ಹೊಸ ಬದಲಾವಣೆಯೊಂದಿಗೆ ಬಿಡುಗಡೆಯಾಗಲಿದೆ 2ನೇ ತಲೆಮಾರಿನ ವಿಟಾರಾ ಬ್ರೆಝಾ

ಮಾರುತಿ ಸುಜುಕಿ ಕಂಪನಿಯು ಸದ್ಯ ಕಾರು ಉತ್ಪಾದನೆ ಮತ್ತು ಮಾರಾಟದಲ್ಲಿ ಅಗ್ರಸ್ಥಾನದಲ್ಲಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಉತ್ಪನ್ನಗಳೊಂದಿಗೆ ಕಾರು ಮಾರಾಟದಲ್ಲಿ ಅಧಿಪತ್ಯವನ್ನು ಮುಂದುವರಿಸುವ ಸುಳಿವು ನೀಡಿದೆ.

ಹೊಸ ಬದಲಾವಣೆಯೊಂದಿಗೆ ಬಿಡುಗಡೆಯಾಗಲಿದೆ 2ನೇ ತಲೆಮಾರಿನ ವಿಟಾರಾ ಬ್ರೆಝಾ

ಪ್ರಸ್ತುತ ಮಾರುಕಟ್ಟೆಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಹಲವಾರು ಮಾದರಿಗಳ ಮಾರಾಟವನ್ನು ಹೊಂದಿರುವ ಮಾರುತಿ ಸುಜುಕಿಯು ಟಾಪ್ 10 ಕಾರುಗಳ ಮಾರಾಟ ಪಟ್ಟಿಯಲ್ಲಿ ಒಟ್ಟು 6 ಕಾರು ಮಾದರಿಗಳ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದು, ಮುಂದಿನ 3 ವರ್ಷಗಳ ಅವಧಿಗಾಗಿ ಮತ್ತಷ್ಟು ಹೊಸ ಕಾರು ಉತ್ಪನ್ನಗಳನ್ನು ಬಿಡುಗಡೆಗಾಗಿ ಸಿದ್ದತೆ ನಡೆಸುತ್ತಿದೆ. ಮಾಹಿತಿಗಳ ಪ್ರಕಾರ ಮಾರುತಿ ಕಂಪನಿಯು 2021ರ ಆರಂಭದಿಂದ 2023ರ ಅಂತ್ಯದೊಳಗೆ ಆರು ಹೊಸ ಕಾರುಗಳನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ.

ಹೊಸ ಬದಲಾವಣೆಯೊಂದಿಗೆ ಬಿಡುಗಡೆಯಾಗಲಿದೆ 2ನೇ ತಲೆಮಾರಿನ ವಿಟಾರಾ ಬ್ರೆಝಾ

ಹೊಸ ಎಸ್‌ಯುವಿ ಕಾರುಗಳ ಪಟ್ಟಿಯಲ್ಲಿ ಮೆಡ್ ಇನ್ ಇಂಡಿಯಾ ಜಿಮ್ನಿ, ಎರಡನೇ ತಲೆಮಾರಿನ ವಿಟಾರಾ ಬ್ರೆಝಾ ಕಂಪ್ಯಾಕ್ಟ್ ಎಸ್‌ಯುವಿ, ವಿಟಾರಾ ಫುಲ್ ಸೈಜ್ ಎಸ್‌ಯುವಿ ಸೇರಿದಂತೆ ತಲಾ ಒಂದೊಂದು ಕ್ರಾಸ್ ಓವರ್ ಎಸ್‌ಯುವಿ, ಹೊಚ್ಚ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮತ್ತು ಎಂಪಿವಿ ಕಾರು ಮಾದರಿಯು ಬಿಡುಗಡೆಯ ಪಟ್ಟಿಯಲ್ಲಿವೆ.

ಹೊಸ ಬದಲಾವಣೆಯೊಂದಿಗೆ ಬಿಡುಗಡೆಯಾಗಲಿದೆ 2ನೇ ತಲೆಮಾರಿನ ವಿಟಾರಾ ಬ್ರೆಝಾ

ಪ್ರತಿ ಆರು ತಿಂಗಳಿಗೆ ಒಂದರಂತೆ ಹೊಸ ಕಾರುಗಳನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿರುವ ಮಾರುತಿ ಸುಜುಕಿಯು ಪ್ರಸ್ತುತ ಮಾರುಕಟ್ಟೆಯಲ್ಲಿ ಹೆಚ್ಚು ಬೇಡಿಕೆಯಲ್ಲಿರುವ ಕಿಯಾ ಸೆಲ್ಟೊಸ್ ಮತ್ತು ಹ್ಯುಂಡೈ ಕ್ರೆಟಾ ಕಾರಿಗೆ ಪೈಪೋಟಿಯಾಗಿ ಹೊಸ ಕಾರು ಮಾದರಿಯೊಂದನ್ನು ಅಭಿವೃದ್ದಿಗೊಳಿಸುತ್ತಿದೆ.

