Just In
Don't Miss!
- News
ಪೊಲೀಸ್ ಠಾಣೆಯಲ್ಲಿ ಬಗೆಹರಿದ ಒಂದು ಕೋಣದ ವಿವಾದ!
- Movies
'ದೀಪ್ ಸಿಧು ಜೊತೆ ನನಗೆ ಯಾವುದೇ ಸಂಬಂಧವಿಲ್ಲ': ಸಂಸದ, ನಟ ಸನ್ನಿ ಡಿಯೋಲ್ ಸ್ಪಷ್ಟನೆ
- Finance
ಬಜೆಟ್ 2021: ಸ್ಟ್ಯಾಂಡರ್ಡ್ ಡಿಡಕ್ಷನ್ ರು. 1 ಲಕ್ಷಕ್ಕೆ ಹೆಚ್ಚಳ ನಿರೀಕ್ಷೆ
- Sports
ಬೈರ್ಸ್ಟೋವ್ಗೆ 2 ಪಂದ್ಯಗಳ ವಿಶ್ರಾಂತಿ ನೀಡಿರುವುದನ್ನು ಸಮರ್ಥಿಸಿದ ಇಂಗ್ಲೆಂಡ್ ಕೋಚ್
- Education
WCD Chitradurga Recruitment 2021: ಅಂಗನವಾಡಿಯಲ್ಲಿ 129 ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
ಗರ್ಭಾವಸ್ಥೆಯಲ್ಲಿ ಥೈರಾಯ್ಡ್ ಸಮಸ್ಯೆ: ಇದರ ಅಪಾಯಗಳೇನು, ತಡೆಗಟ್ಟುವುದು ಹೇಗೆ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮ್ಯಾಗ್ನೈಟ್ ಕಾರು ಬಿಡುಗಡೆಗೂ ಮುನ್ನ 50 ಹೊಸ ಶೋರೂಂಗಳಿಗೆ ಚಾಲನೆ ನೀಡಿದ ನಿಸ್ಸಾನ್
ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಅತ್ಯುತ್ತಮ ಬೇಡಕೆಯ ನೀರಿಕ್ಷೆಯಲ್ಲಿರುವ ನಿಸ್ಸಾನ್ ಇಂಡಿಯಾ ಕಂಪನಿಯು ಹೊಚ್ಚ ಹೊಸ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಮುಂದಿನ ತಿಂಗಳು 5ರಂದು ಬಿಡುಗಡೆ ಮಾಡುತ್ತಿದ್ದು, ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ವಿಭಿನ್ನವಾಗಿರುವ ಹೊಸ ಕಾರು ನಿಸ್ಸಾನ್ ಕಂಪನಿಗೆ ಮತ್ತಷ್ಟು ಜನಪ್ರಿಯತೆ ತಂದುಕೊಡಲಿದೆ.

ಇದೇ ಕಾರಣಕ್ಕಾಗಿ ಗ್ರಾಹಕರ ಬೇಡಿಕೆಯ ನೀರಿಕ್ಷೆಯಲ್ಲಿರುವ ನಿಸ್ಸಾನ್ ಕಂಪನಿಯು ಕಾರು ಮಾರಾಟ ಹೆಚ್ಚಳಕ್ಕಾಗಿ ಮಾರಾಟ ಮಳಿಗೆಗಳನ್ನು ಕೂಡಾ ಹೆಚ್ಚಿಸುತ್ತಿದ್ದು, ಕಳೆದ ಒಂದು ತಿಂಗಳ ಅವಧಿಯಲ್ಲಿ ಬರೋಬ್ಬರಿ 50 ಹೊಸ ಮಾರಾಟ ಮಳಿಗೆ ಮತ್ತು ಸರ್ವಿಸ್ ಸೆಂಟರ್‌ಗಳನ್ನು ತೆರೆಯಲಾಗಿದೆ. ಹೊಸ ವಾಹನ ಮಾರಾಟ ಮಳಿಗೆಗಳು ಮತ್ತು ಸರ್ವಿಸ್ ಸೆಂಟರ್‌ಗಳ ಲಭ್ಯತೆ ಆಧಾರದ ಮೇಲೆ ಗ್ರಾಹಕರ ಬೇಡಿಕೆ ಹೆಚ್ಚಳವಾಗುವ ನೀರಿಕ್ಷೆಯಿದ್ದು, ಹೊಸ ಮ್ಯಾಗ್ನಟ್ ಕಾರು ಆರಂಭಿಕ ಕಾರು ಮಾರಾಟದಲ್ಲಿ ಹೊಸ ಸಂಚಲನ ಮೂಡಿಸುವುದರಲ್ಲಿ ಯಾವುದೇ ಅನುಮಾನವಿಲ್ಲ.

