ಡೀಲರ್ಸ್ ಮಟ್ಟದಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಕಾರು ಖರೀದಿಗೆ ಬುಕ್ಕಿಂಗ್ ಶುರು

ನಿಸ್ಸಾನ್ ಇಂಡಿಯಾ ಕಂಪನಿಯು ಇದೇ ತಿಂಗಳಾಂತ್ಯಕ್ಕೆ ತನ್ನ ಹೊಚ್ಚ ಹೊಸ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡುವ ಸುಳಿವು ನೀಡಿದ್ದು, ಹೊಸ ಕಾರು ಖರೀದಿಗೆ ಈಗಾಗಲೇ ಡೀಲರ್ಸ್ ಮಟ್ಟದ ಬುಕ್ಕಿಂಗ್ ಪ್ರಕ್ರಿಯೆ ಆರಂಭವಾಗಿದೆ.

ಡೀಲರ್ಸ್ ಮಟ್ಟದಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಕಾರು ಖರೀದಿಗೆ ಬುಕ್ಕಿಂಗ್ ಶುರು

ಮ್ಯಾಗ್ನೈಟ್ ಕಾರು ಖರೀದಿಗೆ ನಿಸ್ಸಾನ್ ಕಂಪನಿಯು ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆಯನ್ನು ಇದುವರೆಗೂ ಆರಂಭಿಸಿಲ್ಲವಾದರೂ ಆಸಕ್ತ ಗ್ರಾಹಕರು ಡೀಲರ್ಸ್ ಮಟ್ಟದಲ್ಲಿ ಬುಕ್ಕಿಂಗ್ ಸಲ್ಲಿಸುತ್ತಿದ್ದು, ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಗಳಲ್ಲೇ ಅತಿ ಕಡಿಮೆ ಬೆಲೆಯೊಂದಿಗೆ ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಅಭಿವೃದ್ದಿಗೊಳ್ಳುವ ಸುಳಿವು ನೀಡಿದೆ. ಹೊಸ ಕಾರು ಎಕ್ಸ್‌ಇ, ಎಕ್ಸ್ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ಎಂಬ ನಾಲ್ಕು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಸ್ಪೋರ್ಟಿ ಲುಕ್‌ನೊಂದಿಗೆ ಕಟಿಂಗ್ ಎಡ್ಜ್ ವಿನ್ಯಾಸಗಳನ್ನು ಪಡೆದುಕೊಂಡಿದೆ.

ಡೀಲರ್ಸ್ ಮಟ್ಟದಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಕಾರು ಖರೀದಿಗೆ ಬುಕ್ಕಿಂಗ್ ಶುರು

ನಿಸ್ಸಾನ್ ಹೊಸ ಮ್ಯಾಗ್ನೈಟ್ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಕಿಯಾ ಸೊನೊಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಆವೃತ್ತಿಗಳಿಂತಲೂ ಕಡಿಮೆ ಬೆಲೆ ಹೊಂದಿದ್ದು, ಮಾಹಿತಿಗಳ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ.5.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.9.55 ಲಕ್ಷ ಬೆಲೆ ಪಡೆದುಕೊಳ್ಳುವ ಸಾಧ್ಯತೆಗಳಿವೆ.

ಡೀಲರ್ಸ್ ಮಟ್ಟದಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಕಾರು ಖರೀದಿಗೆ ಬುಕ್ಕಿಂಗ್ ಶುರು

ಇನ್ನು ಆಕರ್ಷಕ ಬೆಲೆಯೊಂದಿಗೆ ಸೆಗ್ಮೆಂಟ್ ಇನ್ ಬೆಸ್ಟ್ ಫೀಚರ್ಸ್‌ಗಳನ್ನು ಪಡೆದುಕೊಂಡಿರಲಿರುವ ಹೊಸ ಕಾರು ಗ್ರಿಲ್, ಕ್ರೋಮ್ ಸ್ಟ್ರೀಪ್, ಎಲ್ಇಡಿ ಬಿ-ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಎಲ್ ವಿನ್ಯಾಸದ ಎಲ್ಇಡಿ ಡಿಆರ್‌ಎಲ್‌ಗಳು, ಫ್ರಂಟ್ ಬಂಪರ್, ಫಾಗ್ ಲ್ಯಾಂಪ್, ಸೆಂಟ್ರಲ್ ಏರ್ ಇನ್‌ಟೆಕ್, ಸ್ಕೀಡ್ ಪ್ಲೇಟ್, ರೂಫ್ ರೈಲ್ಸ್ ಸೌಲಭ್ಯಗಳಿವೆ. ಹಾಗೆಯೇ ಹೊಸ ಕಾರಿನ ಸೈಡ್ ಪ್ರೋಫೈಲ್ ಕೂಡಾ ಆಕರ್ಷಕವಾಗಿದೆ.

