರಂಗವಾಗಿದೆ.

ಹೊಸ ಫೀಚರ್ಸ್‍‍ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಡಲಿದೆ 2021ರ ಮಹೀಂದ್ರಾ ಸ್ಕಾರ್ಪಿಯೋ

ಈ ಹೂಸ ಸ್ಕಾರ್ಪಿಯೋ ಎಸ್‍ಯುವಿಯು ಹೆಚ್ಚು ನವೀಕರಿಸಿದ ಲ್ಯಾಡರ್-ಫ್ರೇಮ್ ಚಾಸಿಸ್ ಅನ್ನು ಆಧರಿಸಿದೆ. ಈ ಎಸ್‍ಯುವಿಯು ಕಟ್ಟುನಿಟ್ಟಾದ ಪಾದಚಾರಿ ಕ್ರ್ಯಾಶ್ ಟೆಸ್ಟ್ ಮಾನದಂಡಗಳನ್ನು ಪೂರೈಸಲು ಹೆಚ್ಚಿನ ಪ್ರಮುಖ್ಯತೆಯನ್ನು ನೀಡುತ್ತಿದ್ದಾರೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಹೊಸ ಫೀಚರ್ಸ್‍‍ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಡಲಿದೆ 2021ರ ಮಹೀಂದ್ರಾ ಸ್ಕಾರ್ಪಿಯೋ

ಹೊಸ ಸ್ಕಾರ್ಪಿಯೋ ಎಸ್‍ಯುವಿಯ ಮುಂಭಾಗದಲ್ಲಿ ಹೆಡ್ ಲ್ಯಾಂಪ್ ಪಕ್ಕ ಸುತ್ತುವರೆದಿರುವ ಸ್ಲೇಟೆಡ್ ಪ್ರಮುಖ ಗ್ರಿಲ್ ಅಂಶಗಳನ್ನು ಒಳಗೊಂಡಿದೆ. ಆದರೆ ಇದು ಕೇವಲ ಸ್ಪಾಟ್ ಟೆಸ್ಟ್ ನಲ್ಲಿ ಅಳವಡಿಸಿರಬಹುದು. ಉತ್ಪಾದನೆಯ ಹಂತದಲ್ಲಿ ಈ ಅಂಶಗಳನ್ನು ಒಳಗೊಂಡಿರುವುದರಿಲ್ಲ ಎಂದು ನಿರೀಕ್ಷಿಸುತ್ತೇವೆ.

ಹೊಸ ಫೀಚರ್ಸ್‍‍ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಡಲಿದೆ 2021ರ ಮಹೀಂದ್ರಾ ಸ್ಕಾರ್ಪಿಯೋ

ಈ ಸ್ಕಾರ್ಪಿಯೋ ಎಸ್‍ಯುವಿಯಲ್ಲಿ ಹೊಸ ಬಾಡಿ ಪ್ಯಾನೆಲ್‌ಗಳು ಮತ್ತು ಗಮನಾರ್ಹವಾದ ಹೊಸ ಅಕ್ಷರ ರೇಖೆಗಳು ಮತ್ತು ಎಕ್ಸ್‌ಯುವಿ300 ನಂತೆ ಹಿಂದಿನ ಡೋರಿನ ಮೇಲೆ ಒಂದು ಕಿಂಕ್ ಅನ್ನು ಹೊಂದಿರುತ್ತದೆ.

MOST READ: ಕರೋನಾ ಭೀತಿಯಿಂದ ಪಾತಾಳಕ್ಕೆ ಕುಸಿತ ಮಾರುತಿ ಸುಜುಕಿ ಕಾರುಗಳ ಮಾರಾಟ

ಹೊಸ ಫೀಚರ್ಸ್‍‍ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಡಲಿದೆ 2021ರ ಮಹೀಂದ್ರಾ ಸ್ಕಾರ್ಪಿಯೋ

ಇನ್ನು ಈ ಎಸ್‍ಯುವಿಯ ಹಿಂಭಾದಲ್ಲಿ ಮರುವಿನ್ಯಾಸಗೊಳಿಸಲಾದ ಟೈಲ್‌ಗೇಟ್ ಮತ್ತು ಸೈಡ್ ಹಿಂಗ್ಡ್ ಬೂಟ್ ಓಪನರ್ ಅನ್ನು ಹೊಂದಿರುವಂತೆ ನಮಗೆ ಸ್ಪಾಟ್ ಟೆಸ್ಟ್ ಚಿತ್ರದಲ್ಲಿ ಕಾಣುತ್ತದೆ.

ಹೊಸ ಫೀಚರ್ಸ್‍‍ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಡಲಿದೆ 2021ರ ಮಹೀಂದ್ರಾ ಸ್ಕಾರ್ಪಿಯೋ

ಇನ್ನು ಈ ಎಸ್‍ಯುವಿಯ ಒಳಭಾಗದ ಕ್ಯಾಬಿನ್ ನಲ್ಲಿ ಆ್ಯಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಸಂಪರ್ಕದೊಂದಿಗೆ ನವೀಕರಿಸಿದ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ, ಹೆಚ್ಚು ದುಬಾರಿ ಸೆಂಟರ್ ಕನ್ಸೋಲ್, ಮತ್ತು ಮರಾಜೋ ಎಸ್‍ಯುವಿಯಲ್ಲಿರುವಂತೆ ಹೊಸ ಕಂಟ್ರೋಲ್ ಗಳು ಮತ್ತು ಡಯಲ್‌ಗಳನ್ನು ಒಳಗೊಂಡಿರಬಹುದು ಎಂದು ನಿರೀಕ್ಷಿಸುತ್ತೇವೆ.

More from DriveSpark

Article Published On: Saturday, June 6, 2020, 10:10 [IST]
English summary
Next-Gen Mahindra Scorpio To Have 4WD System and Automatic Gearbox/ Read IN Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+