ಹೊಸ ಬದಲಾವಣೆಯೊಂದಿಗೆ ಬಿಡುಗಡೆಯಾಗಲಿದೆ 2ನೇ ತಲೆಮಾರಿನ ವಿಟಾರಾ ಬ್ರೆಝಾ

ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಕಾರು ಮಾರಾಟದಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿರುವ ಹೊಸ ವಿಟಾರಾ ಬ್ರೆಝಾ ಮಾದರಿಯು 2022ರ ಆರಂಭದಲ್ಲಿ ಬಿಡುಗಡೆಯಾಗಲಿದ್ದು, ಹೊಸ ಎಂಜಿನ್ ಆಯ್ಕೆ ಪಡೆದುಕೊಳ್ಳುವ ಸಾಧ್ಯತೆಗಳಿವೆ.

ಹೊಸ ಬದಲಾವಣೆಯೊಂದಿಗೆ ಬಿಡುಗಡೆಯಾಗಲಿದೆ 2ನೇ ತಲೆಮಾರಿನ ವಿಟಾರಾ ಬ್ರೆಝಾ

ಇನ್ನು ಬಿಸ್-6 ಎಮಿಷನ್ ಜಾರಿ ನಂತರ ಹೊಸ ಕಾರುಗಳ ಮಾರಾಟದಲ್ಲಿ ಭಾರೀ ಬದಲಾವಣೆ ಪರಿಚಯಿಸಿರುವ ಮಾರುತಿ ಸುಜುಕಿ ಬಜೆಟ್ ಕಾರುಗಳ ಮಾದರಿಗಳ ಮಾರಾಟದ ಮೇಲೆ ಹೆಚ್ಚು ಒತ್ತು ನೀಡುತ್ತಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡಲು ಸಿದ್ದವಾಗಿದೆ.

ಹೊಸ ಬದಲಾವಣೆಯೊಂದಿಗೆ ಬಿಡುಗಡೆಯಾಗಲಿದೆ 2ನೇ ತಲೆಮಾರಿನ ವಿಟಾರಾ ಬ್ರೆಝಾ

ಹೊಸ ಎಮಿಷನ್ ಜಾರಿ ನಂತರ ಡೀಸೆಲ್ ಕಾರುಗಳ ಮಾರಾಟವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿರುವ ಮಾರುತಿ ಸುಜುಕಿ ಕಂಪನಿಯು ಪೆಟ್ರೋಲ್, ಪೆಟ್ರೋಲ್ ಸ್ಮಾರ್ಟ್ ಹೈಬ್ರಿಡ್ ಮತ್ತು ಸಿಎನ್‌ಜಿ ಕಾರುಗಳ ಮೇಲೆ ಹೆಚ್ಚು ಒತ್ತು ನೀಡುತ್ತಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಕಾರು ಮಾದರಿಗಳನ್ನು ಭಾರತದಲ್ಲಿ ಬಿಡುಗಡೆಗೆ ಸಿದ್ದವಾಗುತ್ತಿದೆ.

ಹೊಸ ಬದಲಾವಣೆಯೊಂದಿಗೆ ಬಿಡುಗಡೆಯಾಗಲಿದೆ 2ನೇ ತಲೆಮಾರಿನ ವಿಟಾರಾ ಬ್ರೆಝಾ

ಇದರಲ್ಲಿ ಹೊಸ ತಲೆಮಾರಿನ ಆಲ್ಟೊ ಸೇರಿದಂತೆ ಹೊಚ್ಚ ಹೊಸ ಕಾರು ಮಾದರಿಯಾದ ವಿಟಾರಾ ಎಸ್‌ಯುವಿ ಕೂಡಾ ಒಂದಾಗಿದೆ. ವಿಟಾರಾ ಬ್ರೆಝಾ ಕಾರುಗಳಿಂತಲೂ ವಿಭಿನ್ನವಾಗಿರುವ ವಿಟಾರಾ ಎಸ್‌ಯುವಿ ಕಾರು ಎಸ್ ಕ್ರಾಸ್‌ ಕಾರುಗಳಿಂತಲೂ ಹೆಚ್ಚಿನ ಮಟ್ಟದ ಐಷಾರಾಮಿ ಸೌಲಭ್ಯಗಳನ್ನು ಹೊಂದಿರಲಿದೆ.

