Just In
Don't Miss!
- Education
ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ
- Movies
ಡಬ್ಬಿಂಗ್ ಸಿನಿಮಾಗಳ ಬಗ್ಗೆ ಹಿರಿಯ ನಟ ದೊಡ್ಡಣ್ಣ ಅಸಮಾಧಾನ
- News
ಕೊರೊನಾ ನಿಯಂತ್ರಣದಲ್ಲಿ ವಿಫಲ: ಇಟಲಿ ಪ್ರಧಾನಿ ಗಿಸೆಪ್ಪೆ ಕಾಂಟೆ ರಾಜೀನಾಮೆ
- Sports
ಐಎಸ್ಎಲ್: ಜೆಮ್ಷೆಡ್ಪುರ ವಿರುದ್ಧ ಕ್ಲೀನ್ ಶೀಟ್ ಗುರಿಯಲ್ಲಿ ಕೇರಳ ಬ್ಲಾಸ್ಟರ್ಸ್
- Finance
ಗಣರಾಜ್ಯೋತ್ಸವಕ್ಕೆ ಬಿಎಸ್ಎನ್ಎಲ್ನಿಂದ ವಿಶೇಷ ಆಫರ್
- Lifestyle
ನೀವು ಬಳಸಬಹುದಾದ ಡೈರಿ ಉತ್ಪನ್ನವಲ್ಲದ ಹಾಲುಗಳ ಬಗ್ಗೆ ಇಲ್ಲಿದೆ ಮಾಹಿತಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ನಿಗದಿತ ಅವಧಿಗೂ ಮುನ್ನವೇ ಬಿಡುಗಡೆಯಾಗಲಿದೆ ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್ಯುವಿ
ನಿಸ್ಸಾನ್ ಇಂಡಿಯಾ ಕಂಪನಿಯು ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್ಯುವಿ ಬಿಡುಗಡೆಗೆ ಅಂತಿಮ ಸಿದ್ದತೆಯಲ್ಲಿದ್ದು, ಹೊಸ ಕಾರನ್ನು ಇದೇ ತಿಂಗಳು 5ರಂದು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿತ್ತು. ಆದರೆ ಇದೀಗ ಹೊಸ ಕಾರನ್ನು ನಾಳೆಯೇ(ಡಿಸೆಂಬರ್ 2) ಬಿಡುಗಡೆ ಮಾಡುವ ಸುಳಿವು ನೀಡಿದೆ.

ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್ಯುವಿ ಕಾರಿನ ಬಹುತೇಕ ತಾಂತ್ರಿಕ ಅಂಶಗಳ ಮಾಹಿತಿಯನ್ನು ಈಗಾಗಲೇ ಅಧಿಕೃತವಾಗಿ ಹಂಚಿಕೊಂಡಿರುವ ನಿಸ್ಸಾನ್ ಕಂಪನಿಯು ಬೆಲೆ ಮಾಹಿತಿ ಮಾತ್ರವೇ ಬಹಿರಂಗಪಡಿಸಬೇಕಿದೆ. ಬೆಲೆ ಮಾಹಿತಿಯನ್ನು ಡಿಸೆಂಬರ್ 5ರ ಬದಲಾಗಿ ನಾಳೆಯೇ ಪ್ರಕಟಗೊಳಿಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ನಾಳೆಯೇ ಬೆಲೆ ಮಾಹಿತಿ ಬಿಡುಗಡೆ ಮಾಡುವ ಮೂಲಕ ಹೊಸ ಕಾರಿನ ವಿತರಣೆಯನ್ನು 2021ರ ಜನವರಿ ಮೊದಲ ವಾರದಲ್ಲಿ ಆರಂಭ ಮಾಡುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಹೊಸ ಕಂಪ್ಯಾಕ್ಟ್ ಎಸ್ಯುವಿ ಕಾರು ಮಾದರಿಯು ಪ್ರತಿ ಸ್ಪರ್ಧಿಕಾರು ಮಾದರಿಗಳಿಂತಲೂ ಅತ್ಯುತ್ತಮ ಫೀಚರ್ಸ್ಗಳೊಂದಿಗೆ ಅಭಿವೃದ್ದಿಗೊಂಡಿದ್ದು, ಗ್ರಾಹಕರ ಬೇಡಿಕೆಯೆಂತೆ ಎಕ್ಸ್ಇ, ಎಕ್ಸ್ಎಲ್, ಎಕ್ಸ್ವಿ ಮತ್ತು ಎಕ್ಸ್ವಿ ಪ್ರೀಮಿಯಂ ಎಂಬ ನಾಲ್ಕು ವೆರಿಯೆಂಟ್ಗಳೊಂದಿಗೆ ಬೆಲೆಯಲ್ಲೂ ಗಮನಸೆಳೆಯಲಿದೆ.

