ಪ್ರೀಮಿಯಂ ಫೀಚರ್ಸ್‌ನೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ನ್ಯೂ ಜನರೇಷನ್ ಥಾರ್

ಮಾಹಾಮಾರಿ ಕರೋನಾ ವೈರಸ್‌ನಿಂದಾಗಿ ನ್ಯೂ ಜನರೇಷನ್ ಥಾರ್ ಕಾರು ಮಾದರಿಯ ಬಿಡುಗಡೆ ಮುಂಡೂಡಿಕೆ ಮಾಡಿರುವ ಮಹೀಂದ್ರಾ ಕಂಪನಿಯು ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಮುಂದುವರಿಸಿದ್ದು, ಹೊಸ ಕಾರು ಈ ಬಾರಿ ಪ್ರೀಮಿಯಂ ಫೀಚರ್ಸ್‌ನೊಂದಿಗೆ ರೋಡ್ ಟೆಸ್ಟಿಂಗ್ ನಡೆಸುತ್ತಿರುವುದು ಕಂಡುಬಂದಿದೆ.

ಪ್ರೀಮಿಯಂ ಫೀಚರ್ಸ್‌ನೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ನ್ಯೂ ಜನರೇಷನ್ ಥಾರ್

ಸದ್ಯ ವೈರಸ್ ಭೀತಿಯು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ ವಾಹನ ಮಾದರಿಗಳನ್ನು ಹೊರತುಪಡಿಸಿ ಹೊಸ ವಾಹನ ಬಿಡುಗಡೆಯನ್ನು ಮುಂದೂಡಿಕೆ ಮಾಡಲಾಗುತ್ತಿದ್ದು, ಕೆಲ ಹೊಸ ವಾಹನ ಮಾದರಿಗಳ ಬಿಡುಗಡೆಯ ಯೋಜನೆಯನ್ನೇ ಕೈಬಿಡಲಾಗುತ್ತಿದೆ. ಮಹೀಂದ್ರಾ ಕೂಡಾ ಲಾಕ್‌ಡೌನ್ ಸಂಕಷ್ಟದಿಂದಾಗಿ ಕೆಲವು ಹೊಸ ವಾಹನಗಳ ಬಿಡುಗಡೆಯನ್ನು ಮುಂದೂಡಿಕೆ ಮಾಡಿದ್ದು, ಇದೇ ತಿಂಗಳು ಬಿಡುಗಡೆಯಾಗಬೇಕಿದ್ದ ನ್ಯೂ ಜನರೇಷನ್ ಥಾರ್ ಮತ್ತು ಎಕ್ಸ್‌ಯುವಿ500 ಕಾರುಗಳ ಬಿಡುಗಡೆಯನ್ನು ವರ್ಷಾಂತ್ಯಕ್ಕೆ ನಿಗದಿಮಾಡಿದೆ.

ಪ್ರೀಮಿಯಂ ಫೀಚರ್ಸ್‌ನೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ನ್ಯೂ ಜನರೇಷನ್ ಥಾರ್

ಮುಂಬರುವ ಕೆಲವೇ ದಿನಗಳಲ್ಲಿ ಬಿಡುಗಡೆಯಾಗಬೇಕಿದ್ದ ನ್ಯೂ ಜನರೇಷನ್ ಎಕ್ಸ್‌ಯುವಿ500, ಥಾರ್ ಮತ್ತು ಸ್ಕಾರ್ಪಿಯೋ ಕಾರುಗಳ ಬಿಡುಗಡೆಯನ್ನು ಮುಂದೂಡಿಕೆ ಮಾಡಲಾಗಿದ್ದು, ಹೊಸ ಕಾರುಗಳು ಇದೇ ವರ್ಷ ನವೆಂಬರ್‌ನಲ್ಲಿ ಬಿಡುಗಡೆಗೊಳ್ಳುವ ಸಾಧ್ಯತೆಗಳಿವೆ.

ಪ್ರೀಮಿಯಂ ಫೀಚರ್ಸ್‌ನೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ನ್ಯೂ ಜನರೇಷನ್ ಥಾರ್

ಸದ್ಯಕ್ಕೆ ಎಕ್ಸ್‌ಯುವಿ500, ಸ್ಕಾರ್ಪಿಯೋ ಕಾರುಗಳ 2020ರ ಮಾದರಿಗಳನ್ನು ಬಿಎಸ್-6 ಎಂಜಿನ್‌ನೊಂದಿಗೆ ಮಾತ್ರವೇ ಬಿಡುಗಡೆ ಮಾಡಲಾಗಿದ್ದು, ಹೊಸ ವಿನ್ಯಾಸ ಮತ್ತು ವಿವಿಧ ಎಂಜಿನ್ ಆಯ್ಕೆ ಹೊಂದಿದ್ದ ನ್ಯೂ ಜನರೇಷನ್ ಮಾದರಿಗಳ ಬಿಡುಗಡೆಯನ್ನು ಮುಂದೂಡಲಾಗಿದೆ.

