2021ರ ಏಪ್ರಿಲ್‌ನಲ್ಲಿ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಎಕ್ಸ್‌ಯುವಿ500
ಮಹೀಂದ್ರಾ ಬಿಡುಗಡೆ ಮಾಡಲಿರುವ ಹೊಸ ಕಾರುಗಳ ಪಟ್ಟಿಯಲ್ಲಿ ನ್ಯೂ ಜನರೇಷನ್ ಎಕ್ಸ್‌ಯುವಿ500 ಕಾರು ಮಾದರಿಯು ಕೂಡಾ ಪ್ರಮುಖವಾಗಿದ್ದು, ಇದೇ ವರ್ಷ ಬಿಡುಗಡೆಯಾಗಬೇಕಿದ್ದ ಹೊಸ ಕಾರನ್ನು ಕರೋನಾ ವೈರಸ್ ಪರಿಣಾಮ 2021ಕ್ಕೆ ಮುಂದೂಡಿಕೆ ಮಾಡಲಾಗಿದೆ.

ಮಾಹಿತಿಗಳ ಪ್ರಕಾರ ಹೊಸ ತಲೆಮಾರಿನ ಎಕ್ಸ್‌ಯುವಿ500 ಕಾರು ಮಾದರಿಯು 2021ರ ಏಪ್ರಿಲ್‌ನಲ್ಲಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದ್ದು, ಹೊಸ ಕಾರು ಭಾರೀ ಬದಲಾವಣೆಯೊಂದಿಗೆ ರಸ್ತೆಗಿಳಿಯಲಿದೆ. ಹೊಸ ಕಾರು ಮಧ್ಯಮ ಕ್ರಮಾಂಕದ ಎಸ್‌ಯುವಿ ಮಾದರಿಗಳಲ್ಲೇ ಹಲವು ಹೊಸ ಐಷಾರಾಮಿ ಫೀಚರ್ಸ್‌ಗಳನ್ನು ಪಡೆದುಕೊಳ್ಳಲಿದ್ದು, ಸದ್ಯಕ್ಕೆ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದೆ.

ನ್ಯೂ ಜನರೇಷನ್ ಮಾದರಿಯು ಪೆಟ್ರೋಲ್ ಎಂಜಿನ್ ಸೇರಿದಂತೆ ಹಲವು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುವ ಸಿದ್ದತೆಯಲ್ಲಿದ್ದು, ಸದ್ಯಕ್ಕೆ ಬಿಎಸ್-6 ಡೀಸೆಲ್ ಎಂಜಿನ್‌ನೊಂದಿಗೆ ಮಾತ್ರವೇ ಖರೀದಿಗೆ ಲಭ್ಯವಿದೆ.

ಹೊಸ ತಲೆಮಾರಿನ ಎಕ್ಸ್‌ಯುವಿ500 ಕಾರಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಲಾಗಿದ್ದು, ಹೊಸ ಕಾರನ್ನು ಮಹೀಂದ್ರಾ ಕಂಪನಿಯ ಹೊಸ ಮೊನೊಕೊಕ್ ಪ್ಲಾಟ್‌ಫಾರ್ಮ್‌ನ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ.

ನ್ಯೂ ಜನರೇಷನ್ ಮಾದರಿಯಲ್ಲಿ ನವೀಕರಿಸಲಾದ ಮುಂಭಾಗದ ಗ್ರಿಲ್, ಹೊಸ ವಿನ್ಯಾಸದ ಎಲ್ಇಡಿ ಹೆಡ್‌ಲ್ಯಾಂಪ್ ಮತ್ತು ಹಿಂಭಾಗದಲ್ಲಿ ನವೀಕರಿಸಲಾದ ಬಂಪರ್ ಪ್ರಮುಖ ಆಕರ್ಷಣೆಯಾಗಲಿದ್ದು, ಮಧ್ಯಮ ಗಾತ್ರದ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿದೆ. ಹಾಗೆಯೇ ಹೊಸ ಕಾರು ಪ್ರಸ್ತುತ ಮಾದರಿಗಿಂತಲೂ ಭಾರೀ ಬದಲಾವಣೆಯನ್ನು ಪಡೆದುಕೊಂಡಿದ್ದು, ನವೀಕೃತ ಮುಂಭಾಗದ ಗ್ರಿಲ್, ಬ್ಯಾನೆಟ್, ಬಂಪರ್ ಮತ್ತು ಎಲ್ಇಡಿ ಹೆಡ್‌ಲ್ಯಾಂಪ್ ಕ್ಲಸ್ಟರ್, ಹಿಂಭಾಗ ಬಂಪರ್, ಟೈಲ್‌ಗೆಟ್ ವಿನ್ಯಾಸವು ಆಕರ್ಷಕವಾಗಿರಲಿವೆ.

