ನಿಸ್ಸಾನ್ ಮಾಗ್ನೈಟ್ ಕಾರು ಖರೀದಿಯ ಕಾಯುವಿಕೆ ಅವಧಿಯಲ್ಲಿ ಮತ್ತಷ್ಟು ಹೆಚ್ಚಳ

ನಿಸ್ಸಾನ್ ಮ್ಯಾಗ್ನೈಟ್ ಕಾರು ಮಾದರಿಯು ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಹೊಸ ಕಾರು ಬಿಡುಗಡೆಗೊಂಡ ಕೇವಲ ಒಂದು ತಿಂಗಳ ಅವಧಿಯ ಬರೋಬ್ಬರಿ 18 ಸಾವಿರಕ್ಕೂ ಅಧಿಕ ಬುಕ್ಕಿಂಗ್ ಪಡೆದುಕೊಂಡಿದೆ.

ನಿಸ್ಸಾನ್ ಮಾಗ್ನೈಟ್ ಕಾರು ಖರೀದಿಯ ಕಾಯುವಿಕೆ ಅವಧಿಯಲ್ಲಿ ಮತ್ತಷ್ಟು ಹೆಚ್ಚಳ

ಹೊಸ ಕಾರಿಗಾಗಿ ಬುಕ್ಕಿಂಗ್ ದಾಖಲಿಸಿದ ನಂತರ ಹೊಸ ಕಾರು ವಿತರಣೆಗೆ ಗ್ರಾಹಕರು ಕನಿಷ್ಠ 8 ವಾರಗಳಿಂದ ಗರಿಷ್ಠ 32 ವಾರಗಳ ಕಾಯಬೇಕಿದ್ದು, ಸೆಗ್ಮೆಂಟ್ ಇನ್ ಕ್ಲಾಸ್ ಫೀಚರ್ಸ್ ಹೊಂದಿರುವ ನಿಸ್ಸಾನ್ ಕಾರು ಮಾದರಿಯ ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಅತಿ ಕಡಿಮೆ ಬೆಲೆಯೊಂದಿಗೆ ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದೆ. ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌‌ಯುವಿ ಜೊತೆಗೆ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ಖರೀದಿದಾರರನ್ನು ಸಹ ತನ್ನತ್ತ ಸೆಳೆಯುತ್ತಿರುವ ಹೊಸ ಕಾರು ಪ್ರತಿಸ್ಪರ್ಧಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ.

ನಿಸ್ಸಾನ್ ಮಾಗ್ನೈಟ್ ಕಾರು ಖರೀದಿಯ ಕಾಯುವಿಕೆ ಅವಧಿಯಲ್ಲಿ ಮತ್ತಷ್ಟು ಹೆಚ್ಚಳ

ಸದ್ಯ ಹೊಸ ಕಾರು ಖರೀದಿಗೆ ಬುಕ್ಕಿಂಗ್ ದಾಖಲಿಸುವ ಗ್ರಾಹಕರು ಉತ್ಪಾದನೆ ಆಧಾರದ ಮೇಲೆ ಕನಿಷ್ಠ ಎರಡರಿಂದ ಮೂರು ತಿಂಗಳು ಮತ್ತು ಬೆಸ್ ವೆರಿಯೆಂಟ್ ಖರೀದಿಗಾಗಿ ಗರಿಷ್ಠ 8 ತಿಂಗಳ ಕಾಲ ಕಾಯಬೇಕಾದ ಅನಿವಾರ್ಯತೆಯಿದೆ.