ಹೊಸ ಬದಲಾವಣೆಯೊಂದಿಗೆ ಬಿಡುಗಡೆಯಾಗಲಿದೆ 2ನೇ ತಲೆಮಾರಿನ ವಿಟಾರಾ ಬ್ರೆಝಾ

ಹೊಸ ವಿಟಾರಾ ಎಸ್‌ಯುವಿ ಮಾದರಿಯು 2021ರ ಎರಡನೇ ತ್ರೈಮಾಸಿಕ ಅವಧಿಗೆ ಭಾರತದಲ್ಲಿ ಬಿಡುಗಡೆಗೊಳ್ಳುವ ಸಾಧ್ಯತೆಗಳಿದ್ದು, ಈ ಕಾರು ಕಿಯಾ ಸೆಲ್ಟೊಸ್ ಮತ್ತು ಹ್ಯುಂಡೈ ಕ್ರೆಟಾ ಕಾರು ಮಾದರಿಗಳಿಗೆ ಭರ್ಜರಿ ಪೈಟೋಟಿ ನೀಡಲಿದೆ.

ಹೊಸ ಬದಲಾವಣೆಯೊಂದಿಗೆ ಬಿಡುಗಡೆಯಾಗಲಿದೆ 2ನೇ ತಲೆಮಾರಿನ ವಿಟಾರಾ ಬ್ರೆಝಾ

ಹೊಸ ಕಾರಿನ ಉತ್ಪಾದನಾ ಆವೃತ್ತಿಯನ್ನು ಈಗಾಗಲೇ ಭಾರತದಲ್ಲಿ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ನಡೆಸಲಾಗಿದ್ದು, ಹೊಸ ಕಾರಿನ ಡಿಸೈನ್‌ಗಳು ಎಸ್‌ಯುವಿ ಪ್ರಿಯರನ್ನು ಸೆಳೆಯುವುದರಲ್ಲಿ ಯಾವುದೇ ಅನುಮಾನವಿಲ್ಲ.

ಹೊಸ ಬದಲಾವಣೆಯೊಂದಿಗೆ ಬಿಡುಗಡೆಯಾಗಲಿದೆ 2ನೇ ತಲೆಮಾರಿನ ವಿಟಾರಾ ಬ್ರೆಝಾ

ಮಾರುತಿ ಸುಜುಕಿ ಕಂಪನಿಯು ಈ ಹಿಂದಿನ ವಿಟಾರಾ ಗ್ರ್ಯಾಂಡ್ ಎಸ್‌ಯುವಿ ಮಾರಾಟದಲ್ಲಿ ಆದ ಹಿನ್ನಡೆಯನ್ನು ಹೊಸ ಕಾರಿನ ಮೂಲಕ ಸುಧಾರಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದು, ಹೊಸ ಕಾರಿನ ಮೂಲಕ ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುವ ಯೋಜನೆಯಲ್ಲಿದೆ.

ಹೊಸ ಬದಲಾವಣೆಯೊಂದಿಗೆ ಬಿಡುಗಡೆಯಾಗಲಿದೆ 2ನೇ ತಲೆಮಾರಿನ ವಿಟಾರಾ ಬ್ರೆಝಾ

ಮಿಡ್ ರೇಂಜ್ ಎಸ್‍ಯುವಿ ವೈಶಿಷ್ಟ್ಯತೆ ಹೊಂದಿರುವ ವಿಟಾರಾ ಕಾರು ಹತ್ತು ಹಲವು ಐಷಾರಾಮಿ ಫೀಚರ್ಸ್‌ಗಳನ್ನು ಹೊಂದಿದ್ದು, ಹೊಸ ಕಾರು ಮಾರುತಿ ಸುಜುಕಿ ಕಂಪನಿಗೆ ಮತ್ತಷ್ಟು ಜನಪ್ರಿಯತೆ ತಂದುಕೊಡಲಿದೆ. ಭಾರತದಲ್ಲಿ ಬಿಡುಗಡೆಯಾಗಲಿರುವ ವಿಟಾರಾ ಕಾರು 5 ಸೀಟರ್ ಮತ್ತು 7 ಸೀಟರ್ ಆವೃತ್ತಿಯಲ್ಲಿ ಬರಲಿದೆ ಎನ್ನಲಾಗಿದ್ದು, ಹೊಸ ಕಾರಿನ ತಾಂತ್ರಿಕ ಅಂಶಗಳ ಬಗೆಗೆ ಯಾವುದೇ ನಿಖರ ಮಾಹಿತಿಗಳಿಲ್ಲ.

Most Read Articles

Kannada
English summary
Second-Gen Maruti Suzuki Vitara Brezza Could Launch In 2022. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X