ನಿಸ್ಸಾನ್ ಹೊಸ ಮ್ಯಾಗ್ನೈಟ್ ಕಾರು ಖರೀದಿಗೆ ಕನಿಷ್ಠ 6 ತಿಂಗಳು ಕಾಯಬೇಕಂತೆ!

ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ನಿಸ್ಸಾನ್ ಮ್ಯಾಗ್ನೈಟ್ ಕಾರು ಮಾದರಿಯು ಬಿಡುಗಡೆಗೊಂಡ ಒಂದೇ ವಾರದಲ್ಲಿ ಸುಮಾರು 7 ಸಾವಿರ ಗ್ರಾಹಕರು ಬುಕ್ಕಿಂಗ್ ದಾಖಲಿಸಿದ್ದು, ಟಾಪ್ ಎಂಡ್ ಮಾದರಿಗೆ ಅತಿ ಹೆಚ್ಚು ಬೇಡಿಕೆ ಹರಿದುಬಂದಿದೆ.

ನಿಸ್ಸಾನ್ ಹೊಸ ಮ್ಯಾಗ್ನೈಟ್ ಕಾರು ಖರೀದಿಗೆ ಕನಿಷ್ಠ 6 ತಿಂಗಳು ಕಾಯಬೇಕಂತೆ!

ಸೆಗ್ಮೆಂಟ್ ಇನ್ ಕ್ಲಾಸ್ ಫೀಚರ್ಸ್ ಹೊಂದಿರುವ ನಿಸ್ಸಾನ್ ಕಾರು ಮಾದರಿಯ ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಅತಿ ಕಡಿಮೆ ಬೆಲೆಯೊಂದಿಗೆ ಮಾರಾಟಗೊಳ್ಳುತ್ತಿದ್ದು, ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌‌ಯುವಿ ಜೊತೆಗೆ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ಖರೀದಿದಾರರನ್ನು ಸಹ ತನ್ನತ್ತ ಸೆಳೆಯುತ್ತಿದೆ. ಈ ಹಿನ್ನಲೆಯಲ್ಲಿ ಹೊಸ ಕಾರು ವಿತರಣೆಯ ಅವಧಿಯು ಬುಕ್ಕಿಂಗ್ ಆಧಾರದ ಏರಿಕೆಯಾಗುತ್ತಲೇ ಇದ್ದು, ಸದ್ಯ ಹೊಸ ಕಾರು ಖರೀದಿಗೆ ಬುಕ್ಕಿಂಗ್ ದಾಖಲಿಸುವ ಗ್ರಾಹಕರು ಉತ್ಪಾದನೆ ಆಧಾರದ ಮೇಲೆ ಕನಿಷ್ಠ 5 ತಿಂಗಳಿನಿಂದ 6 ತಿಂಗಳು ಕಾಲ ಕಾಯಬೇಕಿದೆ.

ನಿಸ್ಸಾನ್ ಹೊಸ ಮ್ಯಾಗ್ನೈಟ್ ಕಾರು ಖರೀದಿಗೆ ಕನಿಷ್ಠ 6 ತಿಂಗಳು ಕಾಯಬೇಕಂತೆ!

ಮ್ಯಾಗ್ನೈಟ್ ಕಾರಿನ ಟಾಪ್ ಎಂಡ್ ಮಾದರಿಯಾದ ಟರ್ಬೋ ಪೆಟ್ರೋಲ್ ಮಾದರಿಗಾಗಿ ಹೆಚ್ಚಿನ ಮಟ್ಟದ ಬುಕ್ಕಿಂಗ್ ಸಲ್ಲಿಕೆಯಾಗಿದ್ದು, ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳಲ್ಲೇ ಅತಿ ಕಡಿಮೆ ಬೆಲೆಯೊಂದಿಗೆ ಹೊಸ ಮಾರುಕಟ್ಟೆ ಪ್ರವೇಶಿಸಿದೆ.

ನಿಸ್ಸಾನ್ ಹೊಸ ಮ್ಯಾಗ್ನೈಟ್ ಕಾರು ಖರೀದಿಗೆ ಕನಿಷ್ಠ 6 ತಿಂಗಳು ಕಾಯಬೇಕಂತೆ!

ಪ್ರಸ್ತುತ ಮಾರುಕಟ್ಟೆಯಲ್ಲಿ ನಿಸ್ಸಾನ್ ಮಾಗ್ನೈಟ್ ಹೊರತುಪಡಿಸಿ ಬಹುತೇಕ ಪ್ರತಿಸ್ಪರ್ಧಿ ಕಾರು ಮಾದರಿಗಳು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.70 ಲಕ್ಷದಿಂದ ಆರಂಭವಾಗಿ ಟಾಪ್ ಎಂಡ್ ಮಾದರಿಗಳು ರೂ. 12.80 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುತ್ತಿದ್ದು, ನಿಸ್ಸಾನ್ ಮ್ಯಾಗ್ನೈಟ್ ಕಾರು ಮಾದರಿಯೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 4.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.9.35 ಲಕ್ಷ ಬೆಲೆ ಹೊಂದಿದೆ.

