ಕರೋನಾ ವೈರಸ್ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಸಂಗ್ರಹಕ್ಕೆ ಬ್ರೇಕ್

ಕರೋನಾ ವೈರಸ್ ಹಿನ್ನಲೆಯಲ್ಲಿ ಇಡೀ ರಾಷ್ಟ್ರಾದ್ಯಂತ 21 ದಿನಗಳ ಕಾಲ ಲಾಕ್ ಡೌನ್ ಮಾಡಲಾಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದಕ್ಕಾಗಿ ಹಲವಾರು ಕಠಿಣ ಕ್ರಮಗಳನ್ನು ಜಾರಿಗೆ ತಲಾಗಿದೆ.

ಕರೋನಾ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಸಂಗ್ರಹಕ್ಕೆ ಬ್ರೇಕ್

ವಿಶ್ವಾದ್ಯಂತ ಈಗಾಗಲೇ 21 ಸಾವಿರಕ್ಕಿಂತಲೂ ಹೆಚ್ಚು ಜನರನ್ನು ಬಲಿ ಪಡೆದಿರುವ ಕರೋನಾ ವೈರಸ್ ಮಹಾಮಾರಿಯ ತಡೆಗೆ ಜಗತ್ತಿನ ಎಲ್ಲಾ ರಾಷ್ಟ್ರಗಳು ಶಕ್ತಿ ಮೀರಿ ಪ್ರಯತ್ನಗಳನ್ನು ನಡೆಸಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹ ಹಲವು ಕಠಿಣ ಕ್ರಮಗಳನ್ನು ಜಾರಿಗೆ ತಂದಿವೆ. ಕರೋನಾ ವೈರಸ್ ಅನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಈಗಗಾಲೇ ಕೇಂದ್ರ ಸರ್ಕಾರ ಮತ್ತು ವಿವಿಧ ರಾಜ್ಯಗಳು ಸಹ ಗರಿಷ್ಠ ಮಟ್ಟದ ಮುಂಜಾಗ್ರತ ಕ್ರಮಗಳೊಂದಿಗೆ ಲಾಕ್ ಡೌನ್ ಮಾಡಲಾಗಿದ್ದು, ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿನ ಟೋಲ್ ಸಂಗ್ರಹಕ್ಕೆ ಬ್ರೇಕ್ ಹಾಕಲಾಗಿದೆ.

ಕರೋನಾ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಸಂಗ್ರಹಕ್ಕೆ ಬ್ರೇಕ್

ರಾಜ್ಯದ ಗಡಿಭಾಗಗಳನ್ನು ಈಗಾಗಲೇ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದು, ತುರ್ತು ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಹೀಗಿದ್ದರೂ ವೈರಸ್ ಭೀತಿ ಹಿನ್ನಲೆಯಲ್ಲಿ ತಾತ್ಕಾಲಿಕವಾಗಿ ಯಾವುದೇ ಟೋಲ್ ಸಂಗ್ರಹ ಮಾಡದಿರಲು ನಿರ್ಧರಿಸಲಾಗಿದೆ.

ಕರೋನಾ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಸಂಗ್ರಹಕ್ಕೆ ಬ್ರೇಕ್

ಜೊತೆಗೆ ಹೆದ್ದಾರಿಗಳಲ್ಲಿ ಸಂಚರಿಸುತ್ತಿರುವ ತುರ್ತುವಾಹನಗಳಿಗೆ ವೈರಸ್ ಹರಡದಂತೆ ನಂಜು ನಿರೋಧಕ(ಡಿಸ್ ಇನ್ಫೆಕ್ಷನ್) ರಾಸಾಯನಿಕವನ್ನು ಆರೋಗ್ಯ ಇಲಾಖೆಯ ಸಿಬ್ಬಂದಿಯ ಸಹಾಯದೊಂದಿಗೆ ಸಿಂಪರಣೆ ಮಾಡಲಾಗುತ್ತಿದೆ.

ಕರೋನಾ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಸಂಗ್ರಹಕ್ಕೆ ಬ್ರೇಕ್

ಈ ಹಿಂದೆ ಪ್ರತಿ ದಿನ ಸರಾಸರಿಯಾಗಿ ರೂ.85 ಕೋಟಿ ಶುಲ್ಕ ಸಂಗ್ರಹ ಮಾಡುತ್ತಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ(ಫಾಸ್ಟ್‌ಟ್ಯಾಗ್) ಮೂಲಕ ಹೊಸ ಬದಲಾವಣೆಗೆ ಕಾರಣವಾಗಿದ್ದು, ಆದರೆ ವೈರಸ್ ಭೀತಿ ಹಿನ್ನಲೆಯಲ್ಲಿ ಗಡಿಭಾಗಗಳು ಮುಚ್ಚಿಕೊಂಡಿರುವುದರಿಂದ ಟೋಲ್‌ ಸಂಗ್ರಹವನ್ನು ಮುಂದಿನ ತಿಂಗಳು 15ರ ತನಕ ಸಂಗ್ರಹ ಮಾಡದಿರಲು ನಿರ್ಧರಿಸಲಾಗಿದೆ.

