Just In
- 38 min ago
ಪೊಲೊ ಹ್ಯಾಚ್ಬ್ಯಾಕ್ ಮತ್ತು ವೆಂಟೊ ಸೆಡಾನ್ ಕಾರುಗಳ ಖರೀದಿ ಮೇಲೆ ಹೊಸ ವರ್ಷದ ಆಫರ್
- 1 hr ago
ದಿಢೀರನೆ ಕೈಕೊಟ್ಟ ಬ್ರೇಕ್, 3 ಕಿ.ಮೀ ರಿವರ್ಸ್ ಗೇರಿನಲ್ಲಿ ಸಾಗಿದ ಟ್ರಕ್ ಚಾಲಕ
- 2 hrs ago
ಕೈಗೆಟುಕುವ ದರದಲ್ಲಿ ಟಿವಿಎಸ್ ಎಕ್ಸ್ಎಲ್100 ವಿನ್ನರ್ ಎಡಿಷನ್ ಬಿಡುಗಡೆ
- 2 hrs ago
ಭಾರತದಲ್ಲಿ ಅತಿದೊಡ್ಡ ಮಲ್ಟಿ ಬ್ರಾಂಡ್ ಕಾರ್ ಸರ್ವಿಸ್ ಸೆಂಟರ್ ತೆರೆದ ಬಾಷ್
Don't Miss!
- Finance
34,000 ರುಪಾಯಿ ತನಕ ಕಾರುಗಳ ಬೆಲೆ ಏರಿಕೆ ಮಾಡಿದ ಮಾರುತಿ ಸುಜುಕಿ
- News
ಚುನಾವಣೆಗೂ ಮುನ್ನ ಅಮಿತ್ ಶಾ ಜೊತೆ ಇಪಿಎಸ್ ಮಹತ್ವದ ಚರ್ಚೆ
- Sports
ಭಾರತ vs ಆಸ್ಟ್ರೇಲಿಯಾ: ಧೋನಿ ದಾಖಲೆ ಮುರಿದು 1000 ಟೆಸ್ಟ್ ರನ್ ಗಳಿಸಿದ ರಿಷಭ್ ಪಂತ್
- Lifestyle
ಕೂದಲು ಬೇಗನೆ ಬೆಳ್ಳಗಾಗುವುದು: ಇದು ನಿಮ್ಮ ದೇಹದ ಕುರಿತು ಏನು ಸೂಚಿಸುತ್ತದೆ?
- Education
Indian Forest Service Recruitment 2021: 70 ಡಿಐಜಿಎಫ್/ಎಐಜಿಎಫ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ಚಿತ್ರೀಕರಣ ವೇಳೆ ಅಸ್ವಸ್ಥ: ನಟಿ ಅಲಿಯಾ ಭಟ್ ಆಸ್ಪತ್ರೆಗೆ ದಾಖಲು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕಂಪ್ಯಾಕ್ಟ್ ಎಸ್ಯುವಿ ಮಾದರಿಗಳಲ್ಲೇ ಅತಿ ಕಡಿಮೆ ಬೆಲೆಯಲ್ಲಿ ಬಿಡುಗಡೆಗೊಂಡ ನಿಸ್ಸಾನ್ ಮ್ಯಾಗ್ನೈಟ್
ನಿಸ್ಸಾನ್ ಇಂಡಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್ಯುವಿ ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದ್ದು, ಹೊಸ ಕಾರು ಕಂಪ್ಯಾಕ್ಟ್ ಎಸ್ಯುವಿ ಮಾದರಿಗಳಲ್ಲೇ ಅತಿ ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗಿದೆ.

