ಹೊಸ ಮಾದರಿಯ ಎಂಜಿನ್‌ನೊಂದಿಗೆ ಮ್ಯಾಗ್ನೈಟ್ ಕಾರು ಉತ್ಪಾದನೆಗೆ ಚಾಲನೆ ನೀಡಿದ ನಿಸ್ಸಾನ್

ನಿಸ್ಸಾನ್ ಕಂಪನಿಯು ತನ್ನ ಬಹುನೀರಿಕ್ಷಿತ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಇದೇ ವರ್ಷಾಂತ್ಯದೊಳಗೆ ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಹೊಸ ಕಾರಿನ ಉತ್ಪಾದನೆಗೆ ಅಧಿಕೃತವಾಗಿ ಚಾಲನೆ ನೀಡಿದೆ.

ಹೊಸ ಮಾದರಿಯ ಎಂಜಿನ್‌ನೊಂದಿಗೆ ಮ್ಯಾಗ್ನೈಟ್ ಕಾರು ಉತ್ಪಾದನೆಗೆ ಚಾಲನೆ

ನಿಸ್ಸಾನ್ ಕಂಪನಿಯು ಚೆನ್ನೈ ಹೊರವಲಯದಲ್ಲಿರುವ ಒರಗಡಂ ಕಾರು ಉತ್ಪಾದನಾ ಘಟಕದಲ್ಲಿ ಮ್ಯಾಗ್ನೈಟ್ ಕಾರು ಉತ್ಪಾದನೆಗೆ ಅಧಿಕೃತವಾಗಿ ಚಾಲನೆ ನೀಡಿದ್ದು, ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ಅತ್ಯುತ್ತಮ ಫೀಚರ್ಸ‌ಗಳೊಂದಿಗೆ ಅಭಿವೃದ್ದಿಗೊಳ್ಳುತ್ತಿದೆ. ಹೊಸ ಕಾರು ಎಕ್ಸ್‌ಇ, ಎಕ್ಸ್ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ಎಂಬ ನಾಲ್ಕು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್‌ಗಳನ್ನು ನೀಡಲಾಗಿದೆ.

ಹೊಸ ಮಾದರಿಯ ಎಂಜಿನ್‌ನೊಂದಿಗೆ ಮ್ಯಾಗ್ನೈಟ್ ಕಾರು ಉತ್ಪಾದನೆಗೆ ಚಾಲನೆ

ಬಿ-ಸೆಗ್ಮೆಂಟ್‌ನಲ್ಲಿರುವ ಪ್ರಮುಖ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಗಳಿಗೆ ಪೈಪೋಟಿಯಾಗಿ ಬಿಡುಗಡೆಯಾಗುತ್ತಿರುವ ಮ್ಯಾಗ್ನೈಟ್ ಕಾರು ಸಬ್ ಫೋರ್ ಮೀಟರ್ ವಿನ್ಯಾಸ ಹೊಂದಿದ್ದು, ಹೊಸ ಕಾರು ಸ್ಪೋರ್ಟಿ ಲುಕ್‌ನೊಂದಿಗೆ ಕಟಿಂಗ್ ಎಡ್ಜ್ ವಿನ್ಯಾಸಗಳನ್ನು ಪಡೆದುಕೊಂಡಿದೆ.

ಹೊಸ ಮಾದರಿಯ ಎಂಜಿನ್‌ನೊಂದಿಗೆ ಮ್ಯಾಗ್ನೈಟ್ ಕಾರು ಉತ್ಪಾದನೆಗೆ ಚಾಲನೆ

ಬೆಸ್ಟ್ ಇನ್ ಕ್ಲಾಸ್ ಮಾದರಿಯ ಫೀಚರ್ಸ್ ಪಡೆದುಕೊಳ್ಳಲಿರುವ ಹೊಸ ಮ್ಯಾಗ್ನೈಟ್ ಕಾರು ಕಾರು ಮರಾಟದಲ್ಲಿ ಗ್ರಾಹಕರನ್ನು ಸೆಳೆಯುವ ತವಕದಲ್ಲಿದ್ದು, ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಹ್ಯುಂಡೈ ವೆನ್ಯೂ, ಕಿಯಾ ಸೊನೆಟ್, ಮಹೀಂದ್ರಾ ಎಕ್ಸ್‌ಯುವಿ300 ಮತ್ತು ಟಾಟಾ ನೆಕ್ಸಾನ್ ಕಾರುಗಳಿಗೆ ಪೈಪೋಟಿ ನೀಡಲಿದೆ.

