ಬಿಡುಗಡೆಯಾಗಲಿರುವ ನಿಸ್ಸಾನ್ ಕಿಕ್ಸ್ ಬಿಎಸ್-6 ಮಾದರಿಯ ಮೈಲೇಜ್ ಮಾಹಿತಿ ಬಹಿರಂಗ

ನಿಸ್ಸಾನ್ ಇಂಡಿಯಾ ಕಂಪನಿಯು ತನ್ನ ಹೊಸ ಬಿಎಸ್-6 ಕಾರು ಮಾದರಿಯನ್ನು ಬಿಡುಗಡೆ ಮಾಡುತ್ತಿದ್ದು, ಇದೇ ತಿಂಗಳಾಂತ್ಯಕ್ಕೆ ಬಿಡುಗಡೆಯಾಗಲಿರುವ ಕಿಕ್ಸ್ ಎಸ್‌ಯುವಿ ಮಾದರಿಯಲ್ಲಿ ಈ ಬಾರಿ ಮಹತ್ವದ ಬದಲಾವಣೆಗಳನ್ನು ಪರಿಚಯಿಸಲಾಗಿದೆ.

ನಿಸ್ಸಾನ್ ಕಿಕ್ಸ್ ಬಿಎಸ್-6 ಮಾದರಿಯ ಮೈಲೇಜ್ ಮಾಹಿತಿ ಬಹಿರಂಗ

ಏಪ್ರಿಲ್ 1ರಿಂದ ಜಾರಿಗೆ ಬಂದಿರುವ ಬಿಎಸ್-6 ನಿಯದ ಪ್ರಕಾರ ಹೊಸ ಕಾರಿನಲ್ಲಿ ಈ ಬಾರಿ ಡೀಸೆಲ್ ಎಂಜಿನ್ ಆಯ್ಕೆಯನ್ನು ಕೈಬಿಡಲಾಗಿದ್ದು, ಪವರ್‌ಫುಲ್ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿರುವುದು ಪ್ರಮುಖ ಬದಲಾವಣೆಯಾಗಿದೆ. ಹೊಸ ಎಂಜಿನ್ ಪ್ರೇರಿತ ಕಿಕ್ಸ್ ಕಾರು ಮುಂದಿನ ಎರಡು ವಾರಗಳಲ್ಲಿ ಮಾರುಕಟ್ಟೆ ಪ್ರವೇಶಿಸಲಿದ್ದು, ಆನ್‌ಲೈನ್ ಬುಕ್ಕಿಂಗ್ ಪ್ರಕ್ರಿಯೆಯನ್ನು ಇದೇ ತಿಂಗಳು 18ರಿಂದ ಆರಂಭಿಸಲಾಗುತ್ತಿದೆ.

ನಿಸ್ಸಾನ್ ಕಿಕ್ಸ್ ಬಿಎಸ್-6 ಮಾದರಿಯ ಮೈಲೇಜ್ ಮಾಹಿತಿ ಬಹಿರಂಗ

ಬಿಎಸ್-6 ವೈಶಿಷ್ಟ್ಯತೆಯಿಂದಾಗಿ ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಾಗಿದ್ದು, ಎಂಜಿನ್ ಆಯ್ಕೆ ಹೊರತುಪಡಿಸಿ ಕಾರಿನ ಹೊರ ವಿನ್ಯಾಸಗಳಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ.

ನಿಸ್ಸಾನ್ ಕಿಕ್ಸ್ ಬಿಎಸ್-6 ಮಾದರಿಯ ಮೈಲೇಜ್ ಮಾಹಿತಿ ಬಹಿರಂಗ

ಬಿಎಸ್-4 ಮಾದರಿಯಲ್ಲಿ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದ ಕಿಕ್ಸ್ ಕಾರು ಇದೀಗ ಬಿಎಸ್-6 ಮಾದರಿ ಉನ್ನತೀಕರಿಸಲಾದ 1.5-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು ಹೊಸದಾಗಿ ಅಭಿವೃದ್ದಿಗೊಳಿಸಲಾಗಿರುವ 1.3-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಂಡಿದೆ.

MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ನಿಸ್ಸಾನ್ ಕಿಕ್ಸ್ ಬಿಎಸ್-6 ಮಾದರಿಯ ಮೈಲೇಜ್ ಮಾಹಿತಿ ಬಹಿರಂಗ