ಹೊಸ ಕಾರಿನ ಒಳಭಾಗದ ತಾಂತ್ರಿಕ ಅಂಶಗಳಲ್ಲೂ ಸಾಕಷ್ಟು ಬದಲಾವಣೆಗೊಳಿಸಲಾಗಿದ್ದು, ವೆಂಟೆಲೆಟೆಡ್ ಆಸನ ಸೇರಿದಂತೆ ಹಲವು ಐಷಾರಾಮಿ ಫೀಚರ್ಸ್ ಹೊಸ ಕಾರಿನಲ್ಲಿರಲಿವೆ.

ಇದರೊಂದಿಗೆ ಹೊಸ ಕಾರಿನಲ್ಲಿ ರಡಾರ್ ಸೌಲಭ್ಯವನ್ನು ಅಳವಡಿಸಲಾಗಿದ್ದು, ಇದು ಅಗತ್ಯ ಸಂದರ್ಭಗಳಲ್ಲಿ ಅಟೊನೊಮಸ್ ಬ್ರೇಕಿಂಗ್ ಸಿಸ್ಟಂನೊಂದಿಗೆ ರಸ್ತೆ ಗುಂಡಿಗಳ ಬಗೆಗೆ ಚಾಲಕನಿಗೆ ಎಚ್ಚರಿಸಲಿದೆ. ಈ ಮೂಲಕ ರಸ್ತೆ ಮೇಲೆ ನಿಗಾ ಇಡಲಿರುವ ಹೊಸ ತಂತ್ರಜ್ಞಾನ ಸೌಲಭ್ಯವು ವಾಯ್ಸ್ ಮೂಲಕ ಚಾಲಕನಿಗೆ ಎಚ್ಚರಿಕೆಯ ಸಂದೇಶ ರವಾನಿಸಲಿದ್ದು, ರಿವರ್ಸ್ ಸಂದರ್ಭದಲ್ಲಿ 3ಡಿ ಪನೊರಮಿಕ್ ವ್ಯೂ ಸೌಲಭ್ಯ ಒದಗಿಸುತ್ತದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಜೊತೆಗೆ ಹೊಸ ಕಾರಿನ ಕ್ಯಾಬಿನ್ ವಿನ್ಯಾಸವನ್ನು ಕೂಡಾ ಸಾಕಷ್ಟು ಬದಲಾವಣೆ ಪಡೆದುಕೊಂಡಿದ್ದು, 6 ಮತ್ತು 7 ಸೀಟುಗಳ ಆಯ್ಕೆಗಳನ್ನು ಹೊಂದಿರಲಿದೆ. ಇದು ಎಂಜಿ ಹೆಕ್ಟರ್ ಪ್ಲಸ್ 6-ಸೀಟರ್ ಮತ್ತು ಮುಂಬರುವ ಟಾಟಾ ಗ್ರಾವಿಟಾಸ್ ಎಸ್‍ಯುವಿಗಳಿಗೆ ನೇರವಾಗಿ ಪೈಪೋಟಿ ನೀಡುತ್ತದೆ.

ಎಂಜಿನ್ ಮತ್ತು ಪರ್ಫಾಮೆನ್ಸ್
ನ್ಯೂ ಜನರೇಷನ್ ಎಕ್ಸ್‌ಯುವಿ500 ಕಾರು ಮಾದರಿಯು 2.2 ಡೀಸೆಲ್ ಎಂಜಿನ್ ಜೊತೆ ಹೊಸ ಥಾರ್‌ನಲ್ಲಿ ನೀಡಲಾಗಿರುವ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಸಹ ಪಡೆದುಕೊಳ್ಳಲಿದ್ದು, ಹಲವಾರು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್‌ಗಳೊಂದಿಗೆ ಗ್ರಾಹಕರನ್ನು ಗಮನಸೆಳೆಯಲಿವೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಸದ್ಯ ಮಾರುಕಟ್ಟೆಯಲ್ಲಿರುವ ಎಕ್ಸ್‌ಯುವಿ500 ಕಾರು ಮಾದರಿಯು ಪ್ರಮುಖ ನಾಲ್ಕು ವೆರಿಯೆಂಟ್‌ಗಳೊಂದಿಗೆ 2.2-ಲೀಟರ್ ಡೀಸೆಲ್ ಎಂಜಿನ್‌ನೊಂದಿಗೆ ಮಾರಾಟಕ್ಕೆ ಲಭ್ಯವಿದ್ದು, ಹೊಸ ಕಾರು ವಿವಿಧ ಎಂಜಿನ್ ಆಯ್ಕೆಯೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18.50 ಲಕ್ಷ ಬೆಲೆ ಹೊಂದುವ ಸಾಧ್ಯತೆಗಳಿವೆ.


Click it and Unblock the Notifications