ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಮಹೀಂದ್ರಾ ಎಕ್ಸ್‌ಯುವಿ 500

ಮಹೀಂದ್ರಾ ಎಕ್ಸ್‌ಯುವಿ 500 ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಒಂದು ದಶಕಕ್ಕೂ ಹೆಚ್ಚು ಕಾಲ ಮಾರಾಟದಲ್ಲಿದೆ. ಇದೀಗ ಮಹೀಂದ್ರಾ ಕಂಪನಿಯು ಹೊಸ ತಲೆಮಾರಿನ ಎಕ್ಸ್‌ಯುವಿ 500 ಎಸ್‌ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಮಹೀಂದ್ರಾ ಎಕ್ಸ್‌ಯುವಿ 500

ಮಹೀಂದ್ರಾ ಕಂಪನಿಯು ತನ್ನ ಹೊಸ ತಲೆಮಾರಿನ ಎಕ್ಸ್‌ಯುವಿ 500 ಎಸ್‌ಯುವಿಯನ್ನು ಭಾರತದಲ್ಲಿ ಮತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಿದೆ. ಹೊಸ ಎಕ್ಸ್‌ಯುವಿ 500 ಎಸ್‌ಯುವಿ ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರಗಳನ್ನು ರಶ್ಲೇನ್ ಬಹಿರಂಗಪಡಿಸಿದೆ. ಹೊಸ ತಲೆಮಾರಿನ ಮಹೀಂದ್ರಾ ಎಕ್ಸ್‌ಯುವಿ 500 ಎಸ್‌ಯುವಿ ಕರ್ನಾಟಕದ ಮತ್ತು ತಮಿಳುನಾಡಿನ ಗಡಿಭಾಗವಾದ ಅತ್ತಿಬೆಲೆಯಲ್ಲಿ ಸ್ಪಾಟ್ ಟೆಸ್ಟ್ ನಡೆಸಿದೆ. ಸ್ಪಾಟ್ ಟೆಸ್ಟ್ ನಲ್ಲಿ ಕಂಡು ಬಂದಿರುವುದು ಎಕ್ಸ್‌ಯುವಿ 500 ಎಸ್‍ಯುವಿಯ ಲೋ ಬೇಸ್ ರೂಪಾಂತರವಾಗಿರಬಹುದು ಎಂದು ನಿರೀಕ್ಷಿಸುತ್ತೇವೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಮಹೀಂದ್ರಾ ಎಕ್ಸ್‌ಯುವಿ 500

ಹೊಸ ತಲೆಮಾರಿನ ಮಹೀಂದ್ರಾ ಎಕ್ಸ್‌ಯುವಿ 500 ಫೆಬ್ರವರಿಯಲ್ಲಿ ನಡೆದ 2020ರ ಆಟೋ ಎಕ್ಸ್‌ಪೋದಲ್ಲಿ ಮಾರಾಟವಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಮಹೀಂದ್ರಾ ಕಂಪನಿಯು ಆಟೊ ಎಕ್ಸ್ ಪೋದಲ್ಲಿ ಬಿಡುಗಡೆಗೊಳಿಸಿಲ್ಲ. ಹೊಸ ತಲೆಮಾರಿನ ಎಸ್‍ಯುವಿಯನ್ನು ಈ ವರ್ಷದ ಅಂತ್ಯದಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಮಹೀಂದ್ರಾ ಎಕ್ಸ್‌ಯುವಿ 500

ಹೊಸ ತಲೆಮಾರಿನ ಎಕ್ಸ್‌ಯುವಿ 500 ಎಸ್‍ಯುವಿಯನ್ನು ಮೊನೊಕೊಕ್ ಪ್ಲಾಟ್‌ಫಾರ್ಮ್‌ನ ಅಡಿಯಲ್ಲಿ ಬಿಡುಗಡೆಗೊಳಿಸಬಹುದು. 2021ರ ಮಹೀಂದ್ರಾ ಎಕ್ಸ್‌ಯುವಿ 500 ಅದರ ವಿನ್ಯಾಸ ಮತ್ತು ಸ್ಟೈಲಿಂಗ್‌ನಲ್ಲಿ ಗಮನಾರ್ಹ ಬದಲಾವಣೆಗಳ ಜೊತೆಗೆ ಹಲವಾರು ನವೀಕರಣಗಳು ಮತ್ತು ಹೆಚ್ಚುವರಿ ಫೀಚರ್ ಗಳನ್ನು ಸಹ ಹೊಂದಿರುತ್ತದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಮಹೀಂದ್ರಾ ಎಕ್ಸ್‌ಯುವಿ 500

