ಕರೋನಾ ಎಫೆಕ್ಟ್- ನಿಸ್ಸಾನ್ ಮ್ಯಾಗ್ನೆಟ್ ಕಾರು ಬಿಡುಗಡೆ ಮತ್ತಷ್ಟು ವಿಳಂಬ

ವಿಶ್ವಾದ್ಯಂತ ಆತಂಕ ಸೃಷ್ಠಿಸಿರುವ ಕರೋನಾ ವೈರಸ್ ಹಾವಳಿಯಿಂದಾಗಿ ಆಟೋ ಉದ್ಯಮಕ್ಕೆ ಸಂಕಷ್ಟಕ್ಕೆ ಸಿಲುಕಿದ್ದು, ಆಟೋ ಉತ್ಪಾದನೆ ಮತ್ತು ಮಾರಾಟದಲ್ಲಿ ಸಾಕಷ್ಟು ಕುಸಿತ ಕಂಡಿದೆ. ಜೊತೆಗೆ ಹಲವಾರು ಹೊಸ ವಾಹನಗಳ ಬಿಡುಗಡೆಯು ಮುಂದೂಡಿಕೆಯಾಗಿದ್ದು, ನಿಸ್ಸಾನ್ ಕೂಡಾ ತನ್ನ ಹೊಸ ಕಾರು ಮಾದರಿಗಳ ಬಿಡುಗಡೆಯನ್ನು ತಾತ್ಕಲಿಕವಾಗಿ ಮುಂದೂಡಿಕೆ ಮಾಡಿದೆ.

ಕರೋನಾ ಎಫೆಕ್ಟ್- ನಿಸ್ಸಾನ್ ಮ್ಯಾಗ್ನೆಟ್ ಕಾರು ಬಿಡುಗಡೆ ಮತ್ತಷ್ಟು ವಿಳಂಬ

ಇದೇ ವರ್ಷ ಅಗಸ್ಟ್ ಆರಂಭದಲ್ಲಿ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಾದ ಮ್ಯಾಗ್ನೆಟ್ ಕಾರನ್ನು ಬಿಡುಗಡೆಯ ಯೋಜನೆಯಲ್ಲಿದ್ದ ನಿಸ್ಸಾನ್ ಕಂಪನಿಗೆ ಕರೋನಾ ಮಹಾಮಾರಿ ಬ್ರೇಕ್ ಹಾಕಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಕಾರು ಮಾರಾಟವು ಕುಸಿದಿರುವ ಹಿನ್ನಲೆಯಲ್ಲಿ ಹೊಸ ಕಾರು ಬಿಡುಗಡೆಯನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲಾಗಿದೆ.

ಕರೋನಾ ಎಫೆಕ್ಟ್- ನಿಸ್ಸಾನ್ ಮ್ಯಾಗ್ನೆಟ್ ಕಾರು ಬಿಡುಗಡೆ ಮತ್ತಷ್ಟು ವಿಳಂಬ

ನಿಸ್ಸಾನ್ ಕಂಪನಿಯು ಬಿಡುಗಡೆ ಮಾಡಲಿರುವ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗುವ ಸುಳಿವು ನೀಡಿದ್ದು, ಗ್ರಾಹಕರನ್ನು ಸೆಳೆಯಲು ಸಿದ್ದವಾಗಿರುವ ಹೊಸ ಕಾರಿನ ತಾಂತ್ರಿಕ ಅಂಶಗಳು ಈಗಾಗಲೇ ಬಹಿರಂಗವಾಗಿವೆ.

