ಹೊಸ ಐ20 ಕಾರಿನ ವಾಕ್‍ರೌಂಡ್ ವೀಡಿಯೋ ಬಿಡುಗಡೆಗೊಳಿಸಿದ ಹ್ಯುಂಡೈ

ಹ್ಯುಂಡೈ ಕಂಪನಿಯು ತನ್ನ ಹೊಸ ತಲೆಮಾರಿನ ಐ20 ಕಾರನ್ನು ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ಹೊಸ ಹ್ಯುಂಡೈ ಐ20 ಕಾರಿನ ಅಧಿಕೃತ ವಾಕ್‍ರೌಂಡ್ ವೀಡಿಯೋವನ್ನು ಬಿಡುಗಡೆಗೊಳಿಸಿದೆ.

ಹೊಸ ಐ20 ಕಾರಿನ ವಾಕ್‍ರೌಂಡ್ ವೀಡಿಯೋ ಬಿಡುಗಡೆಗೊಳಿಸಿದ ಹ್ಯುಂಡೈ

ಹ್ಯುಂಡೈ ಕಂಪನಿಯು ಅಧಿಕೃತವಾಗಿ ಬಿಡುಗಡೆಗೊಳಿಸಿರುವ ವೀಡಿಯೋದಲ್ಲಿ ಕಾರಿನ ಮುಂಭಾಗದಲ್ಲಿರು ಕ್ಯಾಸ್ಕೇಡಿಂಗ್ ಗ್ರಿಲ್ ಅನ್ನು ನೋಡಬಹುದಾಗಿದೆ. ಹಿಂದಿನ ಐ20 ಮಾದರಿಗೆ ಹೋಲಿಸಿದರೆ ಹೆಡ್ ಲ್ಯಾಂಪ್ ಮತ್ತು ಸೈಡ್ ಫ್ರೋಪೈಲ್ ವಿನ್ಯಾಸವನ್ನು ನವೀಕರಿಸಲಾಗಿದೆ ದೊಡ್ಡ ಕ್ರೀಸ್ ಲೈನ್ ಗಳನ್ನು ಒಳಗೊಂಡಿದೆ. ಈ ಹೊಸ ಐ20 ಕಾರು ಸಾಕಷ್ಟು ಸ್ಪೋರ್ಟಿಯರ್ ಮತ್ತು ಸ್ಟೈಲಿಶ್ ಲುಕ್ ಅನ್ನು ಹೊಂದಿದೆ. ಐ20 ಹ್ಯುಂಡೈ ಕಂಪನಿಯ ಸರಣಿಯಲ್ಲಿರುವ ಜನಪ್ರಿಯ ಕಾರುಗಳಲ್ಲಿ ಒಂದಾಗಿದೆ.

ಹೊಸ ಐ20 ಕಾರಿನ ವಾಕ್‍ರೌಂಡ್ ವೀಡಿಯೋ ಬಿಡುಗಡೆಗೊಳಿಸಿದ ಹ್ಯುಂಡೈ

ಹೊಸ ಹುಂಡೈ ಐ20 ಕಾರಿನ ಬದಿಯ ಪಿಲ್ಲರ್‍‍ಗಳು ಕಪ್ಪು ಬಣ್ಣವನ್ನು ಹೊಂದಿದೆ. ಎರಡು ಟೇಲ್‍ ಲ್ಯಾಂಪ್‍‍ಗಳನ್ನು ಅಳವಡಿಸಲಾಗಿದೆ. ವಿಡಬ್ಲ್ಯೂ ಟೈಗನ್‍‍‍ನಲ್ಲಿ ಇರುವಂತಹ ಕೆಂಪು ಇ‍ಲ್‍ಇಡಿ ಡಿಆರ್‍ಎಲ್ ಸ್ಟಾಪ್ ಲೈಟ್ ಹಿಂಭಾಗದಲ್ಲಿ ಟೇಲ್‍‍ಲೈಟ್ ಹೊಂದಿದೆ.

ಹೊಸ ಐ20 ಕಾರಿನ ವಾಕ್‍ರೌಂಡ್ ವೀಡಿಯೋ ಬಿಡುಗಡೆಗೊಳಿಸಿದ ಹ್ಯುಂಡೈ

ಹೊಸ ಹ್ಯುಂಡೈ ಕಾರಿನ ಇಂಟಿರಿಯರ್‍‍ನಲ್ಲಿ 4 ಸ್ಫೋಕ್ ಸ್ಟೀಟಿಯರಿಂಗ್ ವ್ಹೀಲ್ ಅನ್ನು ಅಳವಡಿಸಲಾಗಿದೆ. ಇದು ಹೊಸ ಹ್ಯುಂಡೈ ಕ್ರೆಟಾ ಕಾರಿನಲ್ಲಿರುವ ಸ್ಟಿಟಿಯರಿಂಗ್ ಮಾದರಿಯಲ್ಲಿದೆ. ಹೊಸ ಹ್ಯುಂಡೈ ಐ20 ಕಾರಿನಲ್ಲಿ ಆಡಿಯೊ ಸಿಸ್ಟಂ, ಕ್ರೂಸ್ ಕಂಟ್ರೋಲ್ ಮತ್ತು ಫುಲ್-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್‌ ಅನ್ನು ಒಳಗೊಂಡಿದೆ.

ಹೊಸ ಐ20 ಕಾರಿನ ವಾಕ್‍ರೌಂಡ್ ವೀಡಿಯೋ ಬಿಡುಗಡೆಗೊಳಿಸಿದ ಹ್ಯುಂಡೈ

ಈ ಹೊಸ ಕಾರಿನಲ್ಲಿ 10.25 ಇಂಚಿನ ಡಿಜಿಟಲ್ ಕ್ಲಸ್ಟರ್ ಅನ್ನು ಅಳವಡಿಸಲಾಗಿದೆ. ಈ ಕಾರಿನ ಇಂಟಿರಿಯರ್‍‍ನಲ್ಲಿ ಆ್ಯಪಲ್ ಕಾರ್‍‍ಪ್ಲೇ ಮತ್ತು ಆಂಡ್ರಾಯ್ಡ್ ಆಟೋ, ಹ್ಯುಂಡೈನ ಕನೆಕ್ಟಿವಿಟಿ ಸೂಟ್ ಮತ್ತು ಇತರ ಹಲವಾರು ಫೀಚರ್‍‍ಗಳನ್ನು ಹೊಂದಿದೆ. ಯುಎಸ್‌ಬಿ ಪೋರ್ಟ್‌ ಮತ್ತು ವೈರ್‌ಲೆಸ್ ಚಾರ್ಜಿಂಗ್ ಪ್ಯಾಡ್ ಅನ್ನು ಸಹ ಹೊಂದಿದೆ.

ಹೊಸ ಐ20 ಕಾರಿನ ವಾಕ್‍ರೌಂಡ್ ವೀಡಿಯೋ ಬಿಡುಗಡೆಗೊಳಿಸಿದ ಹ್ಯುಂಡೈ

ಹೊಸ ಹ್ಯುಂಡೈ ಐ20 ಕಾರಿನಲ್ಲಿ ಹೊಸ 16 ಡ್ಯುಯಲ್ ಟೋನ್ ಅಲಾಯ್ ವ್ಹೀಲ್‍‍ಗಳು, ಇಂಟಿಗ್ರೇಟೆಡ್ ಟರ್ನ್ ಇಂಡಿಕೇಟರ್‍‍ಗಳೊಂದಿಗೆ ಸ್ಲಿಕ್ ಒಆರ್‍‍ವಿಎಂಗಳು ಮತ್ತು ಶಾರ್ಕ್ ಫಿನ್ ಆಂಟೆನಾವನ್ನು ಕೂಡ ಆಳವಡಿಸಲಾಗಿದೆ.

MOST READ: ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಹ್ಯುಂಡೈ ಎಲೈಟ್ ಐ20 ಕಾರು

ಹೊಸ ಐ20 ಕಾರಿನ ವಾಕ್‍ರೌಂಡ್ ವೀಡಿಯೋ ಬಿಡುಗಡೆಗೊಳಿಸಿದ ಹ್ಯುಂಡೈ

ಗ್ರ್ಯಾಂಡ್ ಐ10 ನಿಯೋಸ್ ಕಾರಿನಲ್ಲಿರುವ ಮಾದರಿಯ 1.0 ಲೀಟರ್ ಪೆಟ್ರೋಲ್ ಟರ್ಬೊ ಎಂಜಿನ್ ಅನ್ನು ಅಳವಡಿಸುವ ಸಾಧ್ಯತೆಗಳಿದೆ. ಈ ಎಂಜಿನ್ 100 ಬಿ‍‍ಹೆಚ್‍‍ಪಿ ಪವರ್ ಮತ್ತು 172 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍‍ನೊಂದಿಗೆ 5 ಸ್ಫೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಿದೆ. ಈ ಎಂಜಿನ್ ಪ್ರತಿ ಲೀಟರ್‍‍ಗೆ 20.3 ಕಿ.ಮೀ ಮೈಲೇಜ್ ನೀಡಬಹುದು.

MOST READ: ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಮಾರುತಿ ಸುಜುಕಿ ಸೆಲೆರಿಯೊ ಎಕ್ಸ್

ಇದರೊಂದಿಗೆ ಪ್ರಸ್ತುತ ಮಾರುಕಟ್ಟೆಯಲ್ಲಿ ಇರುವ ಮಾದರಿಯಂತೆ 1.2-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು ಕಿಯಾ ಸೆಲ್ಟೋಸ್‌ನಿಂದ ಎರವಲು ಪಡೆದ 1.5-ಲೀಟರ್ ಡಿಟೂನ್ಡ್ ಡೀಸೆಲ್ ಎಂಜಿನ್ ಅನ್ನು ಹೊಂದಿರಲಿದೆ.

MOST READ: ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಮಾರುತಿ ಸುಜುಕಿ ಜಿಮ್ನಿ ಹೀಗಿರಲಿದೆ

ಹೊಸ ಐ20 ಕಾರಿನ ವಾಕ್‍ರೌಂಡ್ ವೀಡಿಯೋ ಬಿಡುಗಡೆಗೊಳಿಸಿದ ಹ್ಯುಂಡೈ

ಹೊಸ ಹ್ಯುಂಡೈ ಐ20 ಕಾರು ಬಿಡುಗಡೆಯಾದ ನಂತರ ಮಾರುತಿ ಸುಜುಕಿ ಕಂಪನಿಯ ಬಲೆನೊ, ಫೋರ್ಡ್ ಫ್ರೀ‍‍ಸ್ಟೈಲ್, ಟಾಟಾ ಆಲ್ಟ್ರೋಜ್ ಹಾಗೂ ಹೋಂಡಾ ಜಾಜ್‍ ಕಾರುಗಳಿಗೆ ಪೈಪೋಟಿ ನೀಡುತ್ತದೆ. ಹೊಸ ಹ್ಯುಂಡೈ ಐ20 ಕಾರಿನಲ್ಲಿ 1.0-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸುವ ಮೂಲಕ ಕಾರ್ಯಕ್ಷಮತೆಯನ್ನು ಹೆಚ್ಚಿಸಿದೆ.

Most Read Articles

Kannada
English summary
Next-Generation Hyundai i20 Official Walkaround Video Released. Read in Kannada.
Story first published: Saturday, March 28, 2020, 18:11 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X