ಡಿಸೆಂಬರ್ 2ರಿಂದ ಆರಂಭವಾಗಲಿದೆ ನಿಸ್ಸಾನ್ ಮ್ಯಾಗ್ನೈಟ್ ಕಾರಿನ ಟೆಸ್ಟ್ ಡ್ರೈವ್
ನಿಸ್ಸಾನ್ ಇಂಡಿಯಾ ಕಂಪನಿಯು ತನ್ನ ಹೊಚ್ಚ ಹೊಸ ಕಾರು ಮಾದರಿಯಾದ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಇದೇ ಡಿಸೆಂಬರ್ 5ಕ್ಕೆ ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಆಸಕ್ತ ಗ್ರಾಹಕರಿಗೆ ಮ್ಯಾಗ್ನೈಟ್ ಕಾರಿನ ಟೆಸ್ಟ್ ಡ್ರೈವ್ ಆರಂಭಿಸಲು ಸಿದ್ದತೆ ನಡೆಸಲಾಗಿದೆ.

ಹೊಸ ಮ್ಯಾಗ್ನೈಟ್ ಕಾರು ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯು ಪ್ರತಿ ಸ್ಪರ್ಧಿಕಾರು ಮಾದರಿಗಳಿಂತಲೂ ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಅಭಿವೃದ್ದಿಗೊಂಡಿದ್ದು, ಗ್ರಾಹಕರ ಬೇಡಿಕೆಯೆಂತೆ ಎಕ್ಸ್‌ಇ, ಎಕ್ಸ್ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ಎಂಬ ನಾಲ್ಕು ವೆರಿಯೆಂಟ್‌ಗಳೊಂದಿಗೆ ಬೆಲೆಯಲ್ಲೂ ಗಮನಸೆಳೆಯಲಿದೆ. ಹೊಸ ಕಾರು ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಆವೃತ್ತಿಗಳಿಂತಲೂ ಕಡಿಮೆ ಬೆಲೆ ಹೊಂದಿದ್ದು, ಸೆಗ್ಮೆಂಟ್ ಇನ್ ಬೆಸ್ಟ್ ಫೀಚರ್ಸ್‌ಗಳೊಂದಿಗೆ ಕಾರು ಮಾರಾಟದಲ್ಲಿ ಹೊಸ ಸಂಚಲನ ಸೃಷ್ಠಿಸಲಿದೆ.

ತಾಂತ್ರಿಕ ಅಂಶಗಳು ಮತ್ತು ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಮ್ಯಾಗ್ನೈಟ್ ಕಾರು ವೆರಿಯೆಂಟ್‌ಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 5.50 ಲಕ್ಷದಿಂದ ರೂ. 9.50 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಹೊಸ ಕಾರಿನಲ್ಲಿರುವ ಪ್ರೀಮಿಯಂ ಫೀಚರ್ಸ್ ಕಾರು ಖರೀದಿದಾರರ ಪ್ರಮುಖ ಆಕರ್ಷಣೆಯಾಗಲಿವೆ.

ಟಾಪ್ ಎಂಡ್ ಮಾದರಿಯಾಗಿರುವ ಎಕ್ಸ್‌ವಿ ಪ್ರೀಮಿಯಂನಲ್ಲಿ ಪ್ರಮುಖ ಫೀಚರ್ಸ್‌ಗಳನ್ನು ಒಳಗೊಂಡು ಎಲ್ಇಡಿ ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಎಲ್ಇಡಿ ಟೈಲ್ ಲೈಟ್ಸ್, ಎಲ್ಇಡಿ ಟರ್ನ್ ಇಂಡಿಕೇಟರ್, ವೀಂಡೋ ಲೈನ್ ಮೇಲೆ ಕ್ರೋಮ್ ಬೆಲ್ಟ್, ಆಲ್ ಬ್ಲ್ಯಾಕ್ ಕ್ಯಾಬಿನ್, 360 ಡಿಗ್ರಿ ಕ್ಯಾಮೆರಾ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್, ಟೈರ್ ಪ್ರೆಷರ್ ಮಾನಿಟರಿಂಗ್ ಮತ್ತು ಬ್ರಾಂಡ್‌ನ ಕನೆಕ್ಟ್ ಫೀಚರ್ಸ್ ಸೌಲಭ್ಯವಿದೆ.

ಮ್ಯಾಗ್ನೈಟ್ ಕಾರಿನಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಜೋಡಣೆ ಮಾಡಲಾಗುತ್ತಿದ್ದು, 1.0-ಲೀಟರ್ ಬಿ4ಡಿ ಪೆಟ್ರೋಲ್ ಮಾದರಿಯು ಸ್ಟ್ಯಾಂಡರ್ಡ್ ಆಗಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದರೆ ಟಾಪ್ ಎಂಡ್ ಮಾದರಿಗಳಲ್ಲಿ ನೀಡಲಾಗಿರುವ ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 70-ಬಿಎಚ್‌ಪಿ, 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 100-ಬಿಎಚ್‌ಪಿ, 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಹೊಸ ಕಾರಿನಲ್ಲಿ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು ಪ್ರತಿ ಲೀಟರ್‌ಗೆ ಗರಿಷ್ಠ 18.75 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದರೆ ಟರ್ಬೋ ಪೆಟ್ರೋಲ್ ಮಾದರಿಯು ಅತ್ಯುತ್ತಮ ಪರ್ಫಾಮೆನ್ಸ್‌ನೊಂದಿಗೆ ಪ್ರತಿ ಲೀಟರ್‍ಗೆ 17.7 ಕಿ.ಮೀ ನಿಂದ 20 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, 40 ಲೀಟರ್ ಸಾಮರ್ಥ್ಯದ ಫ್ಯೂಲ್ ಟ್ಯಾಂಕ್ ಅನ್ನು ಒಂದು ಬಾರಿ ಪೂರ್ತಿಯಾಗಿ ತುಂಬಿಸಿದರೆ ಗರಿಷ್ಠ 800 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಈ ಮೂಲಕ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿರುವ ಮ್ಯಾಗ್ನೈಟ್ ಕಾರು ಮಾದರಿಯು ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರ ಖರೀದಿಗೆ ಲಭ್ಯವಿರವಿದ್ದು, ಹೊಸ ಕಾರಿನ ಅಧಿಕೃತ ಬೆಲೆ ಮಾಹಿತಿಯೊಂದಿಗೆ ಇದೀಗ ಬಾಕಿಯಿದೆ.


Click it and Unblock the Notifications