ನಿಸ್ಸಾನ್ ಮಾಗ್ನೈಟ್ ಕಾರು ಖರೀದಿಯ ಕಾಯುವಿಕೆ ಅವಧಿಯಲ್ಲಿ ಮತ್ತಷ್ಟು ಹೆಚ್ಚಳ

ಇದಲ್ಲದೆ ಹೊಸ ಕಾರಿನಲ್ಲಿ ಯಾವುದೇ ವೆರಿಯೆಂಟ್‌ನಲ್ಲಿ ಫ್ಲೆರ್ ರೆಡ್ ಬಣ್ಣದ ಆಯ್ಕೆಯಾಗಿ ಹೆಚ್ಚುವರಿಯಾಗಿ 1 ತಿಂಗಳ ಕಾಲ ಕಾಯಬೇಕಿದ್ದು, ಉತ್ಪಾದನಾ ಸಾಮರ್ಥ್ಯದ ಮೇಲೆ ಹೊಸ ಕಾರಿನ ವಿತರಣೆಯನ್ನು ಹೆಚ್ಚಿಸಲಾಗಿದೆ.

ನಿಸ್ಸಾನ್ ಮಾಗ್ನೈಟ್ ಕಾರು ಖರೀದಿಯ ಕಾಯುವಿಕೆ ಅವಧಿಯಲ್ಲಿ ಮತ್ತಷ್ಟು ಹೆಚ್ಚಳ

ಹೊಸ ಕಾರು ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಆವೃತ್ತಿಗಳಿಂತಲೂ ಕಡಿಮೆ ಬೆಲೆಯೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಎಕ್ಸ್‌ಇ, ಎಕ್ಸ್ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ಎನ್ನುವ ನಾಲ್ಕು ವೆರಿಯೆಂಟ್‌ಗಳೊಂದಿಗೆ ಮಾರಾಟಗೊಳ್ಳುತ್ತಿದೆ. ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.9.35 ಲಕ್ಷ ಬೆಲೆ ಹೊಂದಿದೆ.

ನಿಸ್ಸಾನ್ ಮಾಗ್ನೈಟ್ ಕಾರು ಖರೀದಿಯ ಕಾಯುವಿಕೆ ಅವಧಿಯಲ್ಲಿ ಮತ್ತಷ್ಟು ಹೆಚ್ಚಳ

ಪ್ರಸ್ತುತ ಮಾರುಕಟ್ಟೆಯಲ್ಲಿ ನಿಸ್ಸಾನ್ ಮಾಗ್ನೈಟ್ ಹೊರತುಪಡಿಸಿ ಬಹುತೇಕ ಪ್ರತಿಸ್ಪರ್ಧಿ ಕಾರು ಮಾದರಿಗಳು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.70 ಲಕ್ಷದಿಂದ ಆರಂಭವಾಗಿ ಟಾಪ್ ಎಂಡ್ ಮಾದರಿಗಳು ರೂ. 12.80 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುತ್ತಿದ್ದು, ನಿಸ್ಸಾನ್ ಮ್ಯಾಗ್ನೈಟ್ ಕಾರು ಮಾದರಿ ಮಾತ್ರವೇ ಅತಿ ಕಡಿಮೆ ಬೆಲೆ ಹೊಂದಿದೆ.

ನಿಸ್ಸಾನ್ ಮಾಗ್ನೈಟ್ ಕಾರು ಖರೀದಿಯ ಕಾಯುವಿಕೆ ಅವಧಿಯಲ್ಲಿ ಮತ್ತಷ್ಟು ಹೆಚ್ಚಳ

ಉತ್ತಮ ಬೆಲೆ ಪೈಪೋಟಿಯೊಂದಿಗೆ ಮಾರುಕಟ್ಟೆ ಪ್ರವೇಶಿಸಿರುವ ಮ್ಯಾಗ್ನೈಟ್ ಕಾರು ಮಾದರಿಯು ಕಂಪ್ಯಾಕ್ಟ್ ಎಸ್‌ಯುವಿ ಜೊತೆಗೆ ಹ್ಯಾಚ್‌ಬ್ಯಾಕ್ ಕಾರು ಖರೀದಿದಾರರು ಕೂಡಾ ಮ್ಯಾಗ್ನೈಟ್ ಕಾರಿನ ಖರೀದಿಗೆ ಮುಂದಾಗುತ್ತಿದ್ದಾರೆ.

ನಿಸ್ಸಾನ್ ಮಾಗ್ನೈಟ್ ಕಾರು ಖರೀದಿಯ ಕಾಯುವಿಕೆ ಅವಧಿಯಲ್ಲಿ ಮತ್ತಷ್ಟು ಹೆಚ್ಚಳ

ಮ್ಯಾಗ್ನೈಟ್ ಕಾರಿನಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಜೋಡಣೆ ಮಾಡಲಾಗಿದ್ದು, ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಲಾಗಿಲ್ಲ.

ನಿಸ್ಸಾನ್ ಮಾಗ್ನೈಟ್ ಕಾರು ಖರೀದಿಯ ಕಾಯುವಿಕೆ ಅವಧಿಯಲ್ಲಿ ಮತ್ತಷ್ಟು ಹೆಚ್ಚಳ

1.0-ಲೀಟರ್ ಬಿ4ಡಿ ಪೆಟ್ರೋಲ್ ಮಾದರಿಯು ಸ್ಟ್ಯಾಂಡರ್ಡ್ ಆಗಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದರೆ ಟಾಪ್ ಎಂಡ್ ಮಾದರಿಗಳಲ್ಲಿ ನೀಡಲಾಗಿರುವ ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ನಿಸ್ಸಾನ್ ಮಾಗ್ನೈಟ್ ಕಾರು ಖರೀದಿಯ ಕಾಯುವಿಕೆ ಅವಧಿಯಲ್ಲಿ ಮತ್ತಷ್ಟು ಹೆಚ್ಚಳ

1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 70-ಬಿಎಚ್‌ಪಿ, 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 100-ಬಿಎಚ್‌ಪಿ, 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ನಿಸ್ಸಾನ್ ಮಾಗ್ನೈಟ್ ಕಾರು ಖರೀದಿಯ ಕಾಯುವಿಕೆ ಅವಧಿಯಲ್ಲಿ ಮತ್ತಷ್ಟು ಹೆಚ್ಚಳ

ಇದರೊಂದಿಗೆ ಹೊಸ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಸುರಕ್ಷತೆಗಾಗಿ ಐಸೋಫಿಕ್ಸ್ ಸೀಟ್, ಸೆಂಟರ್ ಡೋರ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್, ಇಂಪ್ಯಾಕ್ಟ್ ಸೆನ್ಸಿಂಗ್ ಆಟೋ ಡೋರ್ ಅನ್ ಲಾಕ್, ಹಿಲ್ ಸ್ಟಾರ್ಟ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಬ್ರೇಕ್ ಅಸಿಸ್ಟ್, ರಿಮೋಟ್ ಕೀ ಲೆಸ್ ಎಂಟ್ರಿ ಸೌಲಭ್ಯಗಳಿವೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ನಿಸ್ಸಾನ್ ಮಾಗ್ನೈಟ್ ಕಾರು ಖರೀದಿಯ ಕಾಯುವಿಕೆ ಅವಧಿಯಲ್ಲಿ ಮತ್ತಷ್ಟು ಹೆಚ್ಚಳ

ಸುರಕ್ಷತೆಗಾಗಿ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಆ್ಯಂಟಿ ರೊಲ್ ಬಾರ್, ಸೀಟ್ ಬೆಲ್ಟ್ ಅಲರ್ಟ್, ಇಮ್‌ಮೊಬಿಲೈಸರ್ ಮತ್ತು ರಿಯರ್ ಪಾರ್ಕಿಂಗ್ ಕ್ಯಾಮೆರಾ, ವೆಹಿಕಲ್ ಡೈನಾಮಿಕ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್, ಟೈರ್ ಪ್ರೆಷರ್ ಮಾನಿಟರಿಂಗ್ ಮತ್ತು ಬ್ರಾಂಡ್‌ನ ಕನೆಕ್ಟ್ ಫೀಚರ್ಸ್ ನೀಡಲಾಗಿದೆ.

Article Published On: Tuesday, December 29, 2020, 14:47 [IST]
English summary
Nissan Magnite Waiting Period Increase. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+