Just In
Don't Miss!
- Movies
ಸುದೀಪ್ 'ಫ್ಯಾಂಟಮ್' ಸಿನಿಮಾದಲ್ಲಿ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್?
- News
ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ಜೆ.ಸಿ. ಮಾಧುಸ್ವಾಮಿ ರಾಜೀನಾಮೆ?
- Sports
ಆಸ್ಟ್ರೇಲಿಯಾ ತಂಡದ ಬದ್ಧತೆ ಹಾಗೂ ಪೈಯ್ನ್ ನಾಯಕತ್ವವನ್ನು ಪ್ರಶ್ನಿಸಿದ ಮಾಜಿ ಆಸಿಸ್ ಕ್ರಿಕೆಟಿಗ
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ವಿದೇಶಿ ಮಾರುಕಟ್ಟೆಗಳಿಗೂ ರಫ್ತುಗೊಳ್ಳಲಿದೆ ಮೇಡ್ ಇನ್ ಇಂಡಿಯಾ ಮ್ಯಾಗ್ನೈಟ್ ಕಾರು
ನಿಸ್ಸಾನ್ ಇಂಡಿಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಮೂಲಕ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ನಿಸ್ಸಾನ್ ಕಂಪನಿಯು ಶೀಘ್ರದಲ್ಲೇ ವಿದೇಶಿ ಮಾರುಕಟ್ಟೆಗಳಿಗೂ ಮ್ಯಾಗ್ನೈಟ್ ಕಾರನ್ನು ಭಾರತದಿಂದಲೇ ರಫ್ತು ಮಾಡುವ ಗುರಿಹೊಂದಿದೆ.

ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ವಿದೇಶಿ ಮಾರುಕಟ್ಟೆಗಳಿಗೆ ರಫ್ತು ಮಾಡುವ ಮುನ್ನ ಹೊಸ ಕಾರಿನ ಉತ್ಪಾದನಾ ಪ್ರಮಾಣವನ್ನು ಹೆಚ್ಚಿಸಲು ಸಿದ್ದತೆ ನಡೆಸಲಾಗಿದ್ದು, ವಿದೇಶಿ ಮಾರುಕಟ್ಟೆಗೆ ರಫ್ತುಗೊಳ್ಳುವ ಮಾದರಿಯು ತುಸು ಹೆಚ್ಚುವರಿ ಫೀಚರ್ಸ್‌ಗಳೊಂದಿಗೆ ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾದರಿಗಿಂತಲೂ ದುಬಾರಿ ಬೆಲೆಯೊಂದಿಗೆ ಮಾರಾಟವಾಗುವ ಸಾಧ್ಯತೆಗಳಿವೆ. ನಿಸ್ಸಾನ್ ಕಂಪನಿಯು ಈಗಾಗಲೇ ವಿಶ್ವದ ಪ್ರಮುಖ ಮಾರುಕಟ್ಟೆಗಳಿಗೆ ಭಾರತದಿಂದಲೇ ಪ್ರಮುಖ ಕಾರುಗಳನ್ನು ರಫ್ತು ಕೈಗೊಳ್ಳುತ್ತಿದ್ದು, ಇದೀಗ ಹೊಸದಾಗಿ ಬಿಡುಗಡೆಯಾಗಿರುವ ಮ್ಯಾಗ್ನೈಟ್ ಕಾರು ಕೂಡಾ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ತವಕದಲ್ಲಿದೆ.

ಇನ್ನು ಮ್ಯಾಗ್ನೈಟ್ ಕಾರು ಮಾದರಿಯು ಬಿಡುಗಡೆಗೊಂಡ ಕೇವಲ ಒಂದು ತಿಂಗಳಿನಲ್ಲಿ ಸುಮಾರು 18 ಸಾವಿರಕ್ಕೂ ಹೆಚ್ಚು ಗ್ರಾಹಕರು ಬುಕ್ಕಿಂಗ್ ದಾಖಲಿಸಿದ್ದು, ಸೆಗ್ಮೆಂಟ್ ಇನ್ ಕ್ಲಾಸ್ ಫೀಚರ್ಸ್ ಹೊಂದಿರುವ ನಿಸ್ಸಾನ್ ಹೊಸ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಅತಿ ಕಡಿಮೆ ಬೆಲೆಯೊಂದಿಗೆ ಮಾರಾಟಗೊಳ್ಳುತ್ತಿದೆ.

