ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ನಿಸ್ಸಾನ್ ಲೀಫ್ ಇವಿ ಹೊಸ ದಾಖಲೆ

ಹಲವು ವಿಶೇಷತೆಗಳಿಗೆ ಕಾರಣವಾಗಿರುವ ನಿಸ್ಸಾನ್ ಲೀಫ್ ಕ್ರಾಸ್ ಓವರ್ ಹ್ಯಾಚ್‌ಬ್ಯಾಕ್ ಎಲೆಕ್ಟ್ರಿಕ್ ಕಾರು ಮಾದರಿಯು ಯುರೋಪಿನ ಪ್ರಮುಖ ದೇಶಗಳಲ್ಲಿ ಮಾರಾಟವಾಗುತ್ತಿದ್ದು, ಹೊಸ ಕಾರು ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದೆ.

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ನಿಸ್ಸಾನ್ ಲೀಫ್ ಇವಿ ಹೊಸ ದಾಖಲೆ

ವಿಶ್ವಾದ್ಯಂತ ಎಲೆಕ್ಟ್ರಿಕ್ ವಾಹನಗಳ ಮಾರಾಟ ಹೆಚ್ಚಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತಂದಿರುವುದಲ್ಲದೆ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟ ಮೇಲೆ ಹಲವಾರು ನಿರ್ಬಂಧಗಳನ್ನು ಹೇರಲಾಗುತ್ತಿದೆ. ಇದರ ಪರಿಣಾಮ ಇವಿ ವಾಹನಗಳ ಮಾರಾಟವು ತೀವ್ರಗತಿಯಲ್ಲಿ ಬೆಳವಣಿಗೆ ಕಾಣುತ್ತಿದ್ದು, ನಿಸ್ಸಾನ್ ಕಂಪನಿಯು ಲೀಫ್ ಕಾರು ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾಗಿದೆ.

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ನಿಸ್ಸಾನ್ ಲೀಫ್ ಇವಿ ಹೊಸ ದಾಖಲೆ

ಅದರಲ್ಲೂ ಯುರೋಪ್ ಒಕ್ಕೂಟಗಳಲ್ಲಿ ಡೀಸೆಲ್ ಎಂಜಿನ್ ಕಾರುಗಳ ಮೇಲೆ ಹಲವಾರು ನಿರ್ಬಂಧಗಳನ್ನು ಹೇರುತ್ತಿದ್ದು, ಹಲವಾರು ಆಟೋ ಕಂಪನಿಗಳು ಡೀಸೆಲ್ ಕಾರುಗಳ ಮಾರಾಟವನ್ನು ಸ್ಥಗಿತಗೊಳಿಸಿ ಸಂಪೂರ್ಣವಾಗಿ ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ಮಾದರಿಗಳನ್ನು ಮಾತ್ರ ಮಾರಾಟ ಮಾಡುತ್ತಿವೆ.

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ನಿಸ್ಸಾನ್ ಲೀಫ್ ಇವಿ ಹೊಸ ದಾಖಲೆ

ನಿಸ್ಸಾನ್ ಕಾರ್ಪೊರೇಷನ್ ಕೂಡಾ ಇದೇ ನಿಟ್ಟಿನಲ್ಲಿ ಹೊಸ ಯೋಜನೆ ರೂಪಿಸುವ ಮೂಲಕ 2010ಲ್ಲಿ ಮೊದಲ ಬಿಡುಗಡೆ ಮಾಡಲಾದ ಲೀಫ್ ಎಲೆಕ್ಟ್ರಿಕ್ ಕಾರು ಇದೀಗ ಗ್ರಾಹಕರ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಇದುವರೆಗೆ 5 ಲಕ್ಷ ಯುನಿಟ್ ಉತ್ಪಾದನೆಯ ದಾಖಲೆಯನ್ನು ತನ್ನದಾಗಿಸಿಕೊಂಡಿದೆ.

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ನಿಸ್ಸಾನ್ ಲೀಫ್ ಇವಿ ಹೊಸ ದಾಖಲೆ

2010ರಿಂದ 2018ರ ಅವಧಿಯಲ್ಲಿ ಲೀಫ್ ಎಲೆಕ್ಟ್ರಿಕ್ ಕಾರು ಅಷ್ಟಾಗಿ ಬೇಡಿಕೆ ಪಡೆದುಕೊಳ್ಳದ್ದಿದ್ದರೂ ಮಾರಾಟವನ್ನು ಮುಂದುವರಿಸಿಕೊಂಡ ಬಂದಿದ್ದ ನಿಸ್ಸಾನ್ ಕಂಪನಿಯು 2018ರಲ್ಲಿ ಲೀಫ್ ಕಾರಿನ ನ್ಯೂ ಜನರೇಷನ್ ಮಾದರಿಯನ್ನು ಬಿಡುಗಡೆಗೊಳಿಸುವ ಮೂಲಕ ಭಾರೀ ಸಂಚಲನವನ್ನೇ ಸೃಷ್ಟಿಸಿತು.

