ಹೊಸ ಮ್ಯಾಗ್ನೈಟ್ ಕಾರು ಮಾದರಿಯ ಮೇಲೆ ಭಾರೀ ನೀರಿಕ್ಷೆಯಿಟ್ಟುಕೊಂಡ ನಿಸ್ಸಾನ್

ಜಪಾನ್ ಕಾರು ಮಾರಾಟ ಕಂಪನಿಯಾದ ನಿಸ್ಸಾನ್ ಗ್ಲೋಬಲ್ ಭಾರತದಲ್ಲಿ ಹೊಸ ವಿನ್ಯಾಸದ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟಕ್ಕೆ ಸಿದ್ದವಾಗುತ್ತಿದ್ದು, ಭಾರತದಲ್ಲಿ ಗಹೊಸ ಕಾರು ಭಾರೀ ಪ್ರಮಾಣದಲ್ಲಿ ಮಾರಾಟವಾಗುವ ನೀರಿಕ್ಷೆಯಿದೆ.

ಹೊಸ ಮ್ಯಾಗ್ನೈಟ್ ಕಾರು ಮಾದರಿಯ ಮೇಲೆ ಭಾರೀ ನೀರಿಕ್ಷೆ

ದೇಶಿಯ ಮಾರುಕಟ್ಟೆಯಲ್ಲಿ ಸದ್ಯ ಬಹುತೇಕ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಗಳು ಪ್ರತಿ ತಿಂಗಳು 1 ಸಾವಿರದಿಂದ 5 ಸಾವಿರ ಯುನಿಟ್ ತನಕ ಮಾರಾಟ ಪ್ರಮಾಣ ಹೊಂದಿದ್ದು, ನಿಸ್ಸಾನ್ ಕಂಪನಿಯು ತನ್ನ ಕಾರು ಮಾರಾಟ ಮಳಿಗೆಗಳ ಸಂಖ್ಯೆಯನ್ನು ಆಧರಿಸಿ ಪ್ರತಿ ತಿಂಗಳು ಕನಿಷ್ಠ 2 ಸಾವಿರ ಯುನಿಟ್ ಮಾರಾಟವಾಗುವ ಸಾಧ್ಯತೆಗಳಿವೆ ಎನ್ನುವ ಲೆಕ್ಕಾಚಾರ ಶುರು ಮಾಡಿದೆ. ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ವಿನೂತನ ಹೊಸ ವಿನ್ಯಾಸ ಹೊಂದಿರುವ ಮ್ಯಾಗ್ನೈಟ್ ಕಾರು ಬೆಲೆ ವಿಚಾರವಾಗಿಯೂ ಪ್ರತಿ ಸ್ಪರ್ಧಿ ಕಾರುಗಳಿಗೆ ಪೈಪೋಟಿ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ.

ಹೊಸ ಮ್ಯಾಗ್ನೈಟ್ ಕಾರು ಮಾದರಿಯ ಮೇಲೆ ಭಾರೀ ನೀರಿಕ್ಷೆ

ಬೆಲೆ ಜೊತೆಗೆ ತಾಂತ್ರಿಕಯೂ ಗಮನಸೆಳೆಯಲಿರುವ ಹೊಸ ಕಾರು ಸದ್ಯ ಮಾರುಕಟ್ಟೆಯಲ್ಲಿರುವ ಹ್ಯುಂಡೈ ವೆನ್ಯೂ ಸೇರಿದಂತೆ ಮಾರುತಿ ಸುಜುಕಿ ಬ್ರೆಝಾ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಕಾರುಗಳಿಗೆ ಭರ್ಜರಿಯಾಗಿ ಪೈಪೋಟಿ ನೀಡುವ ತವಕದಲ್ಲಿದೆ.

ಹೊಸ ಮ್ಯಾಗ್ನೈಟ್ ಕಾರು ಮಾದರಿಯ ಮೇಲೆ ಭಾರೀ ನೀರಿಕ್ಷೆ

ಸದ್ಯಕ್ಕೆ ಹೊಸ ಕಾರನ್ನು ಭಾರತದಲ್ಲಿ EM2 ಕೋಡ್ ನೆಮ್ ಆಧಾರದ ಮೇಲೆ ರೋಡ್ ಟೆಸ್ಟಿಂಗ್ ಮಾಡಲಾಗುತ್ತಿದ್ದು, ಹೊಸ ಕಾರಿನ ಅಧಿಕೃತ ಹೆಸರನ್ನು 'ಮ್ಯಾಗ್ನೈಟ್' ಎಂದು ಕರೆಯಲಾಗಿದೆ. ಹೆಸರಿಗೆ ತಕ್ಕಂತೆ ಬಲಿಷ್ಠ ಹೊರ ನೋಟ ಹೊಂದಿರುವ ಹೊಸ ಕಾರು ಕಟಿಂಗ್ಎಡ್ಜ್ ವಿನ್ಯಾಸ ಹೊಂದಿದೆ.