ಸಬ್ ಫೋರ್ ಮೀಟರ್ ವಿನ್ಯಾಸ ಹೊಂದಿರುವ ಹೊಸ ಮ್ಯಾಗ್ನೈಟ್ ಕಾರು ಮಾದರಿಯು ಸೆಗ್ಮೆಂಟ್ ಇನ್ ಬೆಸ್ಟ್ ಫೀಚರ್ಸ್ಗಳನ್ನು ಪಡೆದುಕೊಂಡಿದ್ದು, ಎಕ್ಸ್ಇ, ಎಕ್ಸ್ಎಲ್, ಎಕ್ಸ್ವಿ ಮತ್ತು ಎಕ್ಸ್ವಿ ಪ್ರೀಮಿಯಂ ಎಂಬ ನಾಲ್ಕು ವೆರಿಯೆಂಟ್ಗಳಲ್ಲಿ ಖರೀದಿಗೆ ಲಭ್ಯವಿರಲಿದೆ. ಹೊಸ ಕಾರು ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.35 ಲಕ್ಷ ಬೆಲೆ ಪಡೆದುಕೊಂಡಿದೆ.

ಎಕ್ಸ್ಇ, ಎಕ್ಸ್ಎಲ್, ಎಕ್ಸ್ವಿ ಮತ್ತು ಎಕ್ಸ್ವಿ ಪ್ರೀಮಿಯಂ ವೆರಿಯೆಂಟ್ಗಳು ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ಬೆಲೆ ಹೊಂದಿದ್ದು, ಮ್ಯಾಗ್ನೈಟ್ ಕಾರಿನ ಬೆಲೆಯು ಪ್ರತಿ ಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.
ವೆರಿಯೆಂಟ್ | ಎಕ್ಸ್ಇ | ಎಕ್ಸ್ಎಲ್ | ಎಕ್ಸ್ವಿ | ಎಕ್ಸ್ವಿ ಪ್ರೀಮಿಯಂ |
1.0-ಲೀ ಪೆಟ್ರೋಲ್ | ರೂ. 4,99,000 | ರೂ. 5,99,000 | ರೂ. 6,68,000 | ರೂ. 7,55,000 |
1.0-ಲೀ ಟರ್ಬೋ ಪೆಟ್ರೋಲ್ | ರೂ. 6,99,000 | ರೂ. 7,68,000 | ರೂ. 8,45,000 | |
1.0-ಲೀಟರ್ ಪೆಟ್ರೋಲ್ ಟರ್ಬೋ ಸಿವಿಟಿ | ರೂ. 7,89,000 | ರೂ. 8,58,000 | ರೂ. 9,35,000 |

ಮಾಗ್ನೈಟ್ ಕಾರಿನ ಫೀಚರ್ಸ್ಗಳು
ಮಾಗ್ನೈಟ್ ಆರಂಭಿಕ ಕಾರು ಮಾದರಿಯಲ್ಲಿ ಹ್ಯಾಲೊಜೆನ್ ಹೆಡ್ಲ್ಯಾಂಪ್, 16 ಇಂಚಿನ ಸ್ಟೀಲ್ ವೀಲ್ಹ್, ಬಾಡಿ ಕಲರ್ಡ್ ಡೋಲ್ ಹ್ಯಾಂಡಲ್ಸ್, ಎಲ್ಇಡಿ ಡಿಆರ್ಎಲ್ಎಸ್ನಲ್ಲಿ ಎಲ್ ಶೇಫ್ ಕ್ರೋಮ್ ಟಿಪ್ಸ್, ಫ್ರಂಟ್ ಫೆಂಡರ್ನಲ್ಲಿ ಟರ್ನ್ ಇಂಡಿಕೇಟರ್, ಬ್ಲ್ಯಾಕ್ ಫ್ರಾಬಿಕ್ಸ್ ಸೀಟ್, ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮೇಲೆ 3.5-ಇಂಚಿನ ಎಂಐಡಿ ಸ್ಕ್ರೀನ್ ಹೊಂದಿದೆ.

