ಅಂತರ್‌ರಾಷ್ಟ್ರೀಯ ಮಾರುಕಟ್ಟೆಗಾಗಿ ನಿಸ್ಸಾನ್ ಆರಿಯಾ ಎಲೆಕ್ಟ್ರಿಕ್ ಎಸ್‌ಯುವಿ ಅನಾವರಣ
ಜಪಾನ್ ಆಟೋ ಉತ್ಪಾದನಾ ಕಂಪನಿಯು ನಿಸ್ಸಾನ್ ಮೋಟಾರ್ಸ್ ತನ್ನ ಬಹುನೀರಿಕ್ಷಿತ ಆರಿಯಾ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯ ಉತ್ಪಾದನಾ ಆವೃತ್ತಿಯನ್ನು ಅಂತರ್‌ರಾಷ್ಟ್ರೀಯ ಮಾರುಕಟ್ಟೆಗಾಗಿ ಅನಾವರಣಗೊಳಿಸಿದ್ದು, ಹೊಸ ಕಾರು ಟೆಸ್ಲಾ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುವ ತವಕದಲ್ಲಿದೆ.

ಜಾಗತಿಕವಾಗಿ 2022ರ ವೇಳೆಗೆ 1 ಮಿಲಿಯನ್ ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ಕಾರುಗಳನ್ನು ಮಾರಾಟ ಮಾಡುವ ಯೋಜನೆ ಹೊಂದಿರುವ ನಿಸ್ಸಾನ್ ಗ್ಲೊಬಲ್ ಕಂಪನಿಯು ಮೊದಲ ಹಂತವಾಗಿ ಆರಿಯಾ ಎಲೆಕ್ಟ್ರಿಕ್ ಎಸ್‌ಯುವಿ ಕಾರನ್ನು ಅನಾವರಣಗೊಳಿಸಿದ್ದು, ಹೊಸ ಕಾರು ಸದ್ಯಕ್ಕೆ ಯುಎಸ್ಎ ಸೇರಿದಂತೆ ಯುರೋಪಿನ ಕೆಲವೇ ರಾಷ್ಟ್ರಗಳಲ್ಲಿ ಮಾರಾಟಗೊಳ್ಳಲಿದೆ.

ಆರಿಯಾ ಕಾರಿನಲ್ಲಿ ಟೆಸ್ಲಾ ಕಾರುಗಳಿಗೆ ಪೈಪೋಟಿಯಾಗಿ ಪ್ರೋ ಪೈಲೆಟ್ 2.0 ತಂತ್ರಜ್ಞಾನ ಬಳಕೆ ಮಾಡಲಾಗಿದ್ದು, ಹೊಸ ತಂತ್ರಜ್ಞಾನದಿಂದಾಗಿ ಅಪಘಾತದ ಸಂದರ್ಭಗಳನ್ನು ಸಮರ್ಥವಾಗಿ ನಿಭಾಯಿಸುವ ಗುಣಲಕ್ಷಣಗಳು ಹೊಸ ಕಾರಿನಲ್ಲಿವೆ.

ಹೊಸ ಕಾರು ಅತ್ಯುತ್ತಮ ಬ್ಯಾಟರಿ ಬ್ಯಾಕ್‌ಪ್ಯಾಕ್‌ನೊಂದಿಗೆ ಪ್ರತಿ ಚಾರ್ಜ್‌ಗೆ ಗರಿಷ್ಠ 480 ಕಿ.ಮೀ ಮೈಲೇಜ್ ನೀಡಲಿದ್ದು, ಲೀಫ್ ಕ್ರಾಸ್ ಓವರ್ ಕಾರಿಗಿಂತಲೂ ಹೆಚ್ಚಿನ ಮಟ್ಟದ ತಂತ್ರಜ್ಞಾನ ಸೌಲಭ್ಯಗಳೊಂದಿಗೆ ಆರಿಯಾ ಕಾರು ಮಾರುಕಟ್ಟೆಗೆ ಪ್ರವೇಶಿಸಿದೆ.

