ಲಾಕ್‌ಡೌನ್ ಸಂಕಷ್ಟದಲ್ಲಿ ಹೊಸ ಕಾರು ಖರೀದಿದಾರರಿಗೆ ಭರ್ಜರಿ ಆಫರ್ ನೀಡಿದ ನಿಸ್ಸಾನ್
ಕರೋನಾ ವೈರಸ್‌ನಿಂದಾಗಿ ಆಟೋ ಮೊಬೈಲ್ ಸೇರಿದಂತೆ ಎಲ್ಲ ವಲಯದಲ್ಲೂ ಆರ್ಥಿಕ ಸ್ಥಿತಿ ಶೋಚನೀಯ ಸ್ಥಿತಿಗೆ ತಲುಪಿದೆ. ಹೀಗಿರುವಾಗ ವ್ಯಾಪಾರ ಅಭಿವೃದ್ದಿಯು ಇದೀಗ ಹೊಸ ಸವಾಲಾಗಿ ಪರಿಣಮಿಸಿದ್ದು, ನಿಸ್ಸಾನ್ ಇಂಡಿಯಾ ಕಂಪನಿಯು ಕೆಲವು ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದೆ.

ಕಳೆದ ಒಂದೂವರೆ ತಿಂಗಳಿನಿಂದ ವಿಧಿಸಲಾಗಿರುವ ಲಾಕ್‌ಡೌನ್‌ನಿಂದ ಬಹುತೇಕ ವಾಣಿಜ್ಯ ಚಟುವಟಿಕೆಗಳು ನೆಲಕಚ್ಚಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಉದ್ಯೋಗದ ಅಭದ್ರತೆ ಇದೀಗ ಪ್ರತಿಯೊಬ್ಬರಲ್ಲೂ ಕಾಡತೊಡಗಿದೆ. ಹೀಗಿರುವಾಗ ಕಾರು ಮಾರಾಟವನ್ನು ಸರಿದಾರಿಗೆ ತರಲು ಯತ್ನಿಸುತ್ತಿರುವ ಆಟೋ ಕಂಪನಿಯು ಕೆಲವು ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ್ದು, ಹೊಸ ಕಾರು ಖರೀದಿದಾರರಿಗೆ ಇಎಂಐ ಪಾವತಿ ಚಿಂತೆಯನ್ನು ಹೊಗಲಾಡಿಸಲು ಕೆಲವು ಮಹತ್ವದ ಕ್ರಮಗಳನ್ನು ತೆಗೆದುಕೊಂಡಿವೆ.

ವೈರಸ್ ತಡೆಗಾಗಿ ಲಾಕ್‌ಡೌನ್ ಅನಿವಾರ್ಯವಾಗಿದ್ದರಿಂದ ಭಾರತೀಯ ಆಟೋ ಉದ್ಯಮವು ಸಹ ದಿನಂಪ್ರತಿ ನೂರಾರು ಕೋಟಿ ನಷ್ಟ ಅನುಭವಿಸುತ್ತಿದ್ದು, ಇದೀಗ ಪರಿಸ್ಥಿತಿಗೆ ಅನುಗುಣವಾಗಿ ಆಟೋ ಕ್ಷೇತ್ರಕ್ಕೆ ವಿನಾಯ್ತಿ ನೀಡಲಾಗಿದೆಯಾದರೂ ಆರ್ಥಿಕ ಮುಗ್ಗಟ್ಟು ತೀವ್ರ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.

ಹೊಸ ಸುರಕ್ಷಾ ಮಾರ್ಗಸೂಚಿತಂತೆ ಆಟೋ ಉದ್ಯಮವು ಮರು ಚಾಲನೆಗೊಂಡರು ನೀರಿಕ್ಷಿತ ಮಟ್ಟದಲ್ಲಿ ಗ್ರಾಹಕರಿಲ್ಲದೆ ಪರದಾಡುತ್ತಿವೆ. ಜೊತೆಗೆ ಲಾಕ್‌ಡೌನ್‌ಗೂ ಮೊದಲು ಬುಕ್ಕಿಂಗ್ ಮಾಡಿ ವಾಹನ ಖರೀದಿಯ ಸಂಭ್ರಮದಲ್ಲಿದ್ದ ಗ್ರಾಹಕರು ಇದೀಗ ಖರೀದಿ ಪ್ರಕ್ರಿಯೆಯಿಂದ ಹಿಂದೆ ಸರಿಯುತ್ತಿದ್ದು, ಮಾರಾಟ ಮಳಿಗೆಗಳು ಪುನಾರಂಭಗೊಂಡ ನಂತರ ವಾಹನ ಖರೀದಿ ಬದಲು ಬುಕ್ಕಿಂಗ್ ಹಣ ವಾಪಸ್ ನೀಡುವಂತೆ ಬೇಡಿಕೆಯಿಡುತ್ತಿದ್ದಾರೆ.
MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಸದ್ಯಕ್ಕೆ ವಾಹನ ಖರೀದಿ ಮಾಡಲು ಸಾಧ್ಯವಾಗುತ್ತಿಲ್ಲ ಎನ್ನುತ್ತಿರುವ ಬಹುತೇಕ ಗ್ರಾಹಕರು ಬುಕ್ಕಿಂಗ್ ಹಣ ವಾಪಸ್ ಪಡೆದುಕೊಳ್ಳುತ್ತಿದ್ದು, ಲಾಕ್‌ಡೌನ್ ನಂತರ ವಾಹನ ಮಾರಾಟ ಯೋಜನೆಯಲ್ಲಿದ್ದ ಆಟೋ ಕಂಪನಿಗಳಿಗೆ ಗ್ರಾಹಕರು ಬುಕ್ಕಿಂಗ್ ಹಣ ವಾಪಸ್ ಪಡೆದುಕೊಳ್ಳುವ ಮೂಲಕ ಮತ್ತೊಂದು ಶಾಕ್ ನೀಡುತ್ತಿದ್ದಾರೆ.