ಬಿಎಸ್-6 ಮಾದರಿಯಲ್ಲಿ ಡೀಸೆಲ್ ಕಾರು ಮಾದರಿಯ ಮಾರಾಟಕ್ಕೆ ಗುಡ್‌ಬೈ ಹೇಳಲಾಗಿದ್ದು, ಹೊಸದಾಗಿ ಪರಿಚಯಿಸಲಾಗಿರುವ 1.3-ಲೀಟರ್ ಟರ್ಬೋ ಎಂಜಿನ್ ಮಾದರಿಯು ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳಲ್ಲೇ ಅಧಿಕ ಬಿಎಚ್‌ಪಿ ಉತ್ಪಾದನೆ ಮಾಡುತ್ತದೆ. ಸಾಮಾನ್ಯ ಮಾದರಿಯ 1.5-ಲೀಟರ್ ಪೆಟ್ರೋಲ್ ಮಾದರಿಯು 105-ಬಿಎಚ್‌ಪಿ, 142-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ, 1.3-ಲೀಟರ್ ಪೆಟ್ರೋಲ್ ಟರ್ಬೋ ಮಾದರಿಯು 154-ಬಿಎಚ್‌ಪಿ, 245-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಪರ್ಫಾಮೆನ್ಸ್ ಪ್ರಿಯರನ್ನು ಸೆಳೆಯಲಿದೆ.

ನಿಸ್ಸಾನ್ ಕಿಕ್ಸ್ ಬಿಎಸ್-6 ಮಾದರಿಯ ಮೈಲೇಜ್ ಮಾಹಿತಿ ಬಹಿರಂಗ

ಹಾಗೆಯೇ ಇಂಧನ ದಕ್ಷತೆಯಲ್ಲೂ ಗ್ರಾಹಕರನ್ನು ಸೆಳೆಯಲಿರುವ 1.3-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಮಾದರಿಯು ಪ್ರತಿ ಲೀಟರ್‌ಗೆ 15.80ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, 1.5-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು ಪ್ರತಿ ಲೀಟರ್‌ಗೆ 13.90ಕಿ.ಮೀ ಮೈಲೇಜ್ ಹಿಂದಿರುಗಿಸುವುದಾಗಿ ARAI ಸಂಸ್ಥೆಯು ಪ್ರಮಾಣಿಕರಿಸಿದೆ.

MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ನಿಸ್ಸಾನ್ ಕಿಕ್ಸ್ ಬಿಎಸ್-6 ಮಾದರಿಯ ಮೈಲೇಜ್ ಮಾಹಿತಿ ಬಹಿರಂಗ

ನಿಸ್ಸಾನ್ ಬಿಡುಗಡೆ ಮಾಡುತ್ತಿರುವ ಹೊಸ 1.3-ಲೀಟರ್ ಟರ್ಬೋ ಎಂಜಿನ್ ಅನ್ನು ನಿಸ್ಸಾನ್ ಮತ್ತು ರೆನಾಲ್ಟ್ ಕಂಪನಿಗಳು ಸಹಭಾಗಿತ್ವದ ಯೋಜನೆ ಅಡಿ ಅಭಿವೃದ್ದಿಗೊಳಿಸಿದ್ದು, ಹೊಸ ಎಂಜಿನ್ ಅನ್ನು ಮತ್ತೊಂದು ಜನಪ್ರಿಯ ಕಾರು ಮಾದರಿಯಾದ ಡಸ್ಟರ್ ಕೂಡಾ ಪಡೆದುಕೊಳ್ಳಲಿದೆ.

ನಿಸ್ಸಾನ್ ಕಿಕ್ಸ್ ಬಿಎಸ್-6 ಮಾದರಿಯ ಮೈಲೇಜ್ ಮಾಹಿತಿ ಬಹಿರಂಗ

ಡಸ್ಟರ್ ಫೇಸ್‌ಲಿಫ್ಟ್ ಕಾರನ್ನು ಹೊಸ 1.3-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ 2020ರ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನ ಮಾಡಿದ್ದ ರೆನಾಲ್ಟ್ ಕಂಪನಿಯು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದು, ಅದೇ ಎಂಜಿನ್ ಇದೀಗ ಕಿಕ್ಸ್ ಬಿಎಸ್-6 ಕಾರಿನಲ್ಲೂ ಲಭ್ಯವಾಗುತ್ತಿದೆ.

MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ನಿಸ್ಸಾನ್ ಕಿಕ್ಸ್ ಬಿಎಸ್-6 ಮಾದರಿಯ ಮೈಲೇಜ್ ಮಾಹಿತಿ ಬಹಿರಂಗ

ಇನ್ನು ಹೊಸ ಕಾರು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಎಕ್ಸ್ಎಲ್, ಎಕ್ಸ್‌ವಿ, ಎಕ್ಸ್‌ವಿ ಪ್ರೀಮಿಯಂ, ಎಕ್ಸ್‌ವಿ ಪ್ರೀಮಿಯಂ ಆಪ್ಷನ್ ಎನ್ನುವ ನಾಲ್ಕು ವೆರಿಯೆಂಟ್‌ಗಳನ್ನು ಹೊಂದಿದ್ದು, ಬಿಎಸ್-4 ಮಾದರಿಯಲ್ಲೇ ಬಹುತೇಕ ಪ್ರೀಮಿಯಂ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ.

More from DriveSpark

Article Published On: Friday, May 15, 2020, 17:13 [IST]
English summary
Nissan Kicks BS6 Mileage Comparison With Its Segment Rivals: Here Are All Details. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+