ಹೊಸ ಕಾರು ಭಾರತೀಯ ರೂಪಾಯಿ ಮೌಲ್ಯದಲ್ಲಿ ರೂ. 35 ಲಕ್ಷದಿಂದ ರೂ. 40 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗಲಿದ್ದು, ಉತ್ತರ ಅಮೆರಿಕದಲ್ಲಿ ಮಾರಾಟವಾಗುತ್ತಿರುವ ರೋಗ್ ಎಸ್‌ಯುವಿ ಆಧಾರದ ಮೇಲೆ ಹೊಸ ಕಾರನ್ನು ಸಿದ್ದಪಡಿಸಲಾಗಿದೆ.

ಮಾಹಿತಿಗಳ ಪ್ರಕಾರ, ಹೊಸ ಕಾರು ಸದ್ಯ ಪ್ರಸ್ತಕ ವರ್ಷದಲ್ಲಿ ಕೇವಲ 30 ಸಾವಿರ ಯುನಿಟ್ ಮಾತ್ರ ಮಾರಾಟ ಮಾಡುವುದಾಗಿ ಹೇಳಿಕೊಂಡಿದ್ದು, ಹೊಸ ಕಾರಿನ ಬೇಡಿಕೆ ಆಧಾರದ ಮೇಲೆ ಮುಂದಿನ ವರ್ಷಕ್ಕೆ ಮಾರಾಟ ವ್ಯಾಪ್ತಿ ವಿಸ್ತರಿಸುವ ಸುಳಿವು ನೀಡಿದೆ.
MOST READ: ಹೊಸ ಪೊಲೊ ಕಾರು ವಿತರಣೆ ಮಾಡಿದ ಎರಡೇ ನಿಮಿಷದಲ್ಲಿ ನಡೆಯಿತು ಅಪಘಾತ..!

ಹೊಸ ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ಕಾರುಗಳ ಅಭಿವೃದ್ದಿಗಾಗಿ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿರುವ ನಿಸ್ಸಾನ್ ಕಂಪನಿಯು ಮುಂದಿನ 5 ವರ್ಷಗಳ ಅವಧಿಯಲ್ಲಿ 18 ಹೊಸ ಕಾರುಗಳನ್ನು ಸಿದ್ದಪಡಿಸುತ್ತಿದ್ದು, ಹೊಸ ಇವಿ ಕಾರುಗಳಲ್ಲಿ ಕೆಲವು ಕಾರು ಮಾದರಿಗಳು ಭಾರತದಲ್ಲೂ ಬಿಡುಗಡೆಯಾಗಲಿವೆ.

ಸದ್ಯ ಬಿಡುಗಡೆಯಾಗಿರುವ ಆರಿಯಾ ಕೂಡಾ ಭಾರತದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳು ಕಡಿಮೆಯಿದ್ದು, ಆರಿಯಾ ಕಾರು ಬಿಡುಗಡೆಗೂ ಮುನ್ನ ಭಾರತದಲ್ಲಿ ನಿಸ್ಸಾನ್ ನಿರ್ಮಾಣದ ಮತ್ತೊಂದು ಇವಿ ಕಾರು ಲೀಫ್ ಎಲೆಕ್ಟ್ರಿಕ್ ಬಿಡುಗಡೆಯ ಪಟ್ಟಿಯಲ್ಲಿದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಹೀಗಾಗಿ ಹೊಸ ಆರಿಯಾ ಕಾರು ಭಾರತದಲ್ಲಿ 2022ರ ನಂತರಷ್ಟೇ ಬಿಡುಗಡೆಯಾಗಬಹುದಾದ ಸಾಧ್ಯತೆಗಳಿದ್ದು, ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಯ ಜೊತೆಗೆ ಹಲವಾರು ಹೊಸ ಮಾದರಿಯ ಸಾಮಾನ್ಯ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳು ಸಹ ಸದ್ದ ಮಾಡಲಿವೆ.


Click it and Unblock the Notifications








