ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಬಹುನಿರೀಕ್ಷಿತ ನಿಸ್ಸಾನ್ ಕಿಕ್ಸ್

ಜನಪ್ರಿಯ ಕಾರು ತಯಾರಕ ಕಂಪನಿಯಾದ ನಿಸ್ಸಾನ್ ತನ್ನ ಬಿಎಸ್-6 ಕಿಕ್ಸ್ ಮಾದರಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಬಹುನಿರೀಕ್ಷಿತ 2020ರ ನಿಸ್ಸಾನ್ ಕಿಕ್ಸ್ ಕಾರಿನ ಪ್ರಾರಂಭಿಕ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.9.49 ಲಕ್ಷಗಳಾಗಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಬಹುನಿರೀಕ್ಷಿತ ನಿಸ್ಸಾನ್ ಕಿಕ್ಸ್

2020ರ ನಿಸ್ಸಾನ್ ಕಿಕ್ಸ್ ಕಾರು ಎಕ್ಸ್‌ಎಲ್, ಎಕ್ಸ್‌ವಿ, ಎಕ್ಸ್‌ವಿ ಟರ್ಬೊ, ಎಕ್ಸ್‌ವಿ ಪ್ರೀಮಿಯಂ, ಎಕ್ಸ್‌ವಿ ಪ್ರೀಮಿಯಂ ಡ್ಯುಯಲ್ ಟೋನ್, ಎಕ್ಸ್‌ವಿ ಸಿವಿಟಿ ಮತ್ತು ಟರ್ಬೂ ಎಕ್ಸ್‌ವಿ ಪ್ರೀಮಿಯಂ (ಒ)ಎಂಬ ರೂಪಾಂತರಗಳಲ್ಲಿ ಬಿಡುಗಡೆಯಾಗಿದೆ. ಈ ಎಲ್ಲಾ ರೂಪಾಂತರಗಳಲ್ಲಿ ಟರ್ಬೋ ಸಿವಿಟಿಯನ್ನು ಹೂಂದಿದೆ ಎಂದು ಹೇಳಲಾಗಿದೆ. ಈ ಹೊಸ ನಿಸ್ಸಾನ್ ಕಿಕ್ಸ್ ಬೇಸ್ ಸ್ಪೆಕ್ ಬೆಲೆ ರೂ.9.49 ಲಕ್ಷಗಳಾದರೆ, ಟಾಪ್-ಸ್ಪೆಕ್ ಪ್ರೀಮಿಯಂ ಟರ್ಬೊ ಸಿವಿಟಿ ಮಾದರಿಯ ಬೆಲೆಯು ರೂ.14.15 ಲಕ್ಷಗಳಾಗಿದೆ. ಈ ಎಲ್ಲಾ ಬೆಲೆಗಳು ಭಾರತದ ಎಕ್ಸ್ ಶೋರೂಂ ಪ್ರಕಾರವಾಗಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಬಹುನಿರೀಕ್ಷಿತ ನಿಸ್ಸಾನ್ ಕಿಕ್ಸ್

ಬೇಸ್ ಸ್ಪೆಕ್ ಎಕ್ಸ್‌ಎಲ್ ಮತ್ತು ಎಕ್ಸ್‌ವಿ 1.5-ಲೀಟರ್ ಹೆಚ್4ಕೆ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 105 ಬಿಹೆಚ್‍ಪಿ ಪವರ್ ಮತ್ತು 142 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೊಡಿಸಲಾಗಿದೆ.

MOST READ: ಅನಾವರಣವಾಯ್ತು ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್ ಕಾರು

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಬಹುನಿರೀಕ್ಷಿತ ನಿಸ್ಸಾನ್ ಕಿಕ್ಸ್

ಇನ್ನು ಹೊಸ ನಿಸ್ಸಾನ್ ಕಿಕ್ಸ್ ಮಿಡ್ ಸ್ಪೆಕ್ ಮತ್ತು ಟಾಪ್-ಸ್ಪೆಕ್ ರೂಪಾಂತರಗಳಲ್ಲಿ 1.3 ಲೀಟರ್ ನಾಲ್ಕು-ಸಿಲಿಂಡರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಿದೆ. ಈ ಎಂಜಿನ್ 156 ಬಿಹೆಚ್‍ಪಿ ಪವರ್ ಮತ್ತು 254 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಬಹುನಿರೀಕ್ಷಿತ ನಿಸ್ಸಾನ್ ಕಿಕ್ಸ್

ಈ ಎಂಜಿನ್ ನೊಂದಿಗೆ ಸ್ಟ್ಯಾಂಡರ್ಡ್ ಮ್ಯಾನ್ಯುವಲ್ ಗೇರ್‌ಬಾಕ್ಸ್‌ ಅಥವಾ ಬ್ರಾಂಡ್‌ನ ಹೊಸ ಎಕ್ಸ್-ಟ್ರೋನಿಕ್ ಸಿವಿಟಿ ಗೇರ್‌ಬಾಕ್ಸ್‌ ಹೊಂದಿರುತ್ತದೆ. ನಿಸ್ಸಾನ್ ಸರಣಿಯಲ್ಲಿ ಅತಿ ಹೆಚ್ಚು ಪವರ್‍ ಫುಲ್ ಎಂಜಿನ್ ಇದಾಗಿದೆ.

