ಬಿಡುಗಡೆಯಾದ ಕೇವಲ 5 ದಿನಗಳಲ್ಲಿ ಭರ್ಜರಿ ಬುಕ್ಕಿಂಗ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ನಿಸ್ಸಾನ್ ಇಂಡಿಯಾದ ಹೊಚ್ಚ ಹೊಸ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಹೊಸ ಕಾರು ಮಾದರಿಯು ಬಿಡುಗಡೆಯಾದ ಕೇವಲ 5 ದಿನಗಳಲ್ಲಿ ಬರೋಬ್ಬರಿ 5 ಸಾವಿರ ಬುಕ್ಕಿಂಗ್ಸ್ ಪಡೆದುಕೊಂಡಿದೆ.

ಕೇವಲ 5 ದಿನಗಳಲ್ಲಿ ಭರ್ಜರಿ ಬುಕ್ಕಿಂಗ್ ಪಡೆದುಕೊಂಡ ಮ್ಯಾಗ್ನೈಟ್

ದೇಶಿಯ ಮಾರುಕಟ್ಟೆಯಲ್ಲಿ ನಿಸ್ಸಾನ್ ಕಂಪನಿಯು ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಹೊಸ ಅಧ್ಯಾಯ ಆರಂಭಿಸಿದ್ದು, ಈ ಮೊದಲು ನಿಸ್ಸಾನ್ ನಿರ್ಮಾಣದ ಯಾವುದೇ ಕಾರು ಮಾದರಿಯು ಈ ಮಟ್ಟದಲ್ಲಿ ಬೇಡಿಕೆ ಪಡೆದುಕೊಂಡಿರಲಿಲ್ಲ. ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಮಾದರಿಗಳ ಮಾರಾಟ ಹೊಂದಿದ್ದರೂ ಕೂಡಾ ಗ್ರಾಹಕರ ಬೇಡಿಕೆಯಲ್ಲಿ ಸತತ ಹಿನ್ನಡೆ ಅನುಭವಿಸಿದ್ದ ನಿಸ್ಸಾನ್ ಕಂಪನಿಗೆ ಮ್ಯಾಗ್ನೈಟ್ ಕಾರು ಮಾದರಿಯು ಉತ್ತಮ ಬೇಡಿಕೆ ತಂದುಕೊಡುವ ನೀರಿಕ್ಷೆಯಿದೆ.

ಕೇವಲ 5 ದಿನಗಳಲ್ಲಿ ಭರ್ಜರಿ ಬುಕ್ಕಿಂಗ್ ಪಡೆದುಕೊಂಡ ಮ್ಯಾಗ್ನೈಟ್

ಕಾರು ಮಾರಾಟ ಮಳಿಗೆಗಳ ಸಂಖ್ಯೆಯು ನಿಯಮಿತವಾಗಿದ್ದರೂ ಮ್ಯಾಗ್ನೈಟ್ ಕಾರು ಮಾದರಿಗೆ ಇದುವರೆಗೆ ಸುಮಾರು 5 ಸಾವಿರ ಗ್ರಾಹಕರು ಬುಕ್ಕಿಂಗ್ ದಾಖಲಿಸಿದ್ದು, 50 ಸಾವಿರಕ್ಕೂ ಹೆಚ್ಚು ಗ್ರಾಹಕರು ಹೊಸ ಕಾರಿನ ಬೆಲೆ ಮತ್ತು ಫೀಚರ್ಸ್‌ಗಳ ಕುರಿತಾದ ಮಾಹಿತಿಗಾಗಿ ಡೀಲರ್ಸ್‌ಗಳನ್ನು ಸಂಪರ್ಕಿಸಿದ್ದಾರೆ.

ಕೇವಲ 5 ದಿನಗಳಲ್ಲಿ ಭರ್ಜರಿ ಬುಕ್ಕಿಂಗ್ ಪಡೆದುಕೊಂಡ ಮ್ಯಾಗ್ನೈಟ್

ಜೊತೆಗೆ ಮ್ಯಾಗ್ನೈಟ್ ಕಾರಿನ ಟಾಪ್ ಎಂಡ್ ಟರ್ಬೋ ಪೆಟ್ರೋಲ್ ಮಾದರಿಗಾಗಿ ಹೆಚ್ಚಿನ ಮಟ್ಟದ ಬುಕ್ಕಿಂಗ್ ಸಲ್ಲಿಕೆಯಾಗಿದ್ದು, ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳಲ್ಲೇ ಅತಿ ಕಡಿಮೆ ಬೆಲೆಯೊಂದಿಗೆ ಹೊಸ ಮಾರುಕಟ್ಟೆ ಪ್ರವೇಶಿಸಿದೆ.

ಕೇವಲ 5 ದಿನಗಳಲ್ಲಿ ಭರ್ಜರಿ ಬುಕ್ಕಿಂಗ್ ಪಡೆದುಕೊಂಡ ಮ್ಯಾಗ್ನೈಟ್

ಪ್ರಸ್ತುತ ಮಾರುಕಟ್ಟೆಯಲ್ಲಿ ನಿಸ್ಸಾನ್ ಮಾಗ್ನೈಟ್ ಹೊರತುಪಡಿಸಿ ಬಹುತೇಕ ಪ್ರತಿಸ್ಪರ್ಧಿ ಕಾರು ಮಾದರಿಗಳು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.70 ಲಕ್ಷದಿಂದ ಆರಂಭವಾಗಿ ಟಾಪ್ ಎಂಡ್ ಮಾದರಿಗಳು ರೂ. 12.80 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುತ್ತಿದ್ದು, ನಿಸ್ಸಾನ್ ಮ್ಯಾಗ್ನೈಟ್ ಕಾರು ಮಾದರಿಯೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 4.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.9.35 ಲಕ್ಷ ಬೆಲೆ ಹೊಂದಿದೆ.