ಕರೋನಾ ಎಫೆಕ್ಟ್- ನಿಸ್ಸಾನ್ ಮ್ಯಾಗ್ನೆಟ್ ಕಾರು ಬಿಡುಗಡೆ ಮತ್ತಷ್ಟು ವಿಳಂಬ

ಸದ್ಯಕ್ಕೆ EM2 ಕೋಡ್ ನೆಮ್ ಆಧಾರದ ಮೇಲೆ ಹೊಸ ಕಾರಿನ ಟೀಸರ್ ಅನ್ನು ಬಿಡುಗಡೆ ಮಾಡಲಾಗಿದ್ದು, ಹೊಸ ಕಾರಿನ ಅಧಿಕೃತ ಹೆಸರನ್ನು 'ಮ್ಯಾಗ್ನೆಟ್' ಎಂದು ಕರೆಯಲಾಗಿದೆ. ಹೊಸ ಕಾರು ಸದ್ಯ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ ಮಾರುತಿ ಬ್ರೆಝಾ, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ 300 ಮಾದರಿಗಳಿಗೆ ಪೈಪೋಟಿಯಾಗಿ ಬಿಡುಗಡೆಯಾಗಲಿದೆ.

ಕರೋನಾ ಎಫೆಕ್ಟ್- ನಿಸ್ಸಾನ್ ಮ್ಯಾಗ್ನೆಟ್ ಕಾರು ಬಿಡುಗಡೆ ಮತ್ತಷ್ಟು ವಿಳಂಬ

ಮಾರುಕಟ್ಟೆಯಲ್ಲಿರುವ ಕಿಕ್ಸ್ ಎಸ್‌ಯುವಿ ಮಾದರಿಗಿಂತಲೂ ಕೆಳದರ್ಜೆಯ ಕಾರು ಮಾದರಿಯಾಗಿ ಮಾರಾಟಗೊಳ್ಳಲಿರುವ ಹೊಸ ಮ್ಯಾಗ್ನೆಟ್ ಕಾರು ಪೆಟ್ರೋಲ್ ಎಂಜಿನ್‌ನಲ್ಲಿ ಮಾತ್ರವೇ ಖರೀದಿಗೆ ಲಭ್ಯವಿರಲಿದೆ.

MOST READ: ಹೊಸ ಪೊಲೊ ಕಾರು ವಿತರಣೆ ಮಾಡಿದ ಎರಡೇ ನಿಮಿಷದಲ್ಲಿ ನಡೆಯಿತು ಅಪಘಾತ..!

ಕರೋನಾ ಎಫೆಕ್ಟ್- ನಿಸ್ಸಾನ್ ಮ್ಯಾಗ್ನೆಟ್ ಕಾರು ಬಿಡುಗಡೆ ಮತ್ತಷ್ಟು ವಿಳಂಬ

ಬಿಎಸ್-6 ನಿಯಮ ಜಾರಿ ನಂತರ ಡೀಸೆಲ್ ಕಾರುಗಳ ಮಾರಾಟದಲ್ಲಿ ಭಾರೀ ಬದಲಾವಣೆ ಮಾಡಲಾಗಿದ್ದು, ಹೈ ಎಂಡ್ ಕಾರುಗಳಲ್ಲಿ ಹೊರತುಪಡಿಸಿ ಸಣ್ಣ ಮತ್ತು ಮಧ್ಯಮ ಗಾತ್ರದ ಕಾರುಗಳಲ್ಲಿ ಕೇವಲ ಪೆಟ್ರೋಲ್ ಎಂಜಿನ್‌ ಆಯ್ಕೆಯನ್ನು ಮಾತ್ರವೇ ನೀಡಲಾಗುತ್ತಿದೆ.

ಕರೋನಾ ಎಫೆಕ್ಟ್- ನಿಸ್ಸಾನ್ ಮ್ಯಾಗ್ನೆಟ್ ಕಾರು ಬಿಡುಗಡೆ ಮತ್ತಷ್ಟು ವಿಳಂಬ

ಇದಕ್ಕಾಗಿ ಸಹಭಾಗಿತ್ವದ ಯೋಜನೆ ಅಡಿ ನಿಸ್ಸಾನ್ ಜೊತೆಗೂಡಿರುವ ರೆನಾಲ್ಟ್ ಕಂಪನಿಯು ಮತ್ತಷ್ಟು ಹೊಸ ಪೆಟ್ರೋಲ್ ಎಂಜಿನ್‌ಗಳ ಅಭಿವೃದ್ದಿಗೆ ಚಾಲನೆ ನೀಡಿದ್ದು, ಹೊಸದಾಗಿ ನಿರ್ಮಾಣ ಮಾಡಲಾಗುತ್ತಿರುವ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಅನ್ನು ಎರಡೂ ಕಂಪನಿಗಳು ಬಳಕೆ ಮಾಡಿಕೊಳ್ಳಲಿವೆ.