MOST READ: ಬಿಡುಗಡೆಗೆ ಸಜ್ಜಾದ ಹೊಸ ಹ್ಯುಂಡೈ ಐ20 ಕಾರು

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಬಹುನಿರೀಕ್ಷಿತ ನಿಸ್ಸಾನ್ ಕಿಕ್ಸ್

ಈ ಹೊಸ ಕಾರಿನ ಬಗ್ಗೆ ನಿಸ್ಸಾನ್ ಮೋಟಾರ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶ್ರೀವಾಸ್ತವ ಅವರು ಮಾತನಾಡಿ, ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸುವುದರೊಂದಿಗೆ ಪವರ್ ಫುಲ್ ಟರ್ಬೂ ಎಂಜಿನ್ ಮತ್ತು ಕ್ಲಾಸ್-ಲೀಡಿಂಗ್ ಎಕ್ಸ್-ಟ್ರೋನಿಕ್ ಸಿವಿಟಿ ಟಾರ್ನ್ಸ್ ಮಿಷನ್ ಅಳವಡಿಸಲಾಗಿದೆ. ಅಲ್ಲದೇ ಹೊಸ ಕಾರಿನಲ್ಲಿ ನಿಸ್ಸಾನ್ ಕನೆಕ್ಟ್ ಟೆಕ್ನಾಲಜಿ ಮತ್ತು ನೂತನ ಫೀಚರ್ ಗಳನ್ನು ಅಳವಡಿಸಲಾಗಿದೆ ಎಂದು ಹೇಳಿದರು.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಬಹುನಿರೀಕ್ಷಿತ ನಿಸ್ಸಾನ್ ಕಿಕ್ಸ್

ಈ ಹೊಸ ನಿಸ್ಸಾನ್ ಕಿಕ್ಸ್ ಕಾರಿನಲ್ಲಿ ಹಲವಾರು ನೂತನ ಫೀಚರ್‍ಗಳನ್ನು ಹೊಂದಿರಲಿದೆ. ನಿಸ್ಸಾನ್ ಕಿಕ್ಸ್ ಟಾಪ್ ಅಂಡ್ ಕಾರುಗಳು ರಿಮೋಟ್ ಎಂಜಿನ್ ಸ್ಟಾರ್ಟ್, ಪುಶ್-ಬಟನ್ ಸ್ಟಾರ್ಟ್ ಮತ್ತು ಐಡಲ್ ಸ್ಟಾರ್ಟ್-ಸ್ಟಾಪ್ ಫೀಚರ್ ಗಳನ್ನು ಹೊಂದಿದೆ.

MOST READ: ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಕರೋಕ್ ಎಸ್‍‍‍ಯುವಿ

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಬಹುನಿರೀಕ್ಷಿತ ನಿಸ್ಸಾನ್ ಕಿಕ್ಸ್

ಹೊಸ ನಿಸ್ಸಾನ್ ಕಿಕ್ಸ್ ಕಾರಿನಲ್ಲಿ ಕ್ರೂಸ್ ಕಂಟ್ರೋಲ್, 'ಅರೌಂಡ್ ವ್ಯೂ ಮಾನಿಟರ್' 360 ಡಿಗ್ರಿ ಕ್ಯಾಮೆರಾ, ಹಿಲ್ ಸ್ಟಾರ್ಟ್ ಅಸಿಸ್ಟ್, ಲೆದರ್ ಸೀಟುಗಳು, ಕಾರ್ನರಿಂಗ್ ಫಾಗ್ ಲ್ಯಾಂಪ್‌ಗಳು, ಆಟೋಮ್ಯಾಟಿಕ್ ಹೆಡ್‌ಲ್ಯಾಂಪ್‌ಗಳು ಮತ್ತು ವೈಪರ್, ಕ್ರೂಸ್ ಕಂಟ್ರೋಲ್ ಮತ್ತು ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ ಅನ್ನು ಹೊಂದಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಬಹುನಿರೀಕ್ಷಿತ ನಿಸ್ಸಾನ್ ಕಿಕ್ಸ್

ಕೊನೆಗೂ ಹೊಸ ನಿಸ್ಸಾನ್ ಕಿಕ್ಸ್ ಕಾರನ್ನು ನವೀಕರಿಸಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ನಿಸ್ಸಾನ್ ಕಿಕ್ಸ್ ಪವರ್ ಫುಲ್ ಎಂಜಿನ್ ಮತ್ತು ಹೊಸ ಫೀಚರ್ ಗಳನ್ನು ಹೊಂದಿದೆ. ಈ ಹೊಸ ನಿಸ್ಸಾನ್ ಕಿಕ್ಸ್ ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಸೆಲ್ಟೋಸ್, ಎಂಜಿ ಹೆಕ್ಟರ್ ಮತ್ತು ಹ್ಯುಂಡೈ ಕ್ರೆಟಾ ಕಾರುಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
2020 Nissan Kicks BS6 SUV Launched In India. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X