ಪ್ರೀಮಿಯಂ ಫೀಚರ್ಸ್‌ನೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ನ್ಯೂ ಜನರೇಷನ್ ಥಾರ್

ಹೊಸ ಥಾರ್ ಮಾದರಿಯು ಈ ಬಾರಿ ಹಲವಾರು ಹೊಸ ಬದಲಾವಣೆಗಳನ್ನು ಪಡೆದುಕೊಂಡಿದ್ದು, ಡೀಸೆಲ್ ಮತ್ತು ಪೆಟ್ರೋಲ್ ಎರಡು ಆವೃತ್ತಿಗಳಲ್ಲೂ ಖರೀದಿಗೆ ಲಭ್ಯವಿಲಿರುವ ಹೊಸ ಕಾರು ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ವರ್ಷನ್ ಪಡೆದುಕೊಳ್ಳಲಿವೆ.

ಪ್ರೀಮಿಯಂ ಫೀಚರ್ಸ್‌ನೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ನ್ಯೂ ಜನರೇಷನ್ ಥಾರ್

ಹೊಸ ಥಾರ್ ಕಾರು ಈ ಬಾರಿ ನವೀಕರಿಸಿದ 2.2-ಡೀಸೆಲ್ ಎಂಜಿನ್ ಜೊತೆಗೆ ಹೊಸದಾಗಿ 2.0-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಸಹ ಹೊಂದಿಲಿದ್ದು, ಮಾಲಿನ್ಯ ಹೊರಸೂಸುವಿಕೆ ಪ್ರಮಾಣದಲ್ಲಿ ಸಾಕಷ್ಟು ಸುಧಾರಣೆ ಕಂಡಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಪ್ರೀಮಿಯಂ ಫೀಚರ್ಸ್‌ನೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ನ್ಯೂ ಜನರೇಷನ್ ಥಾರ್

ಭಾರತದಲ್ಲಿ ಸದ್ಯ ಬಿಎಸ್-6 ನಿಯಮವು ಏಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬಂದಿದ್ದು, ಕೇಂದ್ರ ಸರ್ಕಾರದ ಹೊಸ ನಿಯಮದಂತೆ ಮಹೀಂದ್ರಾ ಸೇರಿದಂತೆ ಬಹುತೇಕ ಆಟೋ ಕಂಪನಿಗಳು ಬಿಎಸ್-6 ಎಂಜಿನ್ ಪ್ರೇರಿತ ಡೀಸೆಲ್ ವಾಹನಗಳನ್ನು ಬಿಡುಗಡೆಗೊಳಿಸಿವೆ.

ಪ್ರೀಮಿಯಂ ಫೀಚರ್ಸ್‌ನೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ನ್ಯೂ ಜನರೇಷನ್ ಥಾರ್

ಹೊಸ ಎಂಜಿನ್‌ನಿಂದಾಗಿ ಥಾರ್ ಕಾರು ಈ ಬಾರಿ ಆಫ್-ರೋಡ್ ಪ್ರಿಯರನ್ನು ಮತ್ತಷ್ಟು ಸೆಳೆಯಲಿದ್ದು, ಹೊಸ ಕಾರಿನ ಡೀಸೆಲ್ ಮತ್ತು ಪೆಟ್ರೋಲ್ ಎರಡು ಮಾದರಿಯಲ್ಲೂ ಆಟೋಮ್ಯಾಟಿಕ್ ಮತ್ತು ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದೆ.

MOST READ: ಕರೋನಾ ವೈರಸ್ ಎಫೆಕ್ಟ್: ಕಾರಿಗೂ ಬಂತು ಪೋರ್ಟಬಲ್ ಟಾಯ್ಲೆಟ್‌

ಪ್ರೀಮಿಯಂ ಫೀಚರ್ಸ್‌ನೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ನ್ಯೂ ಜನರೇಷನ್ ಥಾರ್

ಜೊತೆಗೆ ಬಿಎಸ್-6 ವೈಶಿಷ್ಟ್ಯತೆಗಳಿಂದಾಗಿ ಮಹೀಂದ್ರಾ ಹೊಸ ಕಾರುಗಳಲ್ಲಿ ಈ ಬಾರಿ ಹಲವಾರು ಬದಲಾವಣೆಗಳಾಗಿದ್ದು, ಬ್ಯಾಕ್ಔಟ್ ಅಯಾಲ್ ವೀಲ್ಹ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವಾರು ಹೊಸ ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

Most Read Articles

Kannada
English summary
Next-Generation Mahindra Thar Spotted Testing Once Again. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X