ಕೇವಲ 5 ದಿನಗಳಲ್ಲಿ ಭರ್ಜರಿ ಬುಕ್ಕಿಂಗ್ ಪಡೆದುಕೊಂಡ ಮ್ಯಾಗ್ನೈಟ್

ಜೊತೆಗೆ ಬಜೆಟ್ ಬೆಲೆ ನಡುವೆಯೂ ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಅತ್ಯುತ್ತಮ ಫೀಚರ್ಸ್ ಹೊಂದಿರುವ ನಿಸ್ಸಾನ್ ಮ್ಯಾಗ್ನೈಟ್ ಕಾರು ಮಾದರಿಯು ಕಾರು ಖರೀದಿದಾರರನ್ನು ಸೆಳೆಯುತ್ತಿದ್ದು, ಹೊಸ ಕಾರು ಪೆಟ್ರೋಲ್ ಮಾದರಿಯಲ್ಲಿ ಮಾತ್ರವೇ ಖರೀದಿಗೆ ಲಭ್ಯವಿದೆ. ಮ್ಯಾಗ್ನೈಟ್ ಕಾರಿನಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಜೋಡಣೆ ಮಾಡಲಾಗಿದೆ.

ಕೇವಲ 5 ದಿನಗಳಲ್ಲಿ ಭರ್ಜರಿ ಬುಕ್ಕಿಂಗ್ ಪಡೆದುಕೊಂಡ ಮ್ಯಾಗ್ನೈಟ್

1.0-ಲೀಟರ್ ಬಿ4ಡಿ ಪೆಟ್ರೋಲ್ ಮಾದರಿಯು ಸ್ಟ್ಯಾಂಡರ್ಡ್ ಆಗಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದರೆ ಟಾಪ್ ಎಂಡ್ ಮಾದರಿಗಳಲ್ಲಿ ನೀಡಲಾಗಿರುವ ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಕೇವಲ 5 ದಿನಗಳಲ್ಲಿ ಭರ್ಜರಿ ಬುಕ್ಕಿಂಗ್ ಪಡೆದುಕೊಂಡ ಮ್ಯಾಗ್ನೈಟ್

1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 70-ಬಿಎಚ್‌ಪಿ, 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 100-ಬಿಎಚ್‌ಪಿ, 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಕೇವಲ 5 ದಿನಗಳಲ್ಲಿ ಭರ್ಜರಿ ಬುಕ್ಕಿಂಗ್ ಪಡೆದುಕೊಂಡ ಮ್ಯಾಗ್ನೈಟ್

ಇದರೊಂದಿಗೆ ಹೊಸ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಸುರಕ್ಷತೆಗಾಗಿ ಐಸೋಫಿಕ್ಸ್ ಸೀಟ್, ಸೆಂಟರ್ ಡೋರ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್, ಇಂಪ್ಯಾಕ್ಟ್ ಸೆನ್ಸಿಂಗ್ ಆಟೋ ಡೋರ್ ಅನ್ ಲಾಕ್, ಹಿಲ್ ಸ್ಟಾರ್ಟ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಬ್ರೇಕ್ ಅಸಿಸ್ಟ್, ರಿಮೋಟ್ ಕೀ ಲೆಸ್ ಎಂಟ್ರಿ, ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಆ್ಯಂಟಿ ರೊಲ್ ಬಾರ್, ಸೀಟ್ ಬೆಲ್ಟ್ ಅಲರ್ಟ್, ಇಮ್‌ಮೊಬಿಲೈಸರ್ ಮತ್ತು ರಿಯರ್ ಪಾರ್ಕಿಂಗ್ ಕ್ಯಾಮೆರಾ, ವೆಹಿಕಲ್ ಡೈನಾಮಿಕ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್, ಟೈರ್ ಪ್ರೆಷರ್ ಮಾನಿಟರಿಂಗ್ ಮತ್ತು ಬ್ರಾಂಡ್‌ನ ಕನೆಕ್ಟ್ ಫೀಚರ್ಸ್ ಸೌಲಭ್ಯವಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಕೇವಲ 5 ದಿನಗಳಲ್ಲಿ ಭರ್ಜರಿ ಬುಕ್ಕಿಂಗ್ ಪಡೆದುಕೊಂಡ ಮ್ಯಾಗ್ನೈಟ್

ಈ ಮೂಲಕ ಹೊಸ ಕಾರು ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಆವೃತ್ತಿಗಳಿಂತಲೂ ಕಡಿಮೆ ಬೆಲೆಯೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸಲಿದ್ದು, ಶೀಘ್ರದಲ್ಲೇ ಹೊಸ ಕಾರಿನ ವಿತರಣೆಯು ಆರಂಭವಾಗಲಿದೆ.

Article Published On: Monday, December 7, 2020, 18:34 [IST]
English summary
Nissan Magnite Bookings Cross 5,000 Units In The First Week. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+