ಹಾಗೆಯೇ ಹೊಂದಾಣಿಕೆ ಮಾಡಬಹುದಾದ ರಿಯರ್ ವ್ಯೂ ಮಿರರ್, ಮ್ಯಾನುವಲ್ ಎಸಿ, ಡ್ಯುಯಲ್ ಫ್ರಂಟ್ ಏರ್ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಆ್ಯಂಟಿ ರೊಲ್ ಬಾರ್, ಸೀಟ್ ಬೆಲ್ಟ್ ಅಲರ್ಟ್, ಇಮ್ಮೊಬಿಲೈಸರ್ ಮತ್ತು ರಿಯರ್ ಪಾರ್ಕಿಂಗ್ ಸೌಲಭ್ಯವಿದ್ದು, ಮಧ್ಯಮ ಕ್ರಮಾಂಕದಲ್ಲಿ ಮೊದಲ ಮಾದರಿಯ ಕೆಲವು ಸೌಲಭ್ಯಗಳನ್ನು ಒಳಗೊಂಡು ಡ್ಯುಯಲ್ ಟೋನ್ ಕವರ್ ಹೊಂದಿರುವ 16 ಇಂಚಿನ ವೀಲ್ಹ್, ರಿಯರ್ ವ್ಯೂ ಮಿರರ್ ಜೊತೆಗೆ ಟರ್ನ್ ಇಂಡಿಕೇಟರ್, ಬಾಡಿ ಕಲರ್ ರಿಯರ್ ವ್ಯೂ ಮಿರರ್, ಎಂಪಿ3 ಸರ್ಪೋಟ್ ಮಾಡುವ ಬೇಸಿಕ್ ಆಡಿಯೋ ಸಿಸ್ಟಂ ಜೋಡಣೆ ಮಾಡಲಾಗಿದೆ.

ಜೊತೆಗೆ ಆಟೋ ಎಸಿ, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ಸ್, ರಿಯರ್ ಆರ್ಮ್ ರೆಸ್ಟ್, ಕ್ರೂಸ್ ಕಂಟ್ರೋಲ್, ಡ್ರೈವರ್ ಸೈಡ್ ಆಟೋ ವಿಂಡೋ ಸ್ವಿಚ್, ಫಾಸ್ಟ್ ಚಾರ್ಜ್ ಯುಎಸ್ಬಿ ಫೋರ್ಟ್, ಐಸೋಫಿಕ್ಸ್ ಸೀಟ್, ಸೆಂಟರ್ ಡೋರ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್, ಇಂಪ್ಯಾಕ್ಟ್ ಸೆನ್ಸಿಂಗ್ ಆಟೋ ಡೋರ್ ಅನ್ ಲಾಕ್, ಹಿಲ್ ಸ್ಟಾರ್ಟ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಬ್ರೇಕ್ ಅಸಿಸ್ಟ್, ರಿಮೋಟ್ ಕೀ ಲೆಸ್ ಎಂಟ್ರಿ ಸೌಲಭ್ಯಗಳಿವೆ.

ಮೂರನೇ ಮಾದರಿಯಲ್ಲಿ 16-ಇಂಚಿನ ಅಲಾಯ್ ವೀಲ್ಹ್, ಕ್ರೋಮ್ ಹೊಂದಿರುವ ಡೋರ್ ಹ್ಯಾಂಡಲ್, ಸಿಲ್ವರ್ ಕೋಟಿಂಗ್ ಹೊಂದಿರುವ ಸ್ಕ್ರೀಡ್ ಪ್ಲೇಟ್, ಡ್ಯುಯಲ್ ಟೋನ್ ಕಲರ್, ಆಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್ಪ್ಲೇ ಗೆ ಸರ್ಪೋಟ್ ಮಾಡುವ 8-ಇಂಚಿನ ಟಚ್ಸ್ಕ್ರೀನ್ ಇನ್ಪೋಟೈನ್ಮೆಂಟ್ ಸಿಸ್ಟಂ, ವೈರ್ಲೆಸ್ ಚಾರ್ಜರ್, ಏರ್ ಫಿಲ್ಟರ್, ಎಲ್ಇಡಿ ಸ್ಕಫ್ ಪ್ಲೇಟ್ಸ್, ಆ್ಯಂಬಿಯೆಂಟ್ ಲೈಟಿಂಗ್ಸ್, ಪೆಡಲ್ ಲ್ಯಾಂಪ್ಸ್, ಜೆಬಿಎಲ್ ಸೌಂಡ್ ಸಿಸ್ಟಂ, ರಿಯರ್ ಪಾರ್ಕಿಂಗ್ ಕ್ಯಾಮೆರಾ, ವೆಹಿಕಲ್ ಡೈನಾಮಿಕ್ ಕಂಟ್ರೋಲ್ ಮತ್ತು ಐ-ಕೀ ಸಿಸ್ಟಂ ಹೊಂದಿದೆ.