ಲಾಕ್‌ಡೌನ್‌ಗೂ ಮುನ್ನ ದೇಶಾದ್ಯಂತ ಹೊಸ ವಾಹನಗಳಿಗೆ ಬುಕ್ಕಿಂಗ್ ಮಾಡಿದ್ದ ಗ್ರಾಹಕರಲ್ಲಿ ಸುಮಾರು ಶೇ.60ರಿಂದ ಶೇ.70ರಷ್ಟು ಜನ ಇದೀಗ ಬುಕ್ಕಿಂಗ್ ಹಣ ವಾಪಸ್ ನೀಡುವಂತೆ ಬೇಡಿಕೆ ಸಲ್ಲಿಸಿದ್ದು, ಇದು ಆಟೋ ಕಂಪನಿಗಳನ್ನು ಮತ್ತಷ್ಟು ಚಿಂತೆಗೀಡು ಮಾಡಿದೆ.
MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಇದರಿಂದ ಗ್ರಾಹಕರನ್ನು ಸೆಳೆಯಲು ಆಟೋ ಕಂಪನಿಗಳು ಅತಿ ಸುಲಭವಾದ ಸಾಲಸೌಲಭ್ಯಗಳನ್ನು ನೀಡುತ್ತಿದ್ದು, ನಿಸ್ಸಾನ್ ಇಂಡಿಯಾ ಕಂಪನಿಯು ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ಕಾರು ಈಗ ಖರೀದಿ ಮಾಡಿ ಮುಂದಿನ ವರ್ಷದ ಆರಂಭದಲ್ಲಿ ಇಎಂಐ ಪಾವತಿಸಿ ಎನ್ನುತ್ತಿದೆ.

ಸದ್ಯ ಲಾಕ್‌ಡೌನ್ ಇರುವುದರಿಂದ ಕಾರು ಖರೀದಿ ಸಾಧ್ಯವಿಲ್ಲ ಮುಂದಿನ ವರ್ಷ ಖರೀದಿ ಮಾಡಿದರೆ ಆಯ್ತು ಎನ್ನುವ ಗ್ರಾಹಕರಿಗೆ ಇದು ಸಾಕಷ್ಟು ಸಹಕಾರಿಯಾಗಲಿದ್ದು, ಇದೀಗ ಕಾರು ಖರೀದಿಸಿ 2021ರ ಆರಂಭದಿಂದ ಇಎಂಐ ಅನ್ವಯವಾಗುವಂತೆ ಸಾಲ ಮರುಪಾವತಿಯ ಸೌಲಭ್ಯವನ್ನು ನೀಡುತ್ತಿದೆ.
MOST READ: ಕರೋನಾ ಸಂಕಷ್ಟ: ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ

ಜೊತೆಗೆ ಉದ್ಯೋಗದ ಅಭದ್ರತೆ ಇದ್ದರೂ ಕೂಡಾ ಅಂತಹ ಗ್ರಾಹಕರಿಗೂ ಕಾರು ಖರೀದಿಸಿದ ಮೊದಲ ವರ್ಷದಲ್ಲಿ ಒಟ್ಟು ಮೂರು ತಿಂಗಳ ಇಎಂಐ ಹೊರೆಯನ್ನು ಸಹ ಕಂಪನಿಯೇ ಭರಿಸುವುದಾಗಿ ಹೇಳಿಕೊಂಡಿದ್ದು, ಆಯ್ದ ಕಾರು ಮಾದರಿಗಳ ಮೇಲೆ ಹೊಸ ಆಫರ್ ಈ ಕೊನೆಯ ತನಕ ಲಭ್ಯವಿರಲಿದೆ.


Click it and Unblock the Notifications