ಹೊಸ ಕಾರು ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಆವೃತ್ತಿಗಳಿಂತಲೂ ಕಡಿಮೆ ಬೆಲೆಯೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಎಕ್ಸ್‌ಇ, ಎಕ್ಸ್ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ಎನ್ನುವ ನಾಲ್ಕು ವೆರಿಯೆಂಟ್‌ಗಳೊಂದಿಗೆ ಮಾರಾಟಗೊಳ್ಳುತ್ತಿದೆ.

ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.9.35 ಲಕ್ಷ ಬೆಲೆ ಹೊಂದಿದ್ದು, ಇದು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಆಕರ್ಷಕ ಬೆಲೆಯಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ನಿಸ್ಸಾನ್ ಮಾಗ್ನೈಟ್ ಹೊರತುಪಡಿಸಿ ಬಹುತೇಕ ಪ್ರತಿಸ್ಪರ್ಧಿ ಕಾರು ಮಾದರಿಗಳು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.70 ಲಕ್ಷದಿಂದ ಆರಂಭವಾಗಿ ಟಾಪ್ ಎಂಡ್ ಮಾದರಿಗಳು ರೂ. 12.80 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುತ್ತಿವೆ.

ಉತ್ತಮ ಬೆಲೆ ಪೈಪೋಟಿಯೊಂದಿಗೆ ಮಾರುಕಟ್ಟೆ ಪ್ರವೇಶಿಸಿರುವ ಮ್ಯಾಗ್ನೈಟ್ ಕಾರು ಮಾದರಿಯು ಕಂಪ್ಯಾಕ್ಟ್ ಎಸ್‌ಯುವಿ ಜೊತೆಗೆ ಹ್ಯಾಚ್‌ಬ್ಯಾಕ್ ಕಾರು ಖರೀದಿದಾರರು ಕೂಡಾ ಮ್ಯಾಗ್ನೈಟ್ ಕಾರಿನ ಖರೀದಿಗೆ ಮುಂದಾಗುತ್ತಿದ್ದಾರೆ.

ಮ್ಯಾಗ್ನೈಟ್ ಕಾರಿನಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಜೋಡಣೆ ಮಾಡಲಾಗಿದ್ದು, ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಲಾಗಿಲ್ಲ.

1.0-ಲೀಟರ್ ಬಿ4ಡಿ ಪೆಟ್ರೋಲ್ ಮಾದರಿಯು ಸ್ಟ್ಯಾಂಡರ್ಡ್ ಆಗಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದರೆ ಟಾಪ್ ಎಂಡ್ ಮಾದರಿಗಳಲ್ಲಿ ನೀಡಲಾಗಿರುವ ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 70-ಬಿಎಚ್‌ಪಿ, 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 100-ಬಿಎಚ್‌ಪಿ, 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಇದರೊಂದಿಗೆ ಹೊಸ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಸುರಕ್ಷತೆಗಾಗಿ ಐಸೋಫಿಕ್ಸ್ ಸೀಟ್, ಸೆಂಟರ್ ಡೋರ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್, ಇಂಪ್ಯಾಕ್ಟ್ ಸೆನ್ಸಿಂಗ್ ಆಟೋ ಡೋರ್ ಅನ್ ಲಾಕ್, ಹಿಲ್ ಸ್ಟಾರ್ಟ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಬ್ರೇಕ್ ಅಸಿಸ್ಟ್, ರಿಮೋಟ್ ಕೀ ಲೆಸ್ ಎಂಟ್ರಿ ಸೌಲಭ್ಯಗಳಿವೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಸುರಕ್ಷತೆಗಾಗಿ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಆ್ಯಂಟಿ ರೊಲ್ ಬಾರ್, ಸೀಟ್ ಬೆಲ್ಟ್ ಅಲರ್ಟ್, ಇಮ್‌ಮೊಬಿಲೈಸರ್ ಮತ್ತು ರಿಯರ್ ಪಾರ್ಕಿಂಗ್ ಕ್ಯಾಮೆರಾ, ವೆಹಿಕಲ್ ಡೈನಾಮಿಕ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್, ಟೈರ್ ಪ್ರೆಷರ್ ಮಾನಿಟರಿಂಗ್ ಮತ್ತು ಬ್ರಾಂಡ್‌ನ ಕನೆಕ್ಟ್ ಫೀಚರ್ಸ್ ನೀಡಲಾಗಿದೆ.