ಡೀಲರ್ಸ್ ಮಟ್ಟದಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಕಾರು ಖರೀದಿಗೆ ಬುಕ್ಕಿಂಗ್ ಶುರು

ಹಾಗೆಯೇ 16-ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್, ಟೈಲ್‌ಲೈಟ್ ಸೌಲಭ್ಯದೊಂದಿಗೆ ಕಾರಿನ ಡೋರ್ ತಳಭಾಗದಲ್ಲಿ ಮತ್ತು ರಿಯರ್ ಬಂಪರ್ ಬಳಿ ಸಿಲ್ವರ್ ಕೊಟಿಂಗ್ ಹೊಂದಿರುವ ಆಕ್ಸೆಂಟ್ ನೀಡಲಾಗಿದ್ದು, ಮ್ಯಾಗ್ನೈಟ್ ಕಾರಿನಲ್ಲಿ ಕಪ್ಪು ಬಣ್ಣದ ವೀಲ್ಹ್ ಆರ್ಚ್, ವೀಲ್ಹ್ ಆರ್ಚ್‌ಗೆ ಹೊಂದಿಕೊಂಡಿರುವ ಬ್ಲ್ಯಾಕ್ ಕ್ಲಾಡಿಂಗ್, ಬೂಟ್ ಲಿಡ್, ಕಾರಿನ ಹಿಂಭಾಗದ ಮಧ್ಯದಲ್ಲಿ ನಿಸ್ಸಾನ್ ಲೊಗೊ ಜೊತೆಗೆ ಮ್ಯಾಗ್ನೈಟ್ ಲೊಗೊ ನೀಡಲಾಗಿದೆ.

ಡೀಲರ್ಸ್ ಮಟ್ಟದಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಕಾರು ಖರೀದಿಗೆ ಬುಕ್ಕಿಂಗ್ ಶುರು

ನಿಸ್ಸಾನ್ ಕಂಪನಿಯು ಮ್ಯಾಗ್ನೈಟ್ ಕಾರಿನಲ್ಲಿ ಹೊರಭಾಗದಂತೆ ಒಳಭಾಗದಲ್ಲೂ ಆಕರ್ಷಕ ವಿನ್ಯಾಸವನ್ನು ನೀಡಿದ್ದು, ಸಂಪೂರ್ಣವಾಗಿ ಕಪ್ಪು ಬಣ್ಣದ ಕ್ಯಾಬಿನ್ ಪ್ರೀಮಿಯಂ ಅನುಭವ ನೀಡುತ್ತದೆ. ಆಸನಗಳಲ್ಲಿ ಮಾತ್ರ ಗ್ರೇ ಬಣ್ಣವನ್ನು ಬಣ್ಣವನ್ನು ಬಳಕೆ ಮಾಡಲಾಗಿದ್ದು, ಫ್ಲ್ಯಾಟ್ ಬಾಟಮ್ ಸ್ಪೀರಿಂಗ್ ವೀಲ್ಹ್, ಮೌಂಟೆಡ್ ಕಂಟ್ರೋಲ್ಸ್, 7-ಇಂಚಿನ ಫುಲ್ ಡಿಜಿಟಲ್ ಟಿಎಫ್‌ಟಿ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, 8-ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಕ್ಲಸ್ಟರ್, ಕ್ರೂಸ್ ಕಂಟ್ರೊಲ್, 360 ಡಿಗ್ರಿ ವ್ಯೂವ್ ಕ್ಯಾಮೆರಾ, ಕ್ಲೈಮೆಟ್ ಕಂಟ್ರೋಲ್ ಸಿಸ್ಟಂ ಹೊಂದಿದೆ.

