ಹೊಸ ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ನಿಸ್ಸಾನ್ ಕಿಕ್ಸ್

ಜನಪ್ರಿಯ ಕಾರು ತಯಾರಕ ಕಂಪನಿಯಾದ ನಿಸ್ಸಾನ್ ತನ್ನ ಬಿಎಸ್-6 ಕಿಕ್ಸ್ ಮಾದರಿಯನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಮುಂದಿನ ದಿನಗಳಲ್ಲಿ ಬಿಡುಗಡೆಯಾಗಲಿರುವ 2020ರ ನಿಸ್ಸಾನ್ ಕಿಕ್ಸ್ ಕಾರಿನ ಮಾಹಿತಿಯು ಬಹಿರಂಗವಾಗಿದೆ.

ಹೊಸ ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ನಿಸ್ಸಾನ್ ಕಿಕ್ಸ್

ಕರೋನಾ ಭೀತಿಯಿಂದ ಕೇಂದ್ರ ಸರ್ಕಾರವು ದೇಶಾದ್ಯಂತ ಲಾಕ್‌ಡೌನ್‌ ಮಾಡಲಾಗಿದೆ. ಲಾಕ್‌ಡೌನ್‌ ಮುಗಿದ ಬಳಿಕ ಈ ಹೊಸ ನಿಸ್ಸಾನ್ ಕಿಕ್ಸ್ ಮಾದರಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ. ನಿಸ್ಸಾನ್ ಕಿಕ್ಸ್ ಮಾದರಿಯಲ್ಲಿ 1.5-ಲೀಟರ್ ಡೀಸೆಲ್ ಎಂಜಿನ್ ಅನ್ನು ಸ್ಥಗಿತಗೊಳಿಸಲಾಗಿದೆ. ಇದೀಗ ಹೊಸ ನಿಸ್ಸಾನ್ ಕಿಕ್ಸ್ ಮಾದರಿಯ ಮಾಹಿತಿಯನ್ನು ಯೂಟ್ಯೂಬ್ ಚಾನೆಲ್ ಬಹಿರಂಗಪಡಿಸಿದೆ.

ಹೊಸ ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ನಿಸ್ಸಾನ್ ಕಿಕ್ಸ್

ಬಹಿರಂಗವಾಗಿರುವ ಮಾಹಿತಿಯ ಪ್ರಕಾರ ಹೊಸ ನಿಸ್ಸಾನ್ ಕಿಕ್ಸ್ ಮಾದರಿಯಲ್ಲಿ 1.3-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ. ಹಿಂದಿನ ನಿಸ್ಸಾನ್ ಕಿಕ್ಸ್ ಕಾರು ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೋಸ್ ಪೈಪೋಟಿಯಿಂದಾಗಿ ಭಾರತೀಯ ಮಾರುಕಟ್ಟೆಯಲ್ಲಿ ನಿರೀಕ್ಷಿತ ಯಶ್ವಸಿಗಳಿಸುವಲ್ಲಿ ವಿಫಲವಾಗಿತ್ತು.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಹೊಸ ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ನಿಸ್ಸಾನ್ ಕಿಕ್ಸ್

2020ರ ನಿಸ್ಸಾನ್ ಕಿಕ್ಸ್ ಕಾರು ಎಕ್ಸ್‌ಎಲ್, ಎಕ್ಸ್‌ವಿ, ಎಕ್ಸ್‌ವಿ ಪ್ರೀಮಿಯಂ ಮತ್ತು ಎಕ್ಸ್‌ವಿ ಪ್ರೀಮಿಯಂ (ಒ)ಎಂಬ ರೂಪಾಂತರಗಳಲ್ಲಿ ಬಿಡುಗಡೆಯಾಗಲಿದೆ. 2020ರ ನಿಸ್ಸಾನ್ ಕಿಕ್ಸ್ ಕಾರಿನಲ್ಲಿ 1.3 ಲೀಟರ್ ನಾಲ್ಕು-ಸಿಲಿಂಡರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಿದೆ.

ಹೊಸ ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ನಿಸ್ಸಾನ್ ಕಿಕ್ಸ್

ಈ ಎಂಜಿನ್ 154 ಬಿಹೆಚ್‍ಪಿ ಪವರ್ ಮತ್ತು 254 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು 8-ಹಂತದ ಸಿವಿಟಿಗೆ ಜೋಡಿಸಲಾಗಿದೆ. ನಿಸ್ಸಾನ್ ಸರಣಿಯಲ್ಲಿ ಅತಿ ಹೆಚ್ಚು ಪವರ್‍ ಫುಲ್ ಎಂಜಿನ್ ಇದಾಗಿದೆ.

MOST READ: ಇತಿಹಾಸದ ಪುಟ ಸೇರಿದ ಫೋಕ್ಸ್‌ವ್ಯಾಗನ್ ಎಮಿಯೊ ಕಾರು

ಹೊಸ ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ನಿಸ್ಸಾನ್ ಕಿಕ್ಸ್

ಇನ್ನು ಹಿಂದಿನ 1.5-ಲೀಟರ್ ಹೆಚ್4ಕೆ ಪೆಟ್ರೋಲ್ ಎಂಜಿನ್ ಅನ್ನು ಕೂಡ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗುತ್ತದೆ. ಈ ಎಂಜಿನ್ 105 ಬಿಹೆಚ್‍ಪಿ ಪವರ್ ಮತ್ತು 142 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೊಡಿಸಲಾಗಿದೆ.