ಹೊಸ ಮಾದರಿಯ ಎಂಜಿನ್‌ನೊಂದಿಗೆ ಮ್ಯಾಗ್ನೈಟ್ ಕಾರು ಉತ್ಪಾದನೆಗೆ ಚಾಲನೆ

ಹೊಸ ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಆಕರ್ಷಕವಾದ ಗ್ರಿಲ್, ಕ್ರೋಮ್ ಸ್ಟ್ರೀಪ್, ಎಲ್ಇಡಿ ಬಿ-ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಎಲ್ ವಿನ್ಯಾಸದ ಎಲ್ಇಡಿ ಡಿಆರ್‌ಎಲ್‌ಗಳು, ಫ್ರಂಟ್ ಬಂಪರ್, ಫಾಗ್ ಲ್ಯಾಂಪ್, ಸೆಂಟ್ರಲ್ ಏರ್ ಇನ್‌ಟೆಕ್, ಸ್ಕೀಡ್ ಪ್ಲೇಟ್, ರೂಫ್ ರೈಲ್ಸ್ ಸೌಲಭ್ಯಗಳಿವೆ. ಹಾಗೆಯೇ ಹೊಸ ಕಾರಿನ ಸೈಡ್ ಪ್ರೋಫೈಲ್ ಕೂಡಾ ಆಕರ್ಷಕವಾಗಿದ್ದು, 16-ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್, ಟೈಲ್‌ಲೈಟ್ ಸೌಲಭ್ಯದೊಂದಿಗೆ ಕಾರಿನ ಡೋರ್ ತಳಭಾಗದಲ್ಲಿ ಮತ್ತು ರಿಯರ್ ಬಂಪರ್ ಬಳಿ ಸಿಲ್ವರ್ ಕೊಟಿಂಗ್ ಹೊಂದಿರುವ ಆಕ್ಸೆಂಟ್ ನೀಡಲಾಗಿದೆ.

ಹೊಸ ಮಾದರಿಯ ಎಂಜಿನ್‌ನೊಂದಿಗೆ ಮ್ಯಾಗ್ನೈಟ್ ಕಾರು ಉತ್ಪಾದನೆಗೆ ಚಾಲನೆ

ಮ್ಯಾಗ್ನೈಟ್ ಕಾರಿನಲ್ಲಿ ಕಪ್ಪು ಬಣ್ಣದ ವೀಲ್ಹ್ ಆರ್ಚ್, ವೀಲ್ಹ್ ಆರ್ಚ್‌ಗೆ ಹೊಂದಿಕೊಂಡಿರುವ ಬ್ಲ್ಯಾಕ್ ಕ್ಲಾಡಿಂಗ್, ಬೂಟ್ ಲಿಡ್, ಕಾರಿನ ಹಿಂಭಾಗದ ಮಧ್ಯದಲ್ಲಿ ನಿಸ್ಸಾನ್ ಲೊಗೊ ಜೊತೆಗೆ ಮ್ಯಾಗ್ನೈಟ್ ಲೊಗೊ ನೀಡಲಾಗಿದ್ದು, ಕಾರಿನ ಹೊರ ನೋಟಕ್ಕೆ ಮತ್ತಷ್ಟು ಆಕರ್ಷಣೆ ನೀಡಲಿವೆ.