ನಿಸ್ಸಾನ್ ಹೊಸ ಮ್ಯಾಗ್ನೈಟ್ ಕಾರು ಖರೀದಿಗೆ ಕನಿಷ್ಠ 6 ತಿಂಗಳು ಕಾಯಬೇಕಂತೆ!

ಜೊತೆಗೆ ಬಜೆಟ್ ಬೆಲೆ ನಡುವೆಯೂ ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಅತ್ಯುತ್ತಮ ಫೀಚರ್ಸ್ ಹೊಂದಿರುವ ನಿಸ್ಸಾನ್ ಮ್ಯಾಗ್ನೈಟ್ ಕಾರು ಮಾದರಿಯು ಕಾರು ಖರೀದಿದಾರರನ್ನು ಸೆಳೆಯುತ್ತಿದ್ದು, ಹೊಸ ಕಾರು ಪೆಟ್ರೋಲ್ ಮಾದರಿಯಲ್ಲಿ ಮಾತ್ರವೇ ಖರೀದಿಗೆ ಲಭ್ಯವಿದೆ. ಮ್ಯಾಗ್ನೈಟ್ ಕಾರಿನಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಜೋಡಣೆ ಮಾಡಲಾಗಿದೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ನಿಸ್ಸಾನ್ ಹೊಸ ಮ್ಯಾಗ್ನೈಟ್ ಕಾರು ಖರೀದಿಗೆ ಕನಿಷ್ಠ 6 ತಿಂಗಳು ಕಾಯಬೇಕಂತೆ!

1.0-ಲೀಟರ್ ಬಿ4ಡಿ ಪೆಟ್ರೋಲ್ ಮಾದರಿಯು ಸ್ಟ್ಯಾಂಡರ್ಡ್ ಆಗಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದರೆ ಟಾಪ್ ಎಂಡ್ ಮಾದರಿಗಳಲ್ಲಿ ನೀಡಲಾಗಿರುವ ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

ನಿಸ್ಸಾನ್ ಹೊಸ ಮ್ಯಾಗ್ನೈಟ್ ಕಾರು ಖರೀದಿಗೆ ಕನಿಷ್ಠ 6 ತಿಂಗಳು ಕಾಯಬೇಕಂತೆ!

1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 70-ಬಿಎಚ್‌ಪಿ, 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 100-ಬಿಎಚ್‌ಪಿ, 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ನಿಸ್ಸಾನ್ ಹೊಸ ಮ್ಯಾಗ್ನೈಟ್ ಕಾರು ಖರೀದಿಗೆ ಕನಿಷ್ಠ 6 ತಿಂಗಳು ಕಾಯಬೇಕಂತೆ!

ಇದರೊಂದಿಗೆ ಹೊಸ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಸುರಕ್ಷತೆಗಾಗಿ ಐಸೋಫಿಕ್ಸ್ ಸೀಟ್, ಸೆಂಟರ್ ಡೋರ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್, ಇಂಪ್ಯಾಕ್ಟ್ ಸೆನ್ಸಿಂಗ್ ಆಟೋ ಡೋರ್ ಅನ್ ಲಾಕ್, ಹಿಲ್ ಸ್ಟಾರ್ಟ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಬ್ರೇಕ್ ಅಸಿಸ್ಟ್, ರಿಮೋಟ್ ಕೀ ಲೆಸ್ ಎಂಟ್ರಿ, ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಆ್ಯಂಟಿ ರೊಲ್ ಬಾರ್, ಸೀಟ್ ಬೆಲ್ಟ್ ಅಲರ್ಟ್, ಇಮ್‌ಮೊಬಿಲೈಸರ್ ಮತ್ತು ರಿಯರ್ ಪಾರ್ಕಿಂಗ್ ಕ್ಯಾಮೆರಾ, ವೆಹಿಕಲ್ ಡೈನಾಮಿಕ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್, ಟೈರ್ ಪ್ರೆಷರ್ ಮಾನಿಟರಿಂಗ್ ಮತ್ತು ಬ್ರಾಂಡ್‌ನ ಕನೆಕ್ಟ್ ಫೀಚರ್ಸ್ ಸೌಲಭ್ಯವಿದೆ.

ನಿಸ್ಸಾನ್ ಹೊಸ ಮ್ಯಾಗ್ನೈಟ್ ಕಾರು ಖರೀದಿಗೆ ಕನಿಷ್ಠ 6 ತಿಂಗಳು ಕಾಯಬೇಕಂತೆ!

ಈ ಮೂಲಕ ಹೊಸ ಕಾರು ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಆವೃತ್ತಿಗಳಿಂತಲೂ ಕಡಿಮೆ ಬೆಲೆಯೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸಲಿದ್ದು, ಶೀಘ್ರದಲ್ಲೇ ಹೊಸ ಕಾರಿನ ವಿತರಣೆಯು ಆರಂಭವಾಗಲಿದೆ.

Article Published On: Thursday, December 10, 2020, 21:08 [IST]
English summary
Nissan Magnite Waiting Period Reaches 6 Months. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+