MOST READ: ಲಾಕ್‌ಡೌನ್ ಸಂಕಷ್ಟ: ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಉದ್ಯಮ ಆರಂಭಿಸಿದ ಫೋಕ್ಸ್‌ವ್ಯಾಗನ್

ಕರೋನಾ ಎಫೆಕ್ಟ್- ನಿಸ್ಸಾನ್ ಮ್ಯಾಗ್ನೆಟ್ ಕಾರು ಬಿಡುಗಡೆ ಮತ್ತಷ್ಟು ವಿಳಂಬ

ರೆನಾಲ್ಟ್ ಹೊಚ್ಚ ಹೊಸ ಕಿಗರ್‌ ಮತ್ತು ನಿಸ್ಸಾನ್ ಮ್ಯಾಗ್ನೆಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನಲ್ಲಿ ಒಂದೇ ಮಾದರಿಯ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆಗೆ ಲಭ್ಯವಾಗಲಿದ್ದು, ಉತ್ತಮ ಎಂಜಿನ್ ಪರ್ಫಾಮೆನ್ಸ್‌ನೊಂದಿಗೆ ಇಂಧನ ದಕ್ಷತೆಯಲ್ಲೂ ಗಮನಸೆಳಲಿವೆ.

ಕರೋನಾ ಎಫೆಕ್ಟ್- ನಿಸ್ಸಾನ್ ಮ್ಯಾಗ್ನೆಟ್ ಕಾರು ಬಿಡುಗಡೆ ಮತ್ತಷ್ಟು ವಿಳಂಬ

ಇನ್ನು ಹೊಸ ಮ್ಯಾಗ್ನೆಟ್ ಕಾರಿನಲ್ಲಿ ಫುಲ್ ಎಲ್‌ಇಡಿ ಹೆಡ್‌ಲ್ಯಾಂಪ್ ಮತ್ತು ಎಲ್ಇಡಿ ಟೈಲ್‌ಲೈಟ್, ಸನ್‌ರೂಫ್ ಸೇರಿದಂತೆ ಹಲವು ಕಾರ್ ಕನೆಕ್ಟ್ ಫೀಚರ್ಸ್‌ಗಳನ್ನು ನೀಡಲಾಗುತ್ತಿದ್ದು, ಕಿಕ್ಸ್ ಮಾದರಿಯಲ್ಲಿನ ಕೆಲವು ಫೀಚರ್ಸ್‌ಗಳನ್ನು ಸಹ ಹೊಸ ಕಾರಿನ ಹೊರಭಾಗದ ವಿನ್ಯಾಸಗಳಲ್ಲಿ ಅಳವಡಿಸಲಾಗಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಕರೋನಾ ಎಫೆಕ್ಟ್- ನಿಸ್ಸಾನ್ ಮ್ಯಾಗ್ನೆಟ್ ಕಾರು ಬಿಡುಗಡೆ ಮತ್ತಷ್ಟು ವಿಳಂಬ

ಬಿಡುಗಡೆಯ ಅವಧಿ ಮತ್ತು ಬೆಲೆ(ಅಂದಾಜು)

ಮಾಹಿತಿಗಳ ಪ್ರಕಾರ, ನಿಸ್ಸಾನ್ ಹೊಸ ಮ್ಯಾಗ್ನೆಟ್ ಕಾರು ಬಿಡುಗಡೆಯು ಕರೋನಾ ವೈರಸ್ ಪರಿಣಾಮದಿಂದಾಗಿ ಮುಂಬರುವ 2021ರ ಜನವರಿಯಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.9 ಲಕ್ಷದೊಳಗೆ ಬಿಡುಗಡೆಯಾಗುವ ನೀರಿಕ್ಷೆಗಳಿವೆ.

More from DriveSpark

Article Published On: Saturday, June 20, 2020, 14:00 [IST]
English summary
Nissan Magnite Compact-SUV India Launch Postponed. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+