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ನಿಸ್ಸಾನ್ ಲೀಫ್ ಇವಿ ಹೊಸ ದಾಖಲೆ

ಇದರ ನಡುವೆ ಯುರೋಪ್ ಒಕ್ಕೂಟವು ಮಾಲಿನ್ಯ ತಗ್ಗಿಸುವ ನಿಟ್ಟಿನಲ್ಲಿ ಡೀಸೆಲ್ ವಾಹನಗಳ ಮೇಲೆ ನಿರ್ಬಂಧ ಹೆಚ್ಚಿಸಿ ಹಿನ್ನಲೆಯಲ್ಲಿ ಗ್ರಾಹಕರನ್ನು ಸೆಳೆದ ನಿಸ್ಸಾನ್ ಲೀಫ್ ಕಾರು ಮೊದಲ 8 ವರ್ಷಗಳಲ್ಲಿನ ಮಾರಾಟ ಪ್ರಮಾಣಕ್ಕಿಂತಲೂ ಶೇ.80 ರಷ್ಟು ಪ್ರಮಾಣವನ್ನು ಕೇವಲ 2 ವರ್ಷಗಳ ಅವಧಿಯಲ್ಲಿ ದಾಖಲಿಸಿದೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ನಿಸ್ಸಾನ್ ಲೀಫ್ ಇವಿ ಹೊಸ ದಾಖಲೆ

ಪ್ರತಿ ಚಾರ್ಜ್‌ಗೆ ಗರಿಷ್ಠ 400ಕಿ.ಮೀ ಮೈಲೇಜ್ ರೇಂಜ್ ಹೊಂದಿರುವ ನಿಸ್ಸಾನ್ ಲೀಫ್ ಕಾರು 40kWh ಬ್ಯಾಟರಿ ಬಳಕೆಯೊಂದಿಗೆ ಡಿಸಿ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದ್ದು, ಈ ಎಲೆಕ್ಟ್ರಿಕ್ ಕಾರನ್ನು ಭಾರತದಲ್ಲೂ ಬಿಡುಗಡೆಯಾಗಿ ನಿಸ್ಸಾನ್ ಕಂಪನಿಯು ಸಿದ್ದವಾಗಿದೆ.

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ನಿಸ್ಸಾನ್ ಲೀಫ್ ಇವಿ ಹೊಸ ದಾಖಲೆ

ಭಾರತದಲ್ಲಿ ಈಗಾಗಲೇ ಲೀಫ್ ನ್ಯೂ ಜನರೇಷನ್ ಮಾದರಿಯನ್ನು ಪ್ರದರ್ಶನಗೊಳಿಸಿರುವ ನಿಸ್ಸಾನ್ ಕಂಪನಿಯು ದೇಶದಲ್ಲಿ ಸಾರ್ವಜನಿಕವಾಗಿ ಸ್ಥಳಗಳಲ್ಲಿ ಚಾರ್ಜಿಂಗ್ ಸೌಲಭ್ಯಗಳು ಲಭ್ಯತೆಯಿಲ್ಲದ ಹಿನ್ನಲೆಯಲ್ಲಿ ಹೊಸ ಎಲೆಕ್ಟ್ರಿಕ್ ಕಾರಿನ ಬಿಡುಗಡೆಯನ್ನು ಮುಂದೂಡಿಕೆ ಮಾಡುತ್ತಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ನಿಸ್ಸಾನ್ ಲೀಫ್ ಇವಿ ಹೊಸ ದಾಖಲೆ

ಇದೀಗ ಈ ವಿಚಾರವಾಗಿ ಮಹತ್ವದ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರವು ಸರ್ಕಾರಿ ತೈಲ ಕಂಪನಿಗಳ ಅಧೀನದಲ್ಲಿರುವ ಪೆಟ್ರೋಲ್ ಬಂಕ್‌ಗಳಲ್ಲೇ ಎಲೆಕ್ಟ್ರಿಕ್ ಕಾರುಗಳಿಗೆ ಚಾರ್ಜಿಂಗ್ ಪಾಯಿಂಟ್ ತೆರೆಯುವ ಯೋಜನೆಗೆ ಚಾಲನೆ ನೀಡಿದ್ದು, ಮುಂಬರುವ ಕೆಲವೇ ದಿನಗಳಲ್ಲಿ ಸುಮಾರು 69 ಸಾವಿರ ಸರ್ಕಾರಿ ಅಧೀನದಲ್ಲಿ ಪೆಟ್ರೋಲ್ ಬಂಕ್‌ಗಳಲ್ಲಿ ಇವಿ ಚಾರ್ಜಿಂಗ್ ಸೌಲಭ್ಯವು ಲಭ್ಯವಾಗಲಿದೆ.

Most Read Articles

Kannada
English summary
Nissan Leaf EV Reached 5 Lakh Production Milestone. Read in Kannada.
Story first published: Saturday, September 12, 2020, 21:08 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X