ಹೊಸ ತಲೆಮಾರಿನ ಮಹೀಂದ್ರಾ ಎಕ್ಸ್‌ಯುವಿ 500 ಎಸ್‍ಯುವಿಯಲ್ಲಿ ಡೀಸೆಲ್ ಎಂಜಿನ್ ಅನ್ನು ಸಹ ಅಳವಡಿಸುವ ಸಾಧ್ಯತೆಗಳಿದೆ. ಈ ಎಸ್‍ಯುವಿಯಲ್ಲಿ ಹೊಸ 2.0-ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಬಹುದು.

MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ

ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಮಹೀಂದ್ರಾ ಎಕ್ಸ್‌ಯುವಿ 500

2021ರ ಮಹೀಂದ್ರಾ ಎಕ್ಸ್‌ಯುವಿ 500 ಎಸ್‍ಯುವಿನಲ್ಲಿ ಹೊಸ 2.0-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಿದೆ ಎಂದು ವರದಿಗಳು ಪ್ರಕಟವಾಗಿದೆ. ಎರಡು ಎಂಜಿನ್ ಗಳಿಗೆ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿರುತ್ತದೆ. ಹೊಸ ಎಸ್‍ಯುವಿಯು ಎಡಬ್ಲ್ಯೂಡಿ(ಆಲ್-ವೀಲ್ ಡ್ರೈವ್) ಸಿಸ್ಟಂ ಅನ್ನು ಹೊಂದಿರಲಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಮಹೀಂದ್ರಾ ಎಕ್ಸ್‌ಯುವಿ 500

ಮಹೀಂದ್ರಾ ಕಂಪನಿಯು ತನ್ನ ಪ್ರಸ್ತುತ ತಲೆಮಾರಿನ ಬಿಎಸ್-6 ಎಕ್ಸ್‌ಯುವಿ 500 ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು, ಈ ಹೊಸ ಮಹೀಂದ್ರಾ ಎಕ್ಸ್‌ಯುವಿ 500 ಎಸ್‍ಯುವಿಯ ಆರಂಭಿಕ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.13.20 ಲಕ್ಷಗಳಾಗಿದೆ.

MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಮಾರುತಿ ಎಸ್-ಪ್ರೆಸ್ಸೊ ಸಿಎನ್‍ಜಿ ಆವೃತ್ತಿ

ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಮಹೀಂದ್ರಾ ಎಕ್ಸ್‌ಯುವಿ 500

ಬಿಎಸ್-6 ಎಕ್ಸ್‌ಯುವಿ 500 ಎಸ್‍ಯುವಿಯಲ್ಲಿ 2.2-ಲೀಟರ್ ಎಂಹಾಕ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಿದ್ದಾರೆ. ಈ ಎಂಜಿನ್ 155 ಬಿಹೆಚ್‍ಪಿ ಪವರ್ ಮತ್ತು 360 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಆರು-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಅನ್ನು ಅಳವಡಿಸಲಾಗಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಮಹೀಂದ್ರಾ ಎಕ್ಸ್‌ಯುವಿ 500

ಮಹೀಂದ್ರಾ ಎಕ್ಸ್‌ಯುವಿ 500 ದೇಶಿಯ ಮಾರುಕಟ್ಟೆಯಲ್ಲಿ ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ. ಈ ಎಸ್‍ಯುವಿಯು ಕಿಯಾ ಸೆಲ್ಟೋಸ್, ಟಾಟಾ ಹ್ಯಾರಿಯರ್, ಎಂಜಿ ಹೆಕ್ಟರ್, ಹ್ಯುಂಡೈ ಕ್ರೆಟಾ, ಜೀಪ್ ಕಂಪಾಸ್ ಮತ್ತು ಫೋಕ್ಸ್ ವ್ಯಾಗನ್ ಟಿ-ರಾಕ್ ಎಸ್‍ಯುವಿಯುಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
Next-Generation Mahindra XUV500 Spotted Testing Again. Read In Kannada.
Story first published: Thursday, June 25, 2020, 17:59 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more