ಟಾಪ್ ಎಂಡ್ ಮಾದರಿಯಾಗಿರುವ ಎಕ್ಸ್ವಿ ಪ್ರೀಮಿಯಂನಲ್ಲಿ ಎಕ್ಸ್ವಿ ಮಾದರಿಯ ಪ್ರಮುಖ ಫೀಚರ್ಸ್ಗಳನ್ನು ಒಳಗೊಂಡು ಎಲ್ಇಡಿ ಪ್ರೋಜೆಕ್ಟರ್ ಹೆಡ್ಲ್ಯಾಂಪ್, ಎಲ್ಇಡಿ ಟೈಲ್ ಲೈಟ್ಸ್, ಎಲ್ಇಡಿ ಟರ್ನ್ ಇಂಡಿಕೇಟರ್, ವೀಂಡೋ ಲೈನ್ ಮೇಲೆ ಕ್ರೋಮ್ ಬೆಲ್ಟ್, ಆಲ್ ಬ್ಲ್ಯಾಕ್ ಕ್ಯಾಬಿನ್, 360 ಡಿಗ್ರಿ ಕ್ಯಾಮೆರಾ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್, ಟೈರ್ ಪ್ರೆಷರ್ ಮಾನಿಟರಿಂಗ್ ಮತ್ತು ಬ್ರಾಂಡ್ನ ಕನೆಕ್ಟ್ ಫೀಚರ್ಸ್ ಸೌಲಭ್ಯವಿದೆ.

ಎಂಜಿನ್ ಮತ್ತು ಪರ್ಫಾಮೆನ್ಸ್
ಮ್ಯಾಗ್ನೈಟ್ ಕಾರಿನಲ್ಲಿ ವಿವಿಧ ವೆರಿಯೆಂಟ್ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಜೋಡಣೆ ಮಾಡಲಾಗುತ್ತಿದ್ದು, 1.0-ಲೀಟರ್ ಬಿ4ಡಿ ಪೆಟ್ರೋಲ್ ಮಾದರಿಯು ಸ್ಟ್ಯಾಂಡರ್ಡ್ ಆಗಿ 5-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಆಯ್ಕೆ ಹೊಂದಿದ್ದರೆ ಟಾಪ್ ಎಂಡ್ ಮಾದರಿಗಳಲ್ಲಿ ನೀಡಲಾಗಿರುವ ಹೆಚ್ಆರ್ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆ ಹೊಂದಿದೆ.

1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 70-ಬಿಎಚ್ಪಿ, 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 100-ಬಿಎಚ್ಪಿ, 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಈ ಮೂಲಕ ಹೊಸ ಕಾರು ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್ಯುವಿ300 ಆವೃತ್ತಿಗಳಿಂತಲೂ ಕಡಿಮೆ ಬೆಲೆಯೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸಲಿದ್ದು, ಶೀಘ್ರದಲ್ಲೇ ಹೊಸ ಕಾರಿನ ವಿತರಣೆಯು ಆರಂಭವಾಗಲಿದೆ.