ಡೀಲರ್ಸ್ ಮಟ್ಟದಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಕಾರು ಖರೀದಿಗೆ ಬುಕ್ಕಿಂಗ್ ಶುರು

ಹಿಂಬದಿಯಲ್ಲಿ ಆರಾಮದಾಯಕ ಆಸನಗಳೊಂದಿಗೆ ಸೆಂಟರ್ ಆರ್ಮ್ ರೆಸ್ಟ್, ರಿಯರ್ ಎಸಿ ವೆಂಟ್ಸ್, 60:40 ಅನುಪಾತದಲ್ಲಿ ಮಡಿಕೆ ಮಾಡಬಹುದಾದ ಆಸನಗಳು, 334-ಲೀಟರ್ ಸಾಮರ್ಥ್ಯದ ಬೂಟ್ ಸ್ಪೆಸ್ ನೀಡಲಾಗಿದ್ದು, ಹೆಚ್ಚುವರಿ ಬೂಟ್ ಸ್ಪೆಸ್ ಅವಶ್ಯವಿದ್ದಲ್ಲಿ ಹಿಂಬದಿಯ ಆಸನಗಳನ್ನು ಮಡಿಕೆ ಮಾಡಿಕೊಳ್ಳಬಹುದಾಗಿದೆ.

ಡೀಲರ್ಸ್ ಮಟ್ಟದಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಕಾರು ಖರೀದಿಗೆ ಬುಕ್ಕಿಂಗ್ ಶುರು

ಮೊದಲ ಎರಡು ವೆರಿಯೆಂಟ್‌ಗಳಿಂತ ಟಾಪ್ ಎಂಡ್ ವೆರಿಯೆಂಟ್‌ಗಳು ಹೆಚ್ಚಿನ ಮಟ್ಟದ ಫೀಚರ್ಸ್ ಹೊಂದಿರಲಿದ್ದು, ಟಾಪ್ ಎಂಡ್ ವೆರಿಯೆಂಟ್‌ಗಳಲ್ಲಿ ಹೆಚ್ಚುವರಿಯಾಗಿ ವೈರ್‌ಲೆಸ್ ಚಾರ್ಜರ್, ಪೆಡಲ್ ಲ್ಯಾಂಪ್ಸ್, ಏರ್ ಪ್ಯೂರಿಫೈರ್, ಜೆಬಿಎಲ್ ಸೌಂಡ್ ಸಿಸ್ಟಂ, ಆ್ಯಂಬಿಯೆಂಟ್ ಲೈಟಿಂಗ್ಸ್ ಸೌಲಭ್ಯ ಹೊಂದಿರಲಿದ್ದು, ಹೊಸ ಕಾರಿನ ಎಂಜಿನ್ ಆಯ್ಕೆಗಳು ಕೂಡಾ ಆಕರ್ಷಕವಾಗಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಡೀಲರ್ಸ್ ಮಟ್ಟದಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಕಾರು ಖರೀದಿಗೆ ಬುಕ್ಕಿಂಗ್ ಶುರು

ಮ್ಯಾಗ್ನೈಟ್ ಕಾರಿನಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಜೋಡಣೆ ಮಾಡಲಾಗುತ್ತಿದ್ದು, 1.0-ಲೀಟರ್ ಬಿ4ಡಿ ಪೆಟ್ರೋಲ್ ಮಾದರಿಯು ಸ್ಟ್ಯಾಂಡರ್ಡ್ ಆಗಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದರೆ ಟಾಪ್ ಎಂಡ್ ಮಾದರಿಗಳಲ್ಲಿ ನೀಡಲಾಗಿರುವ ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

ಡೀಲರ್ಸ್ ಮಟ್ಟದಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಕಾರು ಖರೀದಿಗೆ ಬುಕ್ಕಿಂಗ್ ಶುರು

1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 70-ಬಿಎಚ್‌ಪಿ, 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 100-ಬಿಎಚ್‌ಪಿ, 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯಕಾರುಗಳಿವು

ಡೀಲರ್ಸ್ ಮಟ್ಟದಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಕಾರು ಖರೀದಿಗೆ ಬುಕ್ಕಿಂಗ್ ಶುರು

ಈ ಮೂಲಕ ಹೊಸ ಕಾರಿನಲ್ಲಿ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು ಪ್ರತಿ ಲೀಟರ್‌‌ಗೆ ಗರಿಷ್ಠ 18.75 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದರೆ ಟರ್ಬೋ ಪೆಟ್ರೋಲ್ ಮಾದರಿಯು ಅತ್ಯುತ್ತಮ ಪರ್ಫಾಮೆನ್ಸ್‌ನೊಂದಿಗೆ ಪ್ರತಿ ಲೀಟರ್‍‌ಗೆ 17.7 ಕಿ.ಮೀ ನಿಂದ 20 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

Most Read Articles

Kannada
English summary
Nissan Magnite Bookings Unofficially Started At Dealership-Level. Read in Kannada.
Story first published: Thursday, November 12, 2020, 18:17 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X