ಹೊಸ ಮ್ಯಾಗ್ನೈಟ್ ಕಾರು ಮಾದರಿಯ ಮೇಲೆ ಭಾರೀ ನೀರಿಕ್ಷೆ

ಹೊಸ ಕಾರಿನ ಅನಾವರಣ ಹೊರತುಪಡಿಸಿ ಕಾರಿನ ಯಾವುದೇ ತಾಂತ್ರಿಕ ಅಂಶಗಳನ್ನು ಬಿಟ್ಟುಕೊಡದ ನಿಸ್ಸಾನ್ ಕಂಪನಿಯು ಶೀಘ್ರದಲ್ಲೇ ಉತ್ಪಾದನಾ ಆವೃತ್ತಿಯೊಂದಿಗೆ ಮತ್ತಷ್ಟು ಮಾಹಿತಿ ಹಂಚಿಕೊಳ್ಳುವ ಸಾಧ್ಯತೆಗಳಿವೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಹೊಸ ಮ್ಯಾಗ್ನೈಟ್ ಕಾರು ಮಾದರಿಯ ಮೇಲೆ ಭಾರೀ ನೀರಿಕ್ಷೆ

ಹೊಸ ಕಾರು ಕಿಕ್ಸ್ ಎಸ್‌ಯುವಿ ಮಾದರಿಗಿಂತಲೂ ಕೆಳದರ್ಜೆಯ ಕಾರು ಮಾದರಿಯಾಗಿ ಮಾರಾಟಗೊಳ್ಳಲಿದ್ದು, ಹೊಸ ಕಾರಿನಲ್ಲಿ ರೆನಾಲ್ಟ್ ಜೊತೆಗೂಡಿ ಅಭಿವೃದ್ದಿಗೊಳಿಸಲಾಗಿರುವ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಅನ್ನು ಬಳಕೆ ಮಾಡಲಾಗುತ್ತಿದೆ.

ಹೊಸ ಮ್ಯಾಗ್ನೈಟ್ ಕಾರು ಮಾದರಿಯ ಮೇಲೆ ಭಾರೀ ನೀರಿಕ್ಷೆ

ಹೊಸದಾಗಿ ಅಭಿವೃದ್ದಿಗೊಳಿಸಲಾಗಿರುವ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಮಾದರಿಯು ನಿಸ್ಸಾನ್ ಮ್ಯಾಗ್ನೆೈಟ್ ಕಾರಿನಲ್ಲಿ ಮಾತ್ರವಲ್ಲದೇ ರೆನಾಲ್ಟ್ ಟ್ರೈಬರ್ ಟರ್ಬೋ ವರ್ಷನ್ ಮತ್ತು ಕಿಗರ್ ಕಾರಿನಲ್ಲೂ ಬಳಕೆಯಾಗಲಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಕಾರುಗಳಿಂತಲೂ ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗಲಿದೆ.

MOST READ: ವಾಹನ ಖರೀದಿಯನ್ನು ಸುಲಭವಾಗಿಸಲಿದೆ ಅಗಸ್ಟ್ 1ರಿಂದ ಜಾರಿಗೆ ಬರಲಿರುವ ಹೊಸ ವಿಮಾ ನೀತಿ..

ಹೊಸ ಮ್ಯಾಗ್ನೈಟ್ ಕಾರು ಮಾದರಿಯ ಮೇಲೆ ಭಾರೀ ನೀರಿಕ್ಷೆ

ಹೊಸ ಕಾರನ್ನು ಇದೇ ವರ್ಷಾಂತ್ಯದೊಳಗೆ ಬಿಡುಗಡೆಗೊಳಿಸಲು ಯತ್ನಿಸುತ್ತಿರುವ ನಿಸ್ಸಾನ್ ಕಂಪನಿಯು ರೋಡ್ ಟೆಸ್ಟಿಂಗ್ ಪ್ರಕ್ರಿಯೆಯನ್ನು ತೀವ್ರಗೊಳಿಸಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 6.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9 ಲಕ್ಷ ಬೆಲೆ ಹೊಂದುವ ಸಾಧ್ಯತೆಗಳಿವೆ.

Most Read Articles

Kannada
English summary
Nissan Aims To Sell 2,000 Magnite Monthly. Read in Kannada.
Story first published: Friday, July 31, 2020, 18:12 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X