ಹೊಸ ಮ್ಯಾಗ್ನೈಟ್ ಕಾರು ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯು ಪ್ರತಿ ಸ್ಪರ್ಧಿಕಾರು ಮಾದರಿಗಳಿಂತಲೂ ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಅಭಿವೃದ್ದಿಗೊಂಡಿದೆ. ಹೊಸ ಕಾರಿನ ಬೆಲೆಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಸುಮಾರು 1 ಲಕ್ಷದಷ್ಟು ಕಡಿಮೆಯಿದ್ದು, ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.50 ಲಕ್ಷದಿಂದ ರೂ.9.50 ಲಕ್ಷ ಬೆಲೆ ಪಡೆದುಕೊಳ್ಳುವ ನೀರಿಕ್ಷೆಯಿವೆ.

ಹಾಗೆಯೇ ಗ್ರಾಹಕರ ಬೇಡಿಕೆಯೆಂತೆ ಎಕ್ಸ್‌ಇ, ಎಕ್ಸ್ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ಎಂಬ ನಾಲ್ಕು ವೆರಿಯೆಂಟ್‌ಗಳೊಂದಿಗೆ ಬೆಲೆಯಲ್ಲೂ ಗಮನಸೆಳೆಯಲಿದೆ. ಹೊಸ ಕಾರು ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಆವೃತ್ತಿಗಳಿಂತಲೂ ಕಡಿಮೆ ಬೆಲೆ ಹೊಂದಿದ್ದು, ಸೆಗ್ಮೆಂಟ್ ಇನ್ ಬೆಸ್ಟ್ ಫೀಚರ್ಸ್‌ಗಳೊಂದಿಗೆ ಕಾರು ಮಾರಾಟದಲ್ಲಿ ಹೊಸ ಸಂಚಲನ ಸೃಷ್ಠಿಸಲಿದೆ.

ಟಾಪ್ ಎಂಡ್ ಮಾದರಿಯಾಗಿರುವ ಎಕ್ಸ್‌ವಿ ಪ್ರೀಮಿಯಂನಲ್ಲಿ ಪ್ರಮುಖ ಫೀಚರ್ಸ್‌ಗಳನ್ನು ಒಳಗೊಂಡು ಎಲ್ಇಡಿ ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಎಲ್ಇಡಿ ಟೈಲ್ ಲೈಟ್ಸ್, ಎಲ್ಇಡಿ ಟರ್ನ್ ಇಂಡಿಕೇಟರ್, ವೀಂಡೋ ಲೈನ್ ಮೇಲೆ ಕ್ರೋಮ್ ಬೆಲ್ಟ್, ಆಲ್ ಬ್ಲ್ಯಾಕ್ ಕ್ಯಾಬಿನ್, 360 ಡಿಗ್ರಿ ಕ್ಯಾಮೆರಾ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್, ಟೈರ್ ಪ್ರೆಷರ್ ಮಾನಿಟರಿಂಗ್ ಮತ್ತು ಬ್ರಾಂಡ್‌ನ ಕನೆಕ್ಟ್ ಫೀಚರ್ಸ್ ಸೌಲಭ್ಯವಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಮ್ಯಾಗ್ನೈಟ್ ಕಾರಿನಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಜೋಡಣೆ ಮಾಡಲಾಗುತ್ತಿದ್ದು, 1.0-ಲೀಟರ್ ಬಿ4ಡಿ ಪೆಟ್ರೋಲ್ ಮಾದರಿಯು ಸ್ಟ್ಯಾಂಡರ್ಡ್ ಆಗಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದರೆ ಟಾಪ್ ಎಂಡ್ ಮಾದರಿಗಳಲ್ಲಿ ನೀಡಲಾಗಿರುವ ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 70-ಬಿಎಚ್‌ಪಿ, 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 100-ಬಿಎಚ್‌ಪಿ, 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಹೊಸ ಕಾರಿನಲ್ಲಿ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು ಪ್ರತಿ ಲೀಟರ್‌ಗೆ ಗರಿಷ್ಠ 18.75 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದರೆ ಟರ್ಬೋ ಪೆಟ್ರೋಲ್ ಮಾದರಿಯು ಅತ್ಯುತ್ತಮ ಪರ್ಫಾಮೆನ್ಸ್‌ನೊಂದಿಗೆ ಪ್ರತಿ ಲೀಟರ್‍ಗೆ 17.7 ಕಿ.ಮೀ ನಿಂದ 20 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, 40 ಲೀಟರ್ ಸಾಮರ್ಥ್ಯದ ಫ್ಯೂಲ್ ಟ್ಯಾಂಕ್ ಅನ್ನು ಒಂದು ಬಾರಿ ಪೂರ್ತಿಯಾಗಿ ತುಂಬಿಸಿದರೆ ಗರಿಷ್ಠ 800 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.