ತಾಂತ್ರಿಕ ಅಂಶಗಳು ಮತ್ತು ವಿವಿಧ ವೆರಿಯೆಂಟ್ಗಳಿಗೆ ಅನುಗುಣವಾಗಿ ಮ್ಯಾಗ್ನೈಟ್ ಕಾರು ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.50 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಹೊಸ ಕಾರಿನಲ್ಲಿರುವ ಪ್ರೀಮಿಯಂ ಫೀಚರ್ಸ್ ಕಾರು ಖರೀದಿದಾರರ ಪ್ರಮುಖ ಆಕರ್ಷಣೆಯಾಗಲಿವೆ.

ಟಾಪ್ ಎಂಡ್ ಮಾದರಿಯಾಗಿರುವ ಎಕ್ಸ್ವಿ ಪ್ರೀಮಿಯಂನಲ್ಲಿ ಪ್ರಮುಖ ಫೀಚರ್ಸ್ಗಳನ್ನು ಒಳಗೊಂಡಂತೆ ಎಲ್ಇಡಿ ಪ್ರೋಜೆಕ್ಟರ್ ಹೆಡ್ಲ್ಯಾಂಪ್, ಎಲ್ಇಡಿ ಟೈಲ್ ಲೈಟ್ಸ್, ಎಲ್ಇಡಿ ಟರ್ನ್ ಇಂಡಿಕೇಟರ್, ವೀಂಡೋ ಲೈನ್ ಮೇಲೆ ಕ್ರೋಮ್ ಬೆಲ್ಟ್, ಆಲ್ ಬ್ಲ್ಯಾಕ್ ಕ್ಯಾಬಿನ್, 360 ಡಿಗ್ರಿ ಕ್ಯಾಮೆರಾ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್, ಟೈರ್ ಪ್ರೆಷರ್ ಮಾನಿಟರಿಂಗ್ ಮತ್ತು ಬ್ರಾಂಡ್ನ ಕನೆಕ್ಟೆಡ್ ಫೀಚರ್ಸ್ ಸೌಲಭ್ಯವಿದೆ.

ಮ್ಯಾಗ್ನೈಟ್ ಕಾರಿನಲ್ಲಿ ವಿವಿಧ ವೆರಿಯೆಂಟ್ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಮಾದರಿಗಳನ್ನು ಜೋಡಣೆ ಮಾಡಲಾಗುತ್ತಿದ್ದು, 1.0-ಲೀಟರ್ ಬಿ4ಡಿ ಪೆಟ್ರೋಲ್ ಮಾದರಿಯು ಸ್ಟ್ಯಾಂಡರ್ಡ್ ಆಗಿ 5-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಆಯ್ಕೆ ಹೊಂದಿದ್ದರೆ ಟಾಪ್ ಎಂಡ್ ಮಾದರಿಗಳಲ್ಲಿ ನೀಡಲಾಗಿರುವ ಹೆಚ್ಆರ್ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆ ಹೊಂದಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 70-ಬಿಎಚ್ಪಿ, 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 100-ಬಿಎಚ್ಪಿ, 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಹೊಸ ಕಾರಿನಲ್ಲಿ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು ಪ್ರತಿ ಲೀಟರ್ಗೆ ಗರಿಷ್ಠ 18.75 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದರೆ ಟರ್ಬೋ ಪೆಟ್ರೋಲ್ ಮಾದರಿಯು ಅತ್ಯುತ್ತಮ ಪರ್ಫಾಮೆನ್ಸ್ನೊಂದಿಗೆ ಪ್ರತಿ ಲೀಟರ್ಗೆ 17.7 ಕಿ.ಮೀ ನಿಂದ 20 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, 40 ಲೀಟರ್ ಸಾಮರ್ಥ್ಯದ ಫ್ಯೂಲ್ ಟ್ಯಾಂಕ್ ಅನ್ನು ಒಂದು ಬಾರಿ ಪೂರ್ತಿಯಾಗಿ ತುಂಬಿಸಿದರೆ ಗರಿಷ್ಠ 800 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.
MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಈ ಮೂಲಕ ಕಂಪ್ಯಾಕ್ಟ್ ಎಸ್ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿರುವ ಮ್ಯಾಗ್ನೈಟ್ ಕಾರು ಮಾದರಿಯು ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರ ಖರೀದಿಗೆ ಲಭ್ಯವಿರವಿದ್ದು, ಹೊಸ ಕಾರಿನ ಅಧಿಕೃತ ಬೆಲೆ ಮಾಹಿತಿಯೊಂದಿಗೆ ಇದೀಗ ಬಾಕಿಯಿದೆ.