Just In
- 6 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 6 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 7 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 7 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- Movies Shobha Shetty ; ನಿಶ್ಚಿತಾರ್ಥದ ಬಗ್ಗೆ ಮಾಹಿತಿ ನೀಡಿದ ನಟಿ ಶೋಭಾ ಶೆಟ್ಟಿ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಾರತದಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಕಾರು ಬಿಡುಗಡೆ ಮಾಹಿತಿ ಬಹಿರಂಗ
ಭಾರತದಲ್ಲಿ ನಿಸ್ಸಾನ್ ಕಂಪನಿಯು ತನ್ನ ಬಹುನೀರಿಕ್ಷಿತ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್ಯುವಿ ಮಾದರಿಯನ್ನು ಅನಾವರಣಗೊಳಿಸಿ ಬಿಡುಗಡೆಯ ಯೋಜನೆಯಲ್ಲಿದ್ದು, ಹೊಸ ಕಾರು ಮಾಹಿತಿಗಳ ಪ್ರಕಾರ ಇದೇ ವರ್ಷಾಂತ್ಯಕ್ಕೆ ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ.
ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್ಯುವಿ ಕಾರು ಮಾದರಿಯಲ್ಲೇ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಳ್ಳಲಿರುವ ನಿಸ್ಸಾನ್ ಮ್ಯಾಗ್ನೈಟ್ ಕಾರು ಶೀಘ್ರದಲ್ಲೇ ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲಿದ್ದು, ಕಿಕ್ಸ್ ಕಾರಿನ ನಂತರ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್ಯುವಿ ಮಾದರಿಯನ್ನು ವಿಶೇಷ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆ ಮಾಡುತ್ತಿರುವ ನಿಸ್ಸಾನ್ ಕಂಪನಿಯು ಹೊಸ ಕಾರಿನ ಮೇಲೆ ಭಾರೀ ನೀರಿಕ್ಷೆಯಿಟ್ಟುಕೊಂಡಿದೆ.
ಈ ಹಿಂದೆ ಲಭ್ಯವಾಗಿದ್ದ ಮಾಹಿತಿಗಳ ಪ್ರಕಾರ ಹೊಸ ಮ್ಯಾಗ್ನೈಟ್ ಕಾರು 2021ರ ಆರಂಭದಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು. ಆದರೆ ಇದೀಗ ನಿಸ್ಸಾನ್ ಕಂಪನಿಯು ನವೆಂಬರ್ ಅಂತ್ಯಕ್ಕೆ ಅಥವಾ ಡಿಸೆಂಬರ್ ಆರಂಭದಲ್ಲಿ ಹೊಸ ಮ್ಯಾಗ್ನೈಟ್ ಕಾರು ಬಿಡುಗಡೆ ಮಾಡುವ ನೀರಿಕ್ಷೆಯಿದೆ.
ಹೊಸ ಕಾರಿನಲ್ಲಿ ಪ್ರತಿ ಸ್ಪರ್ಧಿ ಕಾರುಗಳಿಗೆ ಪೈಪೋಟಿಯಾಗಿ ಹಲವು ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಅಳವಡಿಸಲಾಗಿದ್ದು, ಭಾರತೀಯ ಗ್ರಾಹಕರ ಬೇಡಿಕೆಯೆಂತೆ ಬಜೆಟ್ ಬೆಲೆಯಲ್ಲಿ ಅತ್ಯುತ್ತಮ ಮಾದರಿಯೊಂದನ್ನು ಸಿದ್ದಪಡಿಸುತ್ತಿದೆ.
ಹೊಸ ಕಾರಿನಲ್ಲಿ ಫ್ಲ್ಯಾಟ್ ಬಾಟಮ್ ಸ್ಟೀರಿಂಗ್ ಜೊತೆ ಮಲ್ಟಿ ಫಂಕ್ಷನ್ ಕೀ ಹೊಂದಿದ್ದು, ಸೆಂಟರ್ ಆರ್ಮ್ ರೆಸ್ಟ್, ಅರಾಮದಾಯಕವಾದ ಆಸನ ಸೌಲಭ್ಯ, ಡ್ಯುಯಲ್ ಟೋನ್ ಡ್ಯಾಶ್ಬೋರ್ಡ್, 8-ಇಂಚಿನ ಟಚ್ಸ್ಕ್ರೀನ್ ಇನ್ಪೋಟೈನ್ಮೆಂಟ್, ಹಿಂಭಾಗ ಆಸನದಲ್ಲೂ ಸೆಂಟರ್ ಆರ್ಮ್ ರೆಸ್ಟ್, ಕಪ್ ಹೋಲ್ಡರ್, ರಿಯರ್ ಎಸಿ ವೆಂಟ್ಟ್ ಸೌಲಭ್ಯವನ್ನು ಹೊಂದಿದೆ.