ಹೊಸ ಮಾದರಿಯ ಎಂಜಿನ್‌ನೊಂದಿಗೆ ಮ್ಯಾಗ್ನೈಟ್ ಕಾರು ಉತ್ಪಾದನೆಗೆ ಚಾಲನೆ

ನಿಸ್ಸಾನ್ ಕಂಪನಿಯು ಮ್ಯಾಗ್ನೈಟ್ ಕಾರಿನಲ್ಲಿ ಹೊರಭಾಗದಂತೆ ಒಳಭಾಗದಲ್ಲೂ ಆಕರ್ಷಕ ವಿನ್ಯಾಸವನ್ನು ನೀಡಿದ್ದು, ಸಂಪೂರ್ಣವಾಗಿ ಕಪ್ಪು ಬಣ್ಣದ ಕ್ಯಾಬಿನ್ ಪ್ರೀಮಿಯಂ ಅನುಭವ ನೀಡುತ್ತದೆ. ಆಸನಗಳಲ್ಲಿ ಮಾತ್ರ ಗ್ರೇ ಬಣ್ಣವನ್ನು ಬಣ್ಣವನ್ನು ಬಳಕೆ ಮಾಡಲಾಗಿದ್ದು, ಫ್ಲ್ಯಾಟ್ ಬಾಟಮ್ ಸ್ಪೀರಿಂಗ್ ವೀಲ್ಹ್, ಮೌಂಟೆಡ್ ಕಂಟ್ರೋಲ್ಸ್, 7-ಇಂಚಿನ ಫುಲ್ ಡಿಜಿಟಲ್ ಟಿಎಫ್‌ಟಿ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, 8-ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಕ್ಲಸ್ಟರ್, ಕ್ರೂಸ್ ಕಂಟ್ರೊಲ್, 360 ಡಿಗ್ರಿ ವ್ಯೂವ್ ಕ್ಯಾಮೆರಾ, ಕ್ಲೈಮೆಟ್ ಕಂಟ್ರೋಲ್ ಸಿಸ್ಟಂ ಹೊಂದಿದೆ.

ಹೊಸ ಮಾದರಿಯ ಎಂಜಿನ್‌ನೊಂದಿಗೆ ಮ್ಯಾಗ್ನೈಟ್ ಕಾರು ಉತ್ಪಾದನೆಗೆ ಚಾಲನೆ

ಹಿಂಬದಿಯಲ್ಲಿ ಆರಾಮದಾಯಕ ಆಸನಗಳೊಂದಿಗೆ ಸೆಂಟರ್ ಆರ್ಮ್ ರೆಸ್ಟ್, ರಿಯರ್ ಎಸಿ ವೆಂಟ್ಸ್, 60:40 ಅನುಪಾತದಲ್ಲಿ ಮಡಿಕೆ ಮಾಡಬಹುದಾದ ಆಸನಗಳು, 334-ಲೀಟರ್ ಸಾಮರ್ಥ್ಯದ ಬೂಟ್ ಸ್ಪೆಸ್ ನೀಡಲಾಗಿದ್ದು, ಹೆಚ್ಚುವರಿ ಬೂಟ್ ಸ್ಪೆಸ್ ಅವಶ್ಯವಿದ್ದಲ್ಲಿ ಹಿಂಬದಿಯ ಆಸನಗಳನ್ನು ಮಡಿಕೆ ಮಾಡಿಕೊಳ್ಳಬಹುದಾಗಿದೆ.

