ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗಲಿದೆ ನಿಸ್ಸಾನ್ ಮ್ಯಾಗ್ನೆಟ್

ನಿಸ್ಸಾನ್ ಮತ್ತು ರೆನಾಲ್ಟ್ ಕಂಪನಿಗಳು ಭಾರತದಲ್ಲಿ ಹೊಸ ಮಾದರಿಯ ಕಾರುಗಳ ಉತ್ಪಾದನೆಗಾಗಿ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದ್ದು, ನಿಸ್ಸಾನ್ ಬಿಡುಗಡೆ ಮಾಡಲಿರುವ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಶೀಘ್ರದಲ್ಲೇ ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗುವ ಸುಳಿವು ನೀಡಿದೆ.

ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗಲಿದೆ ನಿಸ್ಸಾನ್ ಮ್ಯಾಗ್ನೆಟ್

ಪ್ರಸ್ತುತ ಮಾರುಕಟ್ಟೆಯಲ್ಲಿ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟವು ತೀವ್ರಗತಿಯಲ್ಲಿ ಬೆಳವಣಿಗೆ ಕಾಣುತ್ತಿದ್ದು, ಮಾರುತಿ ಬ್ರೆಝಾ, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ 300 ಮಾದರಿಗಳಿಗೆ ಪೈಪೋಟಿಯಾಗಿ ನಿಸ್ಸಾನ್ ಸಂಸ್ಥೆಯು ಕೂಡಾ ಹೊಸ ವಿನ್ಯಾಸದ ಕಂಪ್ಯಾಕ್ಟ್ ಎಸ್‌ಯುವಿ ಆವೃತ್ತಿಯೊಂದನ್ನು ಬಿಡುಗಡೆಗಾಗಿ ಸಿದ್ದಗೊಳ್ಳುತ್ತಿದೆ. ಸದ್ಯಕ್ಕೆ EM2 ಕೋಡ್ ನೆಮ್ ಆಧಾರದ ಮೇಲೆ ಹೊಸ ಕಾರಿನ ಟೀಸರ್ ಅನ್ನು ಬಿಡುಗಡೆ ಮಾಡಲಾಗಿದ್ದು, ಹೊಸ ಕಾರಿನ ಅಧಿಕೃತ ಹೆಸರನ್ನು 'ಮ್ಯಾಗ್ನೆಟ್' ಎಂದು ಕರೆಯಲಾಗಿದೆ.

ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗಲಿದೆ ನಿಸ್ಸಾನ್ ಮ್ಯಾಗ್ನೆಟ್

ಮಾರುಕಟ್ಟೆಯಲ್ಲಿರುವ ಕಿಕ್ಸ್ ಎಸ್‌ಯುವಿ ಮಾದರಿಗಿಂತಲೂ ಕೆಳದರ್ಜೆಯ ಕಾರು ಮಾದರಿಯಾಗಿ ಮಾರಾಟಗೊಳ್ಳಲಿರುವ ಹೊಸ ಮ್ಯಾಗ್ನೆಟ್ ಕಾರು ಮಾರುತಿ ಬ್ರೆಝಾ ಮತ್ತು ಹ್ಯುಂಡೈ ವೆನ್ಯೂ ಕಾರಿಗಿಂತಲೂ ಉತ್ತಮ ತಾಂತ್ರಿಕ ಅಂಶಗಳೊಂದಿಗೆ ಆಕರ್ಷಕ ಬೆಲೆ ಪಡೆದುಕೊಳ್ಳುವ ಸುಳಿವು ನೀಡಿದೆ.

MOST READ: ಬಿಡುಗಡೆಗೆ ಸಿದ್ದವಾಗಿರುವ ಟಾಪ್ 5 ಎಲೆಕ್ಟ್ರಿಕ್ ಕಾರುಗಳಿವು

ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗಲಿದೆ ನಿಸ್ಸಾನ್ ಮ್ಯಾಗ್ನೆಟ್

ಇತ್ತೀಚೆಗೆ ರೆನಾಲ್ಟ್ ಕಾರು ಉತ್ಪಾದನಾ ಸಂಸ್ಥೆಯು ಭಾರತದಲ್ಲಿ ಡೀಸೆಲ್ ಕಾರುಗಳ ಉತ್ಪಾದನೆಯನ್ನು ಸ್ಥಗಿತಗೊಳಿಸಿರುವುದಾಗಿ ಅಧಿಕೃತವಾಗಿ ಹೇಳಿಕೊಂಡಿದ್ದು, ಪೆಟ್ರೋಲ್ ಕಾರುಗಳ ಉತ್ಪಾದನೆ ಮೇಲೆ ಹೆಚ್ಚು ಗಮನಹರಿಸಲು ಮುಂದಾಗಿದೆ.

ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗಲಿದೆ ನಿಸ್ಸಾನ್ ಮ್ಯಾಗ್ನೆಟ್

ಇದಕ್ಕಾಗಿ ನಿಸ್ಸಾನ್ ಜೊತೆಗೆ ಮತ್ತಷ್ಟು ಹೊಸ ಪೆಟ್ರೋಲ್ ಎಂಜಿನ್‌ಗಳ ಅಭಿವೃದ್ದಿಗೆ ಚಾಲನೆ ನೀಡಿದ್ದು, ಸಹಭಾಗಿತ್ವದ ಯೋಜನೆ ಅಡಿ ನಿರ್ಮಾಣವಾಗುತ್ತಿರುವ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಅನ್ನು ಎರಡು ಸಂಸ್ಥೆಗಳು ಬಳಕೆ ಮಾಡಿಕೊಳ್ಳಲಿವೆ.

MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗಲಿದೆ ನಿಸ್ಸಾನ್ ಮ್ಯಾಗ್ನೆಟ್

ಹೀಗಾಗಿ ರೆನಾಲ್ಟ್ ಹೊಚ್ಚ ಹೊಸ ಕಿಗರ್‌ ಮತ್ತು ನಿಸ್ಸಾನ್ ಮ್ಯಾಗ್ನೆಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನಲ್ಲಿ ಒಂದೇ ಮಾದರಿಯ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆಗೆ ಲಭ್ಯವಾಗಲಿದ್ದು, ಉತ್ತಮ ಎಂಜಿನ್ ಪರ್ಫಾಮೆನ್ಸ್‌ನೊಂದಿಗೆ ಇಂಧನ ದಕ್ಷತೆಯಲ್ಲೂ ಗಮನಸೆಳಲಿವೆ.

ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗಲಿದೆ ನಿಸ್ಸಾನ್ ಮ್ಯಾಗ್ನೆಟ್

ಹಾಗೆಯೇ ನಿಸ್ಸಾನ್ ಕಿಕ್ಸ್ ಕಾರಿನಲ್ಲೂ ಹೊಸದಾಗಿ ಟರ್ಬೋ ಪೆಟ್ರೋಲ್ ಮಾದರಿಯನ್ನು ನೀಡುವ ಸಾಧ್ಯತೆಗಳಿದ್ದು, ಇದು ಡಸ್ಟರ್ ಮಾದರಿಯಲ್ಲಿ 1.3-ಲೀಟರ್ ಪೆಟ್ರೋಲ್ ಮಾದರಿಯನ್ನು ಪಡೆದುಕೊಳ್ಳುವ ಸಾಧ್ಯತೆಗಳಿವೆ.

MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕಾಗಿ ರೂ.100 ಕೋಟಿ ದೇಣಿಗೆ ನೀಡಿದ ಬಜಾಜ್ ಗ್ರೂಪ್

ನಿಸ್ಸಾನ್ ಮ್ಯಾಗ್ನೆಟ್

ಇನ್ನು ಹೊಸ ಮ್ಯಾಗ್ನೆಟ್ ಕಾರಿನಲ್ಲಿ ಫುಲ್ ಎಲ್‌ಇಡಿ ಹೆಡ್‌ಲ್ಯಾಂಪ್ ಮತ್ತು ಎಲ್ಇಡಿ ಟೈಲ್‌ಲೈಟ್, ಸನ್‌ರೂಫ್ ಸೇರಿದಂತೆ ಹಲವು ಕಾರ್ ಕನೆಕ್ಟ್ ಫೀಚರ್ಸ್‌ಗಳನ್ನು ನೀಡಲಾಗುತ್ತಿದ್ದು, ಕಿಕ್ಸ್ ಮಾದರಿಯಲ್ಲಿನ ಕೆಲವು ಫೀಚರ್ಸ್‌ಗಳನ್ನು ಸಹ ಹೊಸ ಕಾರಿನ ಹೊರಭಾಗದ ವಿನ್ಯಾಸಗಳಲ್ಲಿ ಅಳವಡಿಸಲಾಗಿದೆ.

ನಿಸ್ಸಾನ್ ಮ್ಯಾಗ್ನೆಟ್

ಬಿಡುಗಡೆಯ ಅವಧಿ ಮತ್ತು ಬೆಲೆ(ಅಂದಾಜು)

ಮಾಹಿತಿಗಳ ಪ್ರಕಾರ, ನಿಸ್ಸಾನ್ ಹೊಸ ಮ್ಯಾಗ್ನೆಟ್ ಕಾರು ಮುಂದಿನ ಸೆಪ್ಟೆಂಬರ್ ಹೊತ್ತಿಗೆ ಖರೀದಿಗೆ ಲಭ್ಯವಾಗಲಿದ್ದು, ಹೊಸ ಎಂಜಿನ್ ಕಾರ್ಯಕ್ಷಮತೆ ಕುರಿತಂತೆ ವಿವಿಧ ಹಂತಗಳ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳಿಗೆ ಇದೀಗ ಚಾಲನೆ ನೀಡಲಾಗುತ್ತಿದೆ.

MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕೆ ಭಾರೀ ಪ್ರಮಾಣದ ದೇಣಿಗೆ ನೀಡಿದ ಟಿವಿಎಸ್ ಮೋಟಾರ್

ನಿಸ್ಸಾನ್ ಮ್ಯಾಗ್ನೆಟ್

ಈ ಮೂಲಕ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಹೊಸ ಬದಲಾವಣೆಯ ನೀರಿಕ್ಷೆಯಲ್ಲಿರುವ ನಿಸ್ಸಾನ್ ಮತ್ತು ರೆನಾಲ್ಟ್ ಸಂಸ್ಥೆಗಳು ಹೊಸ ಕಾರನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.5.50 ಲಕ್ಷದಿಂದ ಟಾಪ್ ಎಂಡ್ ಮಾದರಿಯ ಬೆಲೆಯನ್ನು ರೂ.8 ಲಕ್ಷದೊಳಗೆ ಬಿಡುಗಡೆ ಮಾಡುವ ಸಾಧ್ಯತೆಗಳಿವೆ.

More from DriveSpark

Article Published On: Thursday, April 16, 2020, 8:45 [IST]
English summary
Nissan magnite compact suv price in india details. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+