ಕಾನ್ಸೆಪ್ಟ್ ಮಾದರಿಯಲ್ಲೇ ಉತ್ಪಾದನಾ ಆವೃತ್ತಿಯನ್ನು ಬಿಡುಗಡೆ ಮಾಡುವ ಸುಳಿವು ನೀಡಿರುವ ನಿಸ್ಸಾನ್ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿರುವ ಹ್ಯುಂಡೈ ವೆನ್ಯೂ ಸೇರಿದಂತೆ ಮಾರುತಿ ಸುಜುಕಿ ಬ್ರೆಝಾ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್ಯುವಿ300 ಕಾರುಗಳಿಗೆ ಭರ್ಜರಿಯಾಗಿ ಪೈಪೋಟಿ ನೀಡುವ ತವಕದಲ್ಲಿದೆ.
ಸದ್ಯಕ್ಕೆ ಹೊಸ ಕಾರನ್ನು ಭಾರತದಲ್ಲಿ EM2 ಕೋಡ್ ನೆಮ್ ಆಧಾರದ ಮೇಲೆ ರೋಡ್ ಟೆಸ್ಟಿಂಗ್ ಮಾಡಲಾಗುತ್ತಿದ್ದು, ಹೊಸ ಕಾರಿನ ಅಧಿಕೃತ ಹೆಸರನ್ನು 'ಮ್ಯಾಗ್ನೈಟ್' ಎಂದು ಕರೆಯಲಾಗಿದೆ. ಹೆಸರಿಗೆ ತಕ್ಕಂತೆ ಬಲಿಷ್ಠ ಹೊರ ನೋಟ ಹೊಂದಿರುವ ಹೊಸ ಕಾರು ಕಟಿಂಗ್ಎಡ್ಜ್ ವಿನ್ಯಾಸವನ್ನು ಹೊಂದಿದೆ.
MOST READ: ಪ್ರತಿ ಚಾರ್ಜ್ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್ಯುವಿ..!
ಹೊಸ ಕಾರು ಕಿಕ್ಸ್ ಎಸ್ಯುವಿ ಮಾದರಿಗಿಂತಲೂ ಕೆಳದರ್ಜೆಯ ಕಾರು ಮಾದರಿಯಾಗಿ ಮಾರಾಟಗೊಳ್ಳಲಿದ್ದು, ಹೊಸ ಕಾರಿನಲ್ಲಿ ರೆನಾಲ್ಟ್ ಜೊತೆಗೂಡಿ ಅಭಿವೃದ್ದಿಗೊಳಿಸಲಾಗಿರುವ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಅನ್ನು ಬಳಕೆ ಮಾಡಲಾಗುತ್ತಿದೆ.
ಹೊಸದಾಗಿ ಅಭಿವೃದ್ದಿಗೊಳಿಸಲಾಗಿರುವ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಮಾದರಿಯು ನಿಸ್ಸಾನ್ ಮ್ಯಾಗ್ನೈಟ್ ಕಾರಿನಲ್ಲಿ ಮಾತ್ರವಲ್ಲದೇ ರೆನಾಲ್ಟ್ ಟ್ರೈಬರ್ ಟರ್ಬೋ ವರ್ಷನ್ ಮತ್ತು ಕಿಗರ್ ಕಾರಿನಲ್ಲೂ ಬಳಕೆಯಾಗಲಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಕಾರುಗಳಿಂತಲೂ ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗಲಿದೆ.
MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು
ಹೊಸ ಕಾರನ್ನು ಇದೇ ವರ್ಷಾಂತ್ಯದೊಳಗೆ ಬಿಡುಗಡೆಗೊಳಿಸಲು ಯತ್ನಿಸುತ್ತಿರುವ ನಿಸ್ಸಾನ್ ಕಂಪನಿಯು ರೋಡ್ ಟೆಸ್ಟಿಂಗ್ ಪ್ರಕ್ರಿಯೆಯನ್ನು ತೀವ್ರಗೊಳಿಸಿದ್ದು, ದೆಹಲಿ ಎಕ್ಸ್ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 6.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9 ಲಕ್ಷ ಬೆಲೆ ಹೊಂದುವ ಸಾಧ್ಯತೆಗಳಿವೆ.