ಹೊಸ ವಿನ್ಯಾಸದ ಲೋಗೋದೊಂದಿಗೆ ಬಿಡುಗಡೆಯಾಗಲಿದೆ ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ

ಜಪಾನ್ ಕಾರ್ ಉತ್ಪಾದನಾ ಕಂಪನಿಯಾಗಿರುವ ನಿಸ್ಸಾನ್ ತನ್ನ ಬ್ರಾಂಡ್ ಲೊಗೊ ಬಳಕೆಯಲ್ಲಿ ಈಗಾಗಲೇ ಹಲವಾರು ಬಾರಿ ಬದಲಾವಣೆಗೊಳಿಸಿದ್ದು, ಇದೀಗ ಹೊಸ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಗಾಗಿ ತನ್ನ ಸಾಂಪ್ರದಾಯಿಕ ಲೋಗೋ ಬಳಕೆಯಲ್ಲಿ ಹೊಸ ವಿನ್ಯಾಸವನ್ನು ಪರಿಚಯಿಸಿದೆ.

ಹೊಸ ವಿನ್ಯಾಸದ ಲೋಗೋದೊಂದಿಗೆ ಬಿಡುಗಡೆಯಾಗಲಿದೆ ನಿಸ್ಸಾನ್ ಮ್ಯಾಗ್ನೈಟ್

ನಿಸ್ಸಾನ್ ಲೊಗೊ ಮಾದರಿಯ ಆಧುನಿಕ ಡಿಸೈನ್ ಪ್ರೇರಿತ ಕಾರು ಮಾದರಿಗಳಿಗೆ ಮತ್ತಷ್ಟು ಆಕರ್ಷಣೆ ನೀಡಲಿದ್ದು, ಹೊಸ ಲೋಗೋ ವಿನ್ಯಾಸವನ್ನು ನಿಸ್ಸಾನ್ ಕಂಪನಿಯು ಮ್ಯಾಗ್ನೈಟ್ ಕಾರಿನ ಜೊತೆಗೆ ಒಟ್ಟು 16 ಹೊಸ ಕಾರು ಮಾದರಿಗಳಲ್ಲಿ ಬಳಕೆ ಮಾಡಿದೆ. ಹೊಸ ಕಾರು ಮಾದರಿಗಳು ವಿವಿಧ ಅಂತರ್‌ರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಬಿಡುಗಡೆಯಾಗಲಿದ್ದು, ಬಿಡುಗಡೆಯಾಗಲಿರುವ ಹೊಸ ಕಾರುಗಳಲ್ಲಿ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಕೂಡಾ ಒಂದಾಗಿದೆ.

ಹೊಸ ವಿನ್ಯಾಸದ ಲೋಗೋದೊಂದಿಗೆ ಬಿಡುಗಡೆಯಾಗಲಿದೆ ನಿಸ್ಸಾನ್ ಮ್ಯಾಗ್ನೈಟ್

ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಸತತ ಹಿನ್ನಡೆ ಕಂಡಿರುವ ನಿಸ್ಸಾನ್ ಕಂಪನಿಯು ಹೊಸ ಕಾರಿನ ಮೂಲಕ ಮಹತ್ವದ ಬದಲಾವಣೆಯ ನೀರಿಕ್ಷೆಯಲ್ಲಿದ್ದು, ಹೊಸ ಕಂಪ್ಯಾಕ್ಟ್ ಎ‌ಸ್‌ಯುವಿ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಹಲವಾರು ಹೊಸ ಸೌಲಭ್ಯಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದೆ.

ಹೊಸ ವಿನ್ಯಾಸದ ಲೋಗೋದೊಂದಿಗೆ ಬಿಡುಗಡೆಯಾಗಲಿದೆ ನಿಸ್ಸಾನ್ ಮ್ಯಾಗ್ನೈಟ್

ಹೊಸ ಮ್ಯಾಗ್ನೈಟ್ ಕಾರು ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯು ಪ್ರತಿ ಸ್ಪರ್ಧಿಕಾರು ಮಾದರಿಗಳಿಂತಲೂ ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಅಭಿವೃದ್ದಿಗೊಂಡಿದ್ದು, ಗ್ರಾಹಕರ ಬೇಡಿಕೆಯೆಂತೆ ಎಕ್ಸ್‌ಇ, ಎಕ್ಸ್ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ಎಂಬ ನಾಲ್ಕು ವೆರಿಯೆಂಟ್‌ಗಳೊಂದಿಗೆ ಬೆಲೆಯಲ್ಲೂ ಗಮನಸೆಳೆಯಲಿದೆ.

ಹೊಸ ವಿನ್ಯಾಸದ ಲೋಗೋದೊಂದಿಗೆ ಬಿಡುಗಡೆಯಾಗಲಿದೆ ನಿಸ್ಸಾನ್ ಮ್ಯಾಗ್ನೈಟ್

ಹೊಸ ಕಾರು ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಆವೃತ್ತಿಗಳಿಂತಲೂ ಕಡಿಮೆ ಬೆಲೆ ಹೊಂದಿದ್ದು, ಸೆಗ್ಮೆಂಟ್ ಇನ್ ಬೆಸ್ಟ್ ಫೀಚರ್ಸ್‌ಗಳೊಂದಿಗೆ ಕಾರು ಮಾರಾಟದಲ್ಲಿ ಹೊಸ ಸಂಚಲನ ಸೃಷ್ಠಿಸಲಿದೆ. ಎಕ್ಸ್‌ಇ, ಎಕ್ಸ್ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿರುವ ಮ್ಯಾಗ್ನೈಟ್ ಕಾರು ವೆರಿಯೆಂಟ್‌ಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 5.50 ಲಕ್ಷದಿಂದ ರೂ. 9.50 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿವೆ.

ಹೊಸ ವಿನ್ಯಾಸದ ಲೋಗೋದೊಂದಿಗೆ ಬಿಡುಗಡೆಯಾಗಲಿದೆ ನಿಸ್ಸಾನ್ ಮ್ಯಾಗ್ನೈಟ್

ಟಾಪ್ ಎಂಡ್ ಮಾದರಿಯಾಗಿರುವ ಎಕ್ಸ್‌ವಿ ಪ್ರೀಮಿಯಂನಲ್ಲಿ ಪ್ರಮುಖ ಫೀಚರ್ಸ್‌ಗಳನ್ನು ಒಳಗೊಂಡು ಎಲ್ಇಡಿ ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಎಲ್ಇಡಿ ಟೈಲ್ ಲೈಟ್ಸ್, ಎಲ್ಇಡಿ ಟರ್ನ್ ಇಂಡಿಕೇಟರ್, ವೀಂಡೋ ಲೈನ್ ಮೇಲೆ ಕ್ರೋಮ್ ಬೆಲ್ಟ್, ಆಲ್ ಬ್ಲ್ಯಾಕ್ ಕ್ಯಾಬಿನ್, 360 ಡಿಗ್ರಿ ಕ್ಯಾಮೆರಾ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್, ಟೈರ್ ಪ್ರೆಷರ್ ಮಾನಿಟರಿಂಗ್ ಮತ್ತು ಬ್ರಾಂಡ್‌ನ ಕನೆಕ್ಟ್ ಫೀಚರ್ಸ್ ಸೌಲಭ್ಯವಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಹೊಸ ವಿನ್ಯಾಸದ ಲೋಗೋದೊಂದಿಗೆ ಬಿಡುಗಡೆಯಾಗಲಿದೆ ನಿಸ್ಸಾನ್ ಮ್ಯಾಗ್ನೈಟ್

ಮ್ಯಾಗ್ನೈಟ್ ಕಾರಿನಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಜೋಡಣೆ ಮಾಡಲಾಗುತ್ತಿದ್ದು, 1.0-ಲೀಟರ್ ಬಿ4ಡಿ ಪೆಟ್ರೋಲ್ ಮಾದರಿಯು ಸ್ಟ್ಯಾಂಡರ್ಡ್ ಆಗಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದರೆ ಟಾಪ್ ಎಂಡ್ ಮಾದರಿಗಳಲ್ಲಿ ನೀಡಲಾಗಿರುವ ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

ಹೊಸ ವಿನ್ಯಾಸದ ಲೋಗೋದೊಂದಿಗೆ ಬಿಡುಗಡೆಯಾಗಲಿದೆ ನಿಸ್ಸಾನ್ ಮ್ಯಾಗ್ನೈಟ್

1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 70-ಬಿಎಚ್‌ಪಿ, 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 100-ಬಿಎಚ್‌ಪಿ, 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಹೊಸ ವಿನ್ಯಾಸದ ಲೋಗೋದೊಂದಿಗೆ ಬಿಡುಗಡೆಯಾಗಲಿದೆ ನಿಸ್ಸಾನ್ ಮ್ಯಾಗ್ನೈಟ್

ಹೊಸ ಕಾರಿನಲ್ಲಿ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು ಪ್ರತಿ ಲೀಟರ್‌‌ಗೆ ಗರಿಷ್ಠ 18.75 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದರೆ ಟರ್ಬೋ ಪೆಟ್ರೋಲ್ ಮಾದರಿಯು ಅತ್ಯುತ್ತಮ ಪರ್ಫಾಮೆನ್ಸ್‌ನೊಂದಿಗೆ ಪ್ರತಿ ಲೀಟರ್‍‌ಗೆ 17.7 ಕಿ.ಮೀ ನಿಂದ 20 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, 40 ಲೀಟರ್ ಸಾಮರ್ಥ್ಯದ ಫ್ಯೂಲ್ ಟ್ಯಾಂಕ್ ಅನ್ನು ಒಂದು ಬಾರಿ ಪೂರ್ತಿಯಾಗಿ ತುಂಬಿಸಿದರೆ ಗರಿಷ್ಠ 800 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

Most Read Articles

Kannada
English summary
Nissan Magnite Will Come With Brands New Logo. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X