ಹೊಸ ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ನಿಸ್ಸಾನ್ ಕಿಕ್ಸ್

ಹೊಸ ನಿಸ್ಸಾನ್ ಕಿಕ್ಸ್ ಟರ್ಬೋ ಪೆಟ್ರೋಲ್ ಆವೃತ್ತಿಯು ಪ್ರತಿ ಲೀಟರ್ ಗೆ 16.3 ಕಿಮೀ ಮೈಲೇಜ್ ನೀಡುತ್ತದೆ. ಇನ್ನು 1.5-ಲೀಟರ್ ಹೆಚ್4ಕೆ ಪೆಟ್ರೋಲ್ ಎಂಜಿನ್ ಪ್ರತಿ ಲೀಟರ್ ಗೆ 14.1 ಕಿಮೀ ಮೈಲೇಜ್ ನೀಡುತ್ತದೆ.

MOST READ: ಬಹಿರಂಗವಾಯ್ತು ದಟ್ಸನ್ ರೆಡಿ ಗೋ ಫೇಸ್‍‍ಲಿಫ್ಟ್ ಕಾರಿನ ಮಾಹಿತಿ

ಹೊಸ ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ನಿಸ್ಸಾನ್ ಕಿಕ್ಸ್

ಈ ಹೊಸ ನಿಸ್ಸಾನ್ ಕಿಕ್ಸ್ ಕಾರಿನಲ್ಲಿ ಹಲವಾರು ನೂತನ ಫೀಚರ್‍ಗಳನ್ನು ಹೊಂದಿರಲಿದೆ. ನಿಸ್ಸಾನ್ ಕಿಕ್ಸ್ ಟಾಪ್ ಅಂಡ್ ಕಾರುಗಳು ರಿಮೋಟ್ ಎಂಜಿನ್ ಸ್ಟಾರ್ಟ್, ಪುಶ್-ಬಟನ್ ಸ್ಟಾರ್ಟ್ ಮತ್ತು ಐಡಲ್ ಸ್ಟಾರ್ಟ್-ಸ್ಟಾಪ್ ಫೀಚರ್ ಗಳನ್ನು ಹೊಂದಿರಲಿದೆ.

ನಿಸ್ಸಾನ್ ಕಿಕ್ಸ್ ಕಾರಿನಲ್ಲಿ ಸ್ಮಾರ್ಟ್ ಕಾರ್ಡ್ ಕೀಲೆಸ್ ಎಂಟ್ರಿ, ಕ್ರೂಸ್ ಕಂಟ್ರೋಲ್, 'ಅರೌಂಡ್ ವ್ಯೂ ಮಾನಿಟರ್' 360 ಡಿಗ್ರಿ ಕ್ಯಾಮೆರಾ, ಹಿಲ್ ಸ್ಟಾರ್ಟ್ ಅಸಿಸ್ಟ್, ಲೆದರ್ ಸೀಟುಗಳು, ಕಾರ್ನರಿಂಗ್ ಫಾಗ್ ಲ್ಯಾಂಪ್‌ಗಳು, ಆಟೋಮ್ಯಾಟಿಕ್ ಹೆಡ್‌ಲ್ಯಾಂಪ್‌ಗಳು ಮತ್ತು ವೈಪರ್, ಕ್ರೂಸ್ ಕಂಟ್ರೋಲ್ ಮತ್ತು ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ ಅನ್ನು ಹೊಂದಿದೆ.

ಹೊಸ ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ನಿಸ್ಸಾನ್ ಕಿಕ್ಸ್

ಇದರೊಂದಿಗೆ ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, 8.0-ಇಂಚಿನ ಇನ್ಫೋಟೈನ್ಮೆಂಟ್ ಸಿಸ್ಟಂ ಮತ್ತು ಇತರ ಫೀಚರ್ ಗಳನ್ನು ಹೊಂದಿದೆ. ಹಿಂದಿನ ಮಾದರಿಗೆ ಹೋಲಿಸಿದರೆ ಹೊಸ ನಿಸ್ಸಾನ್ ಕಿಕ್ಸ್ ನಲ್ಲಿ ಹಲವಾರು ನೂತನ ಫೀಚರ್ ಗಳನ್ನು ಹೊಂದಿರಲಿದೆ. ಇದರೊಂದಿಗೆ ನಿಸ್ಸಾನ್ ಕಿಕ್ಸ್ ಕಾರಿನಲ್ಲಿ ಪವರ್ ಫುಲ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಹೊಸ ನಿಸ್ಸಾನ್ ಕಿಕ್ಸ್ ಕಾರು ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.

More from DriveSpark

Article Published On: Saturday, May 2, 2020, 11:23 [IST]
English summary
2020 BS6 Nissan Kicks 1.3L, 1.5L Spec & Feature Details Leaked. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+