ಹೊಸ ಮಾದರಿಯ ಎಂಜಿನ್‌ನೊಂದಿಗೆ ಮ್ಯಾಗ್ನೈಟ್ ಕಾರು ಉತ್ಪಾದನೆಗೆ ಚಾಲನೆ

ಮೊದಲ ಎರಡು ವೆರಿಯೆಂಟ್‌ಗಳಿಂತ ಟಾಪ್ ಎಂಡ್ ವೆರಿಯೆಂಟ್‌ಗಳು ಹೆಚ್ಚಿನ ಮಟ್ಟದ ಫೀಚರ್ಸ್ ಹೊಂದಿರಲಿದ್ದು, ಟಾಪ್ ಎಂಡ್ ವೆರಿಯೆಂಟ್‌ಗಳಲ್ಲಿ ಹೆಚ್ಚುವರಿಯಾಗಿ ವೈರ್‌ಲೆಸ್ ಚಾರ್ಜರ್, ಪೆಡಲ್ ಲ್ಯಾಂಪ್ಸ್, ಏರ್ ಪ್ಯೂರಿಫೈರ್, ಜೆಬಿಎಲ್ ಸೌಂಡ್ ಸಿಸ್ಟಂ, ಆ್ಯಂಬಿಯೆಂಟ್ ಲೈಟಿಂಗ್ಸ್ ಸೌಲಭ್ಯ ಹೊಂದಿರಲಿದ್ದು, ಹೊಸ ಕಾರಿನ ಎಂಜಿನ್ ಆಯ್ಕೆಗಳು ಕೂಡಾ ಆಕರ್ಷಕವಾಗಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಹೊಸ ಮಾದರಿಯ ಎಂಜಿನ್‌ನೊಂದಿಗೆ ಮ್ಯಾಗ್ನೈಟ್ ಕಾರು ಉತ್ಪಾದನೆಗೆ ಚಾಲನೆ

ಎಂಜಿನ್ ಮತ್ತು ಪರ್ಫಾಮೆನ್ಸ್

ನಿಸ್ಸಾನ್ ಕಂಪನಿಯು ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಅಧಿಕೃತ ಎಂಜಿನ್ ಮಾಹಿತಿಯನ್ನು ಹಂಚಿಕೊಂಡಿದ್ದು, ಹೊಸ ಕಾರಿನಲ್ಲಿ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಬಳಕೆ ಮಾಡಿದೆ.

ಹೊಸ ಮಾದರಿಯ ಎಂಜಿನ್‌ನೊಂದಿಗೆ ಮ್ಯಾಗ್ನೈಟ್ ಕಾರು ಉತ್ಪಾದನೆಗೆ ಚಾಲನೆ

ಮೊದಲೆರಡು ವೆರಿಯೆಂಟ್‌ಗಳಲ್ಲಿ ಜೋಡಣೆ ಮಾಡಲಾಗಿರುವ 1.0-ಲೀಟರ್ ಬಿ4ಡಿ ಪೆಟ್ರೋಲ್ ಮಾದರಿಯು ಸ್ಟ್ಯಾಂಡರ್ಡ್ ಆಗಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದರೆ ಟಾಪ್ ಎಂಡ್ ಮಾದರಿಗಳಲ್ಲಿ ನೀಡಲಾಗಿರುವ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯಲ್ಲಿ 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಖರೀದಿ ಮಾಡಬಹುದಾಗಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಹೊಸ ಮಾದರಿಯ ಎಂಜಿನ್‌ನೊಂದಿಗೆ ಮ್ಯಾಗ್ನೈಟ್ ಕಾರು ಉತ್ಪಾದನೆಗೆ ಚಾಲನೆ

ಬೆಲೆ ಮತ್ತು ಬಿಡುಗಡೆ ಅವಧಿ(ಅಂದಾಜು)

ಸದ್ಯ ಮಾರುಕಟ್ಟೆಯಲ್ಲಿ ಬಹುತೇಕ ಸಬ್ ಫೋರ್ ಮೀಟರ್ ವಿನ್ಯಾಸದ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಗಳು ಆರಂಭಿಕವಾಗಿ ಎಕ್ಸ್‌ಶೋರೂಂ ಪ್ರಕಾರ ರೂ. 6.50 ಲಕ್ಷದಿಂದ ರೂ. 12.50 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಲಿದ್ದು, ಹೊಸ ಮ್ಯಾಗ್ನೈಟ್ ಕಾರು ಆರಂಭಿಕವಾಗಿ ರೂ. 5.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.9.50 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುವ ಸಾಧ್ಯತೆಗಳಿವೆ.

Article Published On: Tuesday, November 3, 2020, 8:45 [IST]
English summary
Nissan Magnite Production Begins: Company Reveals Variant, Feature & Engine Spec Details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+