ಕರೋನಾ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಸಂಗ್ರಹಕ್ಕೆ ಬ್ರೇಕ್

ಇನ್ನು ಪರಿಸ್ಥಿತಿಯ ನಿಯಂತ್ರಣಕ್ಕಾಗಿ ಮುಂದಿನ 21 ದಿನ ತನಕ ಇಡೀ ದೇಶವನ್ನೇ ಲಾಕ್‌ಡೌನ್ ಮಾಡಿರುವುದರಿಂದ ಸಾಕಷ್ಟು ಅನಾನುಕೂಲಕತೆಗಳನ್ನು ಉಂಟಾಗಿದ್ದರೂ ವೈರಸ್ ನಿಯಂತ್ರಣಕ್ಕಾಗಿ ಲಾಕ್ ಡೌನ್ ಅನಿವಾರ್ಯವಾಗಿದೆ.

ಕರೋನಾ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಸಂಗ್ರಹಕ್ಕೆ ಬ್ರೇಕ್

ಭಾರತದಲ್ಲಿ ಇದುವರೆಗೆ 606 ಜನರಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿರುವುದಲ್ಲದೆ 10ಕ್ಕೂ ಹೆಚ್ಚು ಜನ ಪ್ರಾಣಕಳೆದುಕೊಂಡಿದ್ದು, ವೈರಸ್ ಹರಡುವಿಕೆಯ ಮೂರನೇ ಮತ್ತು ನಾಲ್ಕನೇ ಹಂತವನ್ನು ತಗ್ಗಿಸುವುದು ಮಹತ್ವದ ಘಟ್ಟವಾಗಿದೆ.

ಕರೋನಾ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಸಂಗ್ರಹಕ್ಕೆ ಬ್ರೇಕ್

ಇದಕ್ಕಾಗಿಯೇ ಸಾರ್ವಜನಿಕರು ಲಾಕ್ ಡೌನ್‌ಗೆ ಸಹಕರಿಸಬೇಕೆಂದು ಸರಕಾರಗಳು ಸಹ ಪದೇ ಪದೇ ಮನವಿ ಮಾಡಿಕೊಳ್ಳುತ್ತಿದ್ದು, ಇದನ್ನು ಸಾರ್ವಜನಿಕರು ಸಹ ಗಂಭೀರವಾಗಿ ತೆಗೆದುಕೊಂಡು ಪಾಲನೆ ಮಾಡಲೇಬೇಕಿದೆ.

ಕರೋನಾ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಸಂಗ್ರಹಕ್ಕೆ ಬ್ರೇಕ್

ಇನ್ನು ವೈರಸ್ ಹರಡದಂತೆ ಅಗತ್ಯ ಕ್ರಮ ಕೈಗೊಂಡಿರುವ ಸ್ಥಳೀಯ ಸರ್ಕಾರಗಳು ಸೋಂಕು ಪಿಡಿತ ಸ್ಥಳಗಳಲ್ಲಿ ನಂಜು ನಿರೋಧಕ(ಡಿಸ್ ಇನ್ಫೆಕ್ಷನ್) ರಾಸಾಯನಿಕವನ್ನು ಸಿಂಪರಣೆ ಮಾಡಲಾಗುತ್ತಿದ್ದು, ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.

ಕರೋನಾ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಸಂಗ್ರಹಕ್ಕೆ ಬ್ರೇಕ್

ನಂಜು ನಿರೋಧಕ(ಡಿಸ್ ಇನ್ಫೆಕ್ಷನ್) ಸಿಂಪರಣೆಗಾಗಿ ಡ್ರೋನ್ ಬಳಕೆ ಮಾಡುತ್ತಿದ್ದು, ಅತಿ ಕಡಿಮೆ ಸಮಯದಲ್ಲಿ ಇದು ಗರಿಷ್ಠ ಪ್ರದೇಶಗಳಲ್ಲಿ ನಂಜು ನಿರೋಧಕವನ್ನು ಸಿಂಪರಣೆ ಮಾಡಲು ಸಾಧ್ಯವಾಗುತ್ತಿದೆ.

ಕರೋನಾ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಸಂಗ್ರಹಕ್ಕೆ ಬ್ರೇಕ್

ಇದರೊಂದಿಗೆ ಕರೋನಾ ವೈರಸ್ ಸೋಂಕಿತರ ಮೇಲೆ ನಿಗಾ ಇಡಲು ವೈದ್ಯಕೀಯ ಕ್ಷೇತ್ರದಲ್ಲಿ ರೋಬೋಟಿಕ್ ತಂತ್ರಜ್ಞಾನವನ್ನು ಬಳಕೆ ಮಾಡಲಾಗುತ್ತಿದ್ದು, ಇದು ಚಿಕಿತ್ಸೆ ನೀಡುವ ವೈದ್ಯರಿಗೂ ವೈರಸ್ ಹರಡುವ ಸಾಧ್ಯತೆಗಳನ್ನು ತಗ್ಗಿಸಲು ಸಹಕಾರಿಯಾಗಲಿದೆ.

More from DriveSpark

Article Published On: Thursday, March 26, 2020, 10:53 [IST]
English summary
NHAI to